ಬರ ಪರಿಸ್ಥಿತಿ ನಿಭಾಯಿಸುವಲ್ಲಿ ಸರಕಾರ ಯಶಸ್ವಿ: ಯು.ಟಿ. ಖಾದರ್
Team Udayavani, May 1, 2017, 12:43 PM IST
ಮಂಗಳೂರು: ರಾಜ್ಯದಲ್ಲಿ ಪ್ರಸ್ತುತ ವರ್ಷ ಈ ಹಿಂದೆಂದೂ ಕಾಣದ ಬರ ಪರಿಸ್ಥಿತಿ ಇದ್ದರೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಂದಾಯ, ವಿದ್ಯುತ್, ಗ್ರಾಮೀಣ ಅಭಿವೃದ್ಧಿ ಮತ್ತು ಇತರ ಇಲಾಖೆಗಳ ಸಹಕಾರದಲ್ಲಿ ಉತ್ತಮ ರೀತಿಯಲ್ಲಿ ನಿಭಾಯಿಸುತ್ತಿದ್ದಾರೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ.
ನೀರಿನ ಸೌಲಭ್ಯಕ್ಕಾಗಿ ಕೊಳವೆ ಬಾವಿ ನಿರ್ಮಾಣ ಮತ್ತು ಟ್ಯಾಂಕರ್‌ಗಳಲ್ಲಿ ನೀರು ಪೂರೈಕೆಗೆ ಸಾಕಷ್ಟು ಅನುದಾನ ಒದಗಣೆ, ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಆಗದಂತೆ ಕ್ರಮ, ಗೋಶಾಲೆಗಳಿಗೆ ಮೇವು ಪೂರೈಕೆ ಇತ್ಯಾದಿ ಉಪಕ್ರಮಗಳನ್ನು ಅನುಸರಿಸುವ ಮೂಲಕ ಜನ ಸಾಮಾನ್ಯರಿಗೆ ಕಷ್ಟವಾಗದಂತೆ ನೋಡಿಕೊಳ್ಳಲಾಗಿದೆ ಎಂದವರು ರವಿವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ವಿದ್ಯುತ್ ಸಮಸ್ಯೆ ಆಗಿಲ್ಲ
ವಿದ್ಯುತ್ ಸಮಸ್ಯೆ ಇಲ್ಲದ ಕಾರಣ ಮಕ್ಕಳಿಗೆ ಪರೀಕ್ಷಾ ಸಿದ್ಧತೆ ಮಾಡಲು ಮತ್ತು ಬರೆಯಲು ಅನನುಕೂಲ ಉಂಟಾಗಿಲ್ಲ. ಉದ್ಯೋಗ ಖಾತರಿ ಯೋಜನೆಯಡಿ ಕೆಲಸದ ದಿನಗಳನ್ನು 100ರಿಂದ 150ಕ್ಕೇರಿಸಲಾಗಿದೆ. ವೇತನವನ್ನು ಹೆಚ್ಚಳ ಮಾಡಲಾಗಿದೆ ಹಾಗೂ ಕೆಲಸ ಮಾಡಿದವರಿಗೆ 15 ದಿನಗಳೊಳಗೆ ವೇತನ ಪಾವತಿಗೆ ಹಣ ಬಿಡುಗಡೆಯಾಗುವಂತೆ ನೋಡಿಕೊಳ್ಳಲಾಗಿದೆ ಎಂದು ವಿವರಿಸಿದರು.
