ಭಾಗಶಃ ಲಾಕ್‌ಡೌನ್‌ ಜಾರಿ; ಬಹುತೇಕ ಸೇವೆಗಳಲ್ಲಿ ವ್ಯತ್ಯಯ


Team Udayavani, Apr 23, 2021, 3:40 AM IST

ಭಾಗಶಃ ಲಾಕ್‌ಡೌನ್‌ ಜಾರಿ; ಬಹುತೇಕ ಸೇವೆಗಳಲ್ಲಿ  ವ್ಯತ್ಯಯ

ಮಹಾನಗರ: ಕೋವಿಡ್ ಎರಡನೇ ಅಲೆಯಿಂದ ಪಾರಾಗಲು ರಾಜ್ಯ ಸರಕಾರ ಜಾರಿಗೊಳಿಸಿರುವ 14 ದಿನಗಳ ಭಾಗಶಃ ಲಾಕ್‌ಡೌನ್‌ ಆರಂಭಗೊಂಡಿದ್ದು, ಗುರುವಾರದಿಂದ ಮಂಗಳೂರು ನಗರ ಮತ್ತು ಗ್ರಾಮಾಂತರ ಪ್ರದೇಶದಲ್ಲಿ  ಬಹುತೇಕ ಸೇವೆಗಳಲ್ಲಿ ವ್ಯತ್ಯಯ ಉಂಟಾಗಿದೆ.

ರಾಜ್ಯ ಸರಕಾರ ಹೊಸ ಮಾರ್ಗಸೂಚಿ ಯಂತೆ ಮೇ 4ರ ವರೆಗೆ ಪ್ರತೀ ದಿನ ರಾತ್ರಿ 9 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೆ ಮತ್ತು ವಾರಾಂತ್ಯ ಶುಕ್ರವಾರ ರಾತ್ರಿ 9 ಗಂಟೆಯಿಂದ ಸೋಮವಾರ ಬೆಳಗ್ಗೆ 6 ಗಂಟೆಯವರೆಗೆ ಕೊರೊನಾ ಕರ್ಫ್ಯೂ ಹೇರಲಾಗಿದೆ. ಈ ಹಿನ್ನೆಲೆಯಲ್ಲಿ ಕೆಲವೊಂದು ಕ್ಷೇತ್ರಗಳ ಸೇವೆಗಳಲ್ಲಿ ವ್ಯತ್ಯಯ ಉಂಟಾಗಿದೆ.

ಕರ್ಫ್ಯೂ ಪರಿಣಾಮಕಾರಿಯಾಗಿ ಜಾರಿಗೊಳಿಸುವ ನಿಟ್ಟಿನಲ್ಲಿ ಮಂಗಳೂರು ಕಮಿಷನರೆಟ್‌ ವ್ಯಾಪ್ತಿಯಲ್ಲಿ 45 ಹಾಗೂ ದ.ಕ. ಜಿಲ್ಲಾ ಪೊಲೀಸ್‌ ವ್ಯಾಪ್ತಿಯಲ್ಲಿ 30 ಸಹಿತ ಜಿಲ್ಲೆಯಾದ್ಯಂತ ಅಂತರ್‌ ರಾಜ್ಯ ಗಡಿ ಸಹಿತ ಒಟ್ಟು 75 ಕಡೆಗಳಲ್ಲಿ ಚೆಕ್‌ಪೋಸ್ಟ್‌ ಗಳನ್ನು ನಿರ್ಮಿಸಲಾಗಿದೆ.

