Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ
Team Udayavani, Jul 7, 2024, 12:30 AM IST
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆ ಬಿರುಸು ಪಡೆದುಕೊಂಡಿದ್ದು, ಜಿಲ್ಲಾದ್ಯಂತ ಶನಿವಾರ ಉತ್ತಮ ಮಳೆಯಾಗಿದೆ. ಬಂಟ್ವಾಳ ತಾಲೂಕಿನ ಮಣಿನಾಲ್ಕೂರು ಗ್ರಾಮದ ನೇಲ್ಯಪಲ್ಕೆ ಭಾಗದಲ್ಲಿ ಬೀಸಿದ ಬಿರುಗಾಳಿಯ ಪರಿಣಾಮ ಅಂಗಡಿ ಮುಂಗಟ್ಟುಗಳ ಮೇಲ್ಛಾವಣಿಯ ಶೀಟ್‌ಗಳು ಹಾರಿ ಹೋಗಿದೆ.
ಕೊಡಾಜೆ-ಅನಂತಾಡಿ ರಸ್ತೆಯ ಗೋಳಿಕಟ್ಟೆಯಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಕಾರು ಜಖಂಗೊಂಡಿದೆ. ರಾಷ್ಟ್ರೀಯ ಹೆದ್ದಾರಿ ಕಾಶಿಬೆಟ್ಟಿನಲ್ಲಿ ಕೆಸರುಮಯ ರಸ್ತೆಯಿಂದ ವಾಹನ ಸಂಚಾರಕ್ಕೆ ತೊಂದರೆ ಉಂಟಾಗಿ ತಾಸುಗಟ್ಟಲೆ ಸಂಚಾರ ತಡೆ ಉಂಟಾಯಿತು.
ಮಂಗಳೂರು ನಗರದಲ್ಲಿ ಬೆಳಗ್ಗೆಯಿಂದ ಮಧ್ಯಾಹ್ನವರೆಗೆ ಬಿರುಸಿನ ಮಳೆಯಾಗಿದ್ದು, ಬಳಿಕ ಮಳೆಯ ತೀವ್ರತೆ ತುಸು ಕಡಿಮೆಯಾಗಿತ್ತು.
ಮೂರು ದಿನ “ಆರೆಂಜ್ ಅಲರ್ಟ್’
ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆಯ ಪ್ರಕಾರ ಜು.7ರಿಂದ 9ರ ವರೆಗೆ ಕರಾವಳಿ ಭಾಗದಲ್ಲಿ “ಎಲ್ಲೋ ಅಲರ್ಟ್’ ಘೋಷಿಸಲಾಗಿದೆ. ಈ ವೇಳೆ ಬಿರುಸಿನ ಮಳೆ, ಗಾಳಿ ಬೀಸುವ ಸಾಧ್ಯತೆ ಇದೆ.
ನೀರಿಗಿಳಿಯದಂತೆ ಜಿಲ್ಲಾ ಧಿಕಾರಿ ಆದೇಶ
ಮುಂಗಾರು ಅವ ಧಿಯಲ್ಲಿ ವ್ಯಾಪಕ ಮಳೆ ಆಗುತ್ತಿದ್ದು, ಈ ಸಂಬಂಧ ಯಾವುದೇ ಅವಘಡಗಳಿಗೆ ಆಸ್ಪದವಿರದಂತೆ ಮುನ್ನಚ್ಚರಿಕೆ ವಹಿಸಬೇಕಾಗಿರುವುದರಿಂದ ಜಿಲ್ಲಾದ್ಯಂತ ಇರುವ ಜಲಪಾತ, ಝರಿ, ನದಿ, ಸಮುದ್ರ, ಜಲಾಶಯದ ಪ್ರದೇಶಗಳಲ್ಲಿ ಸಾರ್ವಜನಿಕರು, ಪ್ರವಾಸಿಗರು ನೀರಿನಲ್ಲಿ ಇಳಿಯುವುದು, ಈಜುವುದು, ಸಾಹಸ ಚಟುವಟಿಕೆಗಳನ್ನು ನಡೆಸುವುದನ್ನು ನಿರ್ಬಂ ಧಿಸಿ ಮುಂದಿನ ಆದೇಶದವರೆಗೆ ಜಿಲ್ಲಾಧಿಕಾರಿ ಮುಲ್ಲೆ ç ಮುಗಿಲನ್ ಅದೇಶಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belthangady: ನ. 21- ಮೇ 23: ಧರ್ಮಸ್ಥಳ ಮೇಳದಿಂದ ಯಕ್ಷ ಗಾನ ಸೇವೆ
Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ
Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ
Dharmasthala: ನ.26-30: ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವ
ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ
MUST WATCH
ಹೊಸ ಸೇರ್ಪಡೆ
Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್ ಡಿಕ್ಕಿ: ಮೊಪೆಡ್ ಸವಾರ ಸಾವು
Madhu Bangarappa ; ಟ್ರೋಲ್ ಗಳಿಗೆ ಬಗ್ಗಲ್ಲ.. ಕಿಡಿ ಕಿಡಿಯಾದ ಶಿಕ್ಷಣ ಸಚಿವ!
Vijayapura: 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, 2 ಕಾರು ವಶಕ್ಕೆ ಪಡೆದ ಪೊಲೀಸರು
IFFI 2024;ರಾಜಕೀಯ ಕಾರಣಗಳಿಂದಲೇ ಸಾವರ್ಕರ್ಗೆ ಸಿಗಬೇಕಾದ ಮನ್ನಣೆ ಸಿಕ್ಕಿಲ್ಲ:ರಣದೀಪ್ ಹೂಡಾ
Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.