ಉನ್ನತ ಅನುಷ್ಠಾನ ನಗರ ಘೋಷಣೆಗೆ ಸಿದ್ಧತೆ

ಕೋಟ್ಪಾ ಕಾಯಿದೆ

Team Udayavani, May 13, 2019, 10:13 AM IST

managalore-tdy-3

ಮಹಾನಗರ, ಮೇ 12: ನಗರವನ್ನು ಕೋಟ್ಪಾ ಕಾಯಿದೆಯ ಉನ್ನತ ಅನುಷ್ಠಾನ ನಗರವನ್ನಾಗಿ ಘೋಷಿಸಲು ಸಿದ್ಧತೆ ನಡೆಯುತ್ತಿದೆ.

ಈಗ ನಗರದಲ್ಲಿ ಶೇ.60ರಷ್ಟು ಕೋಟ್ಪಾ ಕಾಯಿದೆ ಅನುಷ್ಠಾನವಾಗಿದ್ದು, ಇದನ್ನು ಶೇ.85ಕ್ಕೆ ಹೆಚ್ಚಿಸಬೇಕಿದೆ. ಆಗ ಮಾತ್ರ ನಗರವನ್ನು ‘ಕೋಟ್ಪಾ ಕಾಯಿದೆಯ ಉನ್ನತ ಅನುಷ್ಠಾನ ನಗರ’ ಎಂದು ಘೋಷಿಸಬಹುದು.

ಮೇ 31ರ ವಿಶ್ವ ತಂಬಾಕು ರಹಿತ ದಿನದ ಸಂದರ್ಭ ಮಂಗಳೂರು ಈ ನಿಟ್ಟಿನಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಕೋಶ, ಜಿಲ್ಲಾ ಸರ್ವೇಕ್ಷಣಾ ಘಟಕ ನಿರಂತರ ಕಾರ್ಯಾಚರಣೆಗೆ ನಡೆಸುತ್ತಿದ್ದು, ಕಾಯಿದೆಯ ಶೇ. 85ರಷ್ಟು ಅಂಶಗಳನ್ನು ಅನುಷ್ಠಾನಗೊಳಿಸುವತ್ತ ಹೆಜ್ಜೆ ಇಟ್ಟಿದೆ. ಇದಕ್ಕಾಗಿ ನಗರದ ವಿವಿಧ ಭಾಗಗಳಲ್ಲಿ ದಕ್ಷಿಣ ಕನ್ನಡ ಜಿಲ್ಲಾ ತಂಬಾಕು ನಿಯಂತ್ರಣ ಕೋಶವು ನಗರ ಪೊಲೀಸ್‌ ಇಲಾಖೆ ಸಹಕಾರದೊಂದಿಗೆ ದೊಡ್ಡ ಮಟ್ಟದಲ್ಲಿ ಕಾರ್ಯಾಚರಣೆ ನಡೆಸುತ್ತಿದೆ.

ಕಾಲೇಜು ಆವರಣಗಳಲ್ಲಿ ಹದ್ದಿನ ಕಣ್ಣು:

2003ರಲ್ಲಿ ಜಾರಿಗೆ ಬಂದ ಸಿಗರೇಟ್, ಇತರೆ ತಂಬಾಕು ಉತ್ಪನ್ನಗಳ ಆ್ಯಕ್ಟ್ ಪ್ರಕಾರ ತಂಬಾಕು ಸೇವನೆ, ಮಾರಾಟದ ಕುರಿತಂತೆ ಕಟ್ಟುನಿಟ್ಟಿನ ಕ್ರಮ ವಹಿಸಲಾಗಿದೆ. ಆದರೆ ನಗರದ ಪ್ರಮುಖ ಕಾಲೇಜುಗಳ ಸಮೀಪ, ಇನ್ನಿತರ ಜಾಗಗಳಲ್ಲಿ ತಂಬಾಕು ಮಾರಾಟ ಎಗ್ಗಿಲ್ಲದೆ ನಡೆಯುತ್ತಿದೆ. ಇದನ್ನು ನಿಯಂತ್ರಿಸುವ ನಿಟ್ಟಿನಲ್ಲಿ ತಂಡ ಕಠಿನ ಕ್ರಮಗಳನ್ನು ಕೈಗೊಂಡಿದೆ.

ಕಾಯ್ದೆಯ ಸಮರ್ಪಕ ಅನುಷ್ಠಾನಕ್ಕೆ ಕ್ರಮ:

ಕಾಯ್ದೆಯ ಪ್ರಕಾರ ಸಾರ್ವಜನಿಕ ಸ್ಥಳಗಳಾದ ಹೊಟೇಲ್, ಬಾರ್‌ ಆ್ಯಂಡ್‌ ರೆಸ್ಟೋರೆಂಟ್, ಚಿತ್ರ ಮಂದಿರ, ಗೂಡಂಗಡಿಗಳು, ಸಾರ್ವಜಹನಿಕರು ಸೇರುವ ಸ್ಥಳಗಳಲ್ಲಿ ತಂಬಾಕು ಸೇವನೆ ಎಚ್ಚರಿಕೆ ಫಲಕವನ್ನು ಅಳವಡಿಸಬೇಕು. ಶಾಲಾ ಕಾಲೇಜುಗಳ 100 ಗಜ ದೂರದಲ್ಲಿ ತಂಬಾಕು ಉತ್ಪನ್ನಗಳ ಮಾರಾಟ ನಿಷಿದ್ಧ, 18 ವರ್ಷದ ಒಳಗಿನವರಿಗೆ ತಂಬಾಕು ಉತ್ಪನ್ನ ಮಾರಾಟವೂ ನಿಷಿದ್ಧ.

