ಸಿಆರ್‌ಝಡ್: ಜಿಲ್ಲಾಡಳಿತದ ಆದೇಶ ಹೈಕೋರ್ಟ್‌ನಿಂದ ರದ್ದು :ಮಾನವ ಶ್ರಮದ ಮರಳುಗಾರಿಕೆಗೆ ಅವಕಾಶ
Team Udayavani, Sep 13, 2022, 10:11 AM IST
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಸಿಆರ್‌ಝಡ್ ವಲಯದಲ್ಲಿ ಮರಳುಗಾರಿಕೆಗೆ ಜಿಲ್ಲಾಡಳಿತ ವಿಧಿಸಿದ್ದ ನಿಷೇಧವನ್ನು ಉಚ್ಚ ನ್ಯಾಯಾಲಯ ರದ್ದುಗೊಳಿಸಿದ್ದು ಯಂತ್ರೋಪಕರಣಗಳನ್ನು ಬಳಸದೆ ಮಾನವ ಶ್ರಮ (ಮ್ಯಾನ್ಯುವಲ್)¨ ಮೂಲಕ ಮರಳೆತ್ತಲು ಅನುಮತಿಸಬಹುದು ಎಂದಿದೆ.
ಉಡುಪಿ ಜಿಲ್ಲೆಯ ಸಿಆರ್‌ಝಡ್ ವಲಯದಲ್ಲಿ ಮರಳುಗಾರಿಕೆೆ ನಿಷೇಧ ವಿಧಿಸಿ ಹಸುರು ಪೀಠ (ಗ್ರೀನ್ ಟ್ರಿಬ್ಯೂನಲ್) ನೀಡಿದ್ದ ಆದೇಶದ ಆಧಾರದಲ್ಲಿ ದಕ್ಷಿಣ ಕನ್ನಡದಲ್ಲೂ ಸಿಆರ್‌ಝಡ್ ವಲಯದಲ್ಲಿ ಮರಳುಗಾರಿಕೆ ನಿಷೇಧಿಸಲಾಗಿತ್ತು. ಇದನ್ನು ಪ್ರಶ್ನಿಸಿ ತಾತ್ಕಾಲಿಕ ಪರವಾನಿಗೆ ಹೊಂದಿದ್ದ 30 ಮಂದಿ ಉಚ್ಚ ನ್ಯಾಯಾಲಯದ ಮೆಟ್ಟಲೇರಿದ್ದರು. ರಾಜ್ಯ ಸರಕಾರ, ಕೇಂದ್ರ ಸರಕಾರ, ಕರ್ನಾಟಕ ರಾಜ್ಯ ಕರಾವಳಿ ನಿಯಂತ್ರಣ ಪ್ರಾಧಿಕಾರ, ಏಳು ಸದಸ್ಯರ ದ.ಕ. ಜಿಲ್ಲಾ ಮರಳು ಉಸ್ತುವಾರಿ ಸಮಿತಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಗಣಿ ಹಾಗೂ ಭೂವಿಜ್ಞಾನ ಇಲಾಖೆ ಉಪನಿರ್ದೇಶಕರು ಪ್ರತಿವಾದಿಗಳಾಗಿದ್ದರು. ಸೆ. 3ರಂದು ನ್ಯಾಯಾಲಯ ಆದೇಶ ನೀಡಿದೆ.
ಉಡುಪಿ ಜಿಲ್ಲೆಯಲ್ಲಿ ಸಿಆರ್‌ಝಡ್ ವಲಯದಲ್ಲಿ ಮರಳುಗಾರಿಕೆ ನಿಷೇಧ ಕೋರಿ ಅಲ್ಲಿನ ಕೆಲವು ಮಂದಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ್ದ ಹಸುರು ಪೀಠ ಅಲ್ಲಿ ಸಿಆರ್‌ಝಡ್ ವಲಯದಲ್ಲಿ ಮರಳುಗಾರಿಕೆಯನ್ನು ನಿಷೇಧಿಸಿ 2022ರ ಮೇ 18ರಂದು ಆದೇಶಿಸಿತ್ತು. ಇದರಂತೆ ದ.ಕ. ಜಿಲ್ಲಾಧಿಕಾರಿಯವರು ಮೇ 21ರಂದು ಜಿಲ್ಲೆಯಲ್ಲೂ ಸಿಆರ್‌ಝಡ್ ವಲಯದಲ್ಲಿ ಮರಳುಗಾರಿಕೆ ನಿಷೇಧಿಸಿ ಆದೇಶ ಹೊರಡಿಸಿದ್ದು ತಾತ್ಕಾಲಿಕ ಪರವಾನಿಗೆ ಹೊಂದಿದ್ದವರಿಗೆ ಮೇ 23ರಂದು ನೊಟೀಸ್ ನೀಡಲಾಗಿತ್ತು.
