ಶುಭ ಶುಕ್ರವಾರ ವಿಶೇಷ ಪ್ರಾರ್ಥನೆ, ಶಿಲುಬೆಯ ಆರಾಧನೆ
Team Udayavani, Apr 15, 2017, 3:21 PM IST
ಮಂಗಳೂರು/ಉಡುಪಿ: ಯೇಸು ಕ್ರಿಸ್ತರು ಶಿಲುಬೆಯಲ್ಲಿ ಮರಣಿಸಿದ ದಿನದ ಸ್ಮರಣಾರ್ಥ ಎ. 14ರಂದು ಕ್ರೈಸ್ತರು ಶುಭ ಶುಕ್ರವಾರವನ್ನಾಗಿ ಆಚರಿಸಿದರು. ಆ ಪ್ರಯುಕ್ತ ಚರ್ಚ್‌ಗಳಲ್ಲಿ ವಿಶೇಷ ಪ್ರಾರ್ಥನೆ, ಶಿಲುಬೆಯ ಆರಾಧನೆ ನಡೆಯಿತು.
ಯೇಸು ಕ್ರಿಸ್ತರನ್ನು ಶಿಲುಬೆಗೇರಿಸಿದ್ದರಿಂದ ನಿಜಾರ್ಥದಲ್ಲಿ ಇದು ದುಃಖದ ದಿನ; ಆದರೆ ಯೇಸು ಕ್ರಿಸ್ತರು ಲೋಕ ಕಲ್ಯಾಣಕ್ಕಾಗಿ ತಮ್ಮ ಪ್ರಾಣವನ್ನು ಅರ್ಪಿಸಿದರು ಎಂಬ ನಂಬಿಕೆಯ ಹಿನ್ನೆಲೆಯಲ್ಲಿ ಈ ದಿನವನ್ನು ಶುಭ ದಿನವನ್ನಾಗಿ ಕ್ರೈಸ್ತರು ಆಚರಿಸುತ್ತಾರೆ. ಇಂದು ವಿಶೇಷವಾಗಿ ಯೇಸು ಕ್ರಿಸ್ತರಿಗೆ ಶಿಲುಬೆಯ ಮರಣ ಶಿಕ್ಷೆ ವಿಧಿಸಿದ್ದಲ್ಲಿಂದ ಮೊದಲ್ಗೊಂಡು ಅವರು ಶಿಲುಬೆಯಲ್ಲಿ ಮರಣವನ್ನಪ್ಪಿ ಅವರ ಶರೀರವನ್ನು ಸಮಾಧಿ ಮಾಡುವಲ್ಲಿ ವರೆಗಿನ 14 ಪ್ರಮುಖ ಘಟನಾವಳಿಗಳಿಗೆ ಸಂಬಂಧಿಸಿದ “ಶಿಲುಬೆಯ ಹಾದಿ ‘ (ವೇ ಆಫ್ ದಿ ಕ್ರಾಸ್) ಆಚರಣೆಯನ್ನು ಚರ್ಚ್ ಮತ್ತುಚರ್ಚ್ ಆವರಣದಲ್ಲಿ ನಡೆಸುವ ಮೂಲಕ ಯೇಸು ಕ್ರಿಸ್ತರು ಅನುಭವಿಸಿದ ಕಷ್ಟ- ಸಂಕಷ್ಟಗಳನ್ನು ಕ್ರೈಸ್ತರು ಸ್ಮರಿಸಿದರು. ಈ ದಿನವನ್ನು ಧ್ಯಾನ, ಉಪವಾಸದ ಮೂಲಕ ಕಳೆದರು.
ಶುಭ ಶುಕ್ರವಾರದಂದು ಚರ್ಚ್‌ಗಳಲ್ಲಿ ಘಂಟೆಗಳ ನಿನಾದ ಇರುವುದಿಲ್ಲ; ಬಲಿ ಪೂಜೆಯ ಸಂಭ್ರಮವಿಲ್ಲ. ಮೌನ ವಾತಾವರಣದಲ್ಲಿ ಪ್ರಾರ್ಥನೆ ಸಲ್ಲಿಸುವುದು ದಿನದ ವೈಶಿಷ್ಟÂ.ಚರ್ಚ್‌ಗಳಲ್ಲಿ ನಡೆದ ಕಾರ್ಯಕ್ರಮಗಳಲ್ಲಿ ಕ್ರೈಸ್ತರು ಅಧಿಕ ಸಂಖ್ಯೆಯಲ್ಲಿ ಭಾಗವಹಿಸಿ ಪ್ರಾರ್ಥನೆ, ಧ್ಯಾನ, ಶಿಲುಬೆಯ ಆರಾಧನೆಯಲ್ಲಿ ಭಾಗವಹಿಸಿ ಲೋಕ ಕಲ್ಯಾಣಕ್ಕಾಗಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.
