Heavy Rain ಬಿರುಸು ಪಡೆದ ಮಳೆ: ದ.ಕ. ಜಿಲ್ಲೆಯಲ್ಲಿ ಅಪಾರ ಹಾನಿ
ರಸ್ತೆಗಳು ಜಲಾವೃತ, ಮನೆಗಳಿಗೆ ಹಾನಿ
Team Udayavani, Jun 26, 2024, 11:53 PM IST
ಮಂಗಳೂರು: ಮುಂಗಾರು ಬಿರುಸು ಪಡೆದುಕೊಂಡಿದ್ದು, ದಕ್ಷಿಣ ಕನ್ನಡ ಜಿಲ್ಲಾದ್ಯಂತ ಬುಧವಾರ ದಿನವಿಡೀ ಭಾರೀ ಮಳೆಯಾಗಿದೆ. ಉಳ್ಳಾಲ ತಾಲೂಕಿನ ಕುತ್ತಾರು ಮದನಿನಗರದಲ್ಲಿ ಮನೆ ಮೇಲೆ ಕಾಂಪೌಂಡ್ ಗೋಡೆ ಬಿದ್ದು, ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ್ದಾರೆ. ಜಿಲ್ಲೆಯ ಹಲವೆಡೆ ಹಾನಿ ಸಂಭವಿಸಿದ್ದು, ಜೂ.27ರಂದು ದಕ್ಷಿಣ ಕನ್ನಡ ಜಿಲ್ಲೆಯ ಪ್ರಾಥಮಿಕ-ಪ್ರೌಢ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ಮಂಗಳೂರು ನಗರದಲ್ಲಿ ದಿನವಿಡೀ ಬಿರುಸಿನ ಮಳೆಯಾಗಿದ್ದು, ಬಜಾಲ್, ಕೊಟ್ಟಾರ, ಕೊಟ್ಟಾರಚೌಕಿ, ಜಪ್ಪಿನಮೊಗರು, ಪಡೀಲ್ ಸಹಿತ ರಾಷ್ಟ್ರೀಯ ಹೆದ್ದಾರಿಗಳಲ್ಲಿ ನೀರು ನಿಂತು ಕೃತಕ ನೆರೆ ಸಂಭವಿಸಿದೆ. ಕೆಲವು ಮನೆಗಳಿಗೆ ನೀರು ನುಗ್ಗಿತ್ತು. ಕೆಲವು ಕಡೆ ಆವರಣ ಗೋಡೆ ಬಿದ್ದು, ಮನೆಗಳಿಗೆ ಹಾನಿ ಸಂಭವಿಸಿದೆ.
ಪಂಜ ಸಮೀಪದ ಪಡಿ³ನಂಗಡಿಯಲ್ಲಿ ಬರೆ ಕುಸಿದು ಮತ್ತು ಸುಳ್ಯದ ಜಯನಗರದಲ್ಲಿ ಆವರಣ ಗೋಡೆ ಕುಸಿದು ಮನೆಗೆ ಹಾನಿ ಸಂಭವಿಸಿದೆ. ಉಜಿರೆ ಸಮೀಪದ ಹಳೆ ಪೇಟೆಯಲ್ಲಿ ರಸ್ತೆಗೆ ಮರ ಬಿದ್ದಿದೆ. ಕಾಶಿಪಟ್ಣ, ಕುಕ್ಕೇಡಿ, ಹೊಸಂಗಡಿಯಲ್ಲಿ ಮನೆಗಳಿಗೆ ಹಾನಿ ಸಂಭವಿಸಿದೆ. ಕಡಂದಲೆ ಬಳಿ ಮರವೊಂದು ಮನೆಯ ಮೇಲೆ ಬಿದ್ದು ಹಾನಿ ಸಂಭವಿಸಿದೆ.
