ರಂಗಸ್ಥಳದಲ್ಲೇ ಕೊನೆಯುಸಿರೆಳೆದ ಕಟೀಲು ಮೇಳದ ಕಲಾವಿದ ಗುರುವಪ್ಪ ಬಾಯಾರು
Team Udayavani, Dec 23, 2022, 7:43 AM IST
ಕಟೀಲು: ಶ್ರೀ ದುರ್ಗಾಪರಮೇಶ್ವರೀ ಮೇಳದ ಕಲಾವಿದ ಗುರುವಪ್ಪ ಬಾಯಾರು (58) ಅವರು ಗುರುವಾರ ಡಿ.22 ರಂದು ರಾತ್ರಿ ಕಟೀಲಿನ ಸರಸ್ವತೀ ಸದನದಲ್ಲಿ ನಡೆಯುತ್ತಿದ್ದ ಯಕ್ಷಗಾನದ ಸಂದರ್ಭದಲ್ಲಿ ರಂಗಸ್ಥಳದಲ್ಲೇ ಹೃದಯಾಘಾತದಿಂದ ನಿಧನ ಹೊಂದಿದರು.
ಸರಸ್ವತೀ ಸದನದಲ್ಲಿ ಕಟೀಲು ನಾಲ್ಕನೇ ಮೇಳದ ಯಕ್ಷಗಾನ ಬಯಲಾಟದ ತ್ರಿಜನ್ಮ ಮೋಕ್ಷ ಪ್ರಸಂಗ ನಡೆಯುತಿತ್ತು. ಬಾಯಾರು ಅವರು ಶಿಶುಪಾಲನ ಪಾತ್ರ ನಿರ್ವಹಿಸಿದ್ದರು. ಪ್ರಸಂಗದ ಕೊನೆಯ ಭಾಗ ಪ್ರದರ್ಶನಗೊಳ್ಳುತ್ತಿತ್ತು. ಆ ಸಂದರ್ಭದಲ್ಲಿ ರಂಗಸ್ಥಳದಲ್ಲಿ ನಿಂತಿದ್ದ ಗುರುವಪ್ಪ ಬಾಯಾರು ಅವರು ರಂಗಸ್ಥಳದಿಂದ ಕೆಳಗಡೆ ಕುಸಿದುಬಿದ್ದರು.
ಬಳಿಕ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಅವರು ನಿಧನರಾದರೆಂದು ಘೋಷಿಸಲಾಯಿತು.
ಅಷ್ಟಮಂಗಲ ಪ್ರಸಂಗವನ್ನೂ ಬರೆದಿದ್ದ ಅವರು ಕಳೆದ ಮಳೆಗಾಲದಲ್ಲಿ ಮಂಗಳೂರು ಪುರಭವನದಲ್ಲಿ ಯಕ್ಷಗಾನವನ್ನು ಆಡಿಸಿದ್ದರು. ನಾನಾ ಮೇಳಗಳಲ್ಲಿ ತಿರುಗಾಟ ನಡೆಸಿದ್ದ ಅವರು 2013ರಲ್ಲಿ ಕಟೀಲು ಮೇಳಕ್ಕೆ ಸೇರಿದ್ದರು. ಮಧುಕೈಟಭ, ಮುಂತಾದ ಕಿರೀಟ ವೇಷಗಳನ್ನು ಮಾಡುತ್ತಿದ್ದ ಅವರಿಗೆ ಅನೇಕ ಕಡೆ ಸಂಮಾನಗಳು ಅವರಿಗೆ ಸಂದಿವೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.