ಗುಡ್‌ಫ್ರೈಡೆ: ವಿಶೇಷ ಪ್ರಾರ್ಥನೆ, ಶಿಲುಬೆಯ ಆರಾಧನೆ

Team Udayavani, Mar 31, 2018, 8:15 AM IST

Shilube-30-3.jpg

ಮಂಗಳೂರು/ಉಡುಪಿ: ಕರಾವಳಿ ಮತ್ತು ಒಳನಾಡಿನಾದ್ಯಂತ ಕ್ರೈಸ್ತರು ಇಂದು ಭಕ್ತಿಪೂರ್ವಕ ಶುಭ ಶುಕ್ರವಾರ (ಗುಡ್‌ ಫ್ರೈಡೆ)ವನ್ನು ಆಚರಿಸಿದರು. ಯೇಸು ಕ್ರಿಸ್ತರು ಶಿಲುಬೆಯಲ್ಲಿ ಮರಣಿಸಿದ ದಿನದ ಸ್ಮರಣಾರ್ಥ ಶುಭ ಶುಕ್ರವಾರವನ್ನು ಆಚರಿಸಲಾಗುತ್ತಿದ್ದು, ಚರ್ಚ್‌ಗಳಲ್ಲಿ ದಿನವಿಡೀ ವಿಶೇಷ ಪ್ರಾರ್ಥನೆ, ಶಿಲುಬೆಯ ಆರಾಧನೆ ನಡೆದವು. ಯೇಸು ಕ್ರಿಸ್ತರಿಗೆ ಶಿಲುಬೆಯ ಮರಣ ಶಿಕ್ಷೆ ವಿಧಿಸಿದಲ್ಲಿಂದ ಆರಂಭಿಸಿ ಅವರು ಶಿಲುಬೆಯಲ್ಲಿ ಮರಣವನ್ನಪ್ಪಿ ಅವರ ಶರೀರವನ್ನು ಸಮಾಧಿ ಮಾಡುವಲ್ಲಿಯವರೆಗಿನ 14 ಪ್ರಮುಖ ಘಟನಾವಳಿಗಳನ್ನು ವರ್ಣಿಸುವ ‘ಶಿಲುಬೆಯ ಹಾದಿ’ (ವೇ ಆಫ್‌ ದಿ ಕ್ರಾಸ್‌) ಆಚರಣೆಯನ್ನು ನಡೆಸುವ ಮೂಲಕ ಯೇಸು ಕ್ರಿಸ್ತರು ಅನುಭವಿಸಿದ ಕಷ್ಟ- ಸಂಕಷ್ಟಗಳನ್ನು ಕ್ರೈಸ್ತರು ಸ್ಮರಿಸಿದರು. ಈ ದಿನವನ್ನು ಧ್ಯಾನ ಮತ್ತು ಉಪವಾಸದ ಮೂಲಕ ಕಳೆದರು.

ಶುಭ ಶುಕ್ರವಾರದ ನಿಮಿತ್ತ ಚರ್ಚ್‌ಗಳಲ್ಲಿ ಘಂಟೆಗಳು ನಿನದಿಸಲಿಲ್ಲ, ಬಲಿ ಪೂಜೆಯ ಸಂಭ್ರಮವಿರಲಿಲ್ಲ. ನೀರವ ವಾತಾವರಣದಲ್ಲಿ ಪ್ರಾರ್ಥನೆ ದಿನದ ವೈಶಿಷ್ಟ್ಯ. ಚರ್ಚ್‌ಗಳಲ್ಲಿ ನಡೆದ ಪ್ರಾರ್ಥನೆ, ಧ್ಯಾನ, ಶಿಲುಬೆಯ ಆರಾಧನೆ ಕಾರ್ಯಕ್ರಮಗಳಲ್ಲಿ ಕ್ರೈಸ್ತರು ಅಧಿಕ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.

