ಕೇಂದ್ರದ ಯೋಜನೆ ಜನರಿಗೆ ತಲುಪಿಸಿ : ರಾಜೇಶ್ ನಾೖಕ್
Team Udayavani, Aug 19, 2017, 6:40 AM IST
ಪುಂಜಾಲಕಟ್ಟೆ: ಕೇಂದ್ರ ಸರಕಾರದ ಜನಪರ ಯೋಜನೆಗಳನ್ನು ಜನರಿಗೆ ತಲುಪಿಸುವ ನಿಟ್ಟಿನಲ್ಲಿ ಪಂಚಾಯತ್ ಸದಸ್ಯರು, ಕಾರ್ಯಕರ್ತರು ಶ್ರಮಿಸಬೇಕು ಎಂದು ಬಂಟ್ವಾಳ ಕ್ಷೇತ್ರ ಬಿಜೆಪಿ ಮುಖಂಡ ರಾಜೇಶ್ ನಾೖಕ್ ಉಳಿಪಾಡಿಗುತ್ತು ಹೇಳಿದರು. ಅವರು ಬಂಟ್ವಾಳ ತಾ| ಅರಳ ನವಶಕ್ತಿ ಯುವಕ ಮಂಡಲದಲ್ಲಿ ನಡೆದ ಅರಳ ಗ್ರಾಮ ಪಂಚಾಯತ್ ವ್ಯಾಪ್ತಿಯ ಅರ್ಹ ಫಲಾನುಭವಿಗಳಿಗೆ ಉಚಿತ ಗ್ಯಾಸ್ ಮತ್ತು ಸ್ಟವ್ ವಿತರಿಸಿ ಮಾತನಾಡಿದರು.
ಸಂಸದ ನಳಿನ್ ಕುಮಾರ್ ಕಟೀಲು ಅವರು ಕೇಂದ್ರ ಸರಕಾರದ ಬಹಳಷ್ಟು ಯೋಜನೆಗಳನ್ನು ನಮ್ಮ ಜಿಲ್ಲೆಗೆ ತಂದಿದ್ದಾರೆ. ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಬಂಟ್ವಾಳ ಕ್ಷೇತ್ರಕ್ಕೆ ಸಂಸದರು ಅತಿ ಹೆಚ್ಚು ಅನುದಾನ ಒದಗಿಸಿದ್ದು, ಮುಂದಿನ ದಿನಗಳಲ್ಲಿ ಸಂಸದರ ನೇತೃತ್ವದಲ್ಲಿ ಕೇಂದ್ರ ಸರಕಾರದ ಯೋಜನೆಗಳ ಕಾರ್ಯಾಗಾರವನ್ನು ಗ್ರಾಮ ಮಟ್ಟದಲ್ಲಿ ಆಯೋಜಿಸಲಾಗುವುದು. ಎಂದರು.
ಈ ಸಂದರ್ಭದಲ್ಲಿ 50ಕ್ಕೂ ಹೆಚ್ಚು ಫಲಾನುಭವಿಗಳಿಗೆ ಉಚಿತ ಗ್ಯಾಸ್ ಮತ್ತು ಸ್ಟವ್‌ವನ್ನು ವಿತರಿಸಲಾಯಿತು. ಅರಳ ಪಂಚಾಯತ್ ಅಧ್ಯಕ್ಷೆ ತುಂಗಮ್ಮ, ಉಪಾಧ್ಯಕ್ಷ ಜಗದೀಶ್ ಆಳ್ವ ಅಗ್ಗೊಂಡೆ, ಸದಸ್ಯರಾದ ಲಕ್ಷ್ಮೀಧರ ಶೆಟ್ಟಿ ಮಧ್ಯಾಳ, ಲಕ್ಷ್ಮೀಧರ ಪೂಜಾರಿ, ಗ್ಯಾಸ್ ಏಜೆನ್ಸಿಯ ಮಾಲಕ ಕರುಣಾಕರ ಶೆಟ್ಟಿ, ಪಕ್ಷದ ಪ್ರಮುಖರಾದ ರಮಾನಾಥ ರಾಯಿ, ಗಣೇಶ್ ರೈ ಮಾಣಿ, ಉಮೇಶ್ ಡಿ. ಎಂ., ಯೋಗೀಶ್ ಕೆ, ಅಶ್ವತ್ಥ್, ಹೇಮಂತ್ ಅರಳ, ತಿಮ್ಮಪ್ಪ ಬಿ., ಆನಂದ ಮೇಲಾಂಟ, ಶ್ರೀಧರ ಆಚಾರ್ಯ, ಪ್ರಸನ್ನ ಕುಮಾರ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು. ಗ್ರಾ. ಪಂ. ಸದಸ್ಯ ಡೊಂಬಯ್ಯ ಅರಳ ಕಾರ್ಯಕ್ರಮ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.