Gita Jayanti, ಶ್ರೀಕೃಷ್ಣ ಜನ್ಮಾಷ್ಟಮಿ; ಸಾರ್ವತ್ರಿಕ ರಜೆ: ಪುತ್ತಿಗೆ ಶ್ರೀ ಆಗ್ರಹ
Team Udayavani, Jan 7, 2024, 12:29 AM IST
ಮಂಗಳೂರು: ರಾಜ್ಯ ಸರಕಾರವು ಎಲ್ಲ ಮಕ್ಕಳಿಗೆ ಗೀತೆಯ ಆರಾಧನೆ ಮಾಡಲು ಅನುವಾಗುವಂತೆ ಗೀತಾ ಜಯಂತಿ ಹಾಗೂ ಶ್ರೀ ಕೃಷ್ಣಾಷ್ಟಮಿಯಂದು ಸಾರ್ವತ್ರಿಕ ರಜೆ ನೀಡಬೇಕು, ಈ ಕುರಿತು ಸರಕಾರಕ್ಕೆ ಮನವಿ ಮಾಡುತ್ತೇನೆ ಎಂದು ಉಡುಪಿ ಪರ್ಯಾಯ ಪೀಠವನ್ನೇರಲಿರುವ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ ತಿಳಿಸಿದರು.
ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಜ.18ರಿಂದ ನಮ್ಮ ಪರ್ಯಾಯ ಅವಧಿ ಆರಂಭವಾಗಲಿದೆ. ಈ ಅವಧಿಯಲ್ಲಿ ಈಗಾಗಲೇ ಆರಂಭಿಸಿರುವ ಕೋಟಿ ಗೀತಾ ಲೇಖನ ಯಜ್ಞವನ್ನು ಸಮಾಪ್ತಿಗೊಳಿಸಲಾಗುವುದು.
ಸುಮಾರು 1 ಕೋಟಿ ಜನತೆ ಇದರಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ತಾವು ಬರೆದ ಭಗವದ್ಗೀತೆ ಶ್ಲೋಕವನ್ನು ಶ್ರೀಕೃಷ್ಣನಿಗೆ ಅರ್ಪಿಸಬೇಕು. ಬಳಿಕ ಅದನ್ನೇ ಪ್ರಸಾದ ರೂಪದಲ್ಲಿ ನೀಡಲಾಗುವುದು.
ಆ ಗೀತಾ ಲೇಖನ ಪುಸ್ತಕವನ್ನು ಮನೆಯ ಪೂಜಾ ಮಂದಿರದಲ್ಲಿ ಇರಿಸಿ ನಿತ್ಯವೂ ಶ್ಲೋಕ ಪಠಣ ಮೂಲಕ ಅರ್ಚಿಸಬೇಕು. ಪ್ರತೀ ಕುಟುಂಬವೂ ಭಗವದ್ಗೀತಾ ಯಜ್ಞದಲ್ಲಿ ತೊಡಗಿಸಿಕೊಳ್ಳಬೇಕು ಎಂದರು.
