Heavy Rain ದ.ಕ.ದಲ್ಲಿ ಬಿರುಸಿನ ಗಾಳಿ-ಮಳೆ; ಕೆಲವೆಡೆ ಹಾನಿ
ಮಂಗಳೂರು ತಾಲೂಕು ಶಾಲೆ, ಕಾಲೇಜಿಗೆ ರಜೆ
Team Udayavani, Jul 8, 2024, 12:25 AM IST
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾದ್ಯಂತ ರವಿವಾರ ಬಿರುಸಿನ ಗಾಳಿ ಮಳೆ ಮುಂದುವರಿದಿದ್ದು, ಕೆಲವು ಕಡೆಗಳಲ್ಲಿ ಹಾನಿ ಸಂಭವಿಸಿದೆ. ದಿನವಿಡೀ ಬಿಟ್ಟು ಬಿಟ್ಟು ಮಳೆಯಾಗಿದ್ದು, ಕೆಲವೆಡೆ ತಗ್ಗು ಪ್ರದೇಶಗಳಲ್ಲಿ ಕೃತಕ ನೆರೆ ಆವರಿಸಿದೆ.
ನಾವೂರು ಗ್ರಾಮದ ಕೈಕಂಬ ಸೇತುವೆ ಶಿಥಿಲಾವಸ್ಥೆಯಲ್ಲಿರುವ ಕಾರಣ ವಾಹನ ಸಂಚಾರವನ್ನು ತಡೆ ಹಿಡಿಯಲಾಗಿದೆ. ಚಿಕ್ಕಮಗಳೂರು ವ್ಯಾಪ್ತಿಯ ಚಾರ್ಮಾಡಿ ಘಾಟಿಯಲ್ಲಿ ಕಳೆದ ವರ್ಷ ನಿರ್ಮಿಸಿದ ತಡೆಗೋಡೆ ಬಿರುಕು ಬಿಟ್ಟಿದೆ. ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ಪುರಾತನ ಅಶ್ವತ್ಥಮರ ಧರೆಗುರುಳಿದೆ.
ಉಳ್ಳಾಲದ ಬಟ್ಟಪ್ಪಾಡಿಯಲ್ಲಿ ಕಡಲ್ಕೊ ರೆತ ಮುಂದುವರಿದಿದೆ. ಪಣಂ ಬೂರು ಬೀಚ್‌ನ ರೆಸಾರ್ಟ್‌ನಲ್ಲಿ ಹಾಕಲಾಗಿದ್ದ ತಗಡು ಶೀಟ್‌ನ ಮೇಲ್ಛಾವಣಿ ಸುಮಾರು 20 ಅಡಿಗೂ ದೂರ ಹಾರಿದೆ. ಸಮೀಪದಲ್ಲೇ ಇದ್ದ ಬೇರೊಂದು ಶಾಪ್‌ಗೆ ಹಾನಿಯಾಗಿದೆ. ಘಟನೆ ಬೆಳಗ್ಗೆ ಆಗಿರುವ ಕಾರಣ ಜನರು ಗಾಯಗೊಂಡಿಲ್ಲ. ಸುರತ್ಕಲ್‌ನ ತಗ್ಗು ಪ್ರದೇಶಗಳಲ್ಲಿ ಕೃತಕ ನೆರೆ ಸೃಷ್ಟಿಯಾಗಿದೆ.
ಆರೆಂಜ್, ಎಲ್ಲೋ ಅಲರ್ಟ್
ಕರಾವಳಿ ಭಾಗದಲ್ಲಿ ಬಿರುಸಿನ ಮಳೆ ಮುಂದುವರಿಯುವ ಸಾಧ್ಯತೆ ಇದೆ. ಜು.8ರಂದು ಆರೆಂಜ್ ಅಲರ್ಟ್, ಜು.9ರಂದು ಎಲ್ಲೋ ಅಲರ್ಟ್ ಮತ್ತು ಜು.10 ಮತ್ತು 11ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಉಡುಪಿಯಲ್ಲಿ ಉತ್ತಮ ಮಳೆ
ಉಡುಪಿ ಜಿಲ್ಲೆಯಲ್ಲಿ ರವಿವಾರವೂ ಹಲವೆಡೆ ಉತ್ತಮ ಮಳೆಯಾಗಿದೆ. ಕುಂದಾಪುರ ಭಾಗದಲ್ಲಿ ದಿನವಿಡೀ ಧಾರಾಕಾರ ಮಳೆ ಸುರಿದಿದೆ.
ಕಾರ್ಕಳ, ಹೆಬ್ರಿ, ಉಡುಪಿ ಸುತ್ತಮುತ್ತ ಉತ್ತಮ ಮಳೆ ಸುರಿದಿದೆ. ಕಾಪು, ಬ್ರಹ್ಮಾವರ ಸುತ್ತಮುತ್ತ ಬಿಸಿಲು – ಮೋಡ ಕವಿದ ವಾತಾವರಣದ ನಡುವೆ ಉತ್ತಮ ಮಳೆಯಾಗಿದೆ. ಸಂಜೆಯಾಗುತ್ತಿದ್ದಂತೆ ಧಾರಾಕಾರ ಮಳೆಯಾಗಿದೆ.
ಚಾರ್ಮಾಡಿ : ಗುಡ್ಡ ಕುಸಿತ
ಚಾರ್ಮಾಡಿ ಘಾಟಿ ಪ್ರದೇಶದಲ್ಲಿ ಗುಡ್ಡ ಕುಸಿದ ಘಟನೆ ರವಿವಾರ ರಾತ್ರಿ ಸಂಭವಿಸಿದೆ. ಚಿಕ್ಕಮಗಳೂರು – ದ.ಕ.ಜಿಲ್ಲೆ ಸಂಪರ್ಕದ ಮಂಗಳೂರು-ವಿಲ್ಲು ಪುರಂ ರಾಷ್ಟ್ರೀಯ ಹೆದ್ದಾರಿಯ ವ್ಯಾಪ್ತಿಯ ಆಲೇಖಾನ್ ಬಳಿ ಗುಡ್ಡ ಕುಸಿದು ರಸ್ತೆ ಬದಿಗೆ ಬಿದ್ದಿದೆ. ಬಣಕಲ್ ಪೊಲೀಸರು ಸ್ಥಳಕ್ಕೆ ಆಗಮಿಸಿ ಸುಗಮ ಸಂಚಾರಕ್ಕೆ ವ್ಯವಸ್ಥೆ ಮಾಡಿದ್ದಾರೆ.
ಮಂಗಳೂರು ತಾಲೂಕು ಶಾಲೆ, ಕಾಲೇಜಿಗೆ ರಜೆ
ಭಾರೀ ಮಳೆ ಸಾಧ್ಯತೆ ಹಿನ್ನೆಲೆಯಲ್ಲಿ ಮಂಗಳೂರು ತಾಲೂಕಿನ ಅಂಗನವಾಡಿಯಿಂದ ಪಿಯುಸಿ ವರೆಗಿನ ಮಕ್ಕಳಿಗೆ ಸೋಮವಾರ ರಜೆ ಘೋಷಿಸಿ ತಹಶೀಲ್ದಾರ್ ಆದೇಶಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.