ಭಾಗಶಃ ಲಾಕ್‌ಡೌನ್‌ ಪರಿಣಾಮ ಗುರುವಾರ ಬೆಳಗ್ಗೆ ನಗರದಲ್ಲಿ ಜನ ಜೀವನ, ವ್ಯಾಪಾರ ವಹಿವಾಟು ಎಂದಿಗಿಂತ ಕಡಿಮೆ ಇತ್ತು. ವಾಹನ ಸಂಚಾರ, ಸಾರ್ವಜನಿಕರ ಸಂಚಾರ ವಿರಳವಾಗಿತ್ತು. ಕೆಲವೊಂದು ಅಂಗಡಿಗಳು, ವಾಣಿಜ್ಯ ಸಂಕೀರ್ಣಗಳನ್ನು ಮುನ್ನೆಚ್ಚರಿಕೆ ಉದ್ದೇಶದಿಂದ ಬಂದ್‌ ಮಾಡಲಾಗಿತ್ತು. ಬಸ್‌ಗಳಲ್ಲಿ ಶೇ. 50ರಷ್ಟು ಮಂದಿಗೆ ಮಾತ್ರ ಅವಕಾಶ ಕಲ್ಪಿಸಲಾಗಿತ್ತು. ಆದರೆ ಬಹುತೇಕ ಬಸ್‌ಗಳಲ್ಲಿ ಪ್ರಯಾಣಿಕರು ಎಂದಿನಂತೆ ಸಂಚರಿಸಿದ್ದರು. ಅದೇ ರೀತಿ, ಹೊಟೇಲ್‌ಗ‌ಳಲ್ಲಿ ಪಾರ್ಸೆಲ್‌ಗೆ ಮಾತ್ರ ಅವಕಾಶ ಇತ್ತಾದರೂ ಕೆಲವೊಂದು ಹೊಟೇಲ್‌ಗ‌ಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಂಡು ಗ್ರಾಹಕರ ಸೇವೆಗೆ ತೆರೆದಿತ್ತು. ನಿರ್ಮಾಣ ಚಟುವಟಿಕೆ, ದುರಸ್ತಿ ಕಾರ್ಯ, ಪೂರ್ವ ಮುಂಗಾರು ಸಿದ್ಧತೆ ಕಾಮಗಾರಿಗಳು ನಡೆಯುತ್ತಿತ್ತು. ನ್ಯಾಯ ಬೆಲೆ ಅಂಗಡಿ, ಆಹಾರ, ಧವಸ ಧಾನ್ಯ, ಹಣ್ಣು, ತರಕಾರಿ, ಹಾಲಿನ ಉತ್ಪನ್ನ, ಮೀನು, ಮಾಂಸ, ಪಶು ಆಹಾರಗಳ ಮಳಿಗೆ, ಬ್ಯಾಂಕ್‌, ವಿಮಾ ಕಚೇರಿ, ಎಟಿಎಂ ಗ್ರಾಹಕರಿಗೆ ತೆರೆದಿತ್ತು.

ಮೂಲ್ಕಿ: ಧಾರ್ಮಿಕ ಕೇಂದ್ರಗಳಿಗೆ ಭಕ್ತರ ಪ್ರವೇಶಕ್ಕೆ ನಿರ್ಬಂಧ  :

ಮೂಲ್ಕಿ: ರಾಜ್ಯದೆಲ್ಲೆಡೆ ಧಾರ್ಮಿಕ ಸ್ಥಳಗಳಿಗೆ ಭಕ್ತರ ಪ್ರವೇಶಕ್ಕೆ ನಿರ್ಬಂಧ ಏರಿದ ಹಿನ್ನೆಲೆಯಲ್ಲಿ ಮೂಲ್ಕಿ ಪರಿಸರದ ಎಲ್ಲ ದೇವಸ್ಥಾನ, ಚರ್ಚ್‌ ಮತ್ತು ಮಸೀದಿಗಳಿಗೆ ಜಿಲ್ಲಾಧಿಕಾರಿಗಳ ಆದೇಶದಂತೆ ಭಕ್ತರ ಪ್ರವೇಶವನ್ನು ನಿರ್ಬಂಧಿಸಲಾಗಿದೆ.

ಬಪ್ಪನಾಡು ದೇವಸ್ಥಾನದಲ್ಲಿ ಮತ್ತು ಮೂಲ್ಕಿ ಶ್ರೀ ವೆಂಕಟರಮಣ ದೇಗುಲಗಳಲ್ಲಿ ಭಕ್ತರ ಪ್ರವೇಶಕ್ಕೆ ನಿರ್ಬಂಧಿಸಲಾಗಿದೆ. ವೆಂಕಟರಮಣ ದೇಗುಲದಲ್ಲಿ ವಾರ್ಷಿಕ ಜಾತ್ರೆಯನ್ನು ಜನಜಂಗುಳಿಯಿಲ್ಲದೇ ಸರಳವಾಗಿ ನಡೆಸಲಾಗಿದೆ. ಚರ್ಚ್‌, ಮಸೀದಿಗಳಲ್ಲಿ ಕೂಡ ಸಾಮೂಹಿಕ ಪ್ರಾರ್ಥನೆಗೆ ನಡೆಸದೇ ಸರಕಾರದ ಆದೇಶವನ್ನು ಪಾಲಿಸುವಂತೆ ಸೂಚಿಸಲಾಗಿದೆ.