ಕೆಂಜಾರು ಬಳಿಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತೆರಳುವ ರಸ್ತೆಯಲ್ಲಿ ನೀರು ಹರಿದು ವಾಹನ ಸಂಚಾರಕ್ಕೆ ತೊಂದರೆ ಉಂಟಾಯಿತು.
ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು!
ಮಂಗಳೂರಿನ ಬಜಾಲ್ ರೈಲ್ವೇ ಅಂಡರ್‌ಪಾಸ್‌ನಲ್ಲಿ ನೀರು ನಿಂತು ಕೃತಕ ನೆರೆ ಸೃಷ್ಟಿಯಾಗಿ ನೀರು ಆವರಿಸಿತ್ತು. ಇದರಿಂದಾಗಿ ವಾಹನ ಸಂಚಾರಕ್ಕೆ ತೊಡಕು ಉಂಟಾಯಿತು. ಇದರಲ್ಲಿ ಕಾರೊಂದು ಸಿಲುಕಿ ಅಪಾಯಕ್ಕೆ ಕಾರಣವಾಯಿತು. ಕೂಡಲೇ ಅಗ್ನಿಶಾಮಕ ದಳದ ಅಧಿಕಾರಿಗಳು ಆಗಮಿಸಿ ಕಾರನ್ನು ನೀರಿನಿಂದ ಹೊರತಂದರು. ಪಾಲಿಕೆ ಆಯುಕ್ತ ಆನಂದ್ ಸಿ.ಎಲ್. ಪರಿಶೀಲಿಸಿದರು.
ಕಡಲ್ಕೊರತ; ಅಪಾಯದಲ್ಲಿ ಮನೆಗಳು
ಕಡಲಿನ ಅಬ್ಬರ ಜೋರಾಗಿದ್ದು, ಕಡಲ್ಕೊರೆತ ದಿಂದಾಗಿ ಉಳ್ಳಾಲದ ಉಚ್ಚಿಲ ಬಟ್ಟಪ್ಪಾಡಿಯಲ್ಲಿ ಹಲವು ಮನೆಗಳು ಅಪಾಯ ಸ್ಥಿತಿಯಲ್ಲಿದೆ. ಬೈಕಂಪಾಡಿಯ ಮೀನಕಳಿಯದಲ್ಲಿ ಮಂಗಳ ವಾರವಷ್ಟೇ ಹಾಕಲಾಗಿದ್ದ ಮರಳು ಚೀಲ ಸಮುದ್ರ ಪಾಲಾಗುವ ಆತಂಕ ಎದುರಾಗಿದೆ. ಇಲ್ಲಿನ ಕಾಂಕ್ರೀಟ್ ರಸ್ತೆಯಲ್ಲಿ ಬಿರುಕು ಉಂಟಾಗಿದೆ.
ವಿದ್ಯುತ್ ಕಂಬಗಳಿಗೆ ಹಾನಿ
ಭಾರೀ ಗಾಳಿ, ಮಳೆಯಿಂದಾಗಿ ಕಳೆದೆರಡು ದಿನಗಳಲ್ಲಿ ದ.ಕ. ಜಿಲ್ಲೆಯಲ್ಲಿ 168 ವಿದ್ಯುತ್ ಕಂಬಗಳಿಗೆ ಮತ್ತು 3 ಟ್ರಾನ್ಸ್‌ಫಾರ್ಮರ್‌ಗಳಿಗೆ ಹಾನಿ ಉಂಟಾಗಿದೆ. ಈವರೆಗೆ ಒಟ್ಟು 1,542 ವಿದ್ಯುತ್ ಕಂಬ ಮತ್ತು 27 ಟ್ರಾನ್ಸ್‌ಫಾರ್ಮರ್‌ಗಳಿಗೆ ಹಾನಿಯಾಗಿದೆ.
