3 ದಿನ ಉತ್ತಮ ಮಳೆ ಸಾಧ್ಯತೆ

Team Udayavani, Jun 21, 2019, 9:22 AM IST

rain

ಮಂಗಳೂರು/ಉಡುಪಿ: ಬಂಗಾಲಕೊಲ್ಲಿ ಯಲ್ಲಿ ವಾಯುಭಾರ ಕುಸಿತ ಮತ್ತು ರಾಜ್ಯ ಕರಾವಳಿಯಲ್ಲಿ ಮುಂಗಾರು ಚುರುಕುಗೊಂಡ ಹಿನ್ನೆಲೆಯಲ್ಲಿ ಕರಾವಳಿಯಾದ್ಯಂತ ಗುರುವಾರ ಉತ್ತಮ ಮಳೆಯಾಗಿದೆ. ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯಾಗುವ ನಿರೀಕ್ಷೆ ಇದೆ.

ಮಂಗಳೂರು ನಗರದಲ್ಲಿ ಗುರುವಾರ ಬೆಳಗ್ಗಿನಿಂದ ಉತ್ತಮ ಮಳೆಯಾಗಿದ್ದು, ಸಂಜೆ ವೇಳೆ ಮೋಡಕವಿದ ವಾತಾವರಣ ಇತ್ತು. ಪುತ್ತೂರು, ಉಪ್ಪಿನಂಗಡಿ, ವಿಟ್ಲ, ಕಾಪು, ವೇಣೂರು, ಉಡುಪಿ ಜಿಲ್ಲೆಯ ಮಣಿಪಾಲ, ಕಾರ್ಕಳ, ಬ್ರಹ್ಮಾವರ, ಶಿರ್ವ, ಕಾಪು, ಬೆಳ್ಮಣ್ಣು, ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮಳೆಯಾದ ವರದಿಯಾಗಿದೆ.

ಮೂಸೋಡಿಯಲ್ಲಿ ಕಡಲ್ಕೊರೆತ
ಉಪ್ಪಳ ಮೂಸೋಡಿಯಲ್ಲಿ ಕಡಲ್ಕೊರೆತ ಮುಂದುವರಿ ದಿದ್ದು ಮೊಹಮ್ಮದ್‌ ಮತ್ತು ಸಹೋದರಿ ನಫೀಸ ಅವರ ಮನೆಗಳು ಅಪಾಯದಂಚಿನಲ್ಲಿವೆ. ಮನೆ ಮಂದಿಯನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ. ಇವರ ಒಟ್ಟು 28 ತೆಂಗಿನ ಮರಗಳು ಸಮುದ್ರ ಪಾಲಾಗಿವೆ.

ಸಿಡಿಲು: ಮನೆಗೆ ಹಾನಿ
ನೀರ್ಚಾಲು: ಬುಧವಾರ ರಾತ್ರಿ ಸಿಡಿಲು ಬಡಿದು ಕುಂಟಿಕಾನ ಬಳಿಯ ಮನೆಯೊಂದು ಹಾನಿಗೀಡಾಗಿದೆ.

ಶನಿವಾರ ರೆಡ್‌ ಅಲರ್ಟ್‌
ಕಾಸರಗೋಡು/ ಮಣಿಪಾಲ: ಸದ್ಯದ ಪರಿಸ್ಥಿತಿಯಲ್ಲಿ ಮೋಡಗಳ ಚಲನೆಯಂತೆ ಪಶ್ಚಿಮ ಕರಾವಳಿಯಲ್ಲಿ ಭಾರೀ ಮಳೆಯಾಗುವ ಸಂಭವ ಇರುವುದರಿಂದ ಕೇರಳದಿಂದ ಮಹಾರಾಷ್ಟ್ರದ ತನಕ ಜೂ.21ರಂದು ಹವಾಮಾನ ಇಲಾಖೆಯು “ಆರೆಂಜ್‌ ಅಲರ್ಟ್‌’ ಘೋಷಿಸಿದೆ. ಶನಿವಾರ ಜೂ. 22ರಂದು ಕೇರಳ, ಕರ್ನಾಟಕ ಮತ್ತು ಗೋವಾ ತೀರಗಳಲ್ಲಿ ಗರಿಷ್ಠ ಜಾಗೃತಿಯ “ರೆಡ್‌ ಅಲರ್ಟ್‌’ ಘೋಷಣೆಯಾಗಿದೆ. ಜೂ. 23ರ ರವಿವಾರ “ಆರೆಂಜ್‌ ಅಲರ್ಟ್‌’ ಘೋಷಣೆಯಾಗಿದೆ.