ಮೂಲ್ಕಿ ಪೊಲೀಸರು ರಾತ್ರಿ 9 ಗಂಟೆ ಯಿಂದ ಬಪ್ಪನಾಡು ದೇಗುಲದ ಬಳಿಯಲ್ಲಿ ಚೆಕ್‌ಪೋಸ್ಟ್‌ ನಿರ್ಮಿಸಿ ವಾಹನಗಳ ತಪಾಸಣೆ ಹಾಗೂ ಸಂಚಾರವನ್ನು ನಿರ್ಬಂಧಿಸಿ ಕಟ್ಟು ನಿಟ್ಟಿನ ಕ್ರಮ ಕ್ರಮ ಕೈಗೊಳ್ಳಲಾಗಿದೆ.

ನಗರ ಪಂಚಾಯತ್‌ ಮುಖ್ಯಾಧಿಕಾರಿಗಳ ತಂಡ ಮಾಸ್ಕ್ ಜಾಗೃತಿ ಮೂಡಿಸಲಾಗುತ್ತಿದೆ. ಕಾರ್ನಾಡು ಸದಾಶಿವ ನಗರ ಮತ್ತು ಬಿಜಾ ಪುರ ಕಾಲನಿಯ ಪ್ರದೇಶಗಳಲ್ಲಿ ವಿಶೇಷವಾಗಿ ಮಾಸ್ಕ್ ಧರಿಸುವ ಮಾಹಿತಿ ನಡೆಸಲಾಗಿದೆ.

ಮಾಸ್ಕ್ ದಂಡ :

ಬುಧವಾರದಿಂದ ಸಾರ್ವಜನಿಕರಿಂದ ಸುಮಾರು 1,800 ರೂ. ಮೊತ್ತವನ್ನು ದಂಡವಾಗಿ ಸಂಗ್ರಹಿಸಲಾಗಿದೆ. ಶುಕ್ರ ವಾರ ರಾತ್ರಿಯಿಂದ ಸೋಮವಾರ ಮುಂಜಾನೆಯ ತನಕ ಇರುವ ವೀಕೆಂಡ್‌ ಕರ್ಫ್ಯೂಗೆ ಸಾರ್ವಜನಿಕರು ತಯಾರಿ ಇರಬೇಕು ಹಾಗೂ ಅಂಗಡಿ ಮಂಗಟ್ಟುಗಳು ವಹಿಸಬೇಕಾದ ಕ್ರಮಗಳ ಬಗ್ಗೆ ಮನವರಿಕೆ ಮಾಡಲಾಗಿದೆ.

ಕೋವಿಡ್‌ ಕಟ್ಟೆಚ್ಚರ   :

ಹಳೆಯಂಗಡಿ: ರಾಜ್ಯದಲ್ಲಿ ನೂತನ ಕೋವಿಡ್‌ ಕಾನೂನನ್ನು ಜಾರಿ ಮಾಡಿ ರುವುದರಿಂದ ಇಲ್ಲಿನ ಹಳೆಯಂಗಡಿ ಮತ್ತು ಪಡುಪಣಂಬೂರು ಗ್ರಾ.ಪಂ. ವ್ಯಾಪ್ತಿಯಲ್ಲಿ ನಾಗರಿಕರು ಸ್ಪಂದಿಸಿದ್ದು, ದೇಗುಲದ ವಠಾರ ಭಕ್ತರಿಲ್ಲದೇ ಬಿಕೋ ಎನ್ನುತ್ತಿದ್ದವು.