ಮಂಗಳೂರಿನ ಬಿಷಪ್ ರೆ| ಡಾ| ಅಲೋಶಿಯಸ್ ಪಾವ್É ಡಿ’ಸೋಜಾ ಅವರು ರೊಜಾ ರಿಯೋ ಕೆಥೆಡ್ರಲ್‌ನಲ್ಲಿ ಮತ್ತು ಉಡುಪಿ ಬಿಷಪ್ ರೆ| ಡಾ| ಜೆರಾಲ್ಡ್ ಐಸಾಕ್ ಲೋಬೋ ಅವರು ಕಲ್ಯಾಣಪುರದ ಮಿಲಾಗ್ರಿಸ್ ಕೆಥೆಡ್ರಲ್‌ನಲ್ಲಿ ನಡೆದ ಶಿಲುಬೆಯ ಹಾದಿ ಆಚರಣೆ ಮತ್ತು ಪ್ರಾರ್ಥನಾ ಕಾರ್ಯಕ್ರಮಗಳಲ್ಲಿ ನೇತೃತ್ವ ವಹಿಸಿದ್ದರು. ಪ್ರಧಾನ ಗುರು ಫಾ| ಜೆ.ಬಿ.ಕ್ರಾಸ್ತಾ ಮತ್ತು ಧರ್ಮಪ್ರಾಂತ್ಯದ ಎಸ್ಟೇಟ್ ಮ್ಯಾನೇಜರ್ ಫಾ| ಹೆನ್ರಿ ಮಸ್ಕರೇನ್ಹಸ್, ಇತರ ಗುರುಗಳು ಭಾಗವಹಿಸಿದ್ದರು.
ಶಿಲುಬೆಯ ಹಾದಿ ಆಚರಣೆಯ ಸಂದರ್ಭದಲ್ಲಿ ವಿವಿಧ ಕಷ್ಟ ಸಂಕಷ್ಟದಲ್ಲಿರುವ ಜನರಿಗಾಗಿ, ರೈತರಿಗಾಗಿ ಮತ್ತು ಒಟ್ಟು ಲೋಕ ಕಲ್ಯಾಣಕ್ಕಾಗಿ ವಿಶೇಷವಾಗಿ ಪ್ರಾರ್ಥಿಸಲಾಯಿತು. ಸಂಜೆ ನಡೆದ ಕಾರ್ಯಕ್ರಮದಲ್ಲಿ ಯೇಸು ಕ್ರಿಸ್ತರನ್ನು ಶಿಲುಬೆಗೇರಿಸಿದ ರೀತಿ ಮತ್ತು ಮೃತ ಶರೀರವನ್ನು ಶಿಲುಬೆಯಿಂದ ಕೆಳಗಿಳಿ ಸುವ ಪ್ರಕ್ರಿಯೆಯನ್ನು ಸಾಂಕೇತಿಕವಾಗಿ ನಡೆಸಲಾಯಿತು ಹಾಗೂ ಬಳಿಕ ಅದನ್ನು ಮೆರವಣಿಗೆಯಲ್ಲಿ ಕೊಂಡೊಯ್ಯುವ ಪ್ರಕ್ರಿಯೆ ನೆರವೇರಿತು.
“ಲೋಕ ಕಲ್ಯಾಣಕ್ಕಾಗಿ ಶಿಲುಬೆಯಲ್ಲಿ ಪ್ರಾಣಾರ್ಪಣೆ ಮಾಡಿದ ಯೇಸು ಕ್ರಿಸ್ತರು ನಮ್ಮೆಲ್ಲರ ಕಷ್ಟ ಕೋಟಲೆಗಳನ್ನು ನಿವಾರಿಸಲಿ’ ಎಂದು ಬಿಷಪ್ ಅವರು ಪ್ರಾರ್ಥಿಸಿದರು. ಯೇಸು ಅನುಭವಿಸಿದ ಕಷ್ಟ ಸಂಕಷ್ಟಗಳ ಸ್ಮರಣೆಯು ನಮಗೆ ನಮ್ಮ ಸಂಕಷ್ಟಗಳನ್ನು ಸಹಿಸಲು, ದ್ವೇಷ ಅಸೂಯೆಗಳನ್ನು ತೊರೆದು ಸತ್ಯ ಮಾರ್ಗದಲ್ಲಿ ನಡೆಯಲು, ಹಿಂಸೆಯನ್ನು ತೊರೆದು ಅಹಿಂಸೆಯ ಹಾದಿಯಲ್ಲಿ ನಡೆ ಯಲು ಸ್ಫೂರ್ತಿಯನ್ನು ನೀಡಲಿ’ ಎಂದು ಅವರು ತಮ್ಮ ಸಂದೇಶದಲ್ಲಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ
Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Dinesh Gundu Rao: ಅನರ್ಹರ ಕಾರ್ಡ್ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ
MUST WATCH
ಹೊಸ ಸೇರ್ಪಡೆ
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ
BGT 24: ಕೆಎಲ್ ರಾಹುಲ್ ಔಟ್ ಅಥವಾ ನಾಟೌಟ್: ಏನಿದು ವಿವಾದ? ಇಲ್ಲಿದೆ ಅಂಪೈರ್ ಉತ್ತರ
Belthangady: ನ. 21- ಮೇ 23: ಧರ್ಮಸ್ಥಳ ಮೇಳದಿಂದ ಯಕ್ಷ ಗಾನ ಸೇವೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.