Heavy Rain ಕರಾವಳಿಯ ವಿವಿಧೆಡೆ ಉತ್ತಮ ಮಳೆ; ಕೆಲವೆಡೆ ಹಾನಿ
Team Udayavani, Jun 10, 2024, 11:20 PM IST
ಮಂಗಳೂರು/ಉಡುಪಿ: ದಕ್ಷಿಣ ಕನ್ನಡ ಜಿಲ್ಲೆಯ ವಿವಿಧೆಡೆ ಸೋಮವಾರ ಹಗಲು ವೇಳೆಯಲ್ಲಿ ಬಿಟ್ಟು ಬಿಟ್ಟು ಉತ್ತಮ ಮಳೆಯಾಗಿದೆ. ಕೆಲವೆಡೆ ಸಣ್ಣಪುಟ್ಟ ಹಾನಿಗಳು ಸಂಭವಿಸಿವೆ. ಉಡುಪಿ ಜಿಲ್ಲೆಯಲ್ಲಿ ಹಲವೆಡೆ ಧಾರಾಕಾರ ಮಳೆ ಸುರಿದಿದೆ.
ಮಂಗಳೂರು ನಗರದ ಮತ್ತು ಗ್ರಾಮಾಂತರ ಭಾಗದಲ್ಲಿ ಮುಂಜಾನೆ ವೇಳೆ ಸುಮಾರು ಒಂದು ಗಂಟೆಗಳ ಕಾಲ ಧಾರಾಕಾರ ಮಳೆಯಾಗಿದ್ದು, ಬಳಿಕ ಕಡಿಮೆಯಾಗಿದೆ. ಪುತ್ತೂರು, ಕಡಬ, ಸುಬ್ರಹ್ಮಣ್ಯ, ಬಂಟ್ವಾಳ ಭಾಗದಲ್ಲಿಯೂ ಬೆಳಗ್ಗೆ – ಸಂಜೆ ವೇಳೆಯಲ್ಲಿ ಉತ್ತಮ ಮಳೆಯಾಗಿದೆ.
ಉಡುಪಿ ಜಿಲ್ಲೆಯ ಕುಂದಾಪುರ, ಬೈಂದೂರು, ಕಾರ್ಕಳ ಭಾಗದಲ್ಲಿ ನಿರಂತರ ಮಳೆ ಸುರಿದಿದೆ. ಉಡುಪಿ, ಮಣಿಪಾಲ, ಮಲ್ಪೆ ಭಾಗದಲ್ಲಿ ರವಿವಾರ ತಡರಾತ್ರಿ, ಸೋಮವಾರ ಬಿಟ್ಟುಬಿಟ್ಟು ಗುಡುಗು ಸಹಿತ ಮಳೆಯಾಗಿದೆ.
ಬ್ರಹ್ಮಾವರ ತಾಲೂಕಿನ ಬೈಕಾಡಿ ಫಯಾಜ್, ಲಕ್ಷ್ಮೀ ಮರಕಾಲ ಅವರ ಮನೆಗೆ ಹಾನಿಯಾಗಿದೆ.
ಮೆಸ್ಕಾಂಗೆ 25.72 ಲ.ರೂ. ನಷ್ಟ
ಗಾಳಿ ಮಳೆಯ ಅಬ್ಬರಕ್ಕೆ ವಿದ್ಯುತ್ ಕಂಬ, ತಂತಿಗಳಿಗೆ ಹಾನಿ ಸಂಭವಿಸಿ ಹಲವೆಡೆ ಗಂಟೆಗಟ್ಟಲೇ ವಿದ್ಯುತ್ ವ್ಯತ್ಯಯ ಸಂಭವಿಸಿದೆ. ಕಳೆದ ಮೂರು ದಿನಗಳಲ್ಲಿ ಜಿಲ್ಲೆಯಲ್ಲಿ 151 ವಿದ್ಯುತ್ ಕಂಬಗಳು, 3.13 ಕಿ. ಮೀ. ವಿದ್ಯುತ್ ತಂತಿ, 20 ಪರಿವರ್ತಕಗಳಿಗೆ ಹಾನಿ ಸಂಭವಿಸಿದೆ. ಮೆಸ್ಕಾಂಗೆ ಒಟ್ಟು 25.72 ಲಕ್ಷ ರೂ. ನಷ್ಟವಾಗಿದೆ.
ಬಜಪೆ: ಮರ ಬಿದ್ದು ಹಟ್ಟಿಗೆ,
ಸಿಡಿಲು ಬಡಿದು ಮನೆಗೆ ಹಾನಿ
ಬಜಪೆ: ಸೋಮವಾರ ಮೂಡುಶೆಡ್ಡೆ ಗ್ರಾಮದ ಚಂದ್ರಹಾಸ ಶೆಟ್ಟಿ ಅವರ ದನದ ಹಟ್ಟಿಯ ಮೇಲೆ ಮರ ಬಿದ್ದು ಹಟ್ಟಿಗೆ ಹಾನಿ ಗೀಡಾಗಿದೆ. ಗಂಜಿಮಠ ಗ್ರಾ.ಪಂ. ವ್ಯಾಪ್ತಿಯ ಬಡಗುಳಿಪಾಡಿಯ ಕೇಶವ ಅವರ ಮನೆಗೆ ಸೋಮವಾರ ಸಂಜೆ ವೇಳೆಗೆ ಸಿಡಿಲು ಬಡಿದು ತೀವ್ರ ಹಾನಿಯಾಗಿದೆ.
