ಗುರುಪುರ ಸೇತುವೆ ಫೆಬ್ರವರಿಯಲ್ಲಿ ಲೋಕಾರ್ಪಣೆ

ಕಾಮಗಾರಿ ವೀಕ್ಷಿಸಿದ ಸಂಸದ ನಳಿನ್‌

Team Udayavani, Jun 23, 2019, 5:54 AM IST

2206MALALI6

ಗುರುಪುರ: ಸಂಸದ ನಳಿನ್‌ ಕುಮಾರ್‌ ಕಟೀಲು ಕಾಮಗಾರಿ ವೀಕ್ಷಿಸಿದರು.

ಗುರುಪುರ: ಮಂಗಳೂರು-ಕಾರ್ಕಳ ರಾಷ್ಟ್ರೀಯ ಹೆದ್ದಾರಿ 169ರ ಫಲ್ಗುಣಿ ನದಿಗೆ ಗುರುಪುರದಲ್ಲಿ ನಿರ್ಮಿಸುತ್ತಿರುವ ಸೇತುವೆ ಕಾಮಗಾರಿ ಮುಕ್ತಾಯ ಹಂತದಲ್ಲಿದ್ದು, ಜಿಲ್ಲೆಯಲ್ಲೇ ಅತಿ ಶೀಘ್ರ ಮುಕ್ತಾಯಗೊಳ್ಳಲಿರುವ ಕಾಮಗಾರಿ ಇದೆಂಬ ಹೆಗ್ಗಳಿಕೆ ಪಾತ್ರವಾಗಲಿದೆ ಎಂದು ದಕ್ಷಿಣ ಕನ್ನಡ ಲೋಕಸಭಾ ಸಂಸದ ನಳಿನ್‌ ಕುಮಾರ್‌ ಕಟೀಲು ತಿಳಿಸಿದರು.

ಅವರು ಶನಿವಾರ ಗುರುಪುರದಲ್ಲಿ ಸೇತುವೆ ಕಾಮಗಾರಿಯ ಪ್ರಗತಿ ವೀಕ್ಷಿಸಿ, ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

ಸೇತುವೆ ಕಾಮಗಾರಿ 2019ರ ಫೆಬ್ರವರಿ 21ಕ್ಕೆ ಆರಂಭಗೊಂಡಿದ್ದು, 2021ರ ಫೆಬ್ರವರಿ 20ರಂದು ಪೂರ್ಣಗೊಳಿಸುವ ಕರಾರಿನ ಮೇರೆಗೆ ಕಾವೂರಿನ ಮೊಗರೋಡಿ ಕನ್‌ಸ್ಟ್ರಕ್ಷನ್‌ ಕಂಪೆನಿಗೆ ಗುತ್ತಿಗೆ ನೀಡಲಾಗಿತ್ತು. ಟೆಂಡರು ಪಡೆದ ತತ್‌ಕ್ಷಣ ಕಾಮಗಾರಿ ಆರಂಭಿಸಿರುವ ಕಂಪೆನಿ, ಬೇಸಗೆಯಲ್ಲಿ ಕ್ಷಿಪ್ರಗತಿಯಲ್ಲಿ ಪಿಲ್ಲರ್‌ ಹಾಕುವ ಕೆಲಸ ಮುಗಿಸಿದೆ. ಮಳೆಗಾಲದಲ್ಲಿ ಗರ್ಡರ್‌ ಮತ್ತು ಸ್ಲಾ ್ಯಬ್‌ ಅಳವಡಿಕೆ ನಡೆಯಲಿದೆ. ನಿಗದಿತ ಅವಧಿಯ ಒಳಗಡೆ ಲೋಕಾರ್ಪಣೆಗೊಳ್ಳಲಿದೆ ಎಂದರು.

39.420 ಕೋಟಿ ರೂ. ಅಂದಾಜು ವೆಚ್ಚದ ಹೊಸ ಸೇತುವೆ ಯೋಜನೆಯಲ್ಲಿ 25 ಮೀಟರ್‌ ಉದ್ದದ ಏಳು ಅಂಕಣಗಳಿವೆ. ಅಗಲ 16 ಮೀ. ಅಗಲದ ಸೇತುವೆಯು 11 ಮೀ. ಅಗಲ ರಸ್ತೆ, 2.50 ಮೀ. ಅಗಲದ ಕಾಲುದಾರಿ (ಎರಡೂ ಕಡೆ) ಇತ್ಯಾದಿ ಹೊಂದಿರುತ್ತದೆ. ಎರಡೂ ಕಡೆ 500 ಮೀ. ಉದ್ದಕೆ ಕೂಡುರಸ್ತೆ ನಿರ್ಮಾಣಗೊಳ್ಳಲಿದೆ ಎಂದರು.