ಸಸಿಹಿತ್ಲು ಶ್ರೀ ಭಗವತೀ ಕ್ಷೇತ್ರ, ಪಡು ಪಣಂಬೂರು ಹೊಗೆಗುಡ್ಡೆಯ ಎರಡು ದೇವಸ್ಥಾನ, ತೋಕೂರು ಶ್ರೀ ಸುಬ್ರಹ್ಮಣ್ಯ ಮಾಹಾಗಣಪತಿ ದೇವಸ್ಥಾನ ಹಾಗೂ ಪಾವಂಜೆಯಲ್ಲಿ ಒಂದೇ ವಠಾರದಲ್ಲಿರುವ ಶ್ರೀ ಮಹಾಗಲಿಂಗೇಶ್ವರ ಮಹಾಗಣಪತಿ ದೇವಸ್ಥಾನ, ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ, ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯಸ್ವಾಮೀ ದೇವಸ್ಥಾನಕ್ಕೆ ಭಕ್ತರಿಗೆ ಸಂಪೂರ್ಣವಾಗಿ ಪ್ರವೇಶ ನಿರಾಕರಿಸಿದ್ದರಿಂದ ದೇಗುಲದ ವಠಾರದ ಸುತ್ತಮುತ್ತ ಜನಸಂಚಾರವೇ ಇರಲಿಲ್ಲ. ಹಳೆಯಂಗಡಿ ಮಾರುಕಟ್ಟೆಯಲ್ಲಿ ಗ್ರಾಹಕರು ದಿನಸಿ ಮತ್ತಿತರ ವಸ್ತುಗಳನ್ನು ಖರೀದಿಸುವ ಭರಾಟೆ ಹೆಚ್ಚಾಗಿತ್ತು. ಯಾವಾಗ ಲಾಕ್‌ಡೌನ್‌ ಆಗುತ್ತೆಯೋ ಗೊತ್ತಿಲ್ಲ ಎಂಬ ಆತಂಕದಲ್ಲಿಯೇ ಖರೀದಿ ನಡೆಸಿದ್ದರು.

ಗ್ರಾ.ಪಂ. ಕಚೇರಿಯಲ್ಲಿ ಮದುವೆ ಮತ್ತಿತರ ಶುಭ ಕಾರ್ಯಕ್ರಮಕ್ಕೆ ಅನುಮತಿ ಪಡೆಯಲು ನಾಗರಿಕರು ಭೇಟಿ ನೀಡುವವರ ಸಂಖ್ಯೆಯೂ ಸಹ ಹೆಚ್ಚಾಗಿತ್ತು. ಬ್ಯಾಂಕ್‌, ಸೊಸೈಟಿ, ಅಂಚೆ ಕಚೇರಿಗಳು ಎಂದಿನಂತೆ ತೆರೆದಿದ್ದವು, ಸಂಚಾರದ ವ್ಯವಸ್ಥೆಗೂ ಯಾವುದೇ ಅಡ್ಡಿಯಾಗಿಲ್ಲ, ಖಾಸಗಿ ಬಸ್ಸುಗಳನ್ನು ಪ್ರಯಾಣಿಕರ ಕೊರತೆ ಎದ್ದು ಕಾಡುತ್ತಿತ್ತು.  ಕೆಮ್ರಾಲ್‌ ಆರೋಗ್ಯ ಕೇಂದ್ರದ ಆರೋಗ್ಯ ಕಾರ್ಯಕರ್ತರು, ಆಶಾ ಕಾರ್ಯಕರ್ತರು ಮನೆ ಮನೆಗೆ ಭೇಟಿ ನೀಡಿ ಕೋವಿಡ್‌ನ‌ ಎಚ್ಚರಿಕೆ ಹಾಗೂ ಮಾಹಿತಿಯನ್ನು ಸಂಗ್ರಹಿಸಿದರು.

ಮೂಡುಬಿದಿರೆ: ಶುಕ್ರವಾರದ ಸಂತೆಯ ಸ್ಥಿತಿ ಅನಿಶ್ಚಿತ   :

ಮೂಡುಬಿದಿರೆ: ಕೋವಿಡ್‌ ಪ್ರತಿಬಂಧಕ ಕ್ರಮಗಳನ್ವಯ ಮೂಡುಬಿದಿರೆ ತಾಲೂಕಿನಲ್ಲಿ ಏನೇನು ತೆರೆದಿರುತ್ತವೆ, ಅವಧಿ ಹೇಗಿರುತ್ತದೆ ಎಂಬುದರ ಬಗ್ಗೆ ಜನತೆ ಗೊಂದಲದಲ್ಲಿರುವಂತೆ ಕಂಡಿದೆ.