ಇಂದು, ನಾಳೆ ಆರೆಂಜ್ ಅಲರ್ಟ್
ಭಾರತೀಯ ಹವಾಮಾನ ಇಲಾಖೆ ಮಂಗಳವಾರ ಮತ್ತು ಬುಧವಾರ ಕರಾವಳಿಗೆ “ಆರೆಂಜ್ ಅಲರ್ಟ್’ ಘೋಷಿಸಿದೆ. 2 ದಿನ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯ ಎಚ್ಚರಿಕೆ ನೀಡಲಾಗಿದೆ.
ಸಮುದ್ರ ಪ್ರಕ್ಷುಬ್ಧ: ಸಮುದ್ರದಲ್ಲಿ ಗಂಟೆಗೆ 35-45 ಕಿ.ಮೀ.ನಿಂದ 55 ಕಿ.ಮೀ. ವರೆಗೆ ಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ದ.ಕ. ಮತ್ತು ಉಡುಪಿ ಕರಾವಳಿಯಲ್ಲಿ ಜೂ. 11ರ ರಾತ್ರಿ 11.30ರ ವರೆಗಿನ ಮುನ್ಸೂಚನೆಯಂತೆ ಕಡಲು ಪ್ರಕ್ಷುಬ್ಧವಾಗಿರುವ ಸಾಧ್ಯತೆಯಿದ್ದು, 2.0-2.2 ಮೀ. ಎತ್ತರದ ಅಲೆಗಳು ದಡದತ್ತ ಅಪ್ಪಳಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮುಳಿಕಾರಿನಲ್ಲಿ ವ್ಯಾಪಕ ಹಾನಿ
ಬೆಳ್ತಂಗಡಿ: ತಾಲೂಕಿನಲ್ಲಿ ಸೋಮವಾರ ಸಂಜೆ ಗಾಳಿ ಸಹಿತ ಭಾರೀ ಮಳೆ ಸುರಿದಿದ್ದು ಧರ್ಮಸ್ಥಳ ಗ್ರಾಮದ ಮುಳಿಕಾರಿನಲ್ಲಿ ವ್ಯಾಪಕ ಹಾನಿ ಸಂಭವಿಸಿದೆ.
ಪೆರ್ನ ಮಲೆಕುಡಿಯ ಅವರ ತೋಟದ 50ಕ್ಕೂ ಅಧಿಕ ಅಡಿಕೆ ಮರಗಳು ಮುರಿದಿವೆ. ಮನೆಯ ಸಮೀಪದಲ್ಲಿದ್ದ ದೊಡ್ಡ ಗಾತ್ರದ ಮರಗಳು ಉರುಳಿವೆ. ಮನೆಯ ಹೆಂಚು ಹಾರಿಹೋಗಿದೆ. ಸ್ಥಳೀಯರ ಸಹಕಾರದೊಂದಿಗೆ ಮನೆಯನ್ನು ತಾತ್ಕಾಲಿಕವಾಗಿ ದುರಸ್ತಿ ಮಾಡಲಾಗಿದೆ.
ಬೃಹತ್ ಮರಗಳು ವಿದ್ಯುತ್ ತಂತಿಗಳ ಮೇಲೆ ಬಿದ್ದ ಕಾರಣ ವಿದ್ಯುತ್ ಕಂಬಗಳು ಮುರಿದಿವೆ. ಸಮೀಪದ ಶಂಕರ ಅವರ ಮನೆ ಹಾಗೂ ತೋಟ ಹಾನಿಗೀಡಾಗಿದೆ. ಗಾಳಿಯಿಂದಾಗಿ ಇನ್ನೂ ಹಲವರ ತೋಟಗಳಲ್ಲಿ ಹಾನಿಯಾಗಿದೆ. ಹೆಚ್ಚಿನ ಮಾಹಿತಿಗಳು ಇನ್ನಷ್ಟೇ ತಿಳಿದು ಬರಬೇಕಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Shakti scheme; ಪುರುಷರಿಗೆ ಉಚಿತ ಪ್ರಯಾಣ ಸೌಲಭ್ಯ ಇಲ್ಲ: ರಾಮಲಿಂಗಾರೆಡ್ಡಿ
CBSE: ಶೇ.15 ಪಠ್ಯಕ್ರಮ ಕಡಿತ, ತೆರೆದ ಪುಸ್ತಕ ಮಾದರಿ ಪರೀಕ್ಷೆ ಇಲ್ಲ: ಸಿಬಿಎಸ್‌ಇ
B Z Zameer ahmed khan ಹೇಳಿಕೆ ಹಿಂದೆ ಎಚ್‌ಡಿಕೆಯದ್ದೇ ಕೈವಾಡ ಎಂದ ಕೈ ಶಾಸಕ
Supreme Court: 3 ತಿಂಗಳಿಗಿಂತ ದೊಡ್ಡ ಮಕ್ಕಳ ದತ್ತು ಪಡೆದರೆ ಹೆರಿಗೆ ರಜೆ ಏಕಿಲ್ಲ
November 20: ಲಾವೋಸ್‌ನಲ್ಲಿ ಭಾರತ, ಚೀನ ರಕ್ಷಣ ಸಚಿವರ ಸಭೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.