ಇಂದಿನ ದಿನಗಳಲ್ಲಿ ಮಾನವನಿಗೆ ನಿತ್ಯವೂ ಕಾಡುತ್ತಿರುವ ಒತ್ತಡ, ಖನ್ನತೆಗಳಿಂದ ಪಾರಾಗಲು ಭಗವದ್ಗೀತೆಯ ಅಧ್ಯಯನವೇ ಉತ್ತಮ ಚಿಕಿತ್ಸೆ , ಪ್ರತಿ ಕುಟುಂಬದಲ್ಲೂ ಭಗವದ್ಗೀತೆ ಪ್ರಸಾರ ಮಾಡಬೇಕು. ಇದರಿಂದ ವೈಯಕ್ತಿಕ ಸಮಸ್ಯೆಗಳೂ ನಿವಾರಣೆಯಾಗುತ್ತದೆ. ಸಾಮಾಜಿಕ ಹಾಗೂ ರಾಷ್ಟ್ರೀಯ, ಅಂತಾರಾಷ್ಟ್ರೀಯ ಸಮಸ್ಯೆಗಳಿಗೂ ಭಗವದ್ಗೀತೆ ಉತ್ತರವಾಗಿದೆ. ಮನೋರೋಗ, ಆತ್ಮಹತ್ಯೆಯಂತಹ ಯೋಚನೆ ಎಲ್ಲಕ್ಕೂ ಭಗವದ್ಗೀತೆಯಲ್ಲಿ ಉತ್ತರವಿದೆ. ದೇಶ, ವಿದೇಶ ಸೇರಿದಂತೆ ಒಟ್ಟು 15 ಕಡೆಗಳಲ್ಲಿ ಪುತ್ತಿಗೆ ಮಠದ ಶಾಖೆಗಳಿದೆ. ಇದನ್ನು 108 ಕಡೆಗಳಿಗೆ ವಿಸ್ತರಿಸಲು ಯೋಚನೆ ಮಾಡಲಾಗಿದೆ. ನಾವು 28 ದೇಶಗಳಲ್ಲಿ ಸಂಚಾರ ಮಾಡಿದ್ದು, ಪ್ರಮುಖ 60 ನಗರಗಳ ಪೈಕಿ 11 ನಗರಗಳಲ್ಲಿ ಶಾಖೆ ಇದೆ. ವಿದ್ಯಾಪೀಠಗಳನ್ನು ತೆರೆದು ಅಲ್ಲಿ ಭಗವದ್ಗೀತೆ ಪ್ರಸಾರಕ್ಕೆ ಯೋಜನೆ ರೂಪಿಸಲಾಗುವುದು ಎಂದರು.
ಪರ್ಯಾಯ ಪೀಠಾರೋಹಣ ಪೂರ್ವಭಾವಿಯಾಗಿ ಕಳೆದ ಎರಡು ವರ್ಷಗಳಿಂದ ವಿಶ್ವ ಸಂಚಾರ ಕೈಗೊಳ್ಳಲಾಗಿದೆ. ಅಮೆರಿಕ, ಇಂಗ್ಲೆಂಡ್, ಆಸ್ಟ್ರೇಲಿಯ, ಗಲ್ಫ್ ರಾಷ್ಟ್ರ, ಉತ್ತರ ಹಾಗೂ ದಕ್ಷಿಣ ಭಾರತದ ತೀರ್ಥ ಕ್ಷೇತ್ರಗಳನ್ನು ಸಂಚರಿಸಿ ಶನಿವಾರ ಮಂಗಳೂರಿನಲ್ಲಿ ವಿಶ್ವ ಸಂಚಾರಕ್ಕೆ ಮಂಗಳ ಹಾಡಲಾಗಿದೆ. ಜ.7ರಂದು ಮಂಗಳೂರಲ್ಲಿ ಪೌರ ಸಮ್ಮಾನ ಸ್ವೀಕರಿಸಿ, ಅಲ್ಲಿಂದ ಜ. 8ರಂದು ಉಡುಪಿ ಪುರಪ್ರವೇಶ ಮಾಡಲಾಗುವುದು. ಬಳಿಕ ಪರ್ಯಾಯ ಮಹೋತ್ಸವದ ವಿಧಿವತ್ತಾದ ಕಾರ್ಯಕ್ರಮಗಳು ಆರಂಭವಾಗಲಿವೆ ಎಂದು ಪುತ್ತಿಗೆಶ್ರೀ ಹೇಳಿದರು.
ಕಲ್ಕೂರ ಪ್ರತಿಷ್ಠಾನ ಅಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ, ಪ್ರೊ| ಎಂ.ಬಿ. ಪುರಾಣಿಕ್, ಪುತ್ತಿಗೆ ಮಠದ ಅಂತಾರಾಷ್ಟ್ರೀಯ ದಿವಾನ ಪ್ರಸನ್ನ ಇದ್ದರು.
