ಹಿಂದೂ ಕಾರ್ಯಕರ್ತರ ಹತ್ಯೆ: ಎನ್‌ಐಎ ತನಿಖೆಗೆ ಮನವಿ
Team Udayavani, Jul 10, 2017, 1:45 AM IST
ಮಂಗಳೂರು: ಕರಾವಳಿಯಲ್ಲಿ ಹಿಂದೂ ಸಂಘಟನೆಯ ಕಾರ್ಯಕರ್ತರನ್ನು ಹತ್ಯೆ ಮಾಡು ತ್ತಿರುವ ಬಗ್ಗೆ ರಾಷ್ಟ್ರೀಯ ತನಿಖಾ ದಳದಿಂದ ತನಿಖೆ ನಡೆಸುವಂತೆ ಕೇಂದ್ರ ಗೃಹ ಸಚಿವ ರಾಜನಾಥ ಸಿಂಗ್ ಅವರನ್ನು ವಿನಂತಿಸಲಾಗಿದೆ. ಜಿÇÉೆಯಲ್ಲಿ ನಡೆಯುತ್ತಿರುವ ಅಮಾನುಷ ಘಟನೆಗಳಿಗೆ ರಾಜ್ಯ ಸರಕಾರವೇ ನೇರ ಹೊಣೆ ಎಂದು ಸಂಸದ ನಳಿನ್ ಕುಮಾರ್ ಕಟೀಲು ಹೇಳಿದ್ದಾರೆ.
ದುಷ್ಕರ್ಮಿಗಳಿಂದ ಹತ್ಯೆಗೀಡಾದ ಶರತ್ ಅವರ ಮನೆಗೆ ಶನಿವಾರ ರಾತ್ರಿ ಭೇಟಿ ನೀಡಿ, ಮನೆಮಂದಿಗೆ ಅವರು ಸಾಂತ್ವನ ಹೇಳಿ ಸುದ್ದಿಗಾರರ ಜತೆಗೆ ಮಾತನಾಡಿದರು. ಜಿಲ್ಲೆಗೆ ಆಗಮಿಸಿ ಕಾಂಗ್ರೆಸ್ ಸಮಾವೇಶ ನಡೆಸುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಇಲ್ಲಿನ ಕಾನೂನು ಸುವ್ಯವಸ್ಥೆ ಬಗ್ಗೆ ಸಭೆ ನಡೆಸುವ ಕನಿಷ್ಠ ಜ್ಞಾನವೂ ಇರಲಿಲ್ಲ. ಕೆಪಿಸಿಸಿ ಅಧ್ಯಕ್ಷರು, ಕಾಂಗ್ರೆಸ್ ಸಚಿವರು ಬಿಜೆಪಿ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡುತ್ತಿರುವುದೇ ಅಶಾಂತಿ ಮುಂದುವರಿಯಲು ಕಾರಣವಾಗಿದೆ ಎಂದು ಆರೋಪಿಸಿದರು.
ದಕ್ಷಿಣ ಕನ್ನಡ ಜಿಲ್ಲೆಯ ಜನತೆ ಪೊಲೀಸ್ ವ್ಯವಸ್ಥೆಯಲ್ಲಿ ಸಂಪೂರ್ಣ ವಿಶ್ವಾಸ ಕಳೆದುಕೊಳ್ಳುವ ಸ್ಥಿತಿ ನಿರ್ಮಾಣವಾಗಿದೆ. ಅಮಾನುಷ ಕೃತ್ಯ ನಡೆಸುತ್ತಿರುವ ಮತಾಂಧ ಶಕ್ತಿಗಳು ಮತ್ತು ದುಷ್ಕರ್ಮಿಗಳಿಗೆ ಪ್ರಚೋದನೆ ನೀಡುತ್ತಿರುವ ಕಾಂಗ್ರೆಸ್ ಸರಕಾರದ ವಿರುದ್ಧ ನಿರ್ಣಾಯಕ ಹೋರಾಟ ನಡೆಸುವುದು ಬಿಜೆಪಿ ಹಾಗೂ ಹಿಂದೂಪರ ಸಂಘಟನೆಗಳಿಗೆ ಅನಿವಾರ್ಯವಾಗಲಿದೆ ಎಂದವರು ಹೇಳಿದರು.