ಇದನ್ನೂ ಓದಿ : ಉಪ್ಪಿನಂಗಡಿ : 8,800ರೂ. ಬೆಲೆಯ ಫೋನ್ 1,785 ರೂ.ಗೆ : ಪಾರ್ಸೆಲ್ ನಂಬಿ ಹಣ ಕಳೆದುಕೊಂಡರು
ಸೆ. 30ರ ಬಳಿಕ ಸ್ಪಷ್ಟ ಚಿತ್ರಣ
ಹಸುರು ಪೀಠದ ಆದೇಶದ ಆಧಾರದಲ್ಲಿ ಸಿಆರ್‌ಝಡ್ ವಲಯದಲ್ಲಿ ಮರಳುಗಾರಿಕೆ ನಿಷೇಧಕ್ಕೆ ಮೊದಲು ನೀಡಿದ್ದ ಪರವಾನಿಗೆಗಳಲ್ಲಿ ಮಳೆಗಾಲದ ಹಿನ್ನೆಲೆಯಲ್ಲಿ ಜೂ. 1ರಿಂದ ಸೆ. 30ರ ವರೆಗೆ 4 ತಿಂಗಳು ಮರಳುಗಾರಿಕೆ ನಡೆಸಲು ನಿಷೇಧ ವಿಧಿಸಲಾಗಿದೆ. ಹಿನ್ನೆಲೆಯಲ್ಲಿ ಮರಳುಗಾರಿಕೆ ಅವಕಾಶದ ಬಗ್ಗೆ ಸೆ. 30ರ ಬಳಿಕವಷ್ಟೇ ಸ್ಪಷ್ಟ ಚಿತ್ರಣ ದೊರೆಯಲಿದೆ.
ಸುಪ್ರೀಂ ಕೋರ್ಟ್‌ಗೆ ಅರ್ಜಿ
ಸಿಆರ್‌ಝಡ್ ವಲಯದಲ್ಲಿ ಮರಳುಗಾರಿಕೆಗೆ ಹಸಿರು ಪೀಠದಿಂದ ನಿರ್ಬಂಧ ಹಿನ್ನೆಲೆಯಲ್ಲಿ ಈ ವಲಯದಲ್ಲಿ ಮರಳು ತೆಗೆಯುವಿಕೆ ಸ್ಥಗಿತಗೊಂಡಿದೆ. ಸಿಆರ್‌ಝಡ್ ವಲಯದಲ್ಲಿ ಮರಳುಗಾರಿಕೆಗೆ ನಿಷೇಧ ವಿಧಿಸಿರುವ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಸಾಂಪ್ರದಾಯಿಕ ಮರಳು ಗುತ್ತಿಗೆದಾರರು ಅರ್ಜಿಸಲ್ಲಿಸಿದ್ದಾರೆ.
ಆದೇಶದಲ್ಲೇನಿದೆ ?
ಉಡುಪಿ ಜಿಲ್ಲೆಯಲ್ಲಿ ಸಿಆರ್‌ಝಡ್ ವ್ಯಾಪ್ತಿಯಲ್ಲಿ ಬರುವ ನದಿತೀರಗಳಲ್ಲಿ ಅಕ್ರಮ ಮರಳುಗಾರಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಹಸುರುಪೀಠ ಆದೇಶ ಹೊರಡಿಸಿತ್ತು. ಈ ಆದೇಶವನ್ನು ದ.ಕ.ದಲ್ಲಿ ತಾತ್ಕಾಲಿಕ ಪರವಾನಿಗೆ ಹೊಂದಿರುವವರಿಗೆ ಅವರ ಅಹವಾಲುಗಳನ್ನು ಆಲಿಸದೆ ಅನ್ವಯಿಸುವಂತಿಲ್ಲ. ಹಸುರುಪೀಠದ ಆದೇಶವು ಮಾನವಶ್ರಮದ ಮೂಲಕ ಮರಳು ತೆಗೆಯುವುದಕ್ಕೆ ಸಂಪೂರ್ಣ ನಿಷೇಧ ಹೇರಿದೆ ಎಂದು ಅರ್ಥವಲ್ಲ.
