ಅನುದಾನಿತ ಶಾಲೆಗಳ ನಿರ್ವಹಣ ವೆಚ್ಚಕ್ಕೆ ಸರಕಾರ ಬ್ರೇಕ್‌!

ಶಿಕ್ಷಕರಿಗೆ ಸ್ವಂತ ದುಡ್ಡಿನಿಂದ ಖರ್ಚು ನಿಭಾಯಿಸುವ ಪಾಡು

Team Udayavani, Dec 30, 2019, 6:21 AM IST

bg-53

ಮಹಾನಗರ: ಅನುದಾನಿತ ಶಾಲೆಗಳಿಗೆ ಸರಕಾರದಿಂದ ನೀಡಲಾಗುತ್ತಿದ್ದ ನಿರ್ವಹಣ ವೆಚ್ಚಕ್ಕೆ ಮೂರು ವರ್ಷ ಗಳಿಂದ ಬ್ರೇಕ್‌ ಹಾಕಲಾಗಿದೆ. ಇದರಿಂದ ಶಾಲೆಗಳ ನಿರ್ವಹಣೆಗೆ ಶಿಕ್ಷಕರೇ ಹಣ ತೆರಬೇಕಾಗಿ ಬಂದಿದೆ.

ರಾಜ್ಯದಲ್ಲಿ ಒಟ್ಟು 2,326 ಅನುದಾನಿತ ಪ್ರಾಥಮಿಕ ಶಾಲೆಗಳಿವೆ. ಈ ಶಾಲೆಗಳಿಗೆ ಅನುದಾನಕ್ಕೊಳಪಟ್ಟಂದಿನಿಂದ ಹಿರಿಯ ಪ್ರಾಥಮಿಕ ಶಾಲೆಗಳಿಗೆ 12 ಸಾವಿರ ರೂ. ಮತ್ತು ಕಿರಿಯ ಪ್ರಾಥಮಿಕ ಶಾಲೆಗಳಿಗೆ 5 ಸಾವಿರ ರೂ. ನಿರ್ವಹಣ ವೆಚ್ಚವನ್ನು ಸರಕಾರ ನೀಡುತ್ತಿತ್ತು. ಆದರೆ, ಮೂರು ವರ್ಷಗಳಿಂದ ಈ ನಿರ್ವಹಣ ವೆಚ್ಚ ನೀಡುವುದನ್ನು ನಿಲ್ಲಿಸಲಾಗಿದೆ. ಅಲ್ಲದೆ, ಆಡಳಿತ ಮಂಡಳಿಗೆ ನೀಡುತ್ತಿದ್ದ ಒಟ್ಟು ಸಿಬಂದಿ ಒಟ್ಟು ವೇತನದ ಶೇ. 5ರಷ್ಟು ಹಣವನ್ನು ಕೂಡ ಎಂಟು ವರ್ಷಗಳಿಂದ ನಿಲ್ಲಿಸಲಾಗಿದೆ.

ನಿರ್ವಹಣ ಕೆಲಸಗಳೇನು?
ಶಾಲೆಯ ಪೀಠೊಪಕರಣಗಳ ದುರಸ್ತಿ, ಸುಣ್ಣ ಬಳಿಯುವುದು, ಪೈಂಟಿಂಗ್‌, ಬೆಂಚ್‌, ಡೆಸ್ಕ್, ತರಗತಿ ಅಗತ್ಯಗಳಿಗೆ ಬೇಕಾದ ಇತರ ವಸ್ತುಗಳ ಖರೀದಿ ಸಹಿತ ಶಾಲೆಯ ಸಣ್ಣಪುಟ್ಟ ಆವಶ್ಯಕತೆಗಳನ್ನು ಪೂರೈಸಲು ಈ ನಿರ್ವಹಣ ವೆಚ್ಚವನ್ನು ಅನುದಾನಿತ ಶಾಲೆಗಳಿಗೆ ನೀಡಲಾಗುತ್ತಿತ್ತು. ಆದರೆ ಇದೀಗ ಸರಕಾರ ಅನುದಾನಿತ ಶಾಲೆಗಳಿಗೆ ನಿರ್ವಹಣ ವೆಚ್ಚವನ್ನು ನೀಡದೇ ಇರುವುದರಿಂದ ಬಹುತೇಕ ಶಾಲೆಗಳಲ್ಲಿ ಶಿಕ್ಷಕರೇ ತಮ್ಮ ಕೈಯಿಂದ ಹಣವನ್ನು ಭರಿಸಿ ಶಾಲೆಗೆ ಬೇಕಾದ ಅವಶ್ಯ ವಸ್ತುಗಳನ್ನು ಖರೀದಿಸುತ್ತಿದ್ದಾರೆ. ಕೆಲವು ಶಾಲೆಗಳಲ್ಲಿ ಆಡಳಿತ ಮಂಡಳಿ ಅಥವಾ ಸ್ಥಳೀಯ ದಾನಿಗಳು ಭರಸುತ್ತಿದ್ದಾರೆ.