ಆರೆಂಜ್‌ ಅಲರ್ಟ್‌ ಘೋಷಿಸಲಾದ ಕೆಲವು ಪ್ರದೇಶಗಳಲ್ಲಿ ಪ್ರಬಲ, ಅತಿ ಪ್ರಬಲ ಮಳೆ ಸುರಿಯುವ ಸಾಧ್ಯತೆಗಳಿವೆ. ಸರಕಾರಿ ವ್ಯವಸ್ಥೆ ಮತ್ತು ಸಾರ್ವಜನಿಕರು ಜಾಗೃತೆ ಪಾಲಿಸುವಂತೆ ಇಲಾಖೆ ತಿಳಿಸಿದೆ.

ಸಂಬಂಧಪಟ್ಟ ಇಲಾಖೆಗಳ ಸಿಬಂದಿ ಅಗತ್ಯವಿರುವ ಸಿದ್ಧತೆ ನಡೆಸುವಂತೆ, ತಾಲೂಕು ಮಟ್ಟದ ನಿಯಂತ್ರಣ ಕೊಠಡಿಗಳನ್ನು ಆರಂಭಿಸುವಂತೆ ಕೇರಳ ರಾಜ್ಯ ದುರಂತ ನಿವಾರಣೆ ಪ್ರಾಧಿಕಾರ ಆದೇಶ ನೀಡಿದೆ.

ಟಾಪ್ ನ್ಯೂಸ್

Mangaluru: ಮಾರುಕಟ್ಟೆಯಲ್ಲೀಗ ಬಂಗುಡೆ ಬಲು ಅಗ್ಗ! ವಿದೇಶದಲ್ಲಿ ಬೇಡಿಕೆ ಇಳಿಕೆ

Mangaluru: ಮಾರುಕಟ್ಟೆಯಲ್ಲೀಗ ಬಂಗುಡೆ ಬಲು ಅಗ್ಗ! ವಿದೇಶದಲ್ಲಿ ಬೇಡಿಕೆ ಇಳಿಕೆ

Kambala: ಕೋಣಗಳ ಸಂಖ್ಯೆ ದುಪ್ಪಟ್ಟು-ಕಂಬಳ ಆಸಕ್ತಿ ಮೂರುಪಟ್ಟು!

Kambala: ಕೋಣಗಳ ಸಂಖ್ಯೆ ದುಪ್ಪಟ್ಟು-ಕಂಬಳ ಆಸಕ್ತಿ ಮೂರುಪಟ್ಟು!

MB-Patil-Minister

Waqf Notice: ಒಂದಿಂಚು ಜಮೀನು ವಕ್ಫ್‌ಗೆ ಹೋಗಲು ಬಿಡಲ್ಲ: ಸಚಿವ ಎಂ.ಬಿ.ಪಾಟೀಲ್‌

1-horoscope

Daily Horoscope: ವಧೂವರಾನ್ವೇಷಿಗಳಿಗೆ ಯಶಸ್ಸಿನ ಭರವಸೆ, ಸ್ವರ್ಣೋದ್ಯಮಿಗಳಿಗೆ ಹೇರಳ ಲಾಭ

Child-care

Child Care: ಶಿಶು ಮರಣ ತಗ್ಗಿಸಲು ಮನೆಮಟ್ಟದ ಎಳೆ ಮಕ್ಕಳ ಆರೈಕೆ!

ರಾಜ್ಯದಲ್ಲಿ ಕೇರಳದ ಅಸುರಕ್ಷಿತ ಕುರುಕಲು ತಿಂಡಿ ಮಾರಾಟ

ರಾಜ್ಯದಲ್ಲಿ ಕೇರಳದ ಅಸುರಕ್ಷಿತ ಕುರುಕಲು ತಿಂಡಿ ಮಾರಾಟ

NIA: ರಾಮೇಶ್ವರಂ ಕೆಫೆ ಸ್ಫೋಟ ಉಗ್ರ ಪಾಕ್‌ನಲ್ಲಿ: ಎನ್‌ಐಎಗೆ ಸುಳಿವು

NIA: ರಾಮೇಶ್ವರಂ ಕೆಫೆ ಸ್ಫೋಟ ಉಗ್ರ ಪಾಕ್‌ನಲ್ಲಿ: ಎನ್‌ಐಎಗೆ ಸುಳಿವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ಮಾರುಕಟ್ಟೆಯಲ್ಲೀಗ ಬಂಗುಡೆ ಬಲು ಅಗ್ಗ! ವಿದೇಶದಲ್ಲಿ ಬೇಡಿಕೆ ಇಳಿಕೆ

