ಮನೆಗಳ ಮೇಲೆ ರಾಷ್ಟ್ರ ಧ್ವಜಾರೋಹಣ: ಕ್ರಮಕ್ಕೆ ಸೂಚನೆ


Team Udayavani, Jul 27, 2022, 5:30 AM IST

ಮನೆಗಳ ಮೇಲೆ ರಾಷ್ಟ್ರ ಧ್ವಜಾರೋಹಣ: ಕ್ರಮಕ್ಕೆ ಸೂಚನೆ

ಮಂಗಳೂರು: ಸ್ವಾತಂತ್ರ್ಯದ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ಆ. 13ರಿಂದ 15ರ ವರೆಗೆ ಹಮ್ಮಿಕೊಂಡಿರುವ “ಹರ್‌ ಘರ್‌ ತಿರಂಗಾ’ ಕಾರ್ಯಕ್ರಮದಡಿ ಮನೆಗಳ ಮೇಲೆ ರಾಷ್ಟ್ರಧ್ವಜ ಹಾರಿಸಿ ರಾಷ್ಟ್ರಪ್ರೇಮ ಅಭಿವ್ಯಕ್ತಿಗೊಳಿಸಲು ಅನುಕೂಲವಾಗುವಂತೆ ಜಿಲ್ಲೆಯ ಎಲ್ಲ ನಗರ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು, ಗ್ರಾಮೀಣ ಭಾಗದಲ್ಲಿ ತಾ.ಪಂ. ಇಒಗಳು, ಪಿಡಿಒಗಳು ಪೂರಕ ಕ್ರಮ ಕೈಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಡಾ| ಕೆ.ವಿ. ರಾಜೇಂದ್ರ ನಿರ್ದೇಶನ ನೀಡಿದರು.

ಜಿಲ್ಲಾಧಿಕಾರಿಯವರ ಕಚೇರಿಯಲ್ಲಿ ಮಂಗಳವಾರ ವೀಡಿಯೋ ಕಾನ್ಫರೆನ್ಸ್‌ ಮೂಲಕ ಹಮ್ಮಿಕೊಳ್ಳಲಾಗಿದ್ದ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಎಲ್ಲ ಮನೆಗಳ ಮೇಲೂ ರಾಷ್ಟ್ರಧ್ವಜ ಹಾರಿಸಲು ಅನುಕೂಲವಾಗುವಂತೆ ಧ್ವಜಗಳನ್ನು ಸರಬರಾಜು ಮಾಡಬೇಕಿದ್ದು, ಎನ್‌.ಆರ್‌.ಎಲ್‌.ಎಂ. ಮೂಲಕ ಸ್ವಸಹಾಯ ಸಂಘಗಳ ಸದಸ್ಯರಿಗೆ ಧ್ವಜ ಸಿದ್ಧಪಡಿಸಿ ನೀಡುವ ಆದೇಶ ನೀಡಲಾಗಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮೂಲಕವೂ ಧ್ವಜಗಳ ಸರಬರಾಜಾಗುತ್ತಿದ್ದು, ಅವುಗಳನ್ನು ವಿತರಿಸಲು ಅನುಕೂಲವಾಗುವಂತೆ ತಾಲೂಕು ಮಟ್ಟದಲ್ಲಿ ತಹಶೀಲ್ದಾರರು ಸಭೆ ನಡೆಸುವಂತೆ ತಿಳಿಸಿದರು.

ಹಾನಿಗೀಡಾದ ಮನೆಗಳ ಪಟ್ಟಿ
ಮಳೆ ಅಥವಾ ಪ್ರವಾಹದಿಂದ ಹಾನಿಗೀಡಾದ ಮನೆಗಳ ಪಟ್ಟಿಯನ್ನು ಜು. 31ರೊಳಗೆ ಜಿಲ್ಲೆಯ ಎಲ್ಲ ತಹಶೀಲ್ದಾರರು ಹಾಗೂ ತಾ.ಪಂ.ಗಳ ಇಒಗಳು ಕಡ್ಡಾಯವಾಗಿ ದಾಖಲಿಸಬೇಕು ಎಂದು ಸೂಚನೆ ನೀಡಿದರು.

