ವಿಸ್ಟಾಡೋಮ್ ಬೋಗಿಗಳ ರೈಲಿಗೆ ಸಂಸದರಿಂದ ಹಸಿರು ನಿಶಾನೆ
Team Udayavani, Jul 11, 2021, 10:35 AM IST
ಮಂಗಳೂರು: ಮಂಗಳೂರು – ಬೆಂಗಳೂರು ನಡುವಣ ಪ್ರಕೃತಿಯ ರಮಣೀಯ ದೃಶ್ಯಗಳನ್ನು ವೀಕ್ಷಿಸಲು ಅನುಕೂಲವುಳ್ಳ ವಿಸ್ಟಾಡೋಮ್ ರೈಲು ಸಂಚಾರಕ್ಕೆ ಸಂಸದರಾದ ನಳಿನ್ ಕುಮಾರ್ ಕಟೀಲ್ ರವಿವಾರ ಮಂಗಳೂರು ಜಂಕ್ಷನ್ ರೈಲು ನಿಲ್ದಾಣದಲ್ಲಿ ಹಸಿರು ನಿಶಾನೆ ತೋರಿಸಿದರು.
ಈ ವೇಳೆ ಮಾತಾನಾಡಿದ ಸಂಸದ ನಳಿನ್ ಕುಮಾರ್ ಕಟೀಲ್, ಈ ಯೋಜನೆಗೆ ಅನುವು ಮಾಡಿಕೊಟ್ಟ ನಮ್ಮ ಪ್ರಧಾನಿ ನರೇಂದ್ರ ಮೋದಿ ಹಾಗೂ ರೈಲ್ವೆ ಸಚಿವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಈ ಮಾರ್ಗದಲ್ಲಿ ಸುಬ್ರಮಣ್ಯ ದೇವಸ್ಥಾನವಿದೆ. ಧಾರ್ಮಿಕ ಹಾಗೂ ಪ್ರಾಕೃತಿಕ ಅನುಭವಗಳು ಪ್ರವಾಸಿಗರಿಗೆ ಖುಷಿ ಕೊಡುತ್ತದೆ. ಮಂಗಳೂರಿಗೆ 2 ಕೋಚ್ ಗಳನ್ನು ಕೊಟ್ಟಿದ್ದಾರೆ. ಇದರಲ್ಲಿ 40 ಆಸನಗಳಿವೆ. ದಿವ್ಯಾಂಗರಿಗೆ ಪ್ರತ್ಯೇಕವಾಗಿರುವ ವ್ಯವಸ್ಥೆ ಇದರಲ್ಲಿದೆ. ಮೆಟ್ರೋ ರೈಲಿನ ಹಾಗೆ ಇಲ್ಲಿ ಮಾಹಿತಿಯನ್ನು ನೀಡುವ ವ್ಯವಸ್ಥೆಯಿದೆ. ಪಯಣದಲ್ಲಿ ಪ್ರಕೃತಿಯ ದೃಶ್ಯವನ್ನು ನೋಡುತ್ತಾ ಫೋಟೋಗಳನ್ನು ತೆಗೆದುಕೊಂಡು ಆನಂದಿಸಬಹುದು. ಇಂಥ ಯೋಜನೆಯನ್ನು ಸಾಕಾರಗೊಳಿಸಿದ ರೈಲ್ವೆ ಇಲಾಖೆಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.
ಇದನ್ನೂ ಓದಿ: ಬೇರೆಯವರಿಗೆ ಕೆಸರನ್ನು ಹಚ್ಚಲು ಪ್ರಯತ್ನಿಸಿದರೆ.. ಮತ್ತೆ ಗುಡುಗಿದ ಸುಮಲತಾ
ನಮ್ಮ ಸರ್ಕಾರ ಬಂದ ಮೇಲೆ ರೈಲ್ವೆಯ ಅಭಿವೃದ್ಧಿ ವೇಗವಾಗಿ ಸಾಗುತ್ತಿದೆ. ಮಂಗಳೂರು ರೈಲ್ವೆಯಲ್ಲಿ ಬದಲಾವಣೆಯನ್ನು ತರುವ ಪ್ರಯತ್ನಗಳು ಪ್ರತಿಫಲ ನೀಡುತ್ತಿದೆ. ಮಂಗಳೂರು ರೈಲ್ವೆಗೆ ಕೇಂದ್ರದಿಂದ ಹೆಚ್ಚಿನ ಅನುದಾನವನ್ನು ಕೊಟ್ಟಿದ್ದಾರೆ. ವೇಗವಾಗಿ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿದೆ. ಇದಕ್ಕಾಗಿ ಕೇಂದ್ರಕ್ಕೆ ಅಭಿನಂದನೆಯನ್ನು ಸಲ್ಲಿಸುತ್ತೇನೆ ಎಂದರು.
