ಸರಕಾರದ ನಿರ್ಲಕ್ಷ್ಯ, ಮೂಲೆ ಸೇರಿದ ಕಡತ

Team Udayavani, Mar 16, 2018, 9:59 AM IST

16-March-2.jpg

ಮಹಾನಗರ: ಮಂಗಳೂರು- ಕಾರವಾರ ಕಡಲ ತೀರದ ಮೀನುಗಾರಿಕಾ ರಸ್ತೆಯನ್ನು ದ್ವಿಪಥ ಕಾಂಕ್ರೀಟ್‌ ರಸ್ತೆಯನ್ನಾಗಿ ಪರಿವರ್ತಿಸುವ ಯೋಜನೆ ಸರಕಾರದ ಮೌನದಿಂದಾಗಿ ಕಡತದಲ್ಲಿಯೇ ಬಾಕಿಯಾಗಿದೆ. ರಾಷ್ಟ್ರೀಯ ಭದ್ರತೆ, ಮೀನುಗಾರಿಕೆ ಹಾಗೂ ಪ್ರವಾಸೋದ್ಯಮದ ದೃಷ್ಟಿಯಲ್ಲಿ ಮಹತ್ವದ ಯೋಜನೆ. ಮೂರು ಜಿಲ್ಲೆಗಳನ್ನು ಸಂಧಿಸುವ ಈ ಯೋಜನೆಗೆ ಸರಕಾರ ಮನಸ್ಸು ಮಾಡಿಲ್ಲ.

ತಲಪಾಡಿ ಗಡಿಯಿಂದ ಉತ್ತರ ಕನ್ನಡ ಜಿಲ್ಲೆಯ ಮಾಜಾಳಿವರೆಗೆ ಸುಮಾರು 387 ಕಿ.ಮೀ. ಉದ್ದದ ಮೀನುಗಾರಿಕಾ ರಸ್ತೆಯನ್ನು 780 ಕೋ.ರೂ. ವೆಚ್ಚದಲ್ಲಿ ಕಾಂಕ್ರೀಟ್‌ ರಸ್ತೆಯನ್ನಾಗಿ ಪರಿವರ್ತಿಸುವ ಸಾಧ್ಯತಾ ವರದಿಯನ್ನು ಕರಾವಳಿ ಅಭಿವೃದ್ಧಿ ಪ್ರಾಧಿಕಾರವು 2012ರಲ್ಲಿ ಸರಕಾರಕ್ಕೆ ಸಲ್ಲಿಸಿತ್ತು.

ಪ್ರಾಧಿಕಾರ ಆ ಬಳಿಕ ನೆನಪಿಸುವ ಕೆಲಸ ಮಾಡಿತ್ತಾದರೂ, ಬೆನ್ನು ಹಿಡಿಯುವ ಕೆಲಸ ನಡೆಸಲಿಲ್ಲ. ಹೀಗಾಗಿ 6 ವರ್ಷಗಳಿಂದ ಈ ಕಡತ ಬೆಂಗಳೂರಿನ ಆಡಳಿತ ಕಚೇರಿಯಲ್ಲಿಯೇ ಧೂಳು ಹಿಡಿದಿದೆ. ಮಂಗಳೂರು- ಉಡುಪಿ- ಕಾರವಾರ ಕಡಲ ಕಿನಾರೆಯ ಉದ್ದಕ್ಕೂ ಪ್ರಸ್ತುತ ಮೀನುಗಾರಿಕೆ ರಸ್ತೆ ಇದ್ದು ರಾಷ್ಟ್ರೀಯ ಹೆದ್ದಾರಿಗೆ ಸಮಾನಾಂತರವಾಗಿ ಹಾಗೂ ಕೆಲವು ಕಡೆ ಕೊಂಡಿ ರಸ್ತೆಯಾಗಿ ಕಾರ್ಯನಿರ್ವಹಿಸುತ್ತಿದೆ. ಆದರೆ ಇದು ಕಿರಿದಾಗಿದ್ದು, ಪ್ರತಿ ಮಳೆಗಾಲದಲ್ಲಿಯೂ ನೆರೆಹಾವಳಿಯಿಂದ ತೀವ್ರವಾಗಿ ಹದಗೆಡುವುದರಿಂದ ಅದನ್ನು ಉಪಯೋಗಿಸುತ್ತಿರುವ ಮೀನುಗಾರ ಕುಟುಂಬಗಳು, ಸ್ಥಳೀಯರು ಸಾಕಷ್ಟು ಸಂಕಟ ಅನುಭವಿಸಬೇಕಾಗುತ್ತದೆ. ಈ ಹಿನ್ನೆಲೆಯಲ್ಲಿ ಪ್ರಾಧಿಕಾರವು ಸಾಧ್ಯತಾ ವರದಿ ಸಿದ್ಧಪಡಿಸಿತ್ತು.

ದ.ಕ., ಉಡುಪಿಯ 259 ಕಿ.ಮೀ.
ದ. ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಒಟ್ಟು 259.96 ಕಿ.ಮೀ. ರಸ್ತೆಗೆ 610 ಕೋ. ರೂ. ಹಾಗೂ ಉತ್ತರ ಕನ್ನಡ ಜಿಲ್ಲೆಯಲ್ಲಿ 127 ಕಿ.ಮೀ. ರಸ್ತೆಗೆ 170 ಕೋ.ರೂ. ವೆಚ್ಚವಾಗಲಿದೆ ಎಂದು ಪ್ರಾಧಿಕಾರವು ಅಂದು ಅಂದಾಜಿಸಿ ಪ್ರಸ್ತಾವನೆ ಸಿದ್ಧಪಡಿಸಿ ಸರಕಾರಕ್ಕೆ ಕಳುಹಿಸಿತ್ತು. 

