‘ಮುದ್ರಾಧಾರಣೆಯಿಂದ ಭಗವಂತನ ಅನುಗ್ರಹ’
Team Udayavani, Jul 25, 2018, 12:15 PM IST
ಬೆಳ್ತಂಗಡಿ : ಆಷಾಢ ಶುಕ್ಲ ಪಕ್ಷದ ಏಕಾದಶಿಯಿಂದ ಉತ್ಥಾನ ದ್ವಾದಶಿವರೆಗೆ ಧಾರ್ಮಿಕ ಕಾರ್ಯ, ಆಚರಣೆಯಲ್ಲಿ ತೊಡಗಿದರೆ ವಿಶೇಷ ಫಲ ಸಿಗುತ್ತದೆ. ಈ ಸಂದರ್ಭ ಭಗವಂತನ ಚಿಹ್ನೆಗಳಾದ ಚಕ್ರ, ಶಂಖದಲ್ಲಿ ಸುದರ್ಶನ ಮಂತ್ರ ಪೂರಿತ ಹವನದ ಮೂಲಕ ಮುದ್ರಾಧಾರಣೆ ಮಾಡಿಸಿಕೊಳ್ಳುವುದರಿಂದ ಭಗವಂತನ ಅನುಗ್ರಹ ಲಭಿಸು ತ್ತದೆ ಎಂದು ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನತೀರ್ಥ ಸ್ವಾಮೀಜಿ ಹೇಳಿದರು.
ಅವರು ಉಜಿರೆ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಭಕ್ತರಿಗೆ ಮುದ್ರಾ ಧಾರಣೆ ಮಾಡಿ ಅದರ ಮಹತ್ವವನ್ನು ವಿವರಿಸಿದರು. ಚಾತುರ್ಮಾಸ್ಯದ ಸಮಯ ಎಲ್ಲ ಜೀವರಾಶಿಗಳಿಗೂ ಸಂತಾನೋತ್ಪತ್ತಿಯ ಕಾಲವಾಗಿದ್ದು, ಈ ಅವಧಿಯಲ್ಲಿ ಸಂತರು ಸಂಚಾರ ಮಾಡದೆ ಒಂದು ಕಡೆ ಪೂಜೆ, ತಪಸ್ಸು ನಡೆಸುತ್ತಾರೆ. ಮುದ್ರಾಧಾರಣೆಯನ್ನು ಯಾವತ್ತೂ ಮಾಡಬಹುದಾಗಿದ್ದು, ಯತಿಗಳಿಗೆ ಮಾತ್ರ ಇದರ ಅಧಿಕಾರವಿರುತ್ತದೆ ಎಂದು ತಿಳಿಸಿದರು.
ಕ್ಷೇತ್ರದ ಆಡಳಿತ ಮೊಕ್ತೇಸರ ವಿಜಯರಾಘವ ಪಡ್ವೆಟ್ನಾಯ ಅವರು ಶ್ರೀಗಳನ್ನು ಗೌರವಿಸಿದರು. ವೇ| ಮೂ| ಶ್ರೀಪತಿ ಎಳಚಿತ್ತಾಯ ಅವರು ಧಾರ್ಮಿಕ ವಿಧಿವಿಧಾನ ನೆರವೇರಿಸಿದರು. ಈ ಸಂದರ್ಭ 500ಕ್ಕೂ ಹೆಚ್ಚು ಭಕ್ತರಿಗೆ ಮುದ್ರಾಧಾರಣೆ ಮಾಡಲಾಯಿತು. ಸುಬ್ರಹ್ಮಣ್ಯ ಮಠದ ಸ್ವಾಮೀಜಿ ಅವರು ತನ್ನ 22ನೇ ವರ್ಷದ ಚಾತುರ್ಮಾಸ್ಯ ವ್ರತವನ್ನು ಆ. 7ರಿಂದ ಸೆ. 25ರ ವರೆಗೆ ಸುಬ್ರಹ್ಮಣ್ಯದ ಮೂಲ ಮಠದಲ್ಲಿ ನಿರ್ವಹಿಸಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Bidar: ವಕ್ಫ್ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ
ಮಕ್ಕಳನ್ನು ಶಾಲೆಗೆ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
Drink & Drive Case: ಕುಡಿದು ವಾಹನ ಚಾಲನೆ; ʼಮಂಜುಮ್ಮೆಲ್ ಬಾಯ್ಸ್ʼ ನಟ ಬಂಧನ
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.