ಸರ್ಕಾರಿ ಬಸ್ ಢಿಕ್ಕಿ: ಕಾರು ನಜ್ಜು ಗುಜ್ಜು; ನಾಲ್ವರು ಗಂಭೀರ
Team Udayavani, Jan 26, 2018, 11:36 AM IST
ಪುತ್ತೂರು:ಇಲ್ಲಿದ ಕಬಕ ಬಳಿಯ ಪೋಳ್ಯದಲ್ಲಿ ರಾಜಹಂಸ ಬಸ್ಸೊಂದು ಐ20 ಕಾರಿಗೆ ಢಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಪುತ್ತೂರು ಕಡೆಯಿಂದ ಬರುತ್ತಿದ್ದ ಬಸ್ ಮತ್ತು ಮಂಗಳೂರಿನಿಂದ ಬರುತ್ತಿದ್ದ ಕಾರು ಮುಖಾಮುಖೀ ಢಿಕ್ಕಿಯಾಗಿ ನಜ್ಜುಗುಜ್ಜಾಗಿದೆ. ಪರಿಣಾಮವಾಗಿ ಕಾರಿನಲ್ಲಿದ್ದ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಬಸ್ ಚಾಲಕನ ಅಜಾಗರುಕತೆಯೆ ಅಪಘಾತಕ್ಕೆ ಕಾರಣ ಎಂದು ಪ್ರತ್ಯಕ್ಷದರ್ಶಿಗಳು ಆರೋಪಿಸಿದ್ದಾರೆ. ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಗಾಯಾಳುಗಳನ್ನು ಹೊರತೆಗೆಯಲು ಗಂಟೆಗಳ ಕಾಲ ಹರಸಾಹಸ ಪಡಬೇಕಾಯಿತು. ಅಫಘಾತ ಸ್ಥಳದಲ್ಲಿ ಯಾರೂ ಇಲ್ಲದ ವೇಳೆಯಲ್ಲಿ ನೆರವಿಗೆ ಬಂದ ಕಬಕದ ಹರ್ಷದ್ ಕೆ.ಎಸ್ ಸ್ಥಳಕ್ಕೆ ಇತರರ ಸಹಾಯ ಪಡೆದು ರಕ್ಷಣೆ ನಡೆಸಿದರು.
ಕಾರಿನಲ್ಲಿದ್ದವರು ಗೋವಾ ಮೂಲದವರೆಂದು ತಿಳಿದು ಬಂದಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಹೆಚ್ಚಿನ ವಿವರ ನಿರೀಕ್ಷಿಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಕದ್ರಿ ಪೊಲೀಸ್ ಠಾಣೆ ಬಳಿ ಇದ್ದಕ್ಕಿದ್ದಂತೆ ಹೊತ್ತಿ ಉರಿದ ಕಾರು
Subramanya: ಗುಂಡ್ಯದಲ್ಲಿ ಮಂಗಳೂರು- ಬೆಂಗಳೂರು ಹೆದ್ದಾರಿ ತಡೆ ನಡೆಸಿದ ಪ್ರತಿಭಟನಾಕಾರರು
Bantwala: ಶಾಲಾ ವಾಹನ ಡಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ಸ್ಕೂಟರ್ ಸವಾರ ಮೃತ್ಯು
Hampanakatte: ಗುಟ್ಕಾ ಉಗುಳುವವರು, ಧೂಮಪಾನಿಗಳ ಹಾವಳಿ
Mangaluru: ತೆರೆದ ತೋಡಿನಲ್ಲಿ ಕೊಳಚೆ ನೀರು ಹರಿಯುವುದು ನಿಂತಿಲ್ಲ
MUST WATCH
ಹೊಸ ಸೇರ್ಪಡೆ
BJP;’ಬಟೆಂಗೆ ತೊ ಕಟೆಂಗೆ’ ಹೇಳಿಕೆಗೆ ಬೆಂಬಲವಿಲ್ಲ ಎಂದ ಅಜಿತ್ ಪವಾರ್
Catacombs: ಇದು ಎಲುಬುಗಳೇ ತುಂಬಿಕೊಂಡ ಸುರಂಗ; ಸುಂದರ ದೇಶದ ಕರಾಳ ಇತಿಹಾಸ
Mangaluru: ಕದ್ರಿ ಪೊಲೀಸ್ ಠಾಣೆ ಬಳಿ ಇದ್ದಕ್ಕಿದ್ದಂತೆ ಹೊತ್ತಿ ಉರಿದ ಕಾರು
J-K: ಭೀಕರ ಅಪಘಾ*ತದಲ್ಲಿ SUV ಚಲಾಯಿಸುತ್ತಿದ್ದ 17 ರ ಹುಡುಗರಿಬ್ಬರು ಮೃ*ತ್ಯು
Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.