ಡೀಮ್ಡ್ ಅರಣ್ಯ
ಡೀಮ್ಡ್ ಅರಣ್ಯ ವ್ಯಾಪ್ತಿಯಿಂದ ಕಂದಾಯ ಇಲಾಖೆಗೆ ವಾಪಸ್‌ ಆಗುವ ಭೂಮಿಯನ್ನು ತಾಲೂಕು ಮಟ್ಟದಲ್ಲಿ ತಹಶೀಲ್ದಾರರು ಹಾಗೂ ಅರಣ್ಯ ಅಧಿಕಾರಿಗಳು ಪರಸ್ಪರ ಚರ್ಚಿಸಿ, ಯಾವ ಯಾವ ಸರ್ವೇ ನಂಬರುಗಳು ಡೀಮ್ಡ್ ಅರಣ್ಯದಿಂದ ಕಂದಾಯ ಇಲಾಖೆಯ ಸುಪರ್ದಿಗೆ ಒಳಪಡುತ್ತವೆ ಎಂಬುದನ್ನು ಕೂಲಂಕಷವಾಗಿ ಪರಿಶೀಲಿಸಬೇಕು. ಅನಂತರ ಅರ್ಹ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಿಸಬೇಕು, ಈ ವೇಳೆ ಅನಧಿಕೃತ ನಿವೇಶನ ಹೊಂದಿದವರಿಗೆ ಹಕ್ಕು ಪತ್ರ ನೀಡಿದ್ದಲ್ಲಿ ಸಂಬಂಧಿಸಿದ ಅಧಿಕಾರಿಯ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲಿಸಲಾಗುವುದು ಎಂದು ಎಚ್ಚರಿಕೆ ನೀಡಿದ ಅವರು ಹಕ್ಕುಪತ್ರ ನೀಡುವುದಕ್ಕೂ ಮೊದಲು ಅರ್ಹ ಫಲಾನುಭವಿಗಳ ಮನೆಗೆ ತಹಶೀಲ್ದಾರರು ಕಡ್ಡಾಯವಾಗಿ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಲೇಬೇಕು ಹಾಗೂ ಅದನ್ನು ನಿಯಮಾನುಸಾರ ಕಡತದಲ್ಲಿ ದಾಖಲಿಸಬೇಕು ಎಂದು ಸೂಚಿಸಿದರು.

ಜಿ.ಪಂ. ಸಿಇಒ ಡಾ| ಕುಮಾರ್‌, ಎಸ್‌ಪಿ ಹೃಷಿಕೇಶ್‌ ಭಗವಾನ್‌ ಸೋನಾವಣೆ, ಎಡಿಸಿ ಕೃಷ್ಣಮೂರ್ತಿ, ಎಸಿ ಮದನ್‌ ಮೋಹನ್‌, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರಾಜೇಶ್‌, ಕಾರ್ಖಾನೆಗಳು ಹಾಗೂ ಬಾಯ್ಲರ್‌ ಉಪ ನಿರ್ದೇಶಕ ರಾಜೇಶ್‌ ಮಿಶ್ರಿಕೋಟೆ, ಕೃಷಿ ಇಲಾಖೆಯ ಉಪ ನಿರ್ದೇಶಕಿ ಭಾರತಮ್ಮ, ಬಾಳ ಗ್ರಾ.ಪಂ. ಅಧ್ಯಕ್ಷರು, ಪಿಡಿಒಗಳು, ಎಂಆರ್‌ಪಿಎಲ್‌ ಅಧಿಕಾರಿಗಳು ಮೊದಲಾದವರು ಭಾಗವಹಿಸಿದ್ದರು.

