ಮಂಗಳೂರು: ದೇವಸ್ಥಾನಗಳ ಕಾಣಿಕೆ ಡಬ್ಬಿಯ ಹಣ ಎಣಿಕೆಗೆ ಮಾರ್ಗಸೂಚಿ ರಚನೆ
Team Udayavani, Mar 25, 2022, 6:35 AM IST
ಮಂಗಳೂರು: ಕದ್ರಿ ಶ್ರೀ ಮಂಜುನಾಥ ದೇವಸ್ಥಾನದಲ್ಲಿ ಕಾಣಿಕೆ ಹುಂಡಿಯ ಹಣ ಎಣಿಕೆ ಸಂದರ್ಭ ಟ್ರಸ್ಟಿಯೊಬ್ಬರು ಹಣ ಎಗರಿಸಿದ್ದಾರೆ ಎಂಬ ಆರೋಪ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದ್ದು, ಇದು ಜಿಲ್ಲಾಡಳಿತದ ಗಮನಕ್ಕೂ ಬಂದು ಇದೀಗ ಎಲ್ಲ ದೇವಸ್ಥಾನಗಳಿಗೆ ಅನ್ವಯವಾಗುವಂತೆ ಹುಂಡಿಯ ಹಣ ಎಣಿಕೆಗೆ ನಿಗದಿತ ಮಾರ್ಗಸೂಚಿ ರಚಿಸಲು ಜಿಲ್ಲಾಡಳಿತ ಮುಂದಾಗಿದೆ.
ಈ ಬಗ್ಗೆ ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ. ಉದಯವಾಣಿಗೆ ಮಾಹಿತಿ ನೀಡಿದ್ದಾರೆ. ಹುಂಡಿ ಹಣ ಎಣಿಕೆಗೆ ಇದುವರೆಗೆ ನಿರ್ದಿಷ್ಟ ಮಾನದಂಡ ಅಥವಾ ಮಾರ್ಗಸೂಚಿ ಇರಲಿಲ್ಲ. ಮುಂದಿನ ಸೋಮವಾರ ಧಾರ್ಮಿಕ ಪರಿಷತ್ ಸಭೆ ನಡೆಯಲಿದ್ದು, ಮಾರ್ಗಸೂಚಿ ಕುರಿತಂತೆ ಚರ್ಚಿಸಿ ನಿರ್ಣಯ ಕೈಗೊಳ್ಳಲು ಪ್ರಯತ್ನಿಸಲಾಗುವುದು ಎಂದು ಹೇಳಿದ್ದಾರೆ.
ವರದಿ ಸಲ್ಲಿಸಲು ಸೂಚನೆ :
ಕದ್ರಿಯಲ್ಲಿ ಹಣ ಎಣಿಕೆ ವೇಳೆ ಟ್ರಸ್ಟಿಯೊಬ್ಬರು ಹಣ ಎಗರಿಸಿದ್ದಾರೆಂಬ ಆರೋಪದ ಸತ್ಯಾಸತ್ಯತೆಯನ್ನು ಅರಿಯುವ ನಿಟ್ಟಿನಲ್ಲಿ ದೇವಸ್ಥಾನದ ಸಿಸಿ ಟಿವಿ ಫುಟೇಜ್ ಪರಿಶೀಲಿಸಿ ವರದಿ ಸಲ್ಲಿಸುವಂತೆ ಧಾರ್ಮಿಕ ದತ್ತಿ ಇಲಾಖೆ ಸಹಾಯಕ ಆಯುಕ್ತರಿಗೆ ಸೂಚನೆ ನೀಡಲಾಗಿದೆ. ವರದಿಯನ್ನು ಆಧರಿಸಿ ಅಗತ್ಯ ಬಿದ್ದರೆ ಎಫ್‌ಐಆರ್ ದಾಖಲಿಸಲು ಸೂಚಿಸಲಾಗುವುದು ಎಂದು ಜಿಲ್ಲಾಧಿಕಾರಿ ವಿವರಿಸಿದ್ದಾರೆ.
ಟ್ರಸ್ಟಿಯಿಂದ ದೂರು :
ಗುರುವಾರ ಕದ್ರಿ ಶ್ರೀ ಮಂಜುನಾಥ ದೇವಸ್ಥಾನದ ಟ್ರಸ್ಟಿ ಎಚ್.ಕೆ. ಪುರುಷೋತ್ತಮ ಅವರು ಕದ್ರಿ ಠಾಣೆಗೆ ದೂರೊಂದನ್ನು ನೀಡಿ, ಕಾಣಿಕೆ ಡಬ್ಬಿಯ ಹಣ ಎಣಿಕೆ ಸಂದರ್ಭ ಹಣವನ್ನು ಎಗರಿಸಿದ ಆರೋಪದ ಕುರಿತು ವಿಚಾರಣೆ ನಡೆಸುವಂತೆ ಮನವಿ ಮಾಡಿದ್ದಾರೆ.
ಇನ್ನೊಂದೆಡೆ ಅವರು ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿಗೂ ದೂರು ನೀಡಿ ಸತ್ಯಾಂಶ ಬಹಿರಂಗಪಡಿಸುವಂತೆ ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಗುತ್ತಿಗೆದಾರ ಸಚಿನ್ ಪ್ರಕರಣ; ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ
Mangaluru: ಪಿಎಂ ಸ್ವನಿಧಿ ಯೋಜನೆ; ನಗರದಲ್ಲಿ 17.87 ಕೋ.ರೂ. ಸಾಲ ವಿತರಣೆ
Mangaluru: ಇ ರಿಕ್ಷಾಗಳಿಗೆ ಮಹಿಳಾ ಸಾರಥಿ ಪ್ರಯೋಗ ವಿಫಲ
Mangaluru: ಮುಂದಿನ ವರ್ಷ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ; ಮುಲ್ಲೈ ಮುಗಿಲನ್
Mangaluru: ಮತ್ತೆ ಫ್ಲೆಕ್ಸ್ , ಬ್ಯಾನರ್‌ಗಳ ಉಪಟಳ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mangaluru: ಗುತ್ತಿಗೆದಾರ ಸಚಿನ್ ಪ್ರಕರಣ; ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ
Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್
Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ
Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು
Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.