ಮುನ್ನೆಚ್ಚರಿಕೆ ವಹಿಸಿ: ಡಿಸಿ
ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿ ತೀರ, ಸಮುದ್ರ ತೀರಕ್ಕೆ ಸಾರ್ವಜನಿಕರು/ಪ್ರವಾಸಿಗರು ತೆರಳದಂತೆ ಜಾಗ್ರತೆ ವಹಿಸಬೇಕು. ಮೀನುಗಾರರು ಸಮುದ್ರಕ್ಕೆ ಮೀನುಗಾರಿಕೆಗೆ ತೆರಳಬಾರದು ಎಂದು ಜಿಲ್ಲಾಧಿಕಾರಿಗಳು ಸೂಚನೆ ನೀಡಿದ್ದಾರೆ.
ಜಿಲ್ಲೆಯಲ್ಲಿ ವಿಪರೀತ ಮಳೆ ಸುರಿಯುತ್ತಿರುವುದರಿಂದ ಸಾರ್ವಜನಿಕರು ನದಿಗಳ/ತೋಡುಗಳ ಸಮೀಪ ಹೋಗದಂತೆ ಎಚ್ಚರಿಕೆ ವಹಿಸಬೇಕೆಂದು ಅವರು ತಿಳಿಸಿದ್ದಾರೆ.
ಇನ್ನೆರಡು ದಿನ ಬಿರುಸಿನ
ಮಳೆ ಸಾಧ್ಯತೆ
ಕರಾವಳಿ ಭಾಗದಲ್ಲಿ ಇನ್ನೆರಡು ದಿನ ಬಿರುಸಿನ ಮಳೆಯಾಗುವ ಸಾಧ್ಯತೆ ಇದೆ. ಭಾರತೀಯ ಹವಾಮಾನ ಇಲಾಖೆಯು ಜೂ.27ರ ಬೆಳಗ್ಗೆ 8.30ರವರೆಗೆ “ರೆಡ್ ಅಲರ್ಟ್’ ಘೋಷಿಸಲಾಗಿದೆ. ಬಳಿಕ ಜೂ.30ರ ಬೆಳಗ್ಗೆ 8.30ರ ವರೆಗೆ “ಆರೆಂಜ್ ಅಲರ್ಟ್’ ಘೋಷಣೆ ಮಾಡಿದೆ.
ಕಡಂದಲೆ: ಮರ ಬಿದ್ದು ಮನೆಗೆ ಹಾನಿ
ಮೂಡುಬಿದಿರೆ: ಕಡಂದಲೆ ಗ್ರಾಮ ವ್ಯಾಪ್ತಿಯ ಬಾರಬೆಟ್ಟು ಅಣ್ಣಿ ಅವರ ಮನೆ ಮೇಲೆ ಬುಧವಾರ ಸಂಜೆ 5 ಗಂಟೆ ಸುಮಾರಿಗೆ ಭಾರೀ ಗಾತ್ರದ ಮರವೊಂದು ಬಿದ್ದಿದೆ. ಮನೆಗೆ ತೀವ್ರ ಹಾನಿಯಾಗಿದೆ.
ಅಡೆಪಿಲದಲ್ಲಿ ಮಣ್ಣು ಕುಸಿತ: ರಸ್ತೆ ಬಂದ್
ಬಂಟ್ವಾಳ: ಪಾಣೆಮಂಗಳೂರು- ದಾಸ ಕೋಡಿ ರಸ್ತೆಯ ಶಂಭೂರು ಅಡೆಪಿಲದಲ್ಲಿ ಬುಧವಾರ ರಾತ್ರಿ ರಸ್ತೆಗೆ ಗುಡ್ಡ ಕುಸಿದು ಸಂಚಾರ ವ್ಯತ್ಯಯವಾಗಿದೆ. ರಸ್ತೆಯಲ್ಲಿ ಪೂರ್ತಿ ಮಣ್ಣು ತುಂಬಿದ್ದು, ತೆರವಿಗಾಗಿ ಕ್ರಮ ಕೈಗೊಂಡಿದ್ದಾರೆ. ಬಂಟ್ವಾಳ ತಾಲೂಕಿನಾದ್ಯಂತ ರಾತ್ರಿ ಮಳೆ ಮತ್ತಷ್ಟು ಬಿರುಸಾಗಿದೆ.