ಸಮವಸ್ತ್ರ, ಶೂ ಇಲ್ಲ
ಸರಕಾರಿ ಶಾಲೆಗಳ ನಿಯಮಗಳೇ ಅನುದಾನಿತ ಶಾಲೆಗಳಿಗೂ ಅನ್ವಯ ವಾಗುತ್ತದೆ. ಆದರೆ ಸರಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಇರುವ ಸಮವಸ್ತ್ರ, ಶೂ ಭಾಗ್ಯ, ಕರ್ನಾಟಕ ದರ್ಶನ ಪ್ರವಾಸ ಸೌಲಭ್ಯ ಅನುದಾನಿತ ಶಾಲೆಗಳ ಮಕ್ಕಳಿಗಿಲ್ಲ. ಸರಕಾರದ ಮೇಲೆ ಸತತ ಒತ್ತಡ ಹೇರಿದ ಪರಿಣಾಮ ಮಧ್ಯಾಹ್ನದ ಬಿಸಿಯೂಟ ಮತ್ತು ಉಚಿತ ಪುಸ್ತಕ ಅನುದಾನಿತ ಶಾಲಾ ವಿದ್ಯಾರ್ಥಿಗಳಿಗೆ ಸಿಗುತ್ತಿದೆ ಎನ್ನುತ್ತಾರೆ ಅನುದಾನಿತ ಶಾಲಾ ಶಿಕ್ಷಕರ ಸಂಘದ ಉಡುಪಿ ಜಿಲ್ಲಾಧ್ಯಕ್ಷ ಅರುಣ್‌ಕುಮಾರ್‌ ಶೆಟ್ಟಿ ಮತ್ತು ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಕೆ.ಎಂ.ಕೆ. ಮಂಜನಾಡಿ.

ಅನುದಾನ ಗೊಂದಲ
ಅನುದಾನಿತ ಶಾಲೆಗಳಿಗೆ ಸರಕಾರದಿಂದ ಮೂರುವರ್ಷಗಳ ಹಿಂದಿನವರೆಗೂ ನಿರ್ವಹಣ ವೆಚ್ಚ ನೀಡಲಾಗುತ್ತಿತ್ತು ಎಂದು ಶಿಕ್ಷಕರ ಸಂಘದ ಪದಾಧಿಕಾರಿಗಳು ಹೇಳಿದರೆ, ಇತ್ತ ಇಲ್ಲ ಎನ್ನುತ್ತಾರೆ ಅಧಿಕಾರಿಗಳು. ಸರಕಾರಿ ಶಾಲೆಗಳಿಗೆ ಮಾತ್ರ ಅಂತಹ ಅನುದಾನ ನೀಡಲಾಗುತ್ತದೆ. ಅನುದಾನಿತ ಶಾಲಾ ಶಿಕ್ಷಕರಿಗೆ ಸರಕಾರವೇ ಸಂಬಳ ನೀಡುವುದರಿಂದ ಪ್ರತ್ಯೇಕ ನಿರ್ವಹಣ ವೆಚ್ಚವನ್ನು ಈ ಹಿಂದಿನಿಂದಲೇ ನೀಡುತ್ತಿಲ್ಲ ಎಂಬುದು ಅಧಿಕಾರಿಗಳ ಮಾತು. ಆದರೆ, ಸಾಕಷ್ಟು ಬಾರಿ ಶಿಕ್ಷಣ ಸಚಿವರನ್ನು ಭೇಟಿಯಾಗಿ ಅನುದಾನಿತ ಶಾಲೆಗಳಿಗೆ ಈ ಹಿಂದೆ ಬರುತ್ತಿದ್ದ ನಿರ್ವಹಣ ವೆಚ್ಚವನ್ನು ಮತ್ತೆ ನೀಡಬೇಕು ಎಂಬುದಾಗಿ ಅನುದಾನಿತ ಶಾಲಾ ಶಿಕ್ಷಕರ ಸಂಘದ ಪ್ರಮುಖರು ಮನವಿ ಮಾಡಿದ್ದಾರೆ.

