ಶತಮಾನ ಹೊಸ್ತಿಲು ದಾಟಿದ ಗುರುವಾಯನಕೆರೆ ಹಿ.ಪ್ರಾ. ಶಾಲೆ

ಜೋಪಡಿಯಲ್ಲಿ ಅರಳಿದ ವಿದ್ಯಾದೇಗುಲ

Team Udayavani, Nov 11, 2019, 5:12 AM IST

0611CH10

19ನೆಯ ಶತಮಾನದ ಉತ್ತರಾರ್ಧದಲ್ಲಿ ಬ್ರಿಟಿಷ್‌ ಆಡಳಿತದಡಿ, ಊರ ಹಿರಿಯರ ಮುತುವರ್ಜಿಯಲ್ಲಿ ಸ್ಥಾಪನೆಗೊಂಡು ಈಗಲೂ ವಿದ್ಯೆಯ ಬೆಳಕನ್ನು ಪಸರಿಸುತ್ತಿರುವ ಹಲವು ಸರಕಾರಿ ಶಾಲೆಗಳು ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿವೆ. ಈಗಿನ ಆಂಗ್ಲ ಮಾಧ್ಯಮ ಶಿಕ್ಷಣದ ಆಕರ್ಷಣೆಯ ನಡುವೆ ಈ ಶಾಲೆಗಳು ಸುತ್ತಮುತ್ತಲಿನ ಊರುಗಳಿಗೆ ಅಕ್ಷರಶಃ ಜ್ಞಾನ ದೇಗುಲಗಳೇ ಆಗಿವೆ. ಇಂತಹ ಶತಮಾನದ ಹಿರಿಮೆಯ ಕನ್ನಡ ಮಾಧ್ಯಮ ಸರಕಾರಿ ಶಾಲೆಗಳನ್ನು ಗುರುತಿಸಿ ಪರಿಚಯಿಸುವ ಪ್ರಯತ್ನ ನಮ್ಮದು.

ಬೆಳ್ತಂಗಡಿ : ಇಲ್ಲಿನ ಹಿರಿಯ ಶಿಕ್ಷಣ ಪ್ರೇಮಿಗಳು ಬಡ ಮಕ್ಕಳ ಜ್ಞಾನ ದಾಹ ತಣಿಸಲು 1905ರಲ್ಲಿ ಗುರುವಾಯನಕೆರೆ ಸಮೀಪ ಕೋಂಟುಪಲ್ಕೆಯಲ್ಲಿ ಮುಳಿ ಹುಲ್ಲಿನ ಛಾವಣಿಯಲ್ಲಿ ಆರಂಭಿಸಿದ ಗುರುವಾಯನಕೆರೆ ದ.ಕ. ಜಿ.ಪಂ. ಹಿ.ಪ್ರಾ. ಶಾಲೆಗೆ ಇದೀಗ 114 ವರ್ಷ. 1927ರಲ್ಲಿ ಹಂಚಿನ ಕಟ್ಟಡಕ್ಕೆ ಸ್ಥಳಾಂತರಗೊಂಡ ಶಾಲೆ 1969ರಿಂದ 90ರ ವರೆಗೆ ಬೋರ್ಡ್‌ ಶಾಲೆಯಾಗಿ ಪರಿಗಣಿಸಲ್ಪಟ್ಟು, ಅನಂತರ ಸರಕಾರಿ ಶಾಲೆಯಾಗಿ ಪರಿವರ್ತನೆಗೊಂಡಿತ್ತು.

1968 69ರಲ್ಲಿ ಹಿ.ಪ್ರಾ. ಶಾಲೆಯಾಗಿ ಮೇಲ್ದರ್ಜೆಗೇರಿಸಲಾಯಿತು. ಅಂದು 5 ಶಿಕ್ಷಕರು ಕಾರ್ಯ ನಿರ್ವಹಿಸುತ್ತಿದ್ದರು. 1994ರಲ್ಲಿ 10 ಶಿಕ್ಷಕರಿದ್ದು, 1996 97ರಲ್ಲಿ 14 ಮಂದಿ ಶಿಕ್ಷಕರು ಕಾರ್ಯ ನಿರ್ವಹಿಸುತ್ತಿದ್ದರು.

