ಸರ್ವಜನಾಂಗದ ಶಾಂತಿಯ ತೋಟವನ್ನಾಗಿಸುವೆ: ಎಚ್‌ಡಿಕೆ

Team Udayavani, May 8, 2023, 7:50 AM IST

ಸರ್ವಜನಾಂಗದ ಶಾಂತಿಯ ತೋಟವನ್ನಾಗಿಸುವೆ: ಎಚ್‌ಡಿಕೆ

ಸುರತ್ಕಲ್‌: ಕಾಂಗ್ರೆಸ್‌ ಪಕ್ಷ 70 ವರ್ಷದಿಂದ ಮುಸ್ಲಿಂ ಸಮುದಾಯವನ್ನು ಮತ ಬ್ಯಾಂಕ್‌ ಆಗಿ ಬಳಸಿಕೊಂಡಿತೇ ಹೊರತು ಯಾವುದೇ ಸೌಲಭ್ಯ ಕೊಡಲಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಟೀಕಿಸಿದರು.

ಕೃಷ್ಣಾಪುರದಲ್ಲಿ ಜೆಡಿಎಸ್‌ ಅಭ್ಯರ್ಥಿ ಮೊದಿನ್‌ ಬಾವಾ ಪರವಾಗಿ ಆಯೋಜಿಸಲಾದ ಬೃಹತ್‌ ಸಮಾ ವೇಶದಲ್ಲಿ ಮಾತನಾಡಿದ ಅವರು, ಜೆಡಿಎಸ್‌ಗೆ ಮತಹಾಕಿದರೆ ಬಿಜೆಪಿಗೆ ಮತಹಾಕಿದಂತೆ ಎಂದು ಹೇಳುವ ಕಾಂಗ್ರೆಸ್‌ ಪಕ್ಷವು ಇದೀಗ ಬಿಜೆಪಿ ಬಿಟ್ಟು ಬಂದ ಕಟ್ಟರ್‌ ಹಿಂದುತ್ವವಾದಿ ನಾಯಕರನ್ನು ಸೇರಿಸಿಕೊಂಡಿದೆ ಎಂದು ಹೇಳಿದರು.

ದಕ್ಷಿಣ ಕನ್ನಡದಲ್ಲಿ ಇಂದು ನೆಮ್ಮದಿಯ ಬದುಕು ಕಾಣಬೇಕಿದೆ. ವಾಣಿಜ್ಯ ಕ್ಷೇತ್ರದಲ್ಲಿ ಹೆಚ್ಚಿನ ಕೊಡುಗೆ ನೀಡುವುದು ಇದೇ ಜಿಲ್ಲೆ. ಹಾಗಾಗಿ ಇಲ್ಲಿನ ಆರ್ಥಿಕ ಶಕ್ತಿಯನ್ನು ಸರಿಯಾಗಿ ಬಳಸಿದರೆ ಮಾದರಿ ಜಿಲ್ಲೆಯನ್ನಾಗಿ ಮಾಡಬಹುದಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.

ಎರಡು ರಾಷ್ಟ್ರೀಯ ಪಕ್ಷಗಳು ತಮ್ಮ ಲಾಭಕ್ಕಾಗಿ ಅಮಾಯಕ ಯುವಕರನ್ನು ಬಳಸಿಕೊಂಡು, ಧರ್ಮದ ಹೆಸರಿನಲ್ಲಿ ದಾರಿ ತಪ್ಪಿಸಿ ಜೀವ ಕಳೆದುಕೊಳ್ಳುವಂಥ ಪರಿಸ್ಥಿತಿ ನಿರ್ಮಿಸುತ್ತಿದ್ದಾರೆ. ಹಲಾಲ್‌ ಕಟ್‌, ಹಿಜಾಬ್‌ ಸಮಸ್ಯೆಗಳನ್ನು ದೊಡ್ಡದು ಮಾಡಿ ಕಂದರ ಸೃಷ್ಟಿಸಲಾಯಿತು. ದ್ವೇಷದ ವಾತಾವರಣ ಉಂಟುಮಾಡಲಾಯಿತು. ಬಿಲ್ಲವ ನಿಗಮ ಮಾಡಿ ಚುನಾವಣೆಗಾಗಿ ಸೆಳೆಯುವ ಪ್ರಯತ್ನ ನಡೆಸಲಾಯಿತು ಎಂದು ಕುಮಾರಸ್ವಾಮಿ ಆಪಾದಿಸಿದರು.

