ಅಂಬೇಡ್ಕರ್‌ ಅವರನ್ನು ಅರಿಯುವ ಕೆಲಸವಾಗಲಿ: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

ರಾಜ್ಯಪಾಲರಿಂದ ಮಂಗಳೂರು ವಿ.ವಿ.ಯಲ್ಲಿ ಡಾ| ಅಂಬೇಡ್ಕರ್‌ ಪ್ರತಿಮೆ ಅನಾವರಣ

Team Udayavani, Dec 7, 2022, 5:55 AM IST

ಅಂಬೇಡ್ಕರ್‌ ಅವರನ್ನು ಅರಿಯುವ ಕೆಲಸವಾಗಲಿ: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

ಉಳ್ಳಾಲ: ವಿದೇಶದಲ್ಲಿ ಅತ್ಯುನ್ನತ ಶಿಕ್ಷಣ ಪಡೆದ ಬಳಿಕ ಅತ್ಯುನ್ನತ ಸ್ಥಾನ ಅಲಂಕರಿಸುವ ಅವಕಾಶವಿದ್ದರೂ ಡಾ| ಬಿ.ಆರ್‌. ಆಂಬೇಡ್ಕರ್‌ ಅವರು ತನ್ನ ಮತ್ತು ತನ್ನ ಪರಿವಾರದ ಸುಖಜೀವನವನ್ನು ನಿರ್ಲಕ್ಷಿಸಿ ಸಮಾಜದ ಲೋಪಗಳನ್ನು ಸರಿಪಡಿಸುವ ನಿಟ್ಟಿನಲ್ಲಿ ಸಮಾನತೆ, ಸಾಮರಸ್ಯ ತರಲು ಪ್ರಯತ್ನಿಸಿದವರು. ಈ ಚಿಂತನೆ ಅವರು ರಚಿಸಿದ ಸಂವಿಧಾನದಲ್ಲೂ ಪ್ರತಿಫಲಿಸುತ್ತದೆ. ಈಗಿನ ಪರಿಸ್ಥಿತಿಯಲ್ಲಿ ಅವುಗಳ ಜಾರಿ ಅಗತ್ಯವಾಗಿದ್ದು, ಅಂಬೇಡ್ಕರ್‌ ಅವರನ್ನು ಅರಿಯುವ ಕೆಲಸವಾಗಲಿ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಭಿಪ್ರಾಯಪಟ್ಟರು.

ಸಂವಿಧಾನ ಶಿಲ್ಪಿ ಡಾ| ಬಿ.ಆರ್‌. ಅಂಬೇಡ್ಕರ್‌ ಅವರ 66ನೇ ಮಹಾ ಪರಿನಿರ್ವಾಣ ದಿನದ ಅಂಗವಾಗಿ ಮಂಗಳೂರು ವಿಶ್ವವಿದ್ಯಾನಿಲಯದ ವಿಜ್ಞಾನ ಸಂಕಿರಣದ ಎದುರು ಡಾ| ಬಿ.ಆರ್‌. ಅಂಬೇಡ್ಕರ್‌ ಅಧ್ಯಯನ ಕೇಂದ್ರದ ಮೂಲಕ 14.30 ಲಕ್ಷ ರೂ. ವಚ್ಚದಲ್ಲಿ ಸ್ಥಾಪಿಸಲಾಗಿರುವ ಬಾಬಾಸಾಹೇಬರ 9 ಅಡಿ ಕಂಚಿನ ಪ್ರತಿಮೆಯನ್ನು ಅನಾವರಣಗೊಳಿಸಿದ ಬಳಿಕ ಮಂಗಳಾ ಸಭಾಂಗಣದಲ್ಲಿ ನಡೆದ ಸಭಾಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಲಂಡನ್‌ ಮತ್ತು ಅಮೆರಿಕದಲ್ಲಿ ಶಿಕ್ಷಣ ಪಡೆದ ಬಳಿಕ ಅವರು ವಿದೇಶದಲ್ಲಿಯೇ ಅತ್ಯುನ್ನತ ಹುದ್ದೆ ಪಡೆದು ಸಂತೋಷದ ಜೀವನ ಕಳೆಯ ಬಹುದಿತ್ತು. ಭಾರತದಲ್ಲಿಯೂ ಸರಕಾರಿ ಉದ್ಯೋಗದ ಅವಕಾಶವಿತ್ತು. ಆದರೆ ಅದಾವುದನ್ನೂ ಬಯಸದೆ ಆಗಿನ ಕಾಲದಲ್ಲಿದ್ದ ಧಾರ್ಮಿಕ, ಸಾಮಾಜಿಕ, ರಾಜಕೀಯ ಅಸಮಾನತೆಯನ್ನು ತಿದ್ದುವ ಕಾರ್ಯ ಮಾಡಿದರು. ಅವರು ರಚಿಸಿದ ಸಂವಿಧಾನ ವಿಶ್ವದ ಎಲ್ಲ ರಾಷ್ಟ್ರಗಳ ಸಂವಿಧಾನಕ್ಕಿಂತ ಭಿನ್ನವಾಗಿದೆ ಎಂದರು.