ಬೆಳ್ಳಿಹಬ್ಬ ಆಚರಣೆ
2006ರಲ್ಲಿ ಶಾಲೆ ಬೆಳ್ಳಿಹಬ್ಬ ಆಚರಿಸಿತು. ಪ್ರಸಕ್ತ 1ರಿಂದ 7ರ ವರೆಗೆ 127 ಮಕ್ಕಳಿದ್ದು, 4 ಶಿಕ್ಷಕರು, 1 ಅತಿಥಿ ಶಿಕ್ಷಕರನ್ನು ಹೊಂದಿದೆ. 1905 1934ರ ಅವಧಿಯಲ್ಲಿ ಅನೇಕ ಶಿಕ್ಷಕರು ಸೇವೆ ಸಲ್ಲಿಸಿದ್ದು, ಬಳಿಕ ಮುಖ್ಯೋಪಾಧ್ಯಾಯರಾಗಿ ವೇಣುಗೋಪಾಲ್‌ ರಾವ್‌ 30 ವರ್ಷ ಸೇವೆ ಸಲ್ಲಿಸಿದ್ದರು. ಸಿಸಿಲಿಯಾ ಡಿ’ಸೋಜಾ, 1969ರಲ್ಲಿ ನಮಿರಾಜ ಹೆಗ್ಡೆ ಮಲ್ಲಿಪಾಡಿ ಮುಖ್ಯೋಪಾಧ್ಯಾಯರಾಗಿ ಸತತ 25 ವರ್ಷ ಸೇವೆ ಸಲ್ಲಿಸಿದ್ದಾರೆ. 1994ರಿಂದ ಎಂ.ಜಿ. ಶ್ರೀಧರ ರಾವ್‌, ಬಿ. ಕಮಲಾಕ್ಷ ಆಚಾರ್‌, ಬ್ರಿಜಿತ್‌ ಫೆರ್ನಾಂಡಿಸ್‌, ಕಸ್ತೂರಿ ಬಾಯಿ ಸಹಿತ ಅನೇಕರು ಸೇವೆ ಸಲ್ಲಿಸಿದ್ದು, ಪ್ರಸಕ್ತ 2013ರಿಂದ ಪ್ರಭಾರ ಮುಖ್ಯ ಶಿಕ್ಷಕಿಯಾಗಿ ಸಿಸಿಲಿಯಾ ಪಾçಸ್‌ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

ಮೂಲ ಸೌಕರ್ಯ ಅಭಿವೃದ್ಧಿ
1 ಎಕ್ರೆ 11 ಸೆಂಟ್ಸ್‌ ಸ್ಥಳದಲ್ಲಿ ಶಾಲಾ ಕಟ್ಟಡ ಹಾಗೂ ಆಟದ ಮೈದಾನ ಹೊಂದಿದ್ದು, ಶಾಸಕರ ಮುತುವರ್ಜಿಯಿಂದ ಎಂ.ಆರ್‌.ಪಿ.ಎಲ್‌., ಸಿ.ಎಸ್‌.ಆರ್‌. ಫಂಡ್‌ನಿಂದ ಶೌಚಾಲಯ ನಿರ್ಮಾಣಗೊಳ್ಳುತ್ತಿದೆ. 1,400 ಪುಸ್ತಕ ಹೊಂದಿರುವ ಗ್ರಂಥಾಲಯ, ವಿಶಾಲ ರಂಗಮಂದಿರ ಹೊಂದಿದೆ. ಸುತ್ತಮುತ್ತ ಈ ಪರಿಸರದಲ್ಲಿ ಪಿಲಿಚಾಮುಂಡಿಕಲ್ಲು ಸ.ಹಿ.ಪ್ರಾ. ಶಾಲೆ, ಕುವೆಟ್ಟು ಉ.ಹಿ.ಪ್ರಾ. ಶಾಲೆ, ಗುರುವಾಯನಕೆರೆ ಪ್ರೌಢಶಾಲೆ, ಓಡಿಲಾ°ಳ ಹಿ.ಪ್ರಾ. ಶಾಲೆ, ಕಟ್ಟದಬೈಲು ಸ.ಹಿ.ಪ್ರಾ. ಶಾಲೆಗಳಿವೆ. 5 ಕಂಪ್ಯೂಟರ್‌ ಇದ್ದರೂ ಮಕ್ಕಳು ಕಂಪ್ಯೂಟರ್‌ ಶಿಕ್ಷಣದಿಂದ ವಂಚಿತರಾಗಿದ್ದಾರೆ. ಸುಸಜ್ಜಿತ ಕೊಠಡಿ, ಆವರಣ ಗೋಡೆ ಶಾಲೆಗೆ ಅವಶ್ಯವಿದೆ. 1975, 1978, 1979, 1998 ಮತ್ತು 2002ರಲ್ಲಿ 7ನೇ ತರಗತಿಯಲ್ಲಿ 5 ಬಾರಿ ಶೇ. 100 ಫಲಿತಾಂಶ ದಾಖಲಿಸಿದೆ. 2012 13ರಲ್ಲಿ ಲಕ್ಷ್ಮೀ ಹಾಗೂ 2014 15ರಲ್ಲಿ ಹರ್ಷಿತಾ (ಮಳೆಕೊಯ್ಲು ವಿಜ್ಞಾನ ಮಾದರಿ ವಸ್ತುಪ್ರದರ್ಶನ) ರಾಜ್ಯಮಟ್ಟದಲ್ಲಿ ಇನ್‌ಸ್ಪೈರ್‌ ಅವಾರ್ಡ್‌ ಪಡೆದಿದ್ದಾರೆ.

