ಮಂಗಳೂರು: ಗಾಂಜಾ ಮಾರಾಟ ; ಕುಖ್ಯಾತ ಆರೋಪಿ ವಿಕ್ಕಿ ಬಪ್ಪಾಲ್ ಮತ್ತು ಆತನ ಪತ್ನಿ ಸೆರೆ
Team Udayavani, Jul 16, 2022, 5:02 PM IST
ಮಂಗಳೂರು: ನಗರದ ಸಾರ್ವಜನಿಕರಿಗೆ ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾವನ್ನು ಮಾರಾಟ ಮಾಡುತ್ತಿದ್ದ ಹಾಗೂ ಗಾಂಜಾವನ್ನು ಹೊಂದಿದ ಕುಖ್ಯಾತ ಆರೋಪಿ ಹಾಗೂ ಆತನ ಪತ್ನಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ
ವಿಖ್ಯಾತ್ @ ವಿಕ್ಕಿ ಬಪ್ಪಾಲ್(28) ಹಾಗೂ ಈತನ ಪತ್ನಿ ಅಂಜನಾ, ಪ್ರಾಯ(21) ಬಂಧಿತ ಆರೋಪಿಗಳು. ಒಟ್ಟು 2,200 ಕೆ ಜಿ ತೂಕದ ರೂ. 22,000/- ಮೌಲ್ಯದ ಗಾಂಜಾ, ನಗದು ರೂ. 1,500/- ಮೊಬೈಲ್ ಫೋನ್-1 ಮತ್ತು ಡಿಜಿಟಲ್ ತೂಕ ಮಾಪನವನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತಿನ ಒಟ್ಟು ಮೌಲ್ಯ ರೂ. 92,000/- ಆಗಬಹುದು. ಈ ಗಾಂಜಾ ಮಾರಾಟ ಜಾಲದಲ್ಲಿ ಇನ್ನೂ ಹಲವು ಆರೋಪಿಗಳು ಭಾಗಿಯಾಗಿದ್ದು ಪತ್ತೆ ಕಾರ್ಯ ಮುಂದುವರಿದಿದೆ.
ಈ ಬಗ್ಗೆ ಮಾಹಿತಿ ಪಡೆದ ಸಿಸಿಬಿ ಇನ್ಸ್ ಪೆಕ್ಟರ್ ಮಹೇಶ್ ಪ್ರಸಾದ್ ಮತ್ತು ಪಿಎಸ್ಐ ರಾಜೇಂದ್ರ ಬಿ ರವರ ನೇತ್ರತ್ವದ ಮಂಗಳೂರು ಸಿಸಿಬಿ ಪೊಲೀಸರು ಮಂಗಳೂರಿನ ನಗರದ ಕಾವೂರು ಶಂಕರ ನಗರ ಕೆ ಸಿ ಆಳ್ವ ಲೇಔಟ್ ನ ಮನೆಯೊಂದಕ್ಕೆ ದಾಳಿ ಆರೋಪಿಗಳನ್ನು ಬಂಧಿಸಿದ್ದಾರೆ.
ಆರೋಪಿಗಳನ್ನು ಮಾದಕ ವಸ್ತುಗಳ ಸೇವನೆ ಬಗ್ಗೆ ವೈದ್ಯಕೀಯ ತಪಾಸಣೆಗೆ ಒಳಪಡಿಸಲಾಗಿದ್ದು, ಮಾದಕ ವಸ್ತು ಗಾಂಜಾವನ್ನು ಸೇವನೆ ಮಾಡಿರುವ ಬಗ್ಗೆ ದೃಢಪಟ್ಟಿರುತ್ತದೆ.
ಆರೋಪಿಗಳ ಪೈಕಿ ವಿಖ್ಯಾತ್ @ ವಿಕ್ಕಿ ಬಪ್ಪಾಲ್ ಎಂಬಾತನ ವಿರುದ್ದ ಈ ಹಿಂದೆ ಮಂಗಳೂರು ನಗರದ ದಕ್ಷಿಣ, ಉತ್ತರ, ಬರ್ಕೆ, ಉರ್ವಾ, ಗ್ರಾಮಾಂತರ, ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಹಲ್ಲೆ, ಕೊಲೆ ಯತ್ನ, ಜೀವ ಬೆದರಿಕೆ, ಕರ್ತವ್ಯಕ್ಕೆ ಅಡ್ಡಿ ಪಡಿಸಿರುವ ಹಾಗೂ ಕಿಡ್ನ್ಯಾಪ್ ಗೆ ಸಂಬಂಧಪಟ್ಟಂತೆ ಒಟ್ಟು 13 ಪ್ರಕರಣಗಳು ದಾಖಲಾಗಿರುತ್ತದೆ.
ಅಂಜನಾ ಎಂಬಾಕೆಯ ವಿರುದ್ಧ ಈ ಹಿಂದೆ ಕಂಕನಾಡಿ ನಗರ ಹಾಗೂ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಹಲ್ಲೆ ಹಾಗೂ ಕೊಲೆ ಯತ್ನ ಪ್ರಕರಣ ದಾಖಲಾಗಿರುತ್ತದೆ. ಆರೋಪಿ ಹಾಗೂ ಆತನ ಪತ್ನಿ ಜೊತೆ ಸೇರಿಕೊಂಡು ಮಂಗಳೂರು ನಗರದ ಎಂ ಜಿ ರಸ್ತೆಯಲ್ಲಿರುವ ವಿದ್ಯಾಸಂಸ್ಥೆಗಳ ಪರಿಸರದಲ್ಲಿ, ಕೆಪಿಟಿ, ಕದ್ರಿ, ಜೆಪ್ಪು ಬಪ್ಪಾಲ್ ಪರಿಸರದಲ್ಲಿ ಗಾಂಜಾವನ್ನು ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದರು .ಆರೋಪಿಗಳ ವಿರುದ್ಧ ಸೆನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kalaburagi: ಟಿಟಿ ಟಯರ್ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!
Waqf Issue: ನಾಳೆಯಿಂದ ಜೆಪಿಸಿ ಎದುರು ಕರ್ನಾಟಕ ಸೇರಿ 6 ರಾಜ್ಯಗಳ ಪ್ರತಿನಿಧಿಗಳು ಹಾಜರು
ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು
Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ
Banahatti: ತಾಂತ್ರಿಕ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಬದ್ಧಳಾಗಿದ್ದೇನೆ: ಉಮಾಶ್ರೀ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.