ತಾತ್ಕಾಲಿಕ ಪರವಾನಿಗೆದಾರರಿಗೆ 2022ರ ಮೇ 21ರಂದು ಹೊರಡಿಸಿದ್ದ ಆದೇಶ ಹಾಗೂ ಮೇ 23ರಂದು ನೀಡಿರುವ ನೋಟಿಸು ಹಸುರುಪೀಠದ ಆದೇಶವನ್ನು ತಪ್ಪಾಗಿ ವ್ಯಾಖ್ಯಾನಿಸಿ ನೀಡಿದ್ದಾಗಿದ್ದು ಅದು ಕಾನೂನಿನ ದೃಷ್ಟಿಯಲ್ಲಿ ನಿಲ್ಲುವುದಿಲ್ಲ. ಆದುದರಿಂದ ರದ್ದುಪಡಿಸಲಾಗಿದೆ. ಪ್ರತಿವಾದಿಗಳು (ಸರಕಾರ) ಯಂತ್ರ ಬಳಸಿ ಅಕ್ರಮ ಮರಳುಗಾರಿಕೆ ನಡೆಯದಂತೆ ಕ್ರಮ ಕೈಗೊಳ್ಳಲು ಸ್ವಾತಂತ್ರ್ಯ ಹೊಂದಿದ್ದಾರೆ. ಅರ್ಜಿದಾರರಿಗೆ ತಾತ್ಕಾಲಿಕ ಪರವಾನಿಗೆಯಲ್ಲಿ ವಿಧಿಸಿದ ಷರತ್ತುಗಳಂತೆ ಮಾನವಶ್ರಮದ ಮರಳುಗಾರಿಕೆಗೆ ಅನುಮತಿ ನೀಡಬಹುದಾಗಿದೆ ಎಂದು ನ್ಯಾಯಾಲಯ ಆದೇಶದಲ್ಲಿ ತಿಳಿಸಿದೆ.
ಪರಿಶೀಲಿಸಿ ನಿರ್ಧಾರ
ನ್ಯಾಯಾಲಯದ ಆದೇಶ ಜಿಲ್ಲಾಡಳಿತಕ್ಕೆ ಅಧಿಕೃತವಾಗಿ ಬಂದ ಬಳಿಕ ಅದನ್ನು ಪರಿಶೀಲಿಸಿಕೊಂಡು ರಾಜ್ಯ ಸರಕಾರದ ನಿರ್ದೇಶನದಂತೆ ಮುಂದಿನ ಕ್ರಮ ತೆಗೆದುಕೊಳ್ಳಲಾಗುವುದು.
– ಡಾ| ಕೆ.ವಿ.ರಾಜೇಂದ್ರ, ಜಿಲ್ಲಾಧಿಕಾರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ
ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ
ಮಂಗಳೂರಿಗೆ ವಾಟರ್ ವೆುಟ್ರೋ; ಎಂಡಬ್ಲ್ಯುಎಂಪಿ ನಿರ್ಮಾಣಕ್ಕೆ ಮುಂದಾಗಿರುವ ಕೆಎಂಬಿ
Mangaluru: ಕರಾವಳಿಯ ವೃತ್ತಿಪರರಿಗೆ ವಿಶ್ವದೆಲ್ಲೆಡೆ ಮನ್ನಣೆ
Mangaluru: ಪಿಲಿಕುಳ ಕಂಬಳ; ಮೂಲಸೌಲಭ್ಯ ಕಲ್ಪಿಸಲು ಜಿಲ್ಲಾಧಿಕಾರಿ ಸೂಚನೆ
MUST WATCH
ಹೊಸ ಸೇರ್ಪಡೆ
Bantwal: ತುಂಬೆ ಶ್ರೀಮಹಾಲಿಂಗೇಶ್ವರ ದೇವಸ್ಥಾನಕ್ಕೆ ಕನ್ನ; ಲಕ್ಷಾಂತರ ಮೌಲ್ಯದ ನಗನಗದು ಲೂಟಿ
Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ
ಅಂಗಡಿಯಲ್ಲಿ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ
Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ
ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.