ಕಾಯಿದೆಯಲ್ಲಿರುವ ಈ ಅಂಶಗಳ ಪರಿಣಾಮಕಾರಿ ಅನುಷ್ಠಾನ ಜಿಲ್ಲಾ ತಂಬಾಕು ನಿಯಂತ್ರಣ ಕೋಶ, ಜಿಲ್ಲಾ ಸರ್ವೇಕ್ಷಣಾ ಘಟಕದ ಮುಖ್ಯ ಉದ್ದೇಶ. ಇದಕ್ಕಾಗಿ ಕಾರ್ಯಾಚರಣೆ ಸಂದರ್ಭ ಕಾಯಿದೆಯನ್ನು ಉಲ್ಲಂಘಿಸಿದ್ದು ಕಂಡು ಬಂದರೆ ದಂಡ ಪ್ರಯೋಗದ ಜತೆಯಲ್ಲಿ ಜಾಗೃತಿ ಮೂಡಿಸುವ ಕೆಲಸವನ್ನೂ ತಂಡ ಮಾಡುತ್ತಿದೆ. ಎಲ್ಲೆಲ್ಲಿ ಫಲಕಗಳನ್ನು ಹಾಕಿಲ್ಲವೋ ಅಲ್ಲೆಲ್ಲ ಉಚಿತವಾಗಿ ಫಲಕವನ್ನು ವಿತರಿಸಿ ಅಳವಡಿಸುವ ಕೆಲಸವನ್ನೂ ತಂಡ ಮಾಡುತ್ತಿದೆ.

ಸಾರ್ವಜನಿಕರು ಸಹಕರಿಸಿ:

ನಗರವನ್ನು ಕೋಟ್ಪಾ ಕಾಯಿದೆಯ ಉನ್ನತ ಅನುಷ್ಠಾನ ನಗರವನ್ನಾಗಿ ಘೋಷಿಸಲು ಪ್ರಯತ್ನ ನಡೆಯುತ್ತಿದ್ದು, ಇದಕ್ಕಾಗಿ ಕಾರ್ಯಾಚರಣೆ ನಡೆಯುತ್ತಿದೆ. ಸಾರ್ವಜನಿಕರು ಕೂಡ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಪಾಲಿಸಿ ಸಹಕರಿಸಬೇಕು.– ಡಾ| ಪ್ರೀತಾ, ಸಲಹೆಗಾರರು, ದ.ಕ. ಜಿಲ್ಲಾ ತಂಬಾಕು ನಿಯಂತ್ರಣ ಕೋಶ

•ವಿಶೇಷ ವರದಿ

ಟಾಪ್ ನ್ಯೂಸ್

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

Actress: ರೊಮ್ಯಾನ್ಸ್‌ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್

Actress: ರೊಮ್ಯಾನ್ಸ್‌ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್

INDvAUS: ಬ್ಯಾನ್‌ ತಪ್ಪಿಸಿಕೊಂಡ ವಿರಾಟ್‌ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ

INDvAUS: ಬ್ಯಾನ್‌ ತಪ್ಪಿಸಿಕೊಂಡ ವಿರಾಟ್‌ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ

ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ

Vijay Hazare Trophy: ಮಯಾಂಕ್‌ ಅಗರ್ವಾಲ್‌ ಶತಕದಾಟ; ಪಂಜಾಬ್‌ ಕೈನಿಂದ ಜಯ ಕಸಿದ ಕರ್ನಾಟಕ

Vijay Hazare Trophy: ಮಯಾಂಕ್‌ ಅಗರ್ವಾಲ್‌ ಶತಕದಾಟ; ಪಂಜಾಬ್‌ ಕೈನಿಂದ ಜಯ ಕಸಿದ ಕರ್ನಾಟಕ

Borewell Tragedy: 4ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯಾಚರಣೆ… ಬಾಲಕಿಯ ಸ್ಥಿತಿ ಹೇಗಿದೆ

Borewell Tragedy: 4ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯಾಚರಣೆ… ಬಾಲಕಿಯ ಸ್ಥಿತಿ ಹೇಗಿದೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

5

Mangaluru: ಪದವು ಜಂಕ್ಷನ್‌- ಶರ್ಬತ್‌ ಕಟ್ಟೆ ರಸ್ತೆಗೆ ಅಗತ್ಯವಿದೆ ಫುಟ್‌ಪಾತ್‌

4

Padil: ಡಿಸಿ ಕಚೇರಿ ಸಂಕೀರ್ಣಕ್ಕೆ ಚಿನ್ನದ ಬಣ್ಣದ ರಾಷ್ಟ್ರ ಲಾಂಛನ

2

Bajpe: ತಂಗುದಾಣ ತೆರವು, ಪ್ರಯಾಣಿಕರು ಅನಾಥ!

1

Kadri: ಬೃಹತ್‌ ಗಾತ್ರದ ಚಿಟ್ಟೆ, ಜೀರುಂಡೆ !

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

Actress: ರೊಮ್ಯಾನ್ಸ್‌ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್

Actress: ರೊಮ್ಯಾನ್ಸ್‌ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್

Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್‌ ಗಳು ಪತ್ತೆ

Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್‌ ಗಳು ಪತ್ತೆ

INDvAUS: ಬ್ಯಾನ್‌ ತಪ್ಪಿಸಿಕೊಂಡ ವಿರಾಟ್‌ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ

INDvAUS: ಬ್ಯಾನ್‌ ತಪ್ಪಿಸಿಕೊಂಡ ವಿರಾಟ್‌ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.