ವರದಿ ಸರಕಾರದ ಮಟ್ಟದಲ್ಲಿದೆ
ಕರಾವಳಿಯ ಕಡಲ ತೀರದಲ್ಲಿ ಕಾಂಕ್ರೀಟ್‌ ರಸ್ತೆ ನಿರ್ಮಿಸುವ ಕುರಿತ ಸಾಧ್ಯತಾ ವರದಿಯನ್ನು ಪ್ರಾಧಿಕಾರದ ವತಿಯಿಂದ ಕಳುಹಿಸಲಾಗಿದ್ದು, ಸರಕಾರದ ಪರಿಶೀಲನೆಯಲ್ಲಿದೆ.
– ಪ್ರದೀಪ್‌ ಡಿ’ಸೋಜಾ,
ಕಾರ್ಯದರ್ಶಿ, ಕರಾವಳಿ ಅಭಿವೃದ್ಧಿ
ಪ್ರಾಧಿಕಾರ

ದಿನೇಶ್‌ ಇರಾ

ಟಾಪ್ ನ್ಯೂಸ್

1-TTD

Tirupati; ಗಾಯಾಳುಗಳನ್ನು ಭೇಟಿಯಾದ ಸಿಎಂ ನಾಯ್ಡು: ಟಿಟಿಡಿ ಅಧಿಕಾರಿಗಳಿಗೆ ಛೀಮಾರಿ!

web

Winter Health Tips: ಚಳಿಗಾಲದಲ್ಲಿ ಆರೋಗ್ಯವಾಗಿರಲು 10 ಅತ್ಯುತ್ತಮ ಮಾರ್ಗಗಳು

Toxic Movie: ʼಟಾಕ್ಸಿಕ್‌ʼನಲ್ಲಿ ನಟಿಸಲು ಯಶ್‌ ಪಡೆದ ಸಂಭಾವನೆ ಎಷ್ಟು?

Toxic Movie: ʼಟಾಕ್ಸಿಕ್‌ʼನಲ್ಲಿ ನಟಿಸಲು ಯಶ್‌ ಪಡೆದ ಸಂಭಾವನೆ ಎಷ್ಟು?

tirupati

Tirupati;ದುರಂತಕ್ಕೆ ಸಿಎಂ ನಾಯ್ಡು,ಆಡಳಿತ ಮಂಡಳಿ,ಪೊಲೀಸರು ಕಾರಣ: ಮಾಜಿ ಟಿಟಿಡಿ ಮುಖ್ಯಸ್ಥರು

ಮೊಳಹಳ್ಳಿ ವ್ಯವಸಾಯ ಸೇವಾ ಸಹಕಾರಿ ಸಂಘ: ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

ಮೊಳಹಳ್ಳಿ ವ್ಯವಸಾಯ ಸೇವಾ ಸಹಕಾರಿ ಸಂಘ: ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್

Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್

ಏನು ಧೈರ್ಯ..! ರೈಲು ಹಳಿ ಮೇಲೆ ಬಂದ ಸಿಂಹವನ್ನು ಸಾಕು ಪ್ರಾಣಿಯಂತೆ ಓಡಿಸಿದ ಅರಣ್ಯ ಸಿಬ್ಬಂದಿ

ಏನು ಧೈರ್ಯ..! ರೈಲು ಹಳಿ ಮೇಲೆ ಬಂದ ಸಿಂಹವನ್ನು ಸಾಕು ಪ್ರಾಣಿಯಂತೆ ಓಡಿಸಿದ ಅರಣ್ಯ ಸಿಬ್ಬಂದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

1-TTD

Tirupati; ಗಾಯಾಳುಗಳನ್ನು ಭೇಟಿಯಾದ ಸಿಎಂ ನಾಯ್ಡು: ಟಿಟಿಡಿ ಅಧಿಕಾರಿಗಳಿಗೆ ಛೀಮಾರಿ!

web

Winter Health Tips: ಚಳಿಗಾಲದಲ್ಲಿ ಆರೋಗ್ಯವಾಗಿರಲು 10 ಅತ್ಯುತ್ತಮ ಮಾರ್ಗಗಳು

Toxic Movie: ʼಟಾಕ್ಸಿಕ್‌ʼನಲ್ಲಿ ನಟಿಸಲು ಯಶ್‌ ಪಡೆದ ಸಂಭಾವನೆ ಎಷ್ಟು?

Toxic Movie: ʼಟಾಕ್ಸಿಕ್‌ʼನಲ್ಲಿ ನಟಿಸಲು ಯಶ್‌ ಪಡೆದ ಸಂಭಾವನೆ ಎಷ್ಟು?

tirupati

Tirupati;ದುರಂತಕ್ಕೆ ಸಿಎಂ ನಾಯ್ಡು,ಆಡಳಿತ ಮಂಡಳಿ,ಪೊಲೀಸರು ಕಾರಣ: ಮಾಜಿ ಟಿಟಿಡಿ ಮುಖ್ಯಸ್ಥರು

ಮೊಳಹಳ್ಳಿ ವ್ಯವಸಾಯ ಸೇವಾ ಸಹಕಾರಿ ಸಂಘ: ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

ಮೊಳಹಳ್ಳಿ ವ್ಯವಸಾಯ ಸೇವಾ ಸಹಕಾರಿ ಸಂಘ: ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.