Mangaluru: ಮಾರುಕಟ್ಟೆಯಲ್ಲೀಗ ಬಂಗುಡೆ ಬಲು ಅಗ್ಗ! ವಿದೇಶದಲ್ಲಿ ಬೇಡಿಕೆ ಇಳಿಕೆ

Kambala: ಕೋಣಗಳ ಸಂಖ್ಯೆ ದುಪ್ಪಟ್ಟು-ಕಂಬಳ ಆಸಕ್ತಿ ಮೂರುಪಟ್ಟು!

Kambala: ಕೋಣಗಳ ಸಂಖ್ಯೆ ದುಪ್ಪಟ್ಟು-ಕಂಬಳ ಆಸಕ್ತಿ ಮೂರುಪಟ್ಟು!

Mangaluru: ಪದ್ಮಶ್ರೀ ಬೇಳೇರಿ ಸಂರಕ್ಷಿತ ಭತ್ತದ 10 ತಳಿ ಸಂವರ್ಧನೆ

Mangaluru: ಪದ್ಮಶ್ರೀ ಬೇಳೇರಿ ಸಂರಕ್ಷಿತ ಭತ್ತದ 10 ತಳಿ ಸಂವರ್ಧನೆ

KVK: ಸಾಂಪ್ರದಾಯಿಕ ಭತ್ತ ತಳಿಗಳ ಕ್ಷೇತ್ರೋತ್ಸವ

KVK: ಸಾಂಪ್ರದಾಯಿಕ ಭತ್ತ ತಳಿಗಳ ಕ್ಷೇತ್ರೋತ್ಸವ

ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ ಪ್ರಕರಣ: ಪೊಲೀಸ್‌ ಕ್ರಮಕ್ಕೆ ಕೇರಳ ಸಿಎಂ ಸೂಚನೆ

ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ ಪ್ರಕರಣ: ಪೊಲೀಸ್‌ ಕ್ರಮಕ್ಕೆ ಕೇರಳ ಸಿಎಂ ಸೂಚನೆ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Mangaluru: ಮಾರುಕಟ್ಟೆಯಲ್ಲೀಗ ಬಂಗುಡೆ ಬಲು ಅಗ್ಗ! ವಿದೇಶದಲ್ಲಿ ಬೇಡಿಕೆ ಇಳಿಕೆ

Mangaluru: ಮಾರುಕಟ್ಟೆಯಲ್ಲೀಗ ಬಂಗುಡೆ ಬಲು ಅಗ್ಗ! ವಿದೇಶದಲ್ಲಿ ಬೇಡಿಕೆ ಇಳಿಕೆ

Kambala: ಕೋಣಗಳ ಸಂಖ್ಯೆ ದುಪ್ಪಟ್ಟು-ಕಂಬಳ ಆಸಕ್ತಿ ಮೂರುಪಟ್ಟು!

Kambala: ಕೋಣಗಳ ಸಂಖ್ಯೆ ದುಪ್ಪಟ್ಟು-ಕಂಬಳ ಆಸಕ್ತಿ ಮೂರುಪಟ್ಟು!

MB-Patil-Minister

Waqf Notice: ಒಂದಿಂಚು ಜಮೀನು ವಕ್ಫ್‌ಗೆ ಹೋಗಲು ಬಿಡಲ್ಲ: ಸಚಿವ ಎಂ.ಬಿ.ಪಾಟೀಲ್‌

1-horoscope

Daily Horoscope: ವಧೂವರಾನ್ವೇಷಿಗಳಿಗೆ ಯಶಸ್ಸಿನ ಭರವಸೆ, ಸ್ವರ್ಣೋದ್ಯಮಿಗಳಿಗೆ ಹೇರಳ ಲಾಭ

Child-care

Child Care: ಶಿಶು ಮರಣ ತಗ್ಗಿಸಲು ಮನೆಮಟ್ಟದ ಎಳೆ ಮಕ್ಕಳ ಆರೈಕೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.