Red Alert; ದ.ಕನ್ನಡ ಜಿಲ್ಲೆಯಲ್ಲಿ ಜು.31ರಂದು ಶಾಲೆಗಳಿಗೆ ರಜೆ ಘೋಷಣೆ
Team Udayavani, Jul 30, 2024, 8:13 PM IST
ಮಂಗಳೂರು: ಜಿಲ್ಲೆಯಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯ ಕಾರಣದಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜು.31ರಂದು ಬುಧವಾರ ಪದವಿಪೂರ್ವ ಕಾಲೇಜುವರೆಗೆ ಶಾಲೆ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಮಳೆ ಅಬ್ಬರ, ಪ್ರವಾಹ ಹಿನ್ನೆಲೆಯಲ್ಲಿ ಜು.31ರ ಬುಧವಾರ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ರಜೆ ಘೋಷಿಸಿದ್ದಾರೆ.
ಬುಧವಾರ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಜನರು ತಗ್ಗು ಪ್ರದೇಶಗಳಿಗೆ ತೆರಳದಂತೆ, ನದಿ ಪಾತ್ರದ ಜನರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ.
ಚಿಕ್ಕಮಗಳೂರು 6 ತಾಲೂಕಿನ ಶಾಲೆಗಳಿಗೆ ರಜೆ
ಮಲೆನಾಡಿಗೆ ರೆಡ್ ಅಲರ್ಟ್ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಜಿಲ್ಲೆಯ ಆರು ತಾಲೂಕಿನ ಅಂಗನವಾಡಿ, ಶಾಲಾ ಕಾಲೇಜು, ಪದವಿ ಕಾಲೇಜಿಗೂ ರಜೆ ಘೋಷಣೆ ಮಾಡಲಾಗಿದೆ.
ಮೂಡಿಗೆರೆ, ಕಳಸ, ಶೃಂಗೇರಿ, ಕೊಪ್ಪ, ಎನ್.ಆರ್.ಪುರ, ಚಿಕ್ಕಮಗಳೂರು, ತಾಲೂಕಿನ ಅಂಗನವಾಡಿ, ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದ್ದು, ಬಯಲುಸೀಮೆ ತಾಲೂಕುಗಳಾದ ಕಡೂರು, ತರೀಕೆರೆ, ಅಜ್ಜಂಪುರಕ್ಕೆ ರಜೆ ಇಲ್ಲ ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಆಟೋ ವರ್ಕಶಾಪ್ನಿಂದ 93,540 ರೂ. ಕಳವು
Mangaluru: ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿ ಮನೆ ಮೇಲೆ ಲೋಕಾ ದಾಳಿ
Mangaluru: ವಕ್ಫ್ ಭೂಮಿ ಅತಿಕ್ರಮಣ: ಸಲ್ಲಿಕೆಯಾದ ವರದಿ ಬಗ್ಗೆ ತನಿಖೆಯಾಗಲಿ: ಮಾಣಿಪ್ಪಾಡಿ
Ullala: ಯುವತಿಯ ಮಾನಭಂಗಕ್ಕೆ ಯತ್ನ: ಬಾಲಕ ವಶಕ್ಕೆ
Doctor; ಖ್ಯಾತ ಹೃದ್ರೋಗ ತಜ್ಞ ಡಾ.ಎಸ್.ಜಿ.ಸರ್ವೋತ್ತಮ ಪ್ರಭು ವಿಧಿವಶ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.