ಶೈಕ್ಷಣಿಕ ಗುರಿ ಜ್ಞಾನಾರ್ಜನೆಯಲ್ಲ ಕ್ರಿಯಾಶೀಲತೆ :ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ

ಡಾ| ಹೆಗ್ಗಡೆ, ಗುರುರಾಜ್‌ ಪೂಜಾರಿ, ಶಾಸಕ ಹರೀಶ್‌ ಪೂಂಜರಿಗೆ ಗೌರವ

Team Udayavani, Aug 11, 2022, 9:13 AM IST

ಶೈಕ್ಷಣಿಕ ಗುರಿ ಜ್ಞಾನಾರ್ಜನೆಯಲ್ಲ ಕ್ರಿಯಾಶೀಲತೆ :ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ

ಬೆಳ್ತಂಗಡಿ : ಜ್ಞಾನಾರ್ಜನೆ ಯೊಂದೇ ಶಿಕ್ಷಣದ ಏಕೈಕ ಉದ್ದೇಶವಲ್ಲ. ಪಡೆದ ಜ್ಞಾನವನ್ನು ಅಗತ್ಯವಿರುವಲ್ಲಿ ಬಳಸಿಕೊಳ್ಳದೇ ಇದ್ದರೆ ಪಡೆದ ಶಿಕ್ಷಣ ವ್ಯರ್ಥ. ಶಿಕ್ಷಣ ಸಂಸ್ಥೆಗಳು ವಿದ್ಯಾರ್ಥಿಗಳ ಕ್ರಿಯಾಶೀಲತೆ, ಕೌಶಲವನ್ನು ಗುರುತಿಸಿ ಪೋಷಿಸಿದಾಗ ಅದು ವರವಾಗಿ ಪರಿಣಮಿಸುತ್ತದೆ ಎಂದು ರಾಜ್ಯಸಭೆಯ ನೂತನ ಸದಸ್ಯ, ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಅವರು ಅಭಿಪ್ರಾಯಪಟ್ಟರು.

ಉಜಿರೆ ಎಸ್‌ಡಿಎಂ ಕಾಲೇಜು ವತಿಯಿಂದ ಬುಧವಾರ ಎಸ್‌ಡಿಎಂ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಕಾಲೇಜಿನಲ್ಲಿ 2021-22ನೇ ಸಾಲಿನ ವಿವಿಧ ಕ್ಷೇತ್ರಗಳ ಸಾಧಕರನ್ನು ಗೌರವಿಸಿ ಮಾತನಾಡಿದರು.

ಅಧ್ಯಯನದಲ್ಲಿ ಪ್ರಾಮಾಣಿಕವಾಗಿ ತೊಡಗಿಸಿಕೊಳ್ಳುವ ಬದ್ಧತೆಯಿದ್ದಾಗ ಸಾಧನೆಯ ಹಾದಿ ಸ್ಪಷ್ಟವಾಗುತ್ತದೆ. ವ್ಯಕ್ತಿಗತ ಜ್ಞಾನ, ಕೌಶಲಗಳಿಗೆ ಸಂಸ್ಕಾರಯುತ ನಡವಳಿಕೆಯಿಂದ ಹೊಸದೊಂದು ಆಯಾಮ ದೊರಕುತ್ತದೆ. ಖಾಸಗಿ ಅಥವಾ ಸರಕಾರಿ ವಲಯಗಳಲ್ಲಿ ಕಾರ್ಯೋನ್ಮು ಖ ರಾಗಿರುವಾಗ ಇನ್ನೊಬ್ಬರೊಂದಿಗೆ ಹೇಗೆ ನಡೆದುಕೊಳ್ಳುತ್ತೇವೆ ಎನ್ನುವುದೇ ಮುಖ್ಯ ವಾಗುತ್ತದೆ. ಸೌಜನ್ಯದ ನಡವಳಿಕೆ ವೃತ್ತಿ ಜೀವನದ ಬೆಳವಣಿಗೆಗೆ ಪೂರಕವಾಗುತ್ತವೆ. ಈ ಬಗೆಯ ತಿಳುವಳಿಕೆಯಿಂದ ಭವಿಷ್ಯ ಉಜ್ವಲವಾಗುತ್ತದೆ ಎಂದರು.