ಶುಕ್ರವಾರದಿಂದ ಆಹಾರ ಮತ್ತು ಅವಶ್ಯಕ ಸೇವೆಗಳನ್ನು ಹೊರತುಪಡಿಸಿ ಎಲ್ಲ ವಾಣಿಜ್ಯ ಚಟುವಟಿಕೆಗಳು ಬಂದ್‌ ಆಗಲಿವೆ ಎಂದು ಹೇಳಲಾಗುತ್ತಿದೆಯಾದರೂ ಯಾವುದೆಲ್ಲ ತೆರೆದಿರುತ್ತವೆ ಎಂಬುದರ ಬಗ್ಗೆ ಸಾರ್ವಜನಿಕರಿಗೆ ಸೂಚನೆ ಲಭಿಸುತ್ತಿಲ್ಲ. ವದಂತಿಗಳು ಜನರಲ್ಲಿ ಕಳವಳ ಹುಟ್ಟಿಸುವಂತಿವೆ.

ಬುಧವಾರ, ಗುರುವಾರದಿಂದಲೇ ಮೂಡುಬಿದಿರೆಯಲ್ಲಿ ಓಡಾಡುತ್ತಿರುವ ಜನರ ಸಂಖ್ಯೆಯಲ್ಲಿ ಇಳಿಮುಖವಾಗುತ್ತಿದ್ದು ಬಸ್‌, ವ್ಯಾಪಾರ ಕೇಂದ್ರಗಳಲ್ಲಿ ಜನರ ಒತ್ತಡದ ಪ್ರಮಾಣ ಕಡಿಮೆ ಇತ್ತು.

ಶುಕ್ರವಾರ ಮೂಡುಬಿದಿರೆಯಲ್ಲಿ ವಾರದ ಸಂತೆಯ ದಿನ. ಹೊರ ಜಿಲ್ಲೆಗಳಿಂದ ವ್ಯಾಪಾರಿಗಳು ಬರುವರೋ ಇಲ್ಲವೋ ಎಂಬುದು ಅನುಮಾನಾಸ್ಪದವಾಗಿ ಉಳಿದಿದ್ದು ಶುಕ್ರವಾರ ಸಂತೆ ತೆರೆದುಕೊಂಡ ಬಳಿಕವಷ್ಟೇ ಸ್ಪಷ್ಟ ಚಿತ್ರಣ ಸಿಗಬಹುದಾಗಿದೆ.

ರದ್ದುಗೊಂಡ ಜಾತ್ರೆ, ನೇಮ :

ಕಿನ್ನಿಗೋಳಿ: ಕೋವಿಡ್  ಮುಂಜಾಗ್ರತೆ ಕ್ರಮವಾಗಿ ಕಿನ್ನಿಗೋಳಿ, ಮೆನ್ನಬೆಟ್ಟು, ಕಟೀಲು, ಕೆಮ್ರಾಲ್‌ ಗ್ರಾ.ಪಂ. ಮಟ್ಟದಲ್ಲಿ ಅಧಿಕಾರಿಗಳು ಸರಕಾರದ ನೂತನ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಿನಲ್ಲಿ ಜಾರಿಗೊಳಿಸಲು ಮುಂದಾಗಿರುವುದು ಕಂಡುಬಂತು.

