Heavy rain ಹಿಂಗಾರು: ಕರಾವಳಿಯಲ್ಲಿ ಅತ್ಯಧಿಕ ಮಳೆ!
Team Udayavani, Dec 5, 2024, 6:34 AM IST
ಮಂಗಳೂರು: ಕೆಲವು ದಿನಗಳಿಂದ ಬಿರುಸಿನಿಂದ ಕೂಡಿದ ಹಿಂಗಾರು ಮಳೆಯಾಗುತ್ತಿದ್ದು, ಒಂದು ವಾರದಲ್ಲಿ ರಾಜ್ಯದಲ್ಲೇ ಅತ್ಯಧಿಕ ಮಳೆ ಕರಾವಳಿ ಭಾಗದಲ್ಲಿ ಸುರಿದಿದೆ.
ನ.28ರಿಂದ ಡಿ.4ರ ವರೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 4.8 ಮಿ.ಮೀ. ಮಳೆ ಸುರಿಯಬೇಕು. ಆದರೆ 82.4 ಮಿ.ಮೀ. ಮಳೆಯಾಗಿ ವಾಡಿಕೆಗಿಂತ ಶೇ.1617ರಷ್ಟು ಅಧಿಕ ಸುರಿದಿದೆ. ರಾಜ್ಯದಲ್ಲೇ ಇದು ಅತ್ಯಧಿಕ.
ಉಡುಪಿ ಜಿಲ್ಲೆಯಲ್ಲಿ 5.8 ಮಿ.ಮಿ. ವಾಡಿಕೆ ಗುರಿಯಲ್ಲಿ 63.7 ಮಿ.ಮೀ. ಮಳೆಯಾಗಿದೆ. ರಾಜ್ಯಕ್ಕೆ ಹೋಲಿಸಿದರೆ ದಕ್ಷಿಣ ಒಳನಾಡಿನಲ್ಲಿ ವಾಡಿಕೆಗಿಂತ ಶೇ.813 ಹೆಚ್ಚಳ, ಉತ್ತರ ಒಳನಾಡಿನಲ್ಲಿ ಶೇ.16 ಹೆಚ್ಚಳ, ಮಲೆನಾಡಿನಲ್ಲಿ ಶೇ.528 ಮತ್ತು ಕರಾವಳಿಯಲ್ಲಿ ಶೇ.962ರಷ್ಟು ಮಳೆ ಹೆಚ್ಚಳವಾಗಿದೆ.
ಒಂದು ವಾರದ ಅವಧಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ಶೇ.966, ಬಂಟ್ವಾಳದಲ್ಲಿ ಶೇ.1615, ಮಂಗಳೂರಿನಲ್ಲಿ ಶೇ.3023, ಪುತ್ತೂರಿನಲ್ಲಿ ಶೇ.669, ಸುಳ್ಯದಲ್ಲಿ ಶೇ.2755, ಮೂಡುಬಿದಿರೆ ಶೇ.1281, ಕಡಬ ಶೇ.2067, ಮೂಲ್ಕಿ ಶೇ.4933, ಉಳ್ಳಾಲ ಶೇ.3456, ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ಶೇ.726, ಕುಂದಾಪುರ ಶೇ.209, ಉಡುಪಿ ಶೇ.2641, ಬೈಂದೂರು ಶೇ.31, ಬ್ರಹ್ಮಾವರ ಶೇ.16550, ಕಾಪು ಶೇ.4695, ಹೆಬ್ರಿ ಶೇ.504 ರಷ್ಟು ವಾಡಿಕೆಗಿಂತ ಅಧಿಕ ಮಳೆಯಾಗಿದೆ.
ಯಥೇತ್ಛ ಹಿಂಗಾರು
ಕರಾವಳಿ ಭಾಗದಲ್ಲಿ ಈ ಬಾರಿ ಉತ್ತಮ ಹಿಂಗಾರು ಮಳೆ ಸುರಿದಿದೆ. ಹಿಂಗಾರು ಅವಧಿ ಮುಗಿಯಲು ತಿಂಗಳು ಬಾಕಿ ಇರುವಾಗಲೇ ವಾಡಿಕೆ ಮಳೆಯ ಗುರಿ ದಾಟಿದೆ. ಹಿಂಗಾರು ಅವಧಿಯ ಅ. 1ರಿಂದ ಡಿ. 4ರ ವರೆಗೆ ಕರಾವಳಿ ಭಾಗದಲ್ಲಿ ಒಟ್ಟು 174.1 ಮಿ.ಮೀ. ಮಳೆಯಾಗಬೇಕು, ಆದರೆ ಸದ್ಯ 228.7 ಮಿ.ಮೀ. ಮಳೆಯಾಗಿ ವಾಡಿಕೆಗಿಂತ ಶೇ.31ರಷ್ಟು ಮಳೆ ಹೆಚ್ಚು ಸುರಿದಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶೇ.34, ಉಡುಪಿ ಜಿಲ್ಲೆಯಲ್ಲಿ ಶೇ.53 ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲಿ ಶೇ.57ರಷ್ಟು ಮಳೆ ಪ್ರಮಾಣ ಏರಿಕೆ ಕಂಡಿದೆ.