ಹಳೆ ವಿದ್ಯಾರ್ಥಿಗಳು
ದಿಣ ಅಜ್ಜಿಪುಳ್ಳಿ ಬಾಬು ಶೆಟ್ಟಿ, ಉದ್ಯಮಿಗಳಾದ ಶಶಿಧರ್‌ ಶೆಟ್ಟಿ, ರಾಜೇಶ್‌ ಶೆಟ್ಟಿ, ನಾಗರಿಕ ಸೇವಾ ಟ್ರಸ್ಟ್‌ ಅಧ್ಯಕ್ಷ ಸೋಮನಾಥ್‌ ನಾಯಕ್‌, ತಾ.ಪಂ. ಸದಸ್ಯ ಗೋಪಿನಾಥ್‌ ನಾಯಕ್‌, ಜಿ.ಪಂ. ಸದಸ್ಯೆ ಮಮತಾ ಎಂ. ಶೆಟ್ಟಿ, ಗ್ರಾ.ಪಂ. ಅಧ್ಯಕ್ಷ ಅಶೋಕ್‌ ಕೋಟ್ಯಾನ್‌ ಸಹಿತ ಇಲ್ಲಿನ ಅನೇಕ ಹಳೆ ವಿದ್ಯಾರ್ಥಿಗಳು ಸಾಧನೆ ಮಾಡಿದ್ದಾರೆ.

ನಾನು 8 ವರ್ಷಗಳಿಂದ ಪ್ರಭಾರ ಮುಖ್ಯ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರತಿವರ್ಷ ವಿದ್ಯಾರ್ಥಿಗಳು ಉತ್ತಮ ಫಲಿತಾಂಶ ತಂದುಕೊಡುತ್ತಿದ್ದಾರೆ. ಸರಕಾರಿ ಶಾಲೆಗೆ ಸೂಕ್ತ ಸೌಲಭ್ಯ ಒದಗಿಸಿದರೆ ಊರಿಗೆ ಮಾದರಿ ಶಾಲೆಯಾಗಬಲ್ಲದು.
- ಸಿಸಿಲಿಯಾ ಪಾçಸ್‌, ಪ್ರಭಾರ ಮುಖ್ಯ ಶಿಕ್ಷಕಿ.

ಜೋಪಡಿಯಿಂದ 2 ಕೊಠಡಿಗಳಲ್ಲಿ ಆರಂಭವಾದ ಶಾಲೆಯಲ್ಲಿ ಸಾವಿರಾರು ವಿದ್ಯಾರ್ಥಿ ಗಳು ವಿದ್ಯಾರ್ಜನೆ ಮಾಡಿದ್ದಾರೆ. 1952ರಲ್ಲಿ ನಾನು ಶಾಲೆಗೆ ಸೇರಿದ್ದೆ. ಈಗಲೂ ಶಾಲೆಯ ಕಾರ್ಯಕ್ರಮಗಳಲ್ಲಿ ಸಕ್ರಿಯನಾಗಿ ಭಾಗಿಯಾಗುತ್ತಿದ್ದೇನೆ. ಸರಕಾರಿ ಶಾಲೆಗಳ ಅಭಿವೃದ್ಧಿಗೆ ಸರಕಾರ ಉತ್ತೇಜನ ನೀಡಬೇಕು.
- ಪೂವಪ್ಪ ಭಂಡಾರಿ,
ಹಳೆ ವಿದ್ಯಾರ್ಥಿ