ಮಂಗಳೂರಿನ ಬಿಷಪ್‌ ರೈ| ರೆ| ಡಾ| ಅಲೋಶಿಯಸ್‌ ಪಾವ್ಲ್ ಡಿ’ಸೋಜಾ ಅವರು ರೊಜಾರಿಯೋ ಕೆಥೆಡ್ರಲ್‌ನಲ್ಲಿ ಮತ್ತು ಉಡುಪಿಯ ಬಿಷಪ್‌ ರೈ| ರೆ| ಡಾ| ಜೆರಾಲ್ಡ್‌ ಐಸಾಕ್‌ ಲೋಬೋ ಅವರು ಕಲ್ಯಾಣಪುರದ ಮಿಲಾಗ್ರಿಸ್‌ ಕೆಥೆಡ್ರಲ್‌ನಲ್ಲಿ ನಡೆದ ಶಿಲುಬೆಯ ಹಾದಿ ಮತ್ತು ಸಂಜೆ ನಡೆದ ಪ್ರಾರ್ಥನೆಗಳ ನೇತೃತ್ವ ವಹಿಸಿದ್ದರು. ಕೆಥೆಡ್ರಲ್‌ ರೆಕ್ಟರ್‌ಗಳಾದ ಫಾ| ಜೆ.ಬಿ. ಕ್ರಾಸ್ತಾ ಮತ್ತು ಫಾ| ಸ್ಟಾ éನ್ಲಿ ಬಿ. ಲೋಬೋ, ಇತರ ಗುರುಗಳು ಉಪಸ್ಥಿತರಿದ್ದರು. 
ಯೇಸು ಕ್ರಿಸ್ತರು ನಡೆದ ಶಿಲುಬೆಯ ಹಾದಿಯನ್ನು ಮನನ ಮಾಡುವ ಸಂದರ್ಭದಲ್ಲಿ ವಿವಿಧ ಸಂಕಷ್ಟಗಳಲ್ಲಿರುವ ಜನರಿಗಾಗಿ ಮತ್ತು ಒಟ್ಟು ಲೋಕ ಕಲ್ಯಾಣಕ್ಕಾಗಿ ವಿಶೇಷವಾಗಿ ಪ್ರಾರ್ಥಿಸಲಾಯಿತು. ಸಂಜೆ ನಡೆದ ಕಾರ್ಯಕ್ರಮದಲ್ಲಿ ಯೇಸು ಕ್ರಿಸ್ತರನ್ನು ಶಿಲುಬೆಗೇರಿಸಿದುದು ಮತ್ತು ಮೃತ ಶರೀರ ವನ್ನು ಶಿಲುಬೆಯಿಂದ ಕೆಳಗಿಳಿಸುವ ಪ್ರಕ್ರಿಯೆಯನ್ನು ಸಾಂಕೇತಿಕವಾಗಿ ನಡೆಸಲಾಯಿತು ಹಾಗೂ ಬಳಿಕ ಮೆರವಣಿಗೆ ನೆರವೇರಿತು.

‘ಯೇಸು ಕ್ರಿಸ್ತರು ಲೋಕ ಕಲ್ಯಾಣಕ್ಕಾಗಿ ತಮ್ಮ ಪ್ರಾಣಾರ್ಪಣೆ ಮಾಡಿದರು. ಶಿಲುಬೆಗೇರಿಸುವ ಸಂದರ್ಭದಲ್ಲಿ ಅವರು ಅನುಭವಿಸಿದ ಕಷ್ಟ ಸಂಕಷ್ಟಗಳ ಸ್ಮರಣೆಯು ನಮಗೆ ನಮ್ಮ ಸಂಕಷ್ಟ, ದುಃಖ ದುಮ್ಮಾನಗಳನ್ನು ಸೈರಿಸಲು, ದ್ವೇಷ, ಕೋಪ -ತಾಪಗಳನ್ನು ತೊರೆದು ಸನ್ಮಾರ್ಗದಲ್ಲಿ ಮುನ್ನಡೆಯಲು, ಅಹಿಂಸೆಯ ಹಾದಿಯಲ್ಲಿ ಅಡಿಯಿಡಲು ಸ್ಫೂರ್ತಿಯನ್ನು ನೀಡಲಿ’ ಎಂದು ಬಿಷಪ್‌ ಅವರು ಸಂದೇಶದಲ್ಲಿ ಹೇಳಿದರು.

ಉಡುಪಿ ಕಲ್ಯಾಣಪುರದ ಮಿಲಾಗ್ರಿಸ್‌ ಕೆಥೆಡ್ರಲ್‌ನಲ್ಲಿ ‘ವೇ ಆಫ್‌ ದಿ ಕ್ರಾಸ್‌’ ನಡೆಯಿತು.

ಟಾಪ್ ನ್ಯೂಸ್

Mangaluru: ಬಾಲಕಿ, ಮಹಿಳೆಯ ವೀಡಿಯೋ ಚಿತ್ರೀಕರಣ: ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆ

Mangaluru: ಬಾಲಕಿ, ಮಹಿಳೆಯ ವೀಡಿಯೋ ಚಿತ್ರೀಕರಣ: ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆ

ravishankar-guruji

World Meditation Day; ಶರೀರಕ್ಕೆ ಊಟ, ಆತ್ಮಕ್ಕೆ ಧ್ಯಾನ

AICC ಅಧಿವೇಶನ: ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿಂದು ಮಹತ್ವದ ಸಭೆ

AICC ಅಧಿವೇಶನ: ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿಂದು ಮಹತ್ವದ ಸಭೆ

Belthangady: ಅಪಘಾತದಲ್ಲಿ ಗಾಯಗೊಂಡು 14 ವರ್ಷ ಜೀವನ್ಮರಣ ಹೋರಾಟ ಮಾಡಿದ್ದ ಶಿಕ್ಷಕಿ ಸಾವು

Belthangady: 14 ವರ್ಷ ಜೀವನ್ಮರಣ ಸ್ಥಿತಿಯಲ್ಲಿದ್ದ ಶಿಕ್ಷಕಿ ಸಾವು

1-dhyan

Meditation; ಮಾನಸಿಕ ಆರೋಗ್ಯಕ್ಕೆ ದಿವ್ಯೌಷಧ: ಡಿ.21ರಂದೇ ಏಕೆ ಧ್ಯಾನ ದಿನ?