ಎಳತ್ತೂರು ಹಾಗೂ ಸುರಗಿರಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರೆ ಸಹಿತ ಹಲವು ಗ್ರಾಮಗಳ ದೈವ ನೇಮಗಳಿಗೆ ಮೂಲ್ಕಿ ತಹಶೀಲ್ದಾರ್‌ ಮೂಲಕವಾಗಿ ನೋಟಿಸ್‌ ಜಾರಿ ಮಾಡಲಾಗಿದೆ. ಕೇವಲ ಪೂಜೆ ಮಾತ್ರ ಅವಕಾಶ ಮಾಡಲಾಗಿದೆ. ಭಕ್ತರ ಪ್ರವೇಶಕ್ಕೆ ನಿರ್ಬಂಧಿಸಲಾಗಿದೆ. ಎಳತ್ತೂರು , ಕೆಮ್ರಾಲ್‌ ಎರಡು ದೇವಸ್ಥಾನದಲ್ಲಿ ಕಳೆದ ವರ್ಷವು ಜಾತ್ರೆ ಸಾಂಕೇತಿಕವಾಗಿ ನಡೆದಿದ್ದು ಈ ವರ್ಷವು ಅದೇ ಪರಿಸ್ಥಿತಿ ಮುಂದುವರಿದೆ. ಕಿನ್ನಿಗೋಳಿ, ಕಟೀಲು ಪೇಟೆಯಲ್ಲಿ ರಾತ್ರಿ 9 ಗಂಟೆಗೆ ಬಳಿಕ ಕರ್ಫ್ಯೂ ವಿಧಿಸಿರುವುದರಿಂದ ಅಂಗಡಿ ಮುಂಗಟ್ಟುಗಳು 8 ಗಂಟೆಗೆ ಮುಚ್ಚಲಾಗಿತ್ತು.

ಟಾಪ್ ನ್ಯೂಸ್

K L RAhul

KL Rahul; ಗಾಯದ ಚಿಂತೆ ನಿವಾರಿಸಲು ನೆಟ್‌ನಲ್ಲಿ ಬ್ಯಾಟಿಂಗ್: ಬ್ಯಾಕ್-ಅಪ್ ಆಗಿ ಪಡಿಕ್ಕಲ್

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಪಿಕ್ಸ್

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಫಿಕ್ಸ್

1-wewrewre

The Sabarmati Report ;ಸಿನಿಮಾವಾಗಿ ಗೋಧ್ರಾ ದುರಂತ: ಸತ್ಯ ಹೊರಬರುತ್ತಿದೆ ಎಂದ ಪ್ರಧಾನಿ

BBK11: ಬಿಗ್‌ ಬಾಸ್‌ ಮನೆಗೆ ವೈಲ್ಡ್‌ ಕಾರ್ಡ್ ಸ್ಪರ್ಧಿ; ಅಬ್ಬರಿಸುತ್ತಲೇ ದೊಡ್ಮನೆಗೆ ಎಂಟ್ರಿ

BBK11: ಬಿಗ್‌ ಬಾಸ್‌ ಮನೆಗೆ ವೈಲ್ಡ್‌ ಕಾರ್ಡ್ ಸ್ಪರ್ಧಿ; ಅಬ್ಬರಿಸುತ್ತಲೇ ದೊಡ್ಮನೆಗೆ ಎಂಟ್ರಿ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…

Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3

Mangaluru: ಅನಧಿಕೃತ ಫ್ಲೆಕ್ಸ್‌ , ಬ್ಯಾನರ್‌ ತೆರವು ಆರಂಭ

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾವು!

Ullala: ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾವು!

1-maralu

Mangaluru;ಅಕ್ರಮ ಮರಳುಗಾರಿಕೆ ಅಡ್ಡೆಗೆ ಗಣಿ ಇಲಾಖೆ ದಾಳಿ: 5 ದೋಣಿ ವಶಕ್ಕೆ

Mangaluru: Kumaraswamy will turn whenever, however: Jameer Ahmed

Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್‌ ಅಹಮದ್‌

13-notes-1

Mangaluru: ನೋಟು ಬ್ಯಾನ್‌ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

K L RAhul

KL Rahul; ಗಾಯದ ಚಿಂತೆ ನಿವಾರಿಸಲು ನೆಟ್‌ನಲ್ಲಿ ಬ್ಯಾಟಿಂಗ್: ಬ್ಯಾಕ್-ಅಪ್ ಆಗಿ ಪಡಿಕ್ಕಲ್

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಪಿಕ್ಸ್

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಫಿಕ್ಸ್

1-wewrewre

The Sabarmati Report ;ಸಿನಿಮಾವಾಗಿ ಗೋಧ್ರಾ ದುರಂತ: ಸತ್ಯ ಹೊರಬರುತ್ತಿದೆ ಎಂದ ಪ್ರಧಾನಿ

Kinnal raj; ʼಸಿಂಹರೂಪಿಣಿʼಗೆ 25ರ ಸಂಭ್ರಮ

Kinnal raj; ʼಸಿಂಹರೂಪಿಣಿʼಗೆ 25ರ ಸಂಭ್ರಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.