 -ಚೈತ್ರೇಶ್‌ ಇಳಂತಿಲ

ಟಾಪ್ ನ್ಯೂಸ್

am

Recipe: ಆರೋಗ್ಯಕ್ಕೆ ಅಮೃತ, ರುಚಿಗೆ ಅದ್ಭುತ ಈ ಚಟ್ನಿ!ಒಂದ್ಸಲ ಈ ವಿಧಾನದಲ್ಲಿ ಟ್ರೈ ಮಾಡಿ…

1-maha-kumbha

Mahakumbh 2025: 45 ಕೋಟಿ ಯಾತ್ರಾರ್ಥಿಗಳ ನಿರೀಕ್ಷೆ

Travis Head made a controversial statement about BCCI

INDvAUS: ಬಿಸಿಸಿಐ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ರಾ ಟ್ರಾವಿಸ್‌ ಹೆಡ್? Video

Sheikh ಹಸೀನಾರನ್ನು‌ ಬಾಂಗ್ಲಾದೇಶಕ್ಕೆ ವಾಪಸ್‌ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ

Sheikh ಹಸೀನಾರನ್ನು‌ ಬಾಂಗ್ಲಾದೇಶಕ್ಕೆ ವಾಪಸ್‌ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ

1-qwqwewq

Seema Haider; 4 ಮಕ್ಕಳೊಂದಿಗೆ ಭಾರತಕ್ಕೆ ಬಂದಿದ್ದ ಸೀಮಾ ಈಗ ಗರ್ಭಿಣಿ!!

ಆಯನೂರು ಮಂಜುನಾಥ್

Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

NEW-SCHOOL

ಗುಣಮಟ್ಟದ ಶಿಕ್ಷಣಕ್ಕೆ ಹೆಸರಾದ ಜಿಲ್ಲೆಯ ಮೊದಲ ಕ್ರಿಶ್ಚಿಯನ್‌ ಪ್ರೌಢಶಾಲೆಗೆ 121ರ ಸಂಭ್ರಮ

430514561342IMG-20191203-WA0023

ಅನಂತೇಶ್ವರ ದೇಗುಲದ ಪೌಳಿಯಲ್ಲಿ ಪ್ರಾರಂಭವಾದ ಶಾಲೆಗೆ 128ರ ಸಂಭ್ರಮ

sx-22

ಸ್ವಾತಂತ್ರ್ಯಹೋರಾಟಗಾರರನ್ನು ನೀಡಿದ ಶಾಲೆಗೆ 111 ವರ್ಷಗಳ ಸಂಭ್ರಮ

ds-24

112 ವರ್ಷ ಕಂಡಿರುವ ಮೂಡುಬಿದಿರೆಯ ಡಿ.ಜೆ. ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ

ds-35

ಮನೆಯ ಚಾವಡಿಯಲ್ಲಿ ಪ್ರಾರಂಭಗೊಂಡಿದ್ದ ಶಾಲೆಗೆ 105ರ ಸಂಭ್ರಮ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

am

Recipe: ಆರೋಗ್ಯಕ್ಕೆ ಅಮೃತ, ರುಚಿಗೆ ಅದ್ಭುತ ಈ ಚಟ್ನಿ!ಒಂದ್ಸಲ ಈ ವಿಧಾನದಲ್ಲಿ ಟ್ರೈ ಮಾಡಿ…

ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸರಣ ಘಟಕಕ್ಕೆ ಗ್ರಹಣ!

ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸ್ಕರಣ ಘಟಕಕ್ಕೆ ಗ್ರಹಣ!

1-maha-kumbha

Mahakumbh 2025: 45 ಕೋಟಿ ಯಾತ್ರಾರ್ಥಿಗಳ ನಿರೀಕ್ಷೆ

Travis Head made a controversial statement about BCCI

INDvAUS: ಬಿಸಿಸಿಐ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ರಾ ಟ್ರಾವಿಸ್‌ ಹೆಡ್? Video

Sheikh ಹಸೀನಾರನ್ನು‌ ಬಾಂಗ್ಲಾದೇಶಕ್ಕೆ ವಾಪಸ್‌ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ

Sheikh ಹಸೀನಾರನ್ನು‌ ಬಾಂಗ್ಲಾದೇಶಕ್ಕೆ ವಾಪಸ್‌ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.