ಮಂಗಳೂರು ಬೈಪಾಸ್‌ ರಸ್ತೆಗೆ ಸರಕಾರ ಒಪ್ಪಿಗೆ ನೀಡಿದೆ. ಈ ರಸ್ತೆಮೂಲ್ಕಿ – ಕಿನ್ನಿಗೋಳಿ-ಕಟೀಲು-ಬಜಪೆ – ಗುರುಪುರ ಕೈಕಂಬ -ಪೊಳಲಿ – ಬಿ.ಸಿ.ರೋಡ್‌- ಮೆಲ್ಕಾರು -ಮುಡಿಪು-ಕೊಣಾಜೆ ಮೂಲಕ ತಲಪಾಡಿ ಸಂಪರ್ಕಿಸಲಿದೆ. ‘ಭಾರತ್‌ ಮಾಲ’ ಯೋಜನೆಯಡಿ ಬೈಪಾಸ್‌ ನಿರ್ಮಾಣಗೊಳ್ಳಲಿದೆ. ಪ್ರಸ್ತುತ ಗುರುಪುರ ಸೇತುವೆ ಗುರುಪುರಕ್ಕೆ ಬೈಪಾಸ್‌ ರಸ್ತೆಯಾಗಲಿದ್ದು, ಮಂಗಳೂರು ಕುಲಶೇಖರ ರಾಷ್ಟ್ರೀಯ ಹೆದ್ದಾರಿ ಅಡ್ಡೂರು ಮುಖಾಂತರ ಸಂಪರ್ಕ ಕಲ್ಪಿಸಲಿದೆ. ಅಡ್ಡೂರಿನಲ್ಲಿ ಫ್ಲೈ ಓವರ್‌ ನಿರ್ಮಾಣಗೊಳ್ಳಲಿದ್ದು, ಪ್ರಮುಖ ಜಂಕ್ಷನ್‌ ಆಗಲಿದೆ ಎಂದರು.

ಮಂಗಳೂರು ಉತ್ತರ ಶಾಸಕ ಡಾ| ಭರತ್‌ ಶೆಟ್ಟಿ ಮಾತನಾಡಿ, ಮೂಲರಪಟ್ಣ ರಸ್ತೆ ಪಿಡಬ್ಲ್ಯುಡಿಗೆ ಸೇರಿದ್ದು, ಇಲ್ಲಿ ಸೇತುವೆ ನಿರ್ಮಾಣ ಕ್ಕಾಗಿ ರಾಜ್ಯ ಸರಕಾರದ ಮೇಲೆ ನಾನು ಹಾಗೂ ಬಂಟ್ವಾಳ ಶಾಸಕ ರಾಜೇಶ್‌ ನಾಯ್ಕ ಉಳಿಪಾಡಿಗುತ್ತು ನಿರಂತರ ಒತ್ತಡ ಹೇರುತ್ತಿದ್ದೇವೆ. ಮಳೆಗಾಲದ ಒಳಗಡೆ ಟೆಂಡರ್‌ ಪ್ರಸ್ತಾವನೆ ಪೂರ್ಣ ಗೊಂಡು ಹೊಸ ಸೇತುವೆ ಮುಂದಿನ ವರ್ಷ ಆರಂಭಗೊಳ್ಳಲಿದೆ ಎಂದರು.

ರಾ.ಹೆ. ಉಪವಿಭಾಗದ ಸಹಾಯಕ ಕಾರ್ಯಪಾಲಕ ಎಂಜಿನಿಯರ್‌ ಎಚ್.ಪಿ. ರಮೇಶ್‌, ಸಹಾಯಕ ಎಂಜಿನಿಯರ್‌ ಕೀರ್ತಿ ಅಮೀನ್‌, ವಿಹಿಂಪ ಮುಖಂಡ ಜಗದೀಶ ಶೇಣವ, ಮೊಗರೋಡಿ ಕನ್‌ಸ್ಟ್ರಕ್ಷನ್‌ ಕಂಪೆನಿಯ ಮುಖ್ಯ ಎಂಜಿನಿಯರ್‌ ಸುಬ್ರಹ್ಮಣ್ಯ, ಸ್ಥಳೀಯ ಬಿಜೆಪಿ ಮುಖಂಡರು ಉಪಸ್ಥಿತರಿದ್ದರು.

