ಭಾರಿ ಮಳೆ : ಮಾಳ ಘಾಟಿಯಲ್ಲಿ ಹೆದ್ದಾರಿ ಬದಿ ಕುಸಿತ, ಸೀತಾನದಿಯಲ್ಲಿ ಕೆಸರು ಮಿಶ್ರಿತ ನೀರು
Team Udayavani, Sep 12, 2022, 11:03 AM IST
ಮಂಗಳೂರು/ಉಡುಪಿ/ಕಾರ್ಕಳ : ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಕೆಲವು ಕಡೆಗಳಲ್ಲಿ ರವಿವಾರ ಮಳೆಯಾಗಿದೆ. ಕಾರ್ಕಳದ ಮಾಳ ಘಾಟಿಯಲ್ಲಿ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ 169ರಲ್ಲಿ ಅಬ್ಟಾಸ್ ಕಟ್ಟಿಂಗ್ ಸಮೀಪ ಗುಡ್ಡ ಕುಸಿತವಾಗಿದೆ. ವಾಹನಗಳ ಸಂಚಾರಕ್ಕೆ ಯಾವುದೇ ತೊಡಕಾಗಿಲ್ಲ. ಘಾಟಿಯ ಕೆಲವು ಪ್ರದೇಶಗಳಲ್ಲಿ ಮರದ ಗೆಲ್ಲುಗಳು ರಸ್ತೆಗೆ ಬಿದ್ದಿವೆ.
ಉಭಯ ಜಿಲ್ಲೆಯಾದ್ಯಂತ ದಿನವಿಡೀ ಬಿಟ್ಟು ಬಿಟ್ಟು ಮಳೆಯಾಗಿದೆ. ಸುಳ್ಯ, ಪುತ್ತೂರು, ಬೆಳ್ತಂಗಡಿ, ಬಂಟ್ವಾಳ, ಮಂಗಳೂರು, ಕುಂದಾಪುರ, ಬೈಂದೂರು, ಕಾರ್ಕಳ, ಉಡುಪಿ, ಕಾಪು, ಹೆಬ್ರಿ ಸುತ್ತಮುತ್ತ ಬಿಸಿಲು ಮೋಡ, ಕವಿದ ವಾತಾವರಣದ ನಡುವೆ ಸಾಧಾರಣ ಮಳೆಯಾಗಿದೆ.
ಸೀತಾನದಿಯಲ್ಲಿ ಕೆಸರು ಮಿಶ್ರಿತ ನೀರು
ಹೆಬ್ರಿ ತಾಲೂಕಿನ ನಾಡಾ³ಲ್, ಆಗುಂಬೆ, ಸೋಮೇ ಶ್ವರ ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಸೀತಾನದಿಯಲ್ಲಿ ಭಾರೀ ಪ್ರಮಾಣದಲ್ಲಿ ಕೆಸರು ಮಿಶ್ರಿತ ನೀರು ಹರಿದು ಬಂದಿದ್ದು ಆತಂಕಕ್ಕೆ ಕಾರಣವಾಗಿದೆ. ಬಾಳೆಬ್ಬಿ ಸಮೀಪದ ಅಣೆಕಟ್ಟು ಪ್ರದೇಶದಲ್ಲಿ ಹರಿದು ಬರುವ ಸೀತಾನದಿಯಲ್ಲಿ ಮರದ ದಿಮ್ಮಿಗಳು ಕೊಚ್ಚಿಕೊಂಡು ಬಂದಿವೆ. ಆಗುಂಬೆ ಅರಣ್ಯ ಗೇಟ್ ಬಳಿಯ ವಿದ್ಯುತ್ ಕಂಬದ ಮೇಲೆ ಮರಬಿದ್ದು ವಿದ್ಯುತ್ ಕಡಿತವಾಗಿದೆ.
ಭಾರತೀಯ ಹವಾಮಾನ ಇಲಾಖೆಯು ಸೆ. 12ರಂದು ಎಲ್ಲೋ ಅಲರ್ಟ್ ಘೋಷಿಸಲಾಗಿದೆ. ಈ ವೇಳೆ ಬಿರುಸಿನ ಮಳೆ, ಗಾಳಿ ಮತ್ತು ಸಮುದ್ರದ ಅಬ್ಬರ ಹೆಚ್ಚಿರುವ ನಿರೀಕ್ಷೆ ಇದೆ.
ಇದನ್ನೂ ಓದಿ : ಕೊಡಗಿನಲ್ಲಿ ಮತ್ತೆ ಮಳೆ : ದಟ್ಟ ಮಂಜು, ಚಳಿಯ ವಾತಾವರಣ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Putturu: ಠಾಣೆ ಮುಂಭಾಗದಲ್ಲಿ ಜನರ ಆಕ್ರೋಶ; ಶಾಸಕ ಅಶೋಕ್ ಕುಮಾರ್ ರೈ ಭೇಟಿ
Explained:ಈ ವರ್ಷ ಸೌದಿ ಅರೇಬಿಯಾ 100ಕ್ಕೂ ಅಧಿಕ ವಿದೇಶಿಯರನ್ನು ನೇಣಿಗೇರಿಸಲು ಕಾರಣ ಏನು!
ಹೋಮ್ ವರ್ಕ್ ಮಾಡದ್ದಕ್ಕೆ ಥಳಿಸಿದ ಶಿಕ್ಷಕ; ಕಣ್ಣ ದೃಷ್ಟಿಯನ್ನೇ ಕಳೆದುಕೊಂಡ ವಿದ್ಯಾರ್ಥಿ
Mudhol: ಎರಡೂ ಬಣಗಳಿಂದ ಪ್ರತಿಭಟನೆ ಬಿಸಿ; ಸ್ಥಳದಲ್ಲೇ ಬೀಡುಬಿಟ್ಟಿರುವ ಎಸ್ಪಿ; ಹೈ ಅಲರ್ಟ್
Belagavi: ಹೊಸಬರು, ಹಳಬರನ್ನೂ ಬಿಜೆಪಿಯವರು ಟಚ್ ಮಾಡ್ತಿದ್ದಾರೆ: ಶಾಸಕ ಬಾಬಾಸಾಹೇಬ ಪಾಟೀಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.