ಯುವಕನ ಕಗ್ಗೊಲೆ : ಸುರತ್ಕಲ್ ಪರಿಸರ ಉದ್ರಿಕ್ತ, ನಾಲ್ವರ ಬಂಧನ
Team Udayavani, Jan 3, 2018, 2:47 PM IST
ಮಂಗಳೂರು : ನಗರದ ಸುರತ್ಕಲ್‌ನ ಕಾಟಿಪಳ್ಳದಲ್ಲಿ ಬುಧವಾರ ಹಾಡಹಗಲೇ ಹಿಂದೂಪರ ಸಂಘಟನೆಯ ಕಾರ್ಯಕರ್ತನೊಬ್ಬನನ್ನು ಬರ್ಬರವಾಗಿ ಕೊಚ್ಚಿ ಕೊಲೆಗೈಯಲಾಗಿದೆ. ಹತ್ಯೆಗೀಡಾದ ಯುವಕ ದೀಪಕ್ ಸೂರಿಂಜೆ ಎಂದು ತಿಳಿದು ಬಂದಿದ್ದು, ಮೊಬೈಲ್ ಅಂಗಡಿಯೊಂದರಲ್ಲಿ ಎಕ್ಸಿಕ್ಯೂಟಿವ್ ಆಗಿದ್ದ ಎಂದು ತಿಳಿದು ಬಂದಿದೆ.
ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬಿಗಿ ಬಂದೋಬಸ್ತ್ ಕೈಗೊಂಡಿದ್ದಾರೆ. ದೀಪಕ್ ಬಜರಂಗದಳದಲ್ಲಿ ಸಕ್ರಿಯ ಕಾರ್ಯಕರ್ತನಾಗಿದ್ದ ಎನ್ನಲಾಗಿದೆ. ಕಾರಿನಲ್ಲಿ ಬಂದ ದುಷ್ಕರ್ಮಿಗಳು ಹತ್ಯೆಗೈದು ಪರಾರಿಯಾಗಿರುವುದಾಗಿ ತಿಳಿದು ಬಂದಿದೆ.
ಹಿಂದೂಪರ ಕಾರ್ಯಕರ್ತ ದೀಪಕ್ ಹತ್ಯೆ ಖಂಡಿಸಿ ಸುರತ್ಕಲ್ ಪರಿಸರದಲ್ಲಿ ಅಘೋಷಿತ ಬಂದ್ ವಾತಾವರಣ ನಿರ್ಮಾಣಗೊಂಡಿದ್ದು ಕೆಲವೆಡೆಗಳಲ್ಲಿ ಬಸ್ಸುಗಳಿಗೆ ಕಲ್ಲುತೂರಾಟ ನಡೆದಿದೆ.
ಹಿಂದೂಪರ ಕಾರ್ಯಕರ್ತ ದೀಪಕ್ ಹತ್ಯೆಯ ಆರೋಪಿಗಳನ್ನು ಸಿನಿಮೀಯ ರೀತಿಯಲ್ಲಿ ಬಂಧಿಸಿದ ಸುರತ್ಕಲ್ ಪೊಲೀಸರು. ಮೂಡುಬಿದಿರೆಯ ಮಿಜಾರು ಬಳಿ ಈ ಕಾರ್ಯಾಚರಣೆ ನಡೆದಿದೆ ಎನ್ನಲಾಗಿದೆ.
ಘಟನೆಗೆ ಸಂಬಂಧಿಸಿದಂತೆ ನಾಲ್ವರ ಬಂಧನ:
ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿನೀಮೀಯ ರೀತಿಯಲ್ಲಿ ಕಾರ್ಯಾಚರಣೆ ನಡೆಸಿದ ಸುರತ್ಕಲ್ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
Marriage: ಕ್ರಿಸ್ಮಸ್ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್ ಮುಖ್ಯಸ್ಥೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.