ಸರಕಾರಿ ಶಾಲೆಗೆ ಮಾತ್ರ
ಅನುದಾನಿತ ಶಾಲೆಗಳಿಗೆ ಸರಕಾರದಿಂದ ನೇಮಕವಾದ ಶಿಕ್ಷಕರಿಗೆ ಸರಕಾರ ಸಂಬಳ ನೀಡುತ್ತದೆ. ಅಂತಹ ಶಾಲೆಗಳಿಗೆ ನಿರ್ವಹಣ ವೆಚ್ಚ ನೀಡುವುದಿಲ್ಲ. ಸರಕಾರಿ ಶಾಲೆಗಳಿಗೆ ಮಾತ್ರ ನೀಡುತ್ತದೆ.
 - ಪುರುಷೋತ್ತಮ, ಕಾರ್ಯಕ್ರಮಾಧಿಕಾರಿ, ಸರ್ವ ಶಿಕ್ಷಾ ಅಭಿಯಾನ, ಬೆಂಗಳೂರು

ರಾಜ್ಯ ಸರಕಾರದಿಂದ ಬಿಡುಗಡೆಯಾಗಿಲ್ಲ
ಅತಿಥಿ ಶಿಕ್ಷಕರಿಗೆ ವೇತನ ರಾಜ್ಯ ಸರಕಾರದಿಂದ ಇನ್ನೂ ಬಿಡುಗಡೆಯಾಗಿಲ್ಲ. ಬಿಡುಗಡೆಯಾದ ಕೂಡಲೇ ಅತಿಥಿ ಶಿಕ್ಷಕರ ಖಾತೆಗೆ ಜಮೆ ಮಾಡಲಾಗುವುದು.
– ವಾಲ್ಟರ್‌ ಡಿ’ಮೆಲ್ಲೊ, ಉಪನಿರ್ದೇಶಕರು, ಸಾರ್ವಜನಿಕ ಶಿಕ್ಷಣ ಇಲಾಖೆ ಮಂಗಳೂರು

- ಧನ್ಯಾ ಬಾಳೆಕಜೆ

ಟಾಪ್ ನ್ಯೂಸ್

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

1-ullala

Mangaluru; ನೇತ್ರಾವತಿ ಸೇತುವೆ ದುರಸ್ತಿ ಆರಂಭ: ಸಂಚಾರ ಸಲಹೆ ನೀಡಿದ ಪೊಲೀಸರು

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11

Surathkal: ಅಡುಗೆ ಅನಿಲ ಸೋರಿಕೆ ಪ್ರಕರಣ; ಸುಧಾರಿಸದ ಗಾಯಾಳುಗಳ ಆರೋಗ್ಯ

9-ullala

Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ

6

Mangaluru: ನಂತೂರು ವೃತ್ತ; ಸಂಚಾರ ಸ್ವಲ್ಪ ನಿರಾಳ

3

Belma: ಕುಸಿತ ಭೀತಿಯಲ್ಲಿರುವ ಮನೆ; ಕಾಂಕ್ರೀಟ್‌ ತಡೆಗೋಡೆಗೆ ಪಿಡಬ್ಲ್ಯುಡಿ ಪ್ರಸ್ತಾವ

7-lokayuktha

Surathkal: ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಮುಲ್ಕಿ ಕಂದಾಯ ನಿರೀಕ್ಷಕ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Brahmavar

Siddapura: ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ

death

Gangolli: ಲಾರಿ ಪ್ರಯಾಣದ ವೇಳೆ ಕ್ಲೀನರ್‌ ಸಾವು

accident2

Padubidri: ಅಪರಿಚಿತ ವಾಹನ ಢಿಕ್ಕಿ;‌ ಪಾದಚಾರಿಗೆ ತೀವ್ರ ಗಾಯ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

de

Padubidri: ಕೆಎಸ್‌ಆರ್‌ಟಿಸಿ ಬಸ್ಸು ಢಿಕ್ಕಿ; ಪಾದಚಾರಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.