ಎಚ್1 ಎನ್1 ಲಕ್ಷಣ : ಸೂಚನೆ
Team Udayavani, Apr 25, 2019, 6:00 AM IST
ಮಂಗಳೂರು: ಎಚ್1ಎನ್1 ಸೋಂಕಿನ ಲಕ್ಷಣಗಳು ಕಂಡುಬಂದಲ್ಲಿ ತಡ ಮಾಡದೆ ಹತ್ತಿರದ ಸರಕಾರಿ ಆಸ್ಪತ್ರೆಗಳಿಗೆ ಭೇಟಿ ನೀಡಿ ಚಿಕಿತ್ಸೆ ಪಡೆಯಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯಾಧಿಕಾರಿ ಮನವಿ ಮಾಡಿದ್ದಾರೆ.
ಎಚ್1 ಎನ್1 ಸಾಮಾನ್ಯ ವೈರಸ್ ಜ್ವರವಾಗಿದ್ದು, ನಿರ್ದಿಷ್ಟ ಚಿಕಿತ್ಸೆಯಿಂದ ರೋಗಿಗಳು ಸಂಪೂರ್ಣವಾಗಿ ಗುಣಮುಖರಾಗುತ್ತಾರೆ. ತೀವ್ರ ಸ್ವರೂಪದ ಜ್ವರ, ಕೆಮ್ಮು, ಕಫ, ಶೀತ ಮತ್ತು ಗಂಟಲು ಕೆರೆತ, ಮೈಕೈ ನೋವು ವಾಂತಿ ಭೇದಿ, ಉಸಿರಾಟದ ತೊಂದರೆ ಎಚ್1 ಎನ್1 ಸೋಂಕಿನ ಲಕ್ಷಣಗಳಾಗಿವೆ.
ಸೋಂಕಿತರು ಕೆಮ್ಮಿದಾಗ, ಸೀನಿದಾಗ ವೈರಸ್ ಹರಡುತ್ತವೆ. ಕೆಮ್ಮುವಾಗ, ಸೀನುವಾಗ ಕರವಸ್ತ್ರ ಬಳಸಿ, ಕೈಗಳ ಶುಚಿತ್ವ ಸೇರಿದಂತೆ ವೈಯಕ್ತಿಕ ಶುಚಿತ್ವ ಕಾಪಾಡಬೇಕು. ಪೌಷ್ಠಿಕ ಆಹಾರ ಸೇವಿಸುವುದು, ಧಾರಳವಾಗಿ ನೀರು ಕುಡಿಯುವುದು, ಜನ ಸಂದಣಿ ಪ್ರದೇಶಗಳಿಗೆ ಭೇಟಿ ನೀಡುವಾಗ ಸಾಕಷ್ಟು ಮುಂಜಾಗ್ರತೆ ವಹಿಸುವುದು, ಫೂÉ ತರಹದ ಲಕ್ಷಣಗಳಿರುವ ಮಕ್ಕಳನ್ನು ಶಾಲೆಗೆ ಕಳುಹಿಸದೆ ವೈದ್ಯರ ಸಲಹೆಯಂತೆ ಚಿಕಿತ್ಸೆ, ವಿಶ್ರಾಂತಿ ಪಡೆಯುವುದು ಮಾಡಬೇಕು ಎಂದು ಆರೋಗ್ಯಾಧಿಕಾರಿ ಡಾ| ರಾಮಕೃಷ್ಣ ರಾವ್ ತಿಳಿಸಿದ್ದಾರೆ. ಜಿಲ್ಲೆಯಲ್ಲಿ ಇತ್ತೀಚಿನ ದಿನಗಳಲ್ಲಿ ಎಚ್1ಎನ್1 ಪ್ರಕರಣ ಇಲ್ಲ. ಆದರೂ ಜಾಗೃತಿ ಮೂಡಿಸಲಾಗುತ್ತಿದೆ ಎಂದವರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ
Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ
Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
Kadur: ದೇಗುಲ ಕಂಪೌಂಡ್ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ
Kaup: ಸಮಸ್ಯೆಗೆ ದೂರು ನೀಡಲು 1912ಗೆ ಕರೆ ಮಾಡಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.