ಮೇವಿನ ಕೊರತೆ ನೀಗಿಸಲು ಗೋಶಾಲೆಗಳನ್ನು ವ್ಯವಸ್ಥೆ ಮಾಡಲಾಗಿದೆ. ಮೇವು ಕೊರತೆ ಬಿದ್ದರೆ ಪಕ್ಕದ ಜಿಲ್ಲೆ ಅಥವಾ ಹೊರ ರಾಜ್ಯಗಳಿಂದ ತರಿಸಲು ಸೂಚಿಸಲಾಗಿದೆ. ಎನ್‌ಆರ್‌ಇಜಿಯಡಿ ಉದ್ಯೋಗಕ್ಕೆ ಹೋಗುವವರ ಮಕ್ಕಳ ಲಾಲನೆ ಮತ್ತು ಪಾಲನೆಗೆ ಹಾಗೂ ಮಧ್ಯಾಹ್ನದ ಬಿಸಿ ಊಟಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ. ಇದು ದೇಶದಲ್ಲಿಯೇ ಮಾದರಿ ಕಾರ್ಯಕ್ರಮ ಎಂದರು.
ದಕ್ಷಿಣ ಕನ್ನಡ ಜಿಲ್ಲೆಗೆ ಒದಗಿಸಿದ ಹಣ ವಿನಿಯೋಗ ವಾಗದ ಕುರಿತು ಮುಖ್ಯಮಂತ್ರಿ ಅಸಮಾಧಾನ ವ್ಯಕ್ತ ಪಡಿಸಿರುವ ಬಗ್ಗೆ ಪ್ರಸ್ತಾವಿಸಿದಾಗ, ಕೆಲವು ಮಂದಿ ಶಾಸಕರು ಕಾಮಗಾರಿಯ ಪಟ್ಟಿ ಕೊಡಲು ಬಾಕಿ ಇದೆ. ಅಲ್ಲದೆ ಪೂರ್ತಿ ಹಣವನ್ನು ಮೊದಲೇ ಖರ್ಚು ಮಾಡಿದರೆ ಮುಂದಕ್ಕೆ ಹಣದ ಕೊರತೆ ಕಂಡು ಬಂದರೆ ಸಮಸ್ಯೆ ಆಗಬಹುದೆಂದು ಭಾವಿಸಿ ಹಣವನ್ನು ಉಳಿಕೆ ಮಾಡಲಾಗಿದೆ ಎಂದು ಸಚಿವ ಖಾದರ್ ವಿವರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kinnigoli: ಘನ ವಾಹನ ನಿರ್ಬಂಧ; ಜನ ಪರದಾಟ
Mangaluru: ಕೊಕ್ಕಡದ ʼಸಾಂತಾ ಕ್ಲಾಸ್ʼ ವಿನ್ಸೆಂಟ್ ಕ್ರಿಸ್ಮಸ್ ತಿರುಗಾಟಕ್ಕೆ 25 ವರ್ಷ!
ಮಂಗಳೂರು ಏರ್‌ಪೋರ್ಟ್‌ಗೆ ಪಾಯಿಂಟ್ ಆಫ್ ಕಾಲ್ ಸ್ಟೇಟಸ್ ಮಾನ್ಯತೆ ನೀಡಿ: ಕ್ಯಾ.ಚೌಟ ಮನವಿ
Train; ಮಂಗಳೂರು-ಪುತ್ತೂರು ಪ್ಯಾಸೆಂಜರ್ ರೈಲು ಸುಬ್ರಹ್ಮಣ್ಯಕ್ಕೆ?
Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Starbucks ಕಾಫಿ ಸಂಸ್ಥೆ ಭಾರತದಿಂದ ನಿರ್ಗಮಿಸಲಿದೆಯಾ?Tata Consumer Products ಹೇಳಿದ್ದೇನು
Kinnigoli: ಘನ ವಾಹನ ನಿರ್ಬಂಧ; ಜನ ಪರದಾಟ
Shimoga; ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ
Mangaluru: ಕೊಕ್ಕಡದ ʼಸಾಂತಾ ಕ್ಲಾಸ್ʼ ವಿನ್ಸೆಂಟ್ ಕ್ರಿಸ್ಮಸ್ ತಿರುಗಾಟಕ್ಕೆ 25 ವರ್ಷ!
Bantwal: ಪುರಸಭೆ ಆಸ್ತಿ ರಕ್ಷಣೆಗೆ ಸದಸ್ಯರ ಆಗ್ರಹ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.