ಶಾಸಕ ಹರೀಶ್‌ ಪೂಂಜ ಮಾತನಾಡಿ, ಪದವಿ ಪೂರ್ಣಗೊಳ್ಳುವುದಕ್ಕೆ ಮುಂಚೆಯೇ ಸಾಧನೆಯ ಕನಸುಗಳನ್ನು ಸಾಕಾರಗೊಳಿ ಸಿಕೊಳ್ಳುವ ಹಂಬಲಗಳನ್ನಿರಿಸಿಬೇಕು. ಸ್ಪರ್ಧಾತ್ಮಕ ಜಗತ್ತಿನ ವೇಗಕ್ಕೆ ತಕ್ಕಂತೆ ಸಾಮರ್ಥ್ಯ ಹೆಚ್ಚಿಸಿಕೊಂಡಾಗ ಸಾಧನೆ ನಿಶ್ಚಿತವಾಗುತ್ತದೆ. ಉಜಿರೆಯ ಸರ್ವತೋಮುಖ ಪ್ರಗತಿಗೆ ಡಾ| ಬಿ. ಯಶೋವರ್ಮರ ಪ್ರಯೋಗಶೀಲ ಪ್ರಯತ್ನವನ್ನು ಸ್ಮರಿಸುತ್ತೇನೆ ಎಂದರು.

ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿಗಳಾದ ಡಿ. ಹಷೇìಂದ್ರ ಕುಮಾರ್‌ ಮತ್ತು ಡಾ| ಎಸ್‌. ಸತೀಶ್ಚಂದ್ರ ಉಪಸ್ಥಿತರಿದ್ದರು.

ಉಪಪ್ರಾಂಶುಪಾಲ ಡಾ| ಎ. ಜಯಕುಮಾರ್‌ ಶೆಟ್ಟಿ ವಾರ್ಷಿಕ ವರದಿ ಸಾದರ ಪಡಿಸಿದರು. ಪ್ರಾಂಶುಪಾಲ ಡಾ| ಪಿ.ಎನ್‌. ಉದಯಚಂದ್ರ ಸ್ವಾಗತಿಸಿದರು. ಕಲಾ ವಿಭಾಗ ಡೀನ್‌ ಡಾ| ಶಲೀಪ್‌ ಕುಮಾರಿ ವಂದಿಸಿದರು. ಪ್ರಾಧ್ಯಾಪಕ ಡಾ| ಕುಮಾರ್‌ ಹೆಗ್ಡೆ ಬಿ.ಎ. ಡಾ| ಚಿತ್ರಾ ಮತ್ತು ಡಾ| ನೆಫಿಸೆತ್‌ ಕಾರ್ಯಕ್ರಮ ನಿರೂಪಿಸಿದರು.

ಸಾಧಕರಿಗೆ ಗೌರವ
ರಾಜ್ಯಸಭಾ ಸದಸ್ಯರಾಗಿರುವ ಡಾ| ಡಿ. ವೀರೇಂದ್ರ ಹೆಗ್ಗಡೆಯವರು, ಉಜಿರೆಯ ರಸ್ತೆಯನ್ನು ಸುಂದರಗೊಳಿಸಿರುವ ಶಾಸಕ ಹರೀಶ್‌ ಪೂಂಜ ಮತ್ತು ಎಸ್‌ಡಿಎಂ ಕಾಲೇಜಿನ ಹಿರಿಯ ವಿದ್ಯಾರ್ಥಿ ಹಾಗೂ ಕಾಮನ್‌ವೆಲ್ತ್‌ ಕ್ರೀಡಾಕೂಟದಲ್ಲಿ ಕಂಚಿನ ಪದಕ ವಿಜೇತ ಗುರುರಾಜ್‌ ಪೂಜಾರಿ ಅವ ರನ್ನು ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ವತಿಯಿಂದ ಗೌರವಿಸಿ ಸಮ್ಮಾನಿಸಲಾಯಿತು.