ಕೈಕಂಬ-ಮಂಗಳೂರು ರಸ್ತೆಗೆ ಬಿದ್ದ ಮರ
ಬಜಪೆ: ಗುರುಪುರ-ಕೈಕಂಬ ನಡುವಿನ ಪೊಳಲಿ ದ್ವಾರದ ಸಮೀಪ ಬೃಹತ್ ಆಲದ ಮರ ಹೆದ್ದಾರಿಗೆ ಉರುಳಿಬಿದ್ದು, ಬುಧವಾರ ರಾತ್ರಿ 8.30ರಿಂದ ತಡರಾತ್ರಿಯವರೆಗೆ ವಾಹನ ಸಂಚಾರ ಸ್ಥಗಿತಗೊಂಡಿತು. ಅರಣ್ಯ ಇಲಾಖೆ ಸಿಬಂದಿ ಮತ್ತು ಪೊಲೀಸ್ ಸಿಬಂದಿ ಸ್ಥಳದಲ್ಲಿದ್ದು, ಸ್ಥಳೀಯರ ಜತೆ ತೆರವು ಕಾರ್ಯ ನಡೆಸುತ್ತಿದ್ದಾರೆ. ಮಳೆಯಿಂದಾಗಿ ಕಾರ್ಯಾಚರಣೆಗೆ ಅಡ್ಡಿಯಾಗಿದೆ. ವಾಹನಗಳು ಬದಲಿ ಮಾರ್ಗವಾದ ಗುರುಪುರ, ಕೈಕಂಬ, ಬಜಪೆ ಮೂಲಕ ಮಂಗಳೂರಿಗೆ ತೆರಳಬೇಕಾಯಿತು.
ಉಳ್ಳಾಲ: ಬಿರುಸಾದ ಕಡಲಬ್ಬರ
ಉಳ್ಳಾಲ : ಸೋಮೇಶ್ವರ ಉಚ್ಚಿಲ ಬಟ್ಟಪ್ಪಾಡಿಯಲ್ಲಿ ಸಮುದ್ರದ ಅಲೆಗಳು ತೀವ್ರಗೊಂಡಿದ್ದು ಮೂರಕ್ಕೂ ಹೆಚ್ಚು ಮನೆಗಳು ಅಪಾಯದಲ್ಲಿವೆೆ. ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಮಳೆ ಮತ್ತು ಸಮುದ್ರದ ಅಬ್ಬರ ಹೆಚ್ಚಾಗಿದ್ದು, ರಾಜೀವಿ ಅವರ ಮನೆಯ ಕೊನೆಯ ಅವಶೇಷವೂ ಸಮುದ್ರ ಪಾಲಾಗಿದ್ದು ಇದೀಗ ಬಿಫಾತಿಮ್ಮಾ ಮನೆ ಅಪಾಯದಲ್ಲಿದ್ದು ಸಮುದ್ರಪಾಲಾಗುವ ಈಗ ಭೀತಿಯಲ್ಲಿದೆ. ಇದರೊಂದಿಗೆ ಈ ವ್ಯಾಪ್ತಿಯ ಐದಕ್ಕೂ ಹೆಚ್ಚು ಮನೆಗಳು ಅಪಾಯದಲ್ಲಿವೆೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Dinesh Gundu Rao: ಅನರ್ಹರ ಕಾರ್ಡ್ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ
Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು
Mangaluru: ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿ ಮನೆ ಮೇಲೆ ಲೋಕಾ ದಾಳಿ
MUST WATCH
ಹೊಸ ಸೇರ್ಪಡೆ
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.