ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರಿಗೆ ಬೆದರಿಕೆ ಪ್ರಕರಣ: ಸಿಐಡಿ ತನಿಖೆಗೆ ಒಪ್ಪಿಸಿದ ಸರಕಾರ
Team Udayavani, Oct 18, 2022, 8:45 AM IST
ಮಂಗಳೂರು : ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರ ಕಾರನ್ನು ಬೆನ್ನತ್ತಿ ಅಡ್ಡಗಟ್ಟಿ ಮಾರಕಾಯುಧ ತೋರಿಸಿ ಬೆದರಿಕೆಯೊಡ್ಡಿರುವ ಪ್ರಕರಣವನ್ನು ಸರಕಾರ ಸಿಐಡಿ ತನಿಖೆಗೆ ಒಪ್ಪಿಸಿದೆ.
ಪ್ರಸ್ತುತ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ದಾಖಲಾಗಿರುವ ದೂರನ್ನು ತತ್‌ಕ್ಷಣದಿಂದ ಅನ್ವಯವಾಗುವಂತೆ ಸಿಐಡಿಗೆ ವರ್ಗಾವಣೆ ಮಾಡಲಾಗಿದೆ. ಪ್ರಸ್ತುತ ತನಿಖಾಧಿಕಾರಿಯಲ್ಲಿರುವ ದಾಖಲೆಗಳನ್ನು ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಸಿಐಡಿ ತನಿಖಾ ಕಚೇರಿಗೆ ಹಸ್ತಾಂತರಿಸಬೇಕು ಎಂದು ರಾಜ್ಯ ಡಿಜಿಪಿಯವರ ಪರವಾಗಿ ಆರ್. ಹಿತೇಂದ್ರ ಅವರು ಆದೇಶದಲ್ಲಿ ತಿಳಿಸಿದ್ದಾರೆ.
ಹರೀಶ್ ಪೂಂಜಾ ಅವರು ಅ. 13ರಂದು ರಾತ್ರಿ ಬೆಂಗಳೂರಿನಿಂದ ಮಂಗಳೂರಿಗೆ ವಿಮಾನದ ಮೂಲಕ ಬಂದು ಬೆಳ್ತಂಗಡಿಗೆ ಕಾರಿನಲ್ಲಿ ತೆರಳುವ ವೇಳೆ 11.15ರ ಸಮಯ ಅವರ ಕಾರನ್ನು ದುಷ್ಕರ್ಮಿಗಳು ಫರಂಗಿಪೇಟೆ ಬಳಿ ಅಡ್ಡಹಾಕಿ ನಿಂದಿಸಿದ್ದರು. ಅಲ್ಲದೆ ಆರೋಪಿ ಮಾರಕಾಸ್ತ್ರ ತೋರಿಸಿ ಜೀವ ಬೆದರಿಕೆಯೊಡ್ಡಿದ್ದ ಎಂದು ಆರೋಪಿಸಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿ
ಪೊಲೀಸರು ಫಳ್ನೀರಿನ ರಿಯಾಜ್‌ನನ್ನು ಬಂಧಿಸಿದ್ದರು.
ಇದನ್ನೂ ಓದಿ : ದಿಂಡಿ ಯಾತ್ರೆಯ ಭಕ್ತರರಿಗೆ ಪ್ರಸಾದ ಸೇವೆ ಸಲ್ಲಿಸಿ ಧನ್ಯತೆ ಮೆರೆದ ಮುಸ್ಲಿಂ ವ್ಯಕ್ತಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ullal: ಎಂಡಿಎಂಎ ಸಾಗಾಟ: ಮೂವರ ಬಂಧನ
Congress: ದ.ಕ ಗ್ರಾಮ ಪಂಚಾಯತ್; 24ರಲ್ಲಿ 19 ಸ್ಥಾನ ಕಾಂಗ್ರೆಸ್ ಬೆಂಬಲಿತರಿಗೆ ಗೆಲುವು
Moodabidri: ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕ ಪಿ.ನೇಮಿರಾಜ ಹೆಗ್ಡೆ ನಿಧನ
ಅಡಿಕೆ ಬೆಳೆಗಾರರ ಜೀವನಕ್ಕೆ ಆಘಾತವಿಕ್ಕಿದ ಡಬ್ಲ್ಯೂಎಚ್‌ಒ ವಿರುದ್ಧ ಕ್ರಮಕ್ಕೆ ಒತ್ತಾಯ
Mangaluru: ಭಾರತ ಬಲಿಷ್ಠವಾಗಲು ಕೌಶಲಯುತ ಶಿಕ್ಷಣ ಅಗತ್ಯ: ಡಾ| ನಿರ್ಮಲಾನಂದನಾಥ ಸ್ವಾಮೀಜಿ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.