ಕೊಡುಗೆ ಗುರುತಿಸುವ ಕಾರ್ಯ
ಮಧ್ಯಪ್ರದೇಶದ ಸರಕಾರದಲ್ಲಿ ನಾನು ಗ್ರಾಮೀಣಾಭಿವೃದ್ಧಿ ಸಚಿವನಾ ಗಿ ದ್ದಾಗ ಅಂಬೇಡ್ಕರ್‌ ಅವರ ಜನ್ಮಸ್ಥಳ ವಾದ ಮಾಹೋದಲ್ಲಿ ಸ್ಮಾರಕ ನಿರ್ಮಾಣಕ್ಕೆ ಮಾಜಿ ಪ್ರಧಾನಿ ಅಟಲ್‌ ಬಿಹಾರಿ ವಾಜಪೇಯಿ ಭೂಮಿ ಪೂಜೆ ಮಾಡಿದ್ದರು. 10 ವರುಷ ಬೇರೆ ಸರಕಾರ ಇದ್ದಾಗ ನೆನೆಗುದಿಗೆ ಬಿದ್ದಿತ್ತು. ಬಿಜೆಪಿ ಸರಕಾರ ಬಂದ ಬಳಿಕ 14 ಕೋಟಿ ರೂ. ವೆಚ್ಚದಲ್ಲಿ ಅವರ ಸ್ಮಾರಕ ನಿರ್ಮಾಣ ಕಾರ್ಯ ಪೂರ್ಣಗೊಂಡಿತು. ಈಗಿನ ಪ್ರಧಾನಿ ನರೇಂದ್ರ ಮೋದಿಯವರ ಅವಧಿಯಲ್ಲಿ ಅಂಬೇಡ್ಕರ್‌ ಅವರನ್ನು ಎಲ್ಲರೂ ಅರಿಯಬೇಕು ಎಂಬ ಉದ್ದೇಶದಿಂದ ಅಂಬೇಡ್ಕರ್‌ ಅಂತಾರಾಷ್ಟ್ರೀಯ ಕೇಂದ್ರವನ್ನು ಸ್ಥಾಪಿಸಿ ದ್ದಾರೆ. ಅಂಬೇಡ್ಕರ್‌ ಅವರ ಜನ್ಮಭೂಮಿ, ಶಿûಾ ಭೂಮಿ, ಕರ್ಮ ಭೂಮಿ, ದೀûಾ ಭೂಮಿ, ಪರಿನಿರ್ವಾಣ ಭೂಮಿ ಹಾಗೂ ಚೈತ್ಯ ಭೂಮಿಗಳನ್ನು ಅಭಿವೃದ್ಧಿ ಪಡಿಸುವ ಕಾರ್ಯ ನಡೆದಿದ್ದು ಈ ಪ್ರದೇಶಗಳು ಈಗ ಅಂಬೇಡ್ಕರ್‌ ಅವರ ಸಮಗ್ರ ಪರಿಚಯ ನೀಡುತ್ತವೆ ಎಂದರು.

ಛತ್ತೀಸ್‌ಗಢದ ಮಹಾತ್ಮಾ ಗಾಂಧಿ ತೋಟಗಾರಿಕೆ ಮತ್ತು ಅರಣ್ಯ ವಿ.ವಿ.ಯ ಕುಲಪತಿ ಮತ್ತು ಮಾಹೊದ ಡಾ| ಬಿ.ಆರ್‌. ಅಂಬೇಡ್ಕರ್‌ ವಿ.ವಿ.ಯ ಸಂಸ್ಥಾಪಕ ಕುಲಪತಿ ಪ್ರೊ| ಆರ್‌.ಎಸ್‌. ಕುರೀಲ್‌ ಅವರು ಅಂಬೇಡ್ಕರರ ಜೀವನದ ಮಹತ್ತರ ಘಟ್ಟಗಳು, ಸಾಧನೆಗಳನ್ನು ವಿವರಿಸಿದರು.

