ಕರಾವಳಿ ಫಾರ್ಮಸಿ ಕಾಲೇಜಿನಿಂದ ಆರೋಗ್ಯ ಜನ ಜಾಗೃತಿ ಜಾಥಾ
Team Udayavani, Nov 18, 2017, 11:19 AM IST
ಮಹಾನಗರ: ಉತ್ತಮ ಆರೋಗ್ಯಕಾಗಿ ಆರೋಗ್ಯ ಸಂರಕ್ಷಣೆಯ ಸೂತ್ರಗಳನ್ನು ಪರಿಪಾಲಿಸಬೇಕು. ಕೇವಲ ದೈಹಿಕ ಸ್ಥಿತಿ ಉತ್ತಮವಾಗಿರುವುದನ್ನು ಮಾತ್ರ ಆರೋಗ್ಯವೆಂದು ಭಾವಿಸುವುದು ತಪ್ಪು. ದೈಹಿಕವಾಗಿ ಸದೃಢವಾಗಬೇಕಾದರೆ ಮಾನಸಿಕ ಮತ್ತು ಬೌದ್ಧಿಕವಾಗಿ ಆರೋಗ್ಯದಿಂದಿರುವುದು ಮುಖ್ಯ ಎಂದು ಕರಾವಳಿ ಕಾಲೇಜುಗಳ ಸಮೂಹದ ಆಡಳಿತ ಮಂಡಳಿ ಹಾಗೂ ಜಿ. ಆರ್. ಎಜುಕೇಶನ್ ಟ್ರಸ್ಟ್ ಸ್ಥಾಪಕಾಧ್ಯಕ್ಷ ಎಸ್. ಗಣೇಶ್ ರಾವ್ ಹೇಳಿದರು.
ಅವರು ನಗರದ ಕರಾವಳಿ ಫಾರ್ಮಸಿ ಕಾಲೇಜಿನಲ್ಲಿ ಹಮ್ಮಿಕೊಂಡಿರುವ ರಾಷ್ಟ್ರೀಯ ಫಾರ್ಮಸಿ ಸಪ್ತಾಹದ ಅಂಗವಾಗಿ ಮಂಗಳೂರಿನ ಜ್ಯೋತಿ ವೃತ್ತದಿಂದ ನೆಹರೂ ಮೈದಾನದ ತನಕ ಏರ್ಪಡಿಸಲಾದ ಆರೋಗ್ಯ ಜನ ಜಾಗೃತಿ ಜಾಥಾವನ್ನು ಉದ್ಘಾಟಿಸಿ ಮಾತನಾಡಿದರು.
ಪ್ರತಿಯೊಬ್ಬರೂ ವೈಯಕ್ತಿಕ ಆರೋಗ್ಯದ ಕಡೆಗೆ ಗಮನ ಹರಿಸುವುದರ ಜತೆಗೆ ಸಾರ್ವತ್ರಿಕ, ಸಾಮಾಜಿಕ ಆರೋಗ್ಯದ ಕಡೆಗೂ ಗಮನಹರಿಸಬೇಕು. ಅನೇಕ ಉತ್ತಮ ಯೋಜನೆಗಳ ಬಗ್ಗೆ ಸರಿಯಾದ ಮಾಹಿತಿ, ತಿಳಿವಳಿಕೆ ಪಡೆದುಕೊಂಡು ಅದನ್ನು ಸದ್ಬಳಕೆ ಮಾಡಿಕೊಳ್ಳಬೇಕು. ಜತೆಗೆ ಔಷಧಗಳ ಬಗ್ಗೆಯೂ ಮಾಹಿತಿ ಪಡೆದು ಕೊಂಡಿರಬೇಕು ಎಂದು ಹೇಳಿದರು. ಫಾರ್ಮಸಿ ಕಾಲೇಜಿನ ಪ್ರಾಂಶುಪಾಲ ಡಾ| ನಾರಾಯಣ ಸ್ವಾಮಿ ಉಪಸ್ಥಿತರಿದ್ದರು. ಶಬ್ನಮ್ ಸ್ವಾಗತಿಸಿದರು. ಸಲ್ಮಾನ್ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಮಹಾಕಾಳಿಪಡ್ಪು ರೈಲ್ವೇ ಅಂಡರ್ಪಾಸ್; ಕುಂಟುತ್ತಿರುವ ಕಾಮಗಾರಿಗೆ ಬೇಕಿದೆ ವೇಗ
Manmohan Singh: ನವಭಾರತದ ಚಾಣಕ್ಯ ಅಸ್ತಂಗತ: ದೇಶಕ್ಕೆ ತುಂಬಲಾರದ ನಷ್ಟ: ಯು.ಟಿ. ಖಾದರ್
Mangaluru: ಅಪಾರ್ಟ್ಮೆಂಟ್, ಮಾಲ್ಗಳಲ್ಲಿ ತ್ಯಾಜ್ಯ ಸಂಸ್ಕರಣೆ ಕಡ್ಡಾಯ
Mangaluru: ನಗರದಲ್ಲಿ ತೆರೆದುಕೊಂಡ ಗ್ರಾಮೀಣ ಬದುಕು
Kulur: ಗೈಲ್ ಪೈಪ್ಲೈನ್ ಕಾಮಗಾರಿ; ಹೆದ್ದಾರಿ ಕುಸಿತ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.