3 ಹಂತಗಳಲ್ಲಿ ರಸ್ತೆ ನಿರ್ಮಾಣ

ಕೇಂದ್ರ ಸರಕಾರವು ಫೇಸ್‌ ಒಂದು, ಫೇಸ್‌ ಎರಡು ಹಾಗೂ ಫೇಸ್‌ ಮೂರು ಹೀಗೆ ಮೂರು ಹಂತಗಳಲ್ಲಿ ರಸ್ತೆಗಳ ಅಭಿವೃದ್ಧಿ ನಡೆಸುತ್ತಿದ್ದು, ಜಿಲ್ಲೆಯ ಹಲವು ರಾಷ್ಟ್ರೀಯ ಹೆದ್ದಾರಿಗಳ ಅಭಿವೃದ್ಧಿ ಕಾರ್ಯ ನಡೆಯುತ್ತಿದೆ. – ನಳಿನ್‌ ಕುಮಾರ್‌ ಕಟೀಲು

ಟಾಪ್ ನ್ಯೂಸ್

1-deee

Udupi; ಪೊಲೀಸ್‌ ಇಲಾಖೆ ವಿರುದ್ಧ ಹಿಂದೂ ಸಂಘಟನೆಗಳ ಪ್ರತಿಭಟನೆ

Shiralakoppa: ಹೋರಿ ತಿವಿದು ಬೈಕ್‌ ಸವಾರ ಸಾವು

Shiralakoppa: ಹೋರಿ ತಿವಿದು ಬೈಕ್‌ ಸವಾರ ಸಾವು

Kamsale-kumaraswami

Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ

Khadri–cm

Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್‌ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!

DVG-Tagaru

Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ

1-IFFI

IFFI 2024; ಫಿಲ್ಮ್ ಬಜಾರ್: ಮತ್ತೊಂದು ಯಶಸ್ವಿ ಮುನ್ನುಡಿಯೊಂದಿಗೆ ಉತ್ಸವ ಸಮಾಪನ

1-ree

IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

Mangaluru: ಸೆಕ್ಯುರಿಟಿ ಕೆಲಸ ಮಾಡುತ್ತಿದ್ದ ವ್ಯಕ್ತಿ ನಾಪತ್ತೆ

Untitled-5

Mangaluru: ಗಾಂಜಾ ಸೇವನೆ; ಯುವಕನ ಬಂಧನ

ಕಡಬ, ಬೆಳ್ತಂಗಡಿ ಸೇರಿದಂತೆ ಅಕ್ರಮ ಮದ್ಯಮಾರಾಟದ ವಿರುದ್ದ ವಿಶೇಷ ಕಾರ್ಯಾಚರಣೆ: ಪ್ರಕರಣ ದಾಖಲು

ಕಡಬ, ಬೆಳ್ತಂಗಡಿ ಸೇರಿದಂತೆ ಹಲವೆಡೆ ಮಾದಕವಸ್ತು, ಅಕ್ರಮ ಮದ್ಯ ಮಾರಾಟ ವಿರುದ್ಧ ಕಾರ್ಯಾಚರಣೆ

MNG-illgal-Sand

Mangaluru: ಅಕ್ರಮ ಮರಳುಗಾರಿಕೆ; ಪ್ರಶ್ನಿಸಿದ ಯುವಕನಿಗೆ ಗಂಭೀರ ಹಲ್ಲೆ

cOurt

Pakshikere: ಮೂವರ ಸಾವಿನ ಪ್ರಕರಣ: ತಾಯಿ, ಪುತ್ರಿಗೆ ಜಾಮೀನು ಮಂಜೂರು

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

1-deee

Udupi; ಪೊಲೀಸ್‌ ಇಲಾಖೆ ವಿರುದ್ಧ ಹಿಂದೂ ಸಂಘಟನೆಗಳ ಪ್ರತಿಭಟನೆ

Shikaripur: ಊಟ ಮಾಡುತ್ತಿದ್ದ ತಂದೆಯ ಕೊಂದ ಮಗ

Shikaripur: ಊಟ ಮಾಡುತ್ತಿದ್ದ ತಂದೆಯ ಕೊಂದ ಮಗ

Mandya: ಕದ್ದ ಚಿನ್ನ ಮನೆ ಮುಂದೆ ಇಟ್ಟು ಹೋದ ಕಳ್ಳರು!

Mandya: ಕದ್ದ ಚಿನ್ನ ಮನೆ ಮುಂದೆ ಇಟ್ಟು ಹೋದ ಕಳ್ಳರು!

Shiralakoppa: ಹೋರಿ ತಿವಿದು ಬೈಕ್‌ ಸವಾರ ಸಾವು

Shiralakoppa: ಹೋರಿ ತಿವಿದು ಬೈಕ್‌ ಸವಾರ ಸಾವು

Kamsale-kumaraswami

Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.