CT Ravi ಜಾಮೀನು ಅರ್ಜಿ ವಿಚಾರಣೆ ಇಂದು ಬೆಳಗಾವಿ ಕೋರ್ಟ್‌ನಿಂದ ಬೆಂಗಳೂರಿಗೆ ವರ್ಗ

CT Ravi ಜಾಮೀನು ಅರ್ಜಿ ವಿಚಾರಣೆ ಇಂದು ಬೆಳಗಾವಿ ಕೋರ್ಟ್‌ನಿಂದ ಬೆಂಗಳೂರಿಗೆ ವರ್ಗ

1-s-v

ಜನಪ್ರತಿನಿಧಿಗಳು ಆತ್ಮವಿಮರ್ಶೆ ಮಾಡಿಕೊಳ್ಳಲು ಇದು ಸಕಾಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ಬಾಲಕಿ, ಮಹಿಳೆಯ ವೀಡಿಯೋ ಚಿತ್ರೀಕರಣ: ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆ

Mangaluru: ಬಾಲಕಿ, ಮಹಿಳೆಯ ವೀಡಿಯೋ ಚಿತ್ರೀಕರಣ: ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆ

Tulu Cinema: ತುಳುನಾಡಿನ ಗ್ರಾಮೀಣ ಕಥಾನಕ ತೆರೆದಿಟ್ಟ “ದಸ್ಕತ್‌’

Tulu Cinema: ತುಳುನಾಡಿನ ಗ್ರಾಮೀಣ ಕಥಾನಕ ತೆರೆದಿಟ್ಟ “ದಸ್ಕತ್‌’

Congress ಸರಕಾರದಿಂದ ಗೂಂಡಾಗಳಿಗೆ ಮಣೆ: ನಳಿನ್‌ ಟೀಕೆ

Congress ಸರಕಾರದಿಂದ ಗೂಂಡಾಗಳಿಗೆ ಮಣೆ: ನಳಿನ್‌ ಟೀಕೆ

Mangaluru: ಮಾದಕ ವಸ್ತು ಸೇವನೆ ಆರೋಪ; 5 ಮಂದಿ ಸೆರೆ

Mangaluru: ಮಾದಕ ವಸ್ತು ಸೇವನೆ ಆರೋಪ; 5 ಮಂದಿ ಸೆರೆ

Surathkal: ನೇಣು ಬಿಗಿದು ಯುವಕ ಆತ್ಮಹ*ತ್ಯೆ

Surathkal: ನೇಣು ಬಿಗಿದು ಯುವಕ ಆತ್ಮಹ*ತ್ಯೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Mangaluru: ಬಾಲಕಿ, ಮಹಿಳೆಯ ವೀಡಿಯೋ ಚಿತ್ರೀಕರಣ: ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆ

Mangaluru: ಬಾಲಕಿ, ಮಹಿಳೆಯ ವೀಡಿಯೋ ಚಿತ್ರೀಕರಣ: ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆ

ravishankar-guruji

World Meditation Day; ಶರೀರಕ್ಕೆ ಊಟ, ಆತ್ಮಕ್ಕೆ ಧ್ಯಾನ

AICC ಅಧಿವೇಶನ: ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿಂದು ಮಹತ್ವದ ಸಭೆ

AICC ಅಧಿವೇಶನ: ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿಂದು ಮಹತ್ವದ ಸಭೆ

Belthangady: ಅಪಘಾತದಲ್ಲಿ ಗಾಯಗೊಂಡು 14 ವರ್ಷ ಜೀವನ್ಮರಣ ಹೋರಾಟ ಮಾಡಿದ್ದ ಶಿಕ್ಷಕಿ ಸಾವು

Belthangady: 14 ವರ್ಷ ಜೀವನ್ಮರಣ ಸ್ಥಿತಿಯಲ್ಲಿದ್ದ ಶಿಕ್ಷಕಿ ಸಾವು

1-dhyan

Meditation; ಮಾನಸಿಕ ಆರೋಗ್ಯಕ್ಕೆ ದಿವ್ಯೌಷಧ: ಡಿ.21ರಂದೇ ಏಕೆ ಧ್ಯಾನ ದಿನ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.