ಸಾರ್ಥಕ, ಪುಣ್ಯದ ಕ್ಷಣ
ಸಮ್ಮಾನ ಸ್ವೀಕರಿಸಿದ ಗುರುರಾಜ್‌ ಮಾತನಾಡಿ, ನಿರ್ದಿಷ್ಟ ಗುರಿಯೊಂದಿಗೆ ಯಾವುದೇ ಕ್ಷೇತ್ರದಲ್ಲಿ ಕಠಿನ ಪರಿಶ್ರಮ ಮತ್ತು ನಿರಂತರ ಅಭ್ಯಾಸ ಮಾಡಿದಲ್ಲಿ ಯಶಸ್ಸು ಖಚಿತ. ಪದಕ ಗೆದ್ದು ಮರಳಿದಾಗ ಡಾ| ಹೆಗ್ಗಡೆಯವರು ವಿಮಾನ ನಿಲ್ದಾಣದಲ್ಲಿ ಗೌರವಿಸಿದ್ದು ಸಾರ್ಥಕ ಪುಣ್ಯ ಕ್ಷಣವಾಗಿದೆ. 2010ರಿಂದ 5 ವರ್ಷಗಳ ಕಾಲ ನಾನು ಎಸ್‌ಡಿಎಂ ಕಾಲೇಜಿನಲ್ಲಿ ಪಡೆದ ತರಬೇತಿ  ನನ್ನನ್ನು ಈ ಮಟ್ಟಕ್ಕೆ ಬೆಳೆಸಿದೆ. ಇಲ್ಲಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರಮೇಶ್‌ ಎಚ್‌., ಶಾರದಾ ಮತ್ತು ರಾಜೇಂದ್ರ ಪ್ರಸಾದ್‌ ಅವರ ನಿರಂತರ ತರಬೇತಿ ಮತ್ತು ಪ್ರೋತ್ಸಾಹವೂ ಇದರ ಹಿಂದೆ ಇದೆ ಎಂದರು.

ಟಾಪ್ ನ್ಯೂಸ್

Mulki-kambla

Mulki: ಕಂಬಳದಿಂದ ಕೃಷಿ, ಧಾರ್ಮಿಕ ನಂಬಿಕೆ ವೃದ್ಧಿ: ನ್ಯಾ. ಎನ್‌. ಸಂತೋಷ್‌ ಹೆಗ್ಡೆ

udupi-Bar-Asso

Udupi: ಸುಪ್ರೀಂ, ಹೈಕೋರ್ಟ್‌ಗಳ ತೀರ್ಪು ಆನ್‌ಲೈನ್‌ನಲ್ಲಿ ಲಭ್ಯ: ನ್ಯಾ.ಸೂರಜ್‌

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

SASTHANA-TOLL

Kota: ಸಾಸ್ತಾನ ಟೋಲ್‌: ಡಿ.30ರ ತನಕ ಯಥಾಸ್ಥಿತಿ ಮುಂದುವರಿಕೆಗೆ ಸೂಚನೆ

mob

Samsung Phone; ಫೋಟೋ ಸೋರಿಕೆ: ಕೆಲಸಗಾರರು ವಜಾ?

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Perla-fire

Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Car-Palti

Sulya: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

Accident-logo

Putturu: ಬೈಕ್‌-ಪಿಕಪ್‌ ಢಿಕ್ಕಿ: ಇಬ್ಬರು ಸವಾರರಿಗೆ ಗಂಭೀರ ಗಾಯ

Arrest

Bantwala: ನಾವೂರು: ಅತ್ಯಾಚಾರ; ಆರೋಪಿಗೆ ನ್ಯಾಯಾಂಗ ಬಂಧನ

Perla-fire

Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ

death

Puttur: ಎಲೆಕ್ಟ್ರಿಕ್‌ ಆಟೋ ರಿಕ್ಷಾ ಪಲ್ಟಿ; ಚಾಲಕ ಮೃತ್ಯು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Accident-logo

Siddapura: ಕಾರು ಸ್ಕೂಟಿಗೆ ಢಿಕ್ಕಿ; ಸವಾರರು ಗಂಭೀರ

Car-Palti

Sulya: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

Thief

Kaup: ಉದ್ಯಾವರ: ಮನೆಯ ಬೀಗ ಮುರಿದು ಸೊತ್ತು ಕಳವು

Accident-logo

Putturu: ಬೈಕ್‌-ಪಿಕಪ್‌ ಢಿಕ್ಕಿ: ಇಬ್ಬರು ಸವಾರರಿಗೆ ಗಂಭೀರ ಗಾಯ

Arrest

Bantwala: ನಾವೂರು: ಅತ್ಯಾಚಾರ; ಆರೋಪಿಗೆ ನ್ಯಾಯಾಂಗ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.