ಹರೀಶ್ ಪೂಂಜ ಮೇಲಿನ ಪ್ರಕರಣ ಕೈಬಿಡಲು ಮನವಿ
Team Udayavani, Jul 20, 2017, 5:55 AM IST
ಬೆಳ್ತಂಗಡಿ: ಯುವ ನಾಯಕ, ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಹರೀಶ್ ಪೂಂಜ ಅವರ ಮೇಲೆ ದಾಖಲಿಸಿರುವ ಸುಳ್ಳು ಮೊಕದ್ದಮೆಯನ್ನು ಹಿಂಪಡೆಯಬೇಕೆಂದು ತಹಶೀಲ್ದಾರರ ಮುಖಾಂತರ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.
ಶ್ರೀ ವೀರಾಂಜನೇಯ ಸೇವಾ ಸಮಿತಿ ಬೆಳ್ತಂಗಡಿ, ವಿಶ್ವ ಹಿಂದೂ ಪರಿಷತ್, ಬಜರಂಗದಳ, ಸಾರ್ವಜನಿಕ ಗಣೇಶೋತ್ಸವ ಸಮಿತಿ ಕಲ್ಮಂಜ, ಹರೀಶ್ ಪೂಂಜ ಅಭಿಮಾನಿ ಬಳಗ ಕಲ್ಮಂಜ, ಕೊಕ್ಕಡ, ಪಡಂಗಡಿ, ಜೈಶ್ರೀರಾಮ್ ಫ್ರೆಂಡ್ಸ್ ಪಡಂಗಡಿ ಸೇವಾ ಸಂಸ್ಥೆಗಳ ಮೂಲಕ ಈ ಮನವಿ ಸಲ್ಲಿಸಲಾಯಿತು. ಅಲ್ಲದೆ ಇನ್ನಿತರ ಹಿಂದೂ ಮುಖಂಡರ ಮೇಲೆ ಸುಳ್ಳು ಮೊಕದ್ದಮೆಯನ್ನು ದಾಖಲಿಸಿ ಅನಾವಶ್ಯಕ ತೊಂದರೆ ನೀಡುವುದನ್ನು ಖಂಡಿಸುತ್ತೇವೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.