ಬಂಟ್ವಾಳ ಕ್ಷೇತ್ರ ಬಿಜೆಪಿ ಅಧ್ಯಕ್ಷ ಬಿ. ದೇವದಾಸ್ ಶೆಟ್ಟಿ, ಬಿಜೆಪಿ ಪ್ರಮುಖರಾದ ಬದರೀನಾಥ ಕಾಮತ್ ಉಪಸ್ಥಿತರಿದ್ದರು.
ಚಿರಂಜೀವಿ ಕ್ಷೇಮವಿಚಾರಿಸಿದ ನಳಿನ್ ಬಳಿಕ ಕುತ್ತಾರಿನಲ್ಲಿ ಹಲ್ಲೆಗೀಡಾಗಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಚಿರಂಜೀವಿ ಅವರನ್ನು ಸಂಸದ ನಳಿನ್ ಕುಮಾರ್ ಭೇಟಿಯಾಗಿ ಆರೋಗ್ಯ ವಿಚಾರಿಸಿದರು.
ಸಹನೆಗೂ ಮಿತಿ ಇದೆ
ಬಿ.ಸಿ.ರೋಡ್‌ನಲ್ಲಿ ನಿಷೇಧಾಜ್ಞೆ ಇದ್ದರೂ ಹಿಂದೂಗಳಿಗೆ ಆದ ಅನ್ಯಾಯದ ವಿರುದ್ಧ ಆಕ್ರೋಶಿತ ಜನರ ಶಕ್ತಿ ಪ್ರದರ್ಶನವಾಗಿದೆ. ಇದರಲ್ಲಿ ಭಾಗವಹಿಸಿದವರ ವಿರುದ್ಧ ಪ್ರಕರಣ ದಾಖಲಿಸುವ ಪೊಲೀಸರಿಗೆ ಆರ್‌ಎಸ್‌ಎಸ್ ಕಾರ್ಯಕರ್ತ ಶರತ್ ಹಂತಕರನ್ನು ಪತ್ತೆಹಚ್ಚಲು ಇದುವರೆಗೆ ಸಾಧ್ಯವಾಗಿಲ್ಲ. ಶರತ್ ಅಂತಿಮ ಯಾತ್ರೆಗೂ ಕಲ್ಲು ತೂರಾಟ ನಡೆಸುವ ಹೀನ ಕೃತ್ಯ ನಡೆದಿದೆ. ಶನಿವಾರ ರಾತ್ರಿ ಕುತ್ತಾರಿನಲ್ಲಿ ಚಿರಂಜೀವಿ ಎನ್ನುವ ಯುವಕನ ಮೇಲೆ ತಲವಾರು ಹಲ್ಲೆ ನಡೆದಿದೆ. ಹಿಂದೂಗಳ ಸಹನೆಗೂ ಮಿತಿ ಇದೆ. ತತ್‌ಕ್ಷಣ ಆರೋಪಿಗಳನ್ನು ಬಂಧಿಸಿ ಮತ್ತು ಶರತ್ ಅವರ ಕುಟುಂಬಕ್ಕೆ ಪರಿಹಾರ ನೀಡಬೇಕು ಎಂದು ನಳಿನ್ ಕುಮಾರ್ ಅವರು ಒತ್ತಾಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಡಿಜಿಟಲ್ ಅರೆಸ್ಟ್, ಷೇರು ಮಾರುಕಟ್ಟೆ ಹೂಡಿಕೆ ವಂಚನೆ ಪ್ರಕರಣ; ಮೂವರ ಬಂಧನ
ವಿಡಿಯೋ | Mangaluru; ಕದ್ರಿ ಪೊಲೀಸ್ ಠಾಣೆ ಬಳಿ ಇದ್ದಕ್ಕಿದ್ದಂತೆ ಹೊತ್ತಿ ಉರಿದ ಕಾರು
Hampanakatte: ಗುಟ್ಕಾ ಉಗುಳುವವರು, ಧೂಮಪಾನಿಗಳ ಹಾವಳಿ
Mangaluru: ತೆರೆದ ತೋಡಿನಲ್ಲಿ ಕೊಳಚೆ ನೀರು ಹರಿಯುವುದು ನಿಂತಿಲ್ಲ
Mangaluru: ಪಂಪ್‌ವೆಲ್-ಪಡೀಲ್ ನಡುವಿನ ಚತುಷ್ಪಥ ಕಾಮಗಾರಿ 3 ವರ್ಷ ಕಳೆದರೂ ಅಪೂರ್ಣ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.