ವಿಶ್ವ ಗೀತಾ ಪರ್ಯಾಯಕ್ಕೆ ಐದು ಗುರಿ
ನಮ್ಮದು ನಾಲ್ಕನೇ ಪರ್ಯಾಯವಾಗಿದ್ದು, ಇದನ್ನು ವಿಶ್ವ ಗೀತಾ ಪರ್ಯಾಯ ಎಂದು ಕರೆಯುತ್ತೇವೆ. ಈ ಪರ್ಯಾಯದಲ್ಲಿ ಭಗವದ್ಗೀತೆ ಬಗ್ಗೆ ಅರ್ಥಪೂರ್ಣ ಜಾಗೃತಿ ಮೂಡಿಸಲಾಗುವುದು. ಕೃಷ್ಣ ಮಠದ ಗೀತಾ ಮಂದಿರದಲ್ಲಿ ಅಖಂಡ ಗೀತಾ ಪಾರಾಯಣ ನಡೆಸಿ ಕೃಷ್ಣನಿಗೆ ಅರ್ಪಿಸಲಾಗುವುದು. 700 ಶ್ಲೋಕಗಳಿಂದ ಭಗವದ್ಗೀತಾ ಮಹಾಯಾಗ ನಡೆಸಲಾಗುವುದು. ಅಂತಾರಾಷ್ಟ್ರೀಯ ಗೀತಾ ಸಮ್ಮೇಳನ ಆಯೋಜಿಸಲಾಗುವುದು. ಸನ್ಯಾಸ ಸ್ವೀಕರಿಸಿ 50 ವರ್ಷ ಸಲ್ಲುವ ಹಿನ್ನೆಲೆಯಲ್ಲಿ ಶ್ರೀಕೃಷ್ಣನಿಗೆ ಬಂಗಾರದ ರಥ ಸಮರ್ಪಿಸಲಾಗುವುದು. ಈ ರಥವನ್ನು ಶ್ರೀಕೃಷ್ಣನ ಗರ್ಭಗುಡಿಯ ಸುತ್ತಲೂ ಎಳೆಯಲು ಅವಕಾಶ ಇದೆ. ಮಳೆ ಬಂದರೂ ರಥೋತ್ಸವಕ್ಕೆ ತೊಂದರೆಯಾಗದು. ಯಾತ್ರಿಗಳ ಅನುಕೂಲಕ್ಕೆ ಉಡುಪಿಯಲ್ಲಿ 108 ಕೊಠಡಿಗಳ ಅಷ್ಟೋತ್ತರ ಭವನ ನಿರ್ಮಿಸಲು ಸಂಕಲ್ಪಿಸಲಾಗಿದೆ, ಕಲ್ಸಂಕದಲ್ಲಿ ಮಧ್ವಾಚಾರ್ಯರು ಕೃಷ್ಣನನ್ನು ಎತ್ತಿ ತರುವಂತಹ ಪ್ರತಿಮೆ ಇರುವ ಮಹಾದ್ವಾರವನ್ನೂ ನಿರ್ಮಿಸಲಾಗುವುದು ಎಂದರು.
ಪರ್ಯಾಯೋತ್ಸವಕ್ಕೆ ವಿದೇಶಿ ಗಣ್ಯರು
ಜ.17ರಂದು ನಡೆಯುವ ಪುತ್ತಿಗೆ ಪರ್ಯಾಯದಲ್ಲಿ ಪಾಲ್ಗೊಳ್ಳಲು ವಿದೇಶಿಯರಿಗೂ ಆಹ್ವಾನ ನೀಡಲಾಗಿದೆ. ಅಮೆರಿಕಾ, ಜಪಾನ್ ಸಹಿತ ಹಲವು ದೇಶಗಳಿಂದ ಗಣ್ಯರು ಪಾಲ್ಗೊಳ್ಳಲಿದ್ದಾರೆ ಎಂದು ಪುತ್ತಿಗೆ ಶ್ರೀ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು
Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು
Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ
Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್ ಪಟೇಲ್
Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.