50 ಸಾವಿರಕ್ಕೂಅಧಿಕ ಕುಟುಂಬಗಳಿಗೆ ಗ್ಯಾಸ್ ಸಂಪರ್ಕ
Team Udayavani, Sep 3, 2018, 11:21 AM IST
ಕೆಯ್ಯೂರು: ಕೇಂದ್ರ ಸರಕಾರದ ಪ್ರಧಾನ ಮಂತ್ರಿ ಉಜ್ವಲ ಮತ್ತು ಉಜ್ವಲ ಪ್ಲಸ್ ಯೋಜನೆಯಡಿಯಲ್ಲಿ ಈಗಾಗಲೇ ಜಿಲ್ಲೆಯ ಸುಮಾರು 50 ಸಾವಿರಕ್ಕೂ ಅಧಿಕ ಕುಟುಂಬಕ್ಕೆ ಉಚಿತ ಎಲ್ಪಿಜಿ ಗ್ಯಾಸ್ ಸಂಪರ್ಕ ಒದಗಿಸಲಾಗಿದೆ ಎಂದು ಶಾಸಕ ಸಂಜೀವ ಮಠಂದೂರು ಅವರು ಹೇಳಿದರು.
ಕೆಯ್ಯೂರು ಅಂಬೇಡ್ಕರ್ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೆಯ್ಯೂರು ಗ್ರಾ.ಪಂ. ವ್ಯಾಪ್ತಿಯ 22 ಎಸ್ಸಿ/ಎಸ್ಟಿ ಕುಟುಂಬಗಳಿಗೆ ಗ್ಯಾಸ್ ಸಂಪರ್ಕ ಕಿಟ್ಗಳನ್ನು ವಿತರಿಸಿ ಶಾಸಕರು ಮಾತನಾಡಿದರು.
ಪ್ರತಿ ಮನೆಗೆ ಗ್ಯಾಸ್ ಸಂಪರ್ಕ
ಪ್ರತಿ ಗ್ರಾಮವನ್ನು ಹೊಗೆ ಮುಕ್ತ ಗ್ರಾಮವನ್ನಾಗಿಸಲು ಕೇಂದ್ರ ಸರಕಾರ ಚಿಂತನೆ ನಡೆಸಿದ್ದು, ಈ ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಈ ಯೋಜನೆಯ ಮೂಲಕ ಬಡತನ ರೇಖೆಗಿಂತ ಕೆಳಗಿನ ಪ್ರತಿ ಮನೆಗೆ ಗ್ಯಾಸ್ ಸಂಪರ್ಕ ಉಚಿತವಾಗಿ ನೀಡಲಾಗುತ್ತಿದೆ. ಹೊಗೆ ಮುಕ್ತ ಗ್ರಾಮವನ್ನಾಗಿಸಲು ನಾವೆಲ್ಲರೂ ಪಣ ತೊಡಬೇಕು ಎಂದು ಶಾಸಕರು ತಿಳಿಸಿದರು. ಕುಂಬ್ರ ಬೂಡಿಯಾರ್ ಇಂಡೇನ್ ಗ್ಯಾಸ್ ಏಜೆನ್ಸಿ ಮ್ಯಾನೇಜರ್ ಪ್ರಭಾಕರ ರೈ ಗ್ಯಾಸ್ ಬಳಕೆಯ ಬಗ್ಗೆ ಗ್ರಾಹಕರಿಗೆ ಮಾಹಿತಿ ನೀಡಿದರು. ಕೆಯ್ಯೂರು ಗ್ರಾ.ಪಂ. ಉಪಾಧ್ಯಕ್ಷ ರಾಧಾಕೃಷ್ಣ ಗೌಡ ಕೆಯ್ಯೂರು, ಬಿಜೆಪಿ ಗ್ರಾಮ ಸಮಿತಿ ಅಧ್ಯಕ್ಷ ಪ್ರಕಾಶ್ ಆಳ್ವ ಇಳಾಂತಜೆ, ಬಿಜೆಪಿ ರೈತ ಮೋರ್ಚಾದ ಅಧ್ಯಕ್ಷ ಸುರೇಶ್ ಆಳ್ವ ಉಪಸಿತರಿದ್ದರು. ಶಿಕ್ಷಕ ಪದ್ಮಯ್ಯ ಸ್ವಾಗತಿಸಿದರು. ಕೆಯ್ಯೂರು ಗ್ರಾ.ಪಂ. ಸದಸ್ಯ ಕಿಟ್ಟ ಅಜಿಲ ಕಣಿಯಾರು ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.
ಹೊಗೆ ಮುಕ್ತ ಗ್ರಾಮಕ್ಕೆ ಪಣ
ಕೆಯ್ಯೂರು ಗ್ರಾಮವನ್ನು ಹೊಗೆ ಮುಕ್ತ ಗ್ರಾಮವನ್ನಾಗಿಸಲು ನಾವು ಪ್ರಯತ್ನ ಪಡುತ್ತಿದ್ದೇವೆ. ಗ್ರಾಮದಲ್ಲಿ ಬಡತನ ರೇಖೆಗಿಂತ ಕೆಳಗಿನ ಸುಮಾರು 200ಕ್ಕೂ ಅಧಿಕ ಮಂದಿಗೆ ಗ್ಯಾಸ್ ಸಂಪರ್ಕ ಒದಗಿಸಲಾಗಿದೆ. ಇನ್ನು ಕೂಡ ಅರ್ಜಿ ಬಂದಿದ್ದು, ಮುಂದಿನ ದಿನಗಳಲ್ಲಿ ಎಲ್ಲರಿಗೂ ಗ್ಯಾಸ್ ಸಂಪರ್ಕದ ವ್ಯವಸ್ಥೆ ಮಾಡುತ್ತೇವೆ. ಗ್ರಾಮದ ಪ್ರತಿಯೊಬ್ಬರ ಸಹಕಾರ ಅಗತ್ಯ.
– ಬಾಬು ಬಿ.
ಕೆಯ್ಯೂರು ಗ್ರಾ.ಪಂ. ಅಧ್ಯಕ್ಷರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.