ಸುಬ್ರಹ್ಮಣ್ಯ: ರೈಲಿನಿಂದ ಗ್ಯಾಸ್ ಸೋರಿಕೆ… ಸಮಯಪ್ರಜ್ಞೆಯಿಂದ ತಪ್ಪಿದ ದುರಂತ
Team Udayavani, Jan 1, 2023, 1:18 AM IST
ಸುಬ್ರಹ್ಮಣ್ಯ: ನೆಟ್ಟಣದ ಸುಬ್ರಹ್ಮಣ್ಯ ರೋಡ್ ರೈಲು ನಿಲ್ದಾಣದಲ್ಲಿ ನಿಂತಿದ್ದ ಗೂಡ್ಸ್ ರೈಲಿನಲ್ಲಿ ಅನಿಲ ಸೋರಿಕೆ ಕಾಣಿಸಿಕೊಂಡಿದ್ದು ಲೋಕೊಪೈಲಟ್‌ನ ಸಮಯ ಪ್ರಜ್ಞೆಯಿಂದಾಗಿ ಭಾರೀ ಅನಾಹುತವೊಂದು ತಪ್ಪಿದ ಘಟನೆ ಶನಿವಾರ ನಸುಕಿನ ಜಾವ ಸಂಭವಿಸಿದೆ.
ಸುಳ್ಯ, ಬೆಳ್ತಂಗಡಿ, ಮಂಗಳೂರು, ಪುತ್ತೂರು, ಅಗ್ನಿಶಾಮಕ ದಳದ ಯಂತ್ರಗಳು ಹಾಗೂ ರೈಲ್ವೇ ಇಲಾಖೆಯ ಸಹಕಾರದೊಂದಿಗೆ ಅನಿಲ ಸೋರಿಕೆಯನ್ನು ತಡೆಯುವ ಕಾರ್ಯಚರಣೆ ನಡೆಸಲಾಯಿತು. ಮಂಗಳೂರಿನಿಂದ ಮಹಾರಾಷ್ಟ್ರಕ್ಕೆ ಅನಿಲ ತುಂಬಿಕೊಂಡು ಹೋಗುತ್ತಿದ್ದ ಗೂಡ್ಸ್ ರೈಲು ಸುಬ್ರಹ್ಮಣ್ಯ ರೋಡ್ ರೈಲ್ವೇ ನಿಲ್ದಾಣದಲ್ಲಿ ರಾತ್ರಿ ಗಂಟೆ 2.30ರ ಸುಮಾರಿಗೆ ಕ್ರಾಸಿಂಗ್‌ಗಾಗಿ ನಿಲ್ಲಿಸಲಾಗಿತ್ತು. ಈ ಸಮಯದಲ್ಲಿ ಲೋಕೊಪೈಲೆಟ್ ಕೆಳಗಿಳಿದಾಗ ಸುಮಾರು 43 ಗೂಡ್ಸ್ ಪ್ಯಾನೆಲ್‌ಗಳ ಪೈಕಿ ನಾಲ್ಕನೇ ಟ್ಯಾಂಕ್‌ನಿಂದ ಅನಿಲ ಸೋರಿಕೆಯಾಗುತ್ತಿರುವುದು ಗಮನಕ್ಕೆ ಬಂತು. ತತ್‌ಕ್ಷಣವೇ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಮಾಹಿತಿ ನೀಡಿದರು.
ರೈಲ್ವೇ ನಿಲ್ದಾಣದಿಂದ ಪುತ್ತೂರು ಅಗ್ನಿಶಾಮಕ ದಳಕ್ಕೆ ಬಂದ ಕರೆಯಂತೆ ರಾತ್ರೋ ರಾತ್ರಿ ನೆಟ್ಟಣಕ್ಕೆ ತೆರಳಿ ಕಾರ್ಯಾಚರಣೆ ನಡೆಸಲಾಯಿತು. ಹೆಚ್ಚಿನ ಅನಾಹುತ ತಪ್ಪಿಸುವ ಸಲುವಾಗಿ ಸುಳ್ಯ, ಬೆಳ್ತಂಗಡಿ ಹಾಗೂ ಮಂಗಳೂರಿನಿಂದಲೂ ಅಗ್ನಿಶಾಮಕ ವಾಹನಗಳನ್ನು ತರಿಸಲಾಯಿತು.
ಮಂಗಳೂರು ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಭರತ್ ಅವರ ನೇತೃತ್ವದಲ್ಲಿ ಪುತ್ತೂರು ಅಗ್ನಿಶಾಮಕ ದಳದ ಠಾಣಾಧಿಕಾರಿ ಪಿ. ಆನಂದ್, ಮುಖ್ಯ ಅಗ್ನಿಶಾಮಕ ರುಕ್ಮಯ್ಯ ಗೌಡ, ಚಾಲಕ ಯಾದವ್, ಸಿಬಂದಿ ಮಂಜುನಾಥ್, ಗೃಹ ರಕ್ಷಕ ದಳದ ಮಂಜುನಾಥ್ ಸಹಿತ ಇತರರು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.