ದ.ಕ. ಜಿಲ್ಲೆಯಲ್ಲಿ ಸಾಧಾರಣ ಮಳೆ
ಮಂಗಳೂರು: ಎರಡು ದಿನಗಳಿಂದ ಬಿರುಸು ಪಡೆದಿದ್ದ ಮಳೆ ಬುಧವಾರ ತುಸು ಕ್ಷೀಣಿಸಿದೆ.
ಬೆಳಗ್ಗೆ ಮೋಡ ಮತ್ತು ಕೆಲವು ಕಡೆ ಸಾಧಾರಣ ಮಳೆಯಾಗಿದೆ. ಮಧ್ಯಾಹ್ನದ ಬಳಿಕ ಬಿಸಿಲಿನಿಂದ ಕೂಡಿದ ವಾತಾವರಣ ಇತ್ತು. ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ಪ್ರಕಾರ ಯಾವುದೇ ಅಲರ್ಟ್ ಘೋಷಣೆ ಮಾಡಲಾಗಿಲ್ಲ. ಆದರೆ ಜಿಲ್ಲೆಯ ಕೆಲವು ಕಡೆಗಳಲ್ಲಿ ಸಾಧಾರಣ ಮಳೆ ಸುರಿಯುವ ನಿರೀಕ್ಷೆ ಇದೆ.
ಮಂಗಳೂರಿನಲ್ಲಿ ತಾಪಮಾನದಲ್ಲಿ ಕಂಡಿದ್ದು, 29.2 ಡಿ.ಸೆ. ಗರಿಷ್ಠ ಉಷ್ಣಾಂಶ ದಾಖಲಾಗಿ ವಾಡಿಕೆಗಿಂತ 4.1 ಡಿ.ಸೆ. ಕಡಿಮೆ ಮತ್ತು 24.3 ಡಿ.ಸೆ. ಕನಿಷ್ಠ ತಾಪಮಾನ ದಾಖಲಾಗಿ ವಾಡಿಕೆಗಿಂತ 2.1 ಡಿ.ಸೆ.ಉಷ್ಣಾಂಶ ಅಧಿಕ ಇತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಪಾಲಿಕೆ ಚುನಾವಣೆ ಅನುಮಾನ?
‘ರಾಜಕೀಯ ನಿವೃತ್ತಿ’ ಸುದ್ದಿಗೆ ದ.ಕ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಸ್ಪಷ್ಟನೆ
Mangaluru: ನೇತ್ರಾವತಿ ಸೇತುವೆ ಮೇಲಿನ ಸಿಸಿ ಕೆಮರಾಗಳಿಗಿಲ್ಲ ನಿರ್ವಹಣೆ ಭಾಗ್ಯ
Mudbidri: ಕೊಳಚೆ ನೀರು ಗದ್ದೆಗೆ; ಒಳಚರಂಡಿ ಯೋಜನೆ ಇಲ್ಲದೆ ಸಮಸ್ಯೆ
Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Ayodhya: ಕನ್ನಡಕದಲ್ಲಿ ರಹಸ್ಯ ಕ್ಯಾಮರಾ ಬಳಸಿ ರಾಮಮಂದಿರದ ಒಳದೃಶ್ಯಗಳ ಸೆರೆಹಿಡಿದ ಯುವಕ!
Bidar: ಗುತ್ತಿಗೆದಾರರ ಬಿಲ್ ಬಾಕಿ ಉಳಿಯಲು ಬಿಜೆಪಿ ಕಾರಣ, ಗ್ಯಾರಂಟಿಯಲ್ಲ: ಜಾರಕಿಹೊಳಿ
Jaiswal: ಚಾಂಪಿಯನ್ಸ್ ಟ್ರೋಫಿಗೆ ಯಶಸ್ವಿ ಜೈಸ್ವಾಲ್; ಇಂಗ್ಲೆಂಡ್ ಸರಣಿಯಲ್ಲೇ ಪದಾರ್ಪಣೆ?
Maha Kumbh Mela 2025: 144 ವರ್ಷಗಳಿಗೊಮ್ಮೆ ಮಹಾಕುಂಭ ಮೇಳ- ಇದರ ಹಿಂದಿದೆ ರೋಚಕ ಸಂಗತಿ!
Dharmasthala: ಭಾರತೀಯ ಆಧ್ಯಾತ್ಮಿಕ ತವರೂರು ಶ್ರೀ ಕ್ಷೇತ್ರ ಧರ್ಮಸ್ಥಳ: ಜಗದೀಪ್ ಧನ್ಕರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.