ದ.ಕ. ವಿಜಯ ಬ್ಯಾಂಕ್‌, ಸಿಂಡಿಕೇಟ್‌, ಕಾರ್ಪೊ ರೇಷನ್‌ ಬ್ಯಾಂಕ್‌ಗಳನ್ನು ವಿಲೀನ ಮಾಡಿ ಇಲ್ಲಿನ ಐತಿಹಾಸಿಕ ಕುರುಹು ನಾಶಮಾಡಿದ್ದೇ ಬಿಜೆಪಿಯ ಕೊಡುಗೆ ಎಂದರಲ್ಲದೇ, ಜಿಲ್ಲೆಯಲ್ಲಿ ಪ್ರವಾಸೋದ್ಯಮ ಆಧರಿತ ಅಭಿವೃದ್ಧಿ, ಕೈಗಾರಿಕೆಗಳ ಸ್ಥಾಪನೆ ಇತ್ಯಾದಿ ಅಭಿವೃದ್ಧಿಗೆ ಅವಕಾಶವಿದ್ದು, ಅಶಾಂತಿಯ ಕಾರಣದಿಂದ ಸಾಧ್ಯವಾಗುತ್ತಿಲ್ಲ. ಈ ಬಾರಿ ಜೆಡಿಎಸ್‌ ಅಧಿಕಾರಕ್ಕೆ ಬರುವುದು ನಿಶ್ಚಿತ. ಸರ್ವ ಜನಾಂಗದ ಶಾಂತಿಯ ತೋಟವನ್ನು ಸ್ಥಾಪಿಸಲು ಜೆಡಿಎಸ್‌ ಬದ್ಧ. ಮೊದಿನ್‌ ಬಾವಾ ಅವರನ್ನು ಗೆಲ್ಲಿಸುವ ಮೂಲಕ ಜಿಲ್ಲೆಯ ಚಿತ್ರಣ ಬದಲಾಯಿಸಲು ನಾಂದಿ ಹಾಡಬೇಕೆಂದು ಅವರು ಕರೆ ನೀಡಿದರು.

ಜೆಡಿಎಸ್‌ ಕಾರ್ಯಾಧ್ಯಕ್ಷ ಬಿ.ಎಂ. ಫಾರೂಕ್‌ ಮಾತನಾಡಿ, ಕಾಂಗ್ರೆಸ್‌ ಪಕ್ಷವು ಅಹಂಕಾರದಿಂದ ನಡೆದುಕೊಂಡಾಗಲೆಲ್ಲಾ ಮಂಗಳೂರು ಉತ್ತರದಲ್ಲಿ ಜೆಡಿಎಸ್‌ ಪಕ್ಷವನ್ನು ಮತದಾರ ಆಯ್ಕೆ ಮಾಡಿದ್ದಾನೆ. ಈ ಬಾರಿ ಮತ್ತೆ ಕಾಂಗ್ರೆಸ್‌ ಅದೇ ರೀತಿ ನಡೆದುಕೊಂಡಿದ್ದು, ಬಾವಾ ಅವರಿಗೆ ಟಿಕೆಟ್‌ ನಿರಾಕರಿಸಿದ್ದು ಮತ್ತೆ ಜೆಡಿಎಸ್‌ ಜಯಗಳಿಸಲಿದೆ. ಕರಾವಳಿಯಲ್ಲಿ ಪಕ್ಷವು ಖಾತೆ ತೆರೆಯಬೇಕು ಎಂಬ ಕುಮಾರಸ್ವಾಮಿ ಅವರ ಕನಸು ನನಸಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ವೇದಿಕೆಯಲ್ಲಿ ಸರ್ವಧರ್ಮಗಳ ಬೆಸುಗೆಯಾಗಿ ಬ್ರಹ್ಮಶ್ರೀ ನಾರಾಯಣಗುರುಗಳ ಭಜನ್‌ ಹಾಗೂ ಮುಸ್ಲಿಂ ಸಮುದಾಯದ ಪ್ರಾರ್ಥನೆ ನೆರವೇರಿಸಲಾಯಿತು.
ವೇದಿಕೆಯಲ್ಲಿ ಜೆಡಿಎಸ್‌ ನಾಯಕರಾದ ಮೊಹಮ್ಮದ್‌ ಕುಂನಿ, ಎಂ.ಬಿ ಸದಾಶಿವ, ಜೆಡಿಎಸ್‌ ಅಭ್ಯರ್ಥಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

train-track

Mangaluru;ಹಳಿ ನಿರ್ವಹಣೆ: ರೈಲು ಸೇವೆ ವ್ಯತ್ಯಯ

dw

Surathkal: ವ್ಯಕ್ತಿಯ ಮೃತದೇಹ ಪತ್ತೆ

death

Kinnigoli: ಔಷಧ ಸಿಂಪಡಿಸುವಾಗ ಕುಸಿದು ಬಿದ್ದು ಕೃಷಿಕ ಸಾವು

11

Mangaluru: ಗಾಂಜಾ ಮಾರಾಟ; ಇಬ್ಬರ ಬಂಧನ

2

Mulki: ಗಾಂಜಾ ಮಾರಾಟ ಯತ್ನ; ಇಬ್ಬರ ಬಂಧನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

puttige-2

Udupi; ಗೀತಾರ್ಥ ಚಿಂತನೆ 145: ವೇದಪ್ರಾಮಾಣ್ಯದ ಚರ್ಚೆ

crime

Kasaragod: ಘರ್ಷಣೆಯಿಂದ ಮೂವರಿಗೆ ಗಾಯ

1-weewq

Baindur: ಬಟ್ಟೆ ವ್ಯಾಪಾರಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.