ಈ ಸಂದರ್ಭದಲ್ಲಿ ಶಾಸಕರಾದ ವೇದವ್ಯಾಸ ಕಾಮತ್, ಜಿಲ್ಲಾಧಿಕಾರಿ ಡಾ. ರಾಜೇಂದ್ರ, ಮೇಯರ್ ಪ್ರೇಮಾನಂದ ಶೆಟ್ಟಿ, ಡಿಆರ್ ಎಂ ಕೊಠಾರಿ, ಕಾರ್ಪೋರೆಟ್ ಗಳಾದ ಸುಧೀರ್, ಶೋಭಾ, ರೈಲ್ವೆ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
By Election: ನಾಗೇಂದ್ರ, ಜಮೀರ್, ಡಿಕೆಶಿ ಮೇಲೆ ಚುನಾವಣಾ ಆಯೋಗ ಕಣ್ಣಿಡಲಿ: ಡಿವಿಎಸ್
Waqf: ಮುಸ್ಲಿಮರ ಗುರಿ ಮಾಡುವುದು ಬಿಟ್ಟರೆ ಬಿಜೆಪಿಗೆ ಬೇರೇನೂ ಇಲ್ಲ: ಸಚಿವ ದಿನೇಶ್
Gadaga: ಎಸ್ಪಿ ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ವ್ಯಕ್ತಿಗೆ 25 ಸಾವಿರ ರೂ. ವಂಚನೆ
Waqf Property: ಆಡು ಮುಟ್ಟದ ಸೊಪ್ಪಿಲ್ಲ, ವಕ್ಫ್ ಮುಟ್ಟದ ಸ್ವತ್ತಿಲ್ಲ: ತೇಜಸ್ವಿ ಸೂರ್ಯ
Waqf issue: ಬಿಜೆಪಿ ಅಧಿಕಾರದಲ್ಲಿದ್ದಾಗ ಕತ್ತೆ ಕಾಯಿತಿದ್ದರಾ?: ಪ್ರಿಯಾಂಕ್ ಖರ್ಗೆ
MUST WATCH
ಹೊಸ ಸೇರ್ಪಡೆ
By Election: ಯೋಗೇಶ್ವರ್ ನಿಂದಿಸಿದ್ದ ಡಿ.ಕೆ.ಸುರೇಶ್ ಆಡಿಯೋ ಎಚ್‌ಡಿಕೆ ಬಿಡುಗಡೆ
By Election: ನಾಗೇಂದ್ರ, ಜಮೀರ್, ಡಿಕೆಶಿ ಮೇಲೆ ಚುನಾವಣಾ ಆಯೋಗ ಕಣ್ಣಿಡಲಿ: ಡಿವಿಎಸ್
Waqf: ಮುಸ್ಲಿಮರ ಗುರಿ ಮಾಡುವುದು ಬಿಟ್ಟರೆ ಬಿಜೆಪಿಗೆ ಬೇರೇನೂ ಇಲ್ಲ: ಸಚಿವ ದಿನೇಶ್
Maharashtra: ಸ್ತ್ರೀಯರಿಗೆ ಮಾಸಿಕ 3000, ರೈತರ ಸಾಲ ಮನ್ನಾ: ಎಂವಿಎ
Jet Airways ಆಸ್ತಿ ಮಾರಾಟಕ್ಕೆ ಸುಪ್ರೀಂ ಕೋರ್ಟ್ ಅನುಮತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.