ಟಾಪ್ ನ್ಯೂಸ್

sunil-karkala

Waqf Notice: ನೋಟಿಸ್‌ ಕಣ್ತಪ್ಪಿನ ಕಾರ್ಯವಲ್ಲ, ಸರಕಾರದ ವ್ಯವಸ್ಥಿತ ಷಡ್ಯಂತ್ರ: ವಿ.ಸುನೀಲ್‌

ಮತ್ತೆ ಅಗ್ರ ಹತ್ತರೊಳಗೆ ಬಂದ ಹರ್ಮನ್‌ಪ್ರೀತ್ ಕೌರ್

ODI Rankings: ಮತ್ತೆ ಅಗ್ರ ಹತ್ತರೊಳಗೆ ಬಂದ ಹರ್ಮನ್‌ಪ್ರೀತ್ ಕೌರ್

ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ

Davanagere: ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ

aane

Shimoga; ವಿದ್ಯುತ್‌ ಬೇಲಿ ಸ್ಪರ್ಶಿಸಿ ಕಾಡಾನೆ ಸಾವು; ಜಮೀನು ಮಾಲೀಕನ ಬಂಧನ

Kalaburagi: Arrest of three including husband who hits his wife

Kalaburagi: ಗುರುತು ಸಿಗದ ಹಾಗೆ ಪತ್ನಿಯ ಹತ್ಯೆಗೈದ ಪತಿ ಸೇರಿ ಮೂವರ ಬಂಧನ

Surya—jagadmbika-Pal-(JPC)

Waqf Issue: ಹುಬ್ಬಳ್ಳಿ, ವಿಜಯಪುರಕ್ಕೆ ನ.7ರಂದು ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್ ಭೇಟಿ

3-udupi

Udupi: ವಕ್ಫ್ ಬೋರ್ಡ್ ಭೂ ಕಬಳಿಕೆ  ಖಂಡಿಸಿ ನ.6 ರಂದು ಬೃಹತ್ ಪ್ರತಿಭಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11

Vyasanagar: ಮಣ್ಣಿನ ಒಳ ರಸ್ತೆಗಳಿಗೆ ಬೇಕು ಬೀದಿದೀಪ

10

Mangalore: ಅಡ್ಯಾರ್‌ ಕಣ್ಣೂರಿನಲ್ಲಿ ತ್ಯಾಜ್ಯ ಸುಡುವಿಕೆಯಿಂದ ಪರಿಸರ ಮಾಲಿನ್ಯ

9

Bunts Hostel, ಕರಂಗಲ್ಪಾಡಿ ಜಂಕ್ಷನ್‌: ಶಾಶ್ವತ ಡಿವೈಡರ್‌ ನಿರ್ಮಾಣ ಕಾಮಗಾರಿ

8

Mangaluru: ರಾತ್ರಿ ಪ್ರಿಪೇಯ್ಡ್  ಆಟೋ ಇಲ್ಲದೆ ಪ್ರಯಾಣಿಕರ ಪರದಾಟ

7

Urwa: ಬಾಯ್ದೆರೆದ ಕಾಂಕ್ರೀಟ್‌ ಚೇಂಬರ್‌ಗಳಿಗೆ ಬಿತ್ತು ಮುಚ್ಚಳ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

sunil-karkala

Waqf Notice: ನೋಟಿಸ್‌ ಕಣ್ತಪ್ಪಿನ ಕಾರ್ಯವಲ್ಲ, ಸರಕಾರದ ವ್ಯವಸ್ಥಿತ ಷಡ್ಯಂತ್ರ: ವಿ.ಸುನೀಲ್‌

ಮತ್ತೆ ಅಗ್ರ ಹತ್ತರೊಳಗೆ ಬಂದ ಹರ್ಮನ್‌ಪ್ರೀತ್ ಕೌರ್

ODI Rankings: ಮತ್ತೆ ಅಗ್ರ ಹತ್ತರೊಳಗೆ ಬಂದ ಹರ್ಮನ್‌ಪ್ರೀತ್ ಕೌರ್

2

Kasaragod: ಸಿಡಿಲು ಬಡಿದು ಹಾನಿ; 25 ಲಕ್ಷ ರೂ. ನಷ್ಟ

ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ

Davanagere: ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ

aane

Shimoga; ವಿದ್ಯುತ್‌ ಬೇಲಿ ಸ್ಪರ್ಶಿಸಿ ಕಾಡಾನೆ ಸಾವು; ಜಮೀನು ಮಾಲೀಕನ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.