ಎಚ್1ಎನ್1:11 ದಿನಗಳ ಅಂತರದಲ್ಲಿ 10 ಪಾಸಿಟಿವ್
Team Udayavani, Oct 26, 2018, 9:22 AM IST
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಚ್1ಎನ್1 ಪಾಸಿಟಿವ್ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿವೆ. 11 ದಿನಗಳ ಹಿಂದೆಯಷ್ಟೇ 29 ಮಂದಿಗೆ ಎಚ್1ಎನ್1 ಕಂಡು ಬಂದಿದ್ದರೆ, ಗುರುವಾರದ ವೇಳೆಗೆ ಸಂಖ್ಯೆ 39ಕ್ಕೆ ಏರಿದೆ.
ಎಚ್1ಎನ್1 ನಿಯಂತ್ರಣಕ್ಕೆ ಜಿಲ್ಲಾ ಆರೋಗ್ಯ ಇಲಾಖೆಯು ಸರ್ವ ಪ್ರಯತ್ನಗಳನ್ನು ನಡೆಸುತ್ತಿದೆ. ಈಗಾಗಲೇ ಶಂಕಿತ ಎಚ್1ಎನ್1ನಿಂದ ಮೃತಪಟ್ಟ ನಾಲ್ವರ ಮನೆ ಆಸುಪಾಸಿನಲ್ಲಿ ತೆರಳಿ ಸರ್ವೆ ಕಾರ್ಯ ನಡೆಸಲಾಗಿದ್ದು, ಸೂಕ್ತ ಮುನ್ನೆಚ್ಚರಿಕೆ ವಹಿಸಲಾಗಿದೆ.
ಆದಾಗ್ಯೂ ಈ ವೈರಸ್ ಬಾಧೆ ಹೆಚ್ಚುತ್ತಲೇ ಇದ್ದು, ಒಂಬತ್ತು ದಿನಗಳ ಅಂತರದಲ್ಲಿ ಹತ್ತು ಮಂದಿಯಲ್ಲಿ ಪಾಸಿಟಿವ್ ಪ್ರಕರಣ ಕಾಣಿಸಿಕೊಂಡಿದೆ. ಈ ಪೈಕಿ ಕೆಲವರು ಗುಣಮುಖರಾಗಿ ಮನೆಗೆ ತೆರಳಿದರೆ, ಉಳಿದವರು ವಿವಿಧ ಸರಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಎಲ್ಲರೂ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ಅಕ್ಟೋಬರ್‌ನಲ್ಲೇ 24ಪಾಸಿಟಿವ್ ಪ್ರಕರಣ
ಈ ವರ್ಷ ಜನವರಿಯಿಂದ ಇಲ್ಲಿ ವರೆಗೆ ಒಟ್ಟು 403 ಮಂದಿಯನ್ನು ಎಚ್1ಎನ್1 ಪರೀಕ್ಷೆಗೊಳಪಡಿಸಲಾಗಿದ್ದು, 39 ಪಾಸಿಟಿವ್ ಪ್ರಕರಣ ದಾಖಲಾಗಿವೆ. ಅ.14ರ ವರೆಗೆ ಜಿಲ್ಲೆಯಲ್ಲಿ ಒಟ್ಟು 14 ಎಚ್1ಎನ್1 ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದರೆ, ಅ. 25ರ ವೇಳೆಗೆ ಈ ಸಂಖ್ಯೆ 24ಕ್ಕೇರಿದೆ. ಸೆಪ್ಟಂಬರ್‌ನಲ್ಲಿ ಒಟ್ಟು 12 ಪ್ರಕರಣ ಪತ್ತೆಯಾಗಿತ್ತು. ಪಾಸಿಟಿವ್ ಪ್ರಕರಣಗಳ ಪೈಕಿ ಬಹುತೇಕ ಮಂಗಳೂರಿನದ್ದಾಗಿವೆ. ಜಿಲ್ಲೆಯಲ್ಲಿ ಸಾಕಷ್ಟು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು, ಸದ್ಯ ಎಚ್1ಎನ್1 ನಿಯಂತ್ರಣದಲ್ಲಿದೆ ಎಂದು ಜಿಲ್ಲಾ ಆರೋಗ್ಯ ಅಧಿಕಾರಿ ಡಾ| ರಾಮಕೃಷ್ಣ ರಾವ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.