ಕುಲಸಚಿವ ಡಾ| ಸಿ.ಕೆ. ಕಿಶೋರ್‌ ಕುಮಾರ್‌, ಪರೀûಾಂಗ ಕುಲಸಚಿವ ಡಾ| ಪಿ.ಎಲ್‌. ಧರ್ಮ, ಸಿಂಡಿಕೇಟ್‌ ಸದಸ್ಯರು ಸೇರಿದಂತೆ ಗಣ್ಯರು ಉಪ ಸ್ಥಿತರಿದ್ದರು. ಕುಲಪತಿ ಪ್ರೊ| ಪಿ. ಸುಬ್ರಹ್ಮಣ್ಯ ಯಡಪಡಿತ್ತಾಯ ಸ್ವಾಗ ತಿಸಿ, ಡಾ| ಬಿ.ಆರ್‌. ಅಂಬೇಡ್ಕರ್‌ ಅಧ್ಯ ಯನ ಕೇಂದ್ರದ ನಿರ್ದೇಶಕ ಪ್ರೊ| ವಿಶ್ವನಾಥ ವಂದಿಸಿದರು. ಪ್ರಾಧ್ಯಾಪಕ ರಾದ ಡಾ| ಧನಂಜಯ ಕುಂಬ್ಳೆ ಹಾಗೂ ಪ್ರೀತಿ ಕೀರ್ತಿ ಡಿ’ಸೋಜಾ ಕಾರ್ಯಕ್ರಮ ನಿರೂಪಿಸಿದರು.

ಅಂಬೇಡ್ಕರ್‌ ಅಧ್ಯಯನ ಪೀಠ ಸ್ಥಾಪಿಸಿ
ಅಂಬೇಡ್ಕರ್‌ ಪುತ್ಥಳಿ ಸ್ಥಾಪಿಸಿದ ಮಂಗಳೂರು ವಿ.ವಿ.ಯನ್ನು ಅಭಿನಂದಿಸಿದ ರಾಜ್ಯಪಾಲರು, ಪುತ್ಥಳಿಯು ಅವರ ಸತ್ಕರ್ಮಗಳನ್ನು ಅರಿತು ಅಳವಡಿಸಿಕೊಳ್ಳಲು ಸಹಕಾರಿ. ಅಂಬೇಡ್ಕರ್‌ ವಿಚಾರದಲ್ಲಿ ಹೆಚ್ಚಿನ ಅಧ್ಯಯನಕ್ಕೆ ಮಂಗಳೂರು ವಿ.ವಿ.ಯಲ್ಲಿ ಅಂಬೇಡ್ಕರ್‌ ಅಧ್ಯಯನ ಪೀಠ ಸ್ಥಾಪನೆಗೆ ಕೇಂದ್ರ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಿ ನನಗೆ ಮಾಹಿತಿ ನೀಡಿ. ಪೀಠ ಸ್ಥಾಪನೆಗೆ ಅಗತ್ಯ ಬೆಂಬಲ ನೀಡಲು ಸಿದ್ಧನಿದ್ದೇನೆ ಎಂದು ರಾಜ್ಯಪಾಲರು ಭರವಸೆ ನೀಡಿದರು.

ಟಾಪ್ ನ್ಯೂಸ್

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

Bantwala-Crime

Bantwala: ತುಂಬೆ ದೇವಸ್ಥಾನ ಕಳ್ಳತನ ಪ್ರಕರಣ: ಮೂವರು ಖದೀಮರ ಸೆರೆ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

1-rcb

RCB ತಂಡಕ್ಕೆ ಸೇರಿದ ಫಿಲ್ ಸಾಲ್ಟ್, ಜಿತೇಶ್ ಶರ್ಮ, ಹ್ಯಾಜಲ್‌ವುಡ್‌

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

Ullala-Auto-Accident

Ullala: ಕೊಣಾಜೆ ಬಳಿ ರಿಕ್ಷಾ ಅಪಘಾತ: ವ್ಯಕ್ತಿ ಮೃತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ullala-Auto-Accident

Ullala: ಕೊಣಾಜೆ ಬಳಿ ರಿಕ್ಷಾ ಅಪಘಾತ: ವ್ಯಕ್ತಿ ಮೃತ್ಯು

9-someshwara

Someshwara: ಸಮುದ್ರಕ್ಕೆ ಹಾರಿದ ಯುವತಿಯ ರಕ್ಷಣೆ

Chrmadi-Ghat

Road Development: ಚಾರ್ಮಾಡಿ ಘಾಟಿ ರಸ್ತೆ ದ್ವಿಪಥ ಭಾಗ್ಯ ಸನ್ನಿಹಿತ

Dawwod-Arrest

Mangaluru: ಕುಖ್ಯಾತ ರೌಡಿಶೀಟರ್‌ ದಾವೂದ್‌ ಬಂಧಿಸಿದ ಸಿಸಿಬಿ ಪೊಲೀಸರು

NITK-Padavi-pradana

Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್‌ ರಂಗರಾಜನ್‌

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

Bantwala-Crime

Bantwala: ತುಂಬೆ ದೇವಸ್ಥಾನ ಕಳ್ಳತನ ಪ್ರಕರಣ: ಮೂವರು ಖದೀಮರ ಸೆರೆ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

1-rcb

RCB ತಂಡಕ್ಕೆ ಸೇರಿದ ಫಿಲ್ ಸಾಲ್ಟ್, ಜಿತೇಶ್ ಶರ್ಮ, ಹ್ಯಾಜಲ್‌ವುಡ್‌

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.