ಡಿ.10ರಿಂದ ಅನಿಲ ಭಾಗ್ಯ: ಸಚಿವ ರೈ
Team Udayavani, Oct 15, 2017, 4:13 PM IST
ವಿಟ್ಲ: ಕೊಳ್ನಾಡು ಗ್ರಾ.ಪಂ.ನ ನೇತ್ರಾವತಿ ಸಭಾಂಗಣದಲ್ಲಿ ಅರಣ್ಯ ಇಲಾಖೆ, ಬಂಟ್ವಾಳ ವಲಯ, ಮಂಗಳೂರು ವಿಭಾಗದ ವಿಶೇಷ ಘಟಕ ಯೋಜನೆಯಡಿಯಲ್ಲಿ ಕೊಳ್ನಾಡು, ಸಾಲೆತ್ತೂರು, ಇರಾ ಮತ್ತು ಮಂಚಿ ಗ್ರಾಮಗಳ ಪರಿಶಿಷ್ಟ ಜಾತಿ ಮತ್ತು ಪಂಗಡದ 49 ಮಂದಿಗೆ ಉಚಿತ ಎಲ್‌ಪಿಜಿ ಗ್ಯಾಸ್ ಸ್ಟವ್, ಸಿಲಿಂಡರ್ ವಿತರಣೆ ಜರಗಿತು.
ಗ್ಯಾಸ್‌ಸ್ಟವ್, ಸಿಲಿಂಡರ್ ವಿತರಣೆ ಮಾಡಿ ಮಾತನಾಡಿದ ಸಚಿವ ರಮಾನಾಥ ರೈ ಅವರು, ಗ್ಯಾಸ್ ಒದಗಿಸುವುದರಿಂದ ಅರಣ್ಯ ನಾಶವಾಗುವುದು ತಪ್ಪುತ್ತದೆ. ಆರೋಗ್ಯಪೂರ್ಣವಾದ ವಾತಾವರಣವೂ ಉಂಟಾಗುತ್ತದೆ. ಕಳೆದ ಸಾಲಿನಲ್ಲಿ 700ಕ್ಕಿಂತ ಅಧಿಕ ಮತ್ತು ಪ್ರಸಕ್ತ ಸಾಲಿನಲ್ಲಿ ಈಗಾಗಲೇ 500ಕ್ಕಿಂತಲೂ ಹೆಚ್ಚು ಫಲಾನುಭವಿಗಳಿಗೆ ಗ್ಯಾಸ್ ಸೌಲಭ್ಯವನ್ನು ಕಲ್ಪಿಸಲಾಗಿದೆ. ಡಿ.10ರಿಂದ ಅನಿಲಭಾಗ್ಯ, ಜನವರಿಯಿಂದ ತಾಲೂಕು ಕೇಂದ್ರದಲ್ಲಿ ಇಂದಿರಾ ಕ್ಯಾಂಟೀನ್ ಸೌಲಭ್ಯ ಆರಂಭಿಸಲಾಗುವುದು ಎಂದು ಸಚಿವರು ಹೇಳಿದರು.
ಜಿ.ಪಂ.ಸದಸ್ಯರಾದ ಎಂ.ಎಸ್. ಮಹಮ್ಮದ್, ಮಂಜುಳಾ ಮಾಧವ ಮಾವೆ, ಮಮತಾ ಡಿ.ಎಸ್.ಗಟ್ಟಿ, ತಾ.ಪಂ. ಉಪಾಧ್ಯಕ್ಷ ಅಬ್ಟಾಸ್‌ಆಲಿ, ಸ್ಥಾಯೀ ಸಮಿತಿ ಅಧ್ಯಕ್ಷೆ ಧನಲಕ್ಷ್ಮೀ ಬಂಗೇರ, ಇರಾ ಗ್ರಾ.ಪಂ. ಅಧ್ಯಕ್ಷ ರಝಾಕ್ ಕುಕ್ಕಾಜೆ, ತಾ.ಪಂ.ಮಾಜಿ ಸದಸ್ಯೆ ದೇವಿಕಾ ಆರ್.ರೈ, ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷ ಬಿ.ಎಚ್.ಖಾದರ್, ಕೊಳ್ನಾಡು ಗ್ರಾ.ಪಂ.ಉಪಾಧ್ಯಕ್ಷೆ ಯಮುನಾ ಲಕ್ಷ್ಮಣ ಗೌಡ ಉಪಸ್ಥಿತರಿದ್ದರು.
ಕೊಳ್ನಾಡು ಗ್ರಾ.ಪಂ. ಅಧ್ಯಕ್ಷ ಸುಭಾಶ್ಚಂದ್ರ ಶೆಟ್ಟಿ ಕುಳಾಲು ಸ್ವಾಗತಿಸಿ ಪ್ರಸ್ತಾವನೆಗೈದರು. ಸೌಮ್ಯಾ ನಾಡಗೀತೆ ಹಾಡಿದರು. ಗ್ರಾ.ಪಂ. ಸದಸ್ಯ ವಿಶ್ವನಾಥ ಶೆಟ್ಟಿ ಪೆರ್ಲದಬೈಲು ಕಾರ್ಯಕ್ರಮ ನಿರೂಪಿಸಿದರು. ಬಂಟ್ವಾಳ ವಲಯ ಅರಣ್ಯಾಧಿಕಾರಿ ಬಿ.ಸುರೇಶ್ ವಂದಿಸಿದರು.
ಅ.22ಕ್ಕೆ ಮುಖ್ಯಮಂತ್ರಿ ಬಂಟ್ವಾಳಕ್ಕೆ
ಬಂಟ್ವಾಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಪ್ರಸಕ್ತ ಸಾಲಿನಲ್ಲಿ 300 ಕೋ.ರೂ.ಗೂ ಅಧಿಕ ಅನುದಾನ ಬಂದಿದೆ. ಬಹುಗ್ರಾಮ ಕುಡಿಯುವ ನೀರಿನ ಯೋಜನೆಯಲ್ಲಿ 200 ಕೋ. ರೂ. ಅನುದಾನ ಲಭಿಸಿದೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಅ.22ಕ್ಕೆ ಬಂಟ್ವಾಳಕ್ಕೆ ಆಗಮಿಸಿ ಹಲವು ಕಾಮಗಾರಿಗಳನ್ನು ಉದ್ಘಾಟಿಸಲಿದ್ದಾರೆ ಮತ್ತು ಹೊಸ ಯೋಜನೆಗಳಿಗೆ ಶಿಲಾನ್ಯಾಸ ನೆರವೇರಿಸಲಿದ್ದಾರೆ.
– ಬಿ.ರಮಾನಾಥ ರೈ, ಜಿಲ್ಲಾ ಉಸ್ತುವಾರಿ ಸಚಿವರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಗದಗ: ಮಾವು ಬಂಪರ್ ಬೆಳೆ ನಿರೀಕ್ಷೆ- ಬೆಳೆಗಾರರಿಗೆ ಸಂತಸ
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Test Cricket; ರೋಹಿತ್ ಆಯ್ತು, ಈಗ ವಿರಾಟ್..: ಬಿಸಿಸಿಐ ಕಳಿಸಿದ ʼಆʼ ಸಂದೇಶದಲ್ಲಿ ಏನಿದೆ?
Gangolli: ಪಂಚಾಯತ್‌ನೊಳಗೆ ನಮಾಜ್; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.