ದೀಪಕ್, ಬಶೀರ್ ಮನೆಗೆ ಗೃಹ ಸಚಿವ ರಾಮಲಿಂಗಾ ರೆಡ್ಡಿ ಭೇಟಿ
Team Udayavani, Jan 13, 2018, 9:54 AM IST
ಸುರತ್ಕಲ್ : ಇತ್ತೀಚೆಗೆ ದುಷ್ಕರ್ಮಿಗಳ ಇರಿತಕ್ಕೆ ಈಡಾಗಿ ನಿಧನ ಹೊಂದಿದ ಕಾಟಿಪಳ್ಳದ ದೀಪಕ್ ರಾವ್ ಮನೆಗೆ ಗೃಹ ಸಚಿವ ರಾಮಲಿಂಗಾ ರೆಡ್ಡಿ ಭೇಟಿ ನೀಡಿ ದೀಪಕ್ ತಾಯಿ ಹಾಗೂ ಕುಟುಂಬಕ್ಕೆ ಸಾಂತ್ವಾನ ಹೇಳಿದರು.
ಬಳಿಕ ಮಾಧ್ಯಮದೊಂದಿಗೆ ಮಾತನಾಡಿ, ಆರೋಪಿಗಳಿಗೆ ತಕ್ಕ ಶಿಕ್ಷೆಯಾದಲ್ಲಿ ದೀಪಕ್ ರಾವ್ ಆತ್ಮಕ್ಕೆ ಶಾಂತಿ ಸಿಕ್ಕಂತೆ. ಪೊಲೀಸರು ಈ ಬಗ್ಗೆ ಕ್ರಮ ಕೈಗೊಳ್ಳಲಿದ್ದಾರೆ. ಮುಖ್ಯಮಂತ್ರಿಗಳು ಇತ್ತೀಚೆಗೆ ಆಗಮಿಸಿ ಪರಿಹಾರ ನೀಡುವಲ್ಲಿ ಮುತುವರ್ಜಿ ವಹಿಸಿದ್ದಾರೆ ಎಂದರು.
ಶರತ್ ಮಡಿವಾಳ ಕುಟುಂಬಕ್ಕೆ ಸರಿಯಾಗಿ ಪರಿಹಾರ ಸಿಕ್ಕಿಲ್ಲ ಎಂಬ ದೂರುಗಳಿವೆ ಎಂಬ ಪ್ರಶ್ನೆಗೆ ಆ ಸಂದರ್ಭ ತಾನು ಗೃಹ ಮಂತ್ರಿಯಾಗಿರಲಿಲ್ಲ. ಈ ಬಗ್ಗೆ ಪರಿಶೀಲಿಸಲಾಗುವುದು ಎಂದರು. ಶಾಸಕ ಮೊದಿನ್ ಬಾವಾ, ಪ್ರತಿಭಾ ಕುಳಾಯಿ, ಭಾಸ್ಕರ ಮೊಲಿ, ಸುಧೀರ್ ಟಿ.ಕೆ., ಮಂಗಳೂರು ಪೊಲೀಸ್ ಕಮಿಷನರ್ ಟಿ.ಆರ್. ಸುರೇಶ್ ಮೊದಲಾದವರು ಈ ಸಂದರ್ಭ ಉಪಸ್ಥಿತರಿದ್ದರು.
ಮಹಾನಗರ : ಹತ್ಯೆಗೀಡಾದ ಅಬ್ದುಲ್ ಬಶೀರ್ ಅವರ ಮನೆಗೆ ಗೃಹ ಸಚಿವ ರಾಮಲಿಂಗಾ ರೆಡ್ಡಿ ಅವರು ಶುಕ್ರವಾರ ಭೇಟಿ ನೀಡಿ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು.
ಶಾಸಕ ಬಿ.ಎ. ಮೊಯಿದಿನ್ ಬಾವಾ, ಕಾರ್ಪೊರೇಟರ್‌ಗಳಾದ ದೀಪಕ್ ಪೂಜಾರಿ, ಪ್ರತಿಭಾ ಕುಳಾಯಿ, ಭಾಸ್ಕರ ಮೊಲಿ, ಕೆ.ಎಸ್. ಆರ್.ಟಿ.ಸಿ. ನಿರ್ದೇಶಕ ಟಿ.ಕೆ. ಸುಧೀರ್, ಪೊಲೀಸ್ ಆಯುಕ್ತ ಟಿ.ಆರ್. ಸುರೇಶ್ ಮೊದಲಾದವರಿದ್ದರು. ಬಶೀರ್ ಅವರ ಪುತ್ರ ಇರ್ಫಾನ್, ಸಹೋದರ ಅಬ್ದುಲ್ ಲತೀಫ್, ಚಿಕ್ಕಪ್ಪನ ಪುತ್ರರಾದ ಅಲಿ, ಮಹಮದ್ ಹನೀಫ್, ಕುಟುಂಬದ ಸದಸ್ಯರು ಉಪಸ್ಥಿತರಿದ್ದರು. ಕೃತ್ಯ ಎಸಗಿದವರಿಗೆ ಶಿಕ್ಷೆಯಾಗಬೇಕು; ಕೃತ್ಯದಲ್ಲಿ 7 ಮಂದಿ ಇದ್ದರು ಎನ್ನಲಾ ಗುತ್ತಿದ್ದು, ಈಗಾಗಲೇ ನಾಲ್ವರನ್ನು ಬಂಧಿಸಲಾಗಿದ್ದು, ಇನ್ನುಳಿದ ಎಲ್ಲ ಆರೋಪಿಗಳನ್ನು ಬಂಧಿಸಬೇಕು. ಅಲ್ಲದೆ ಇದರ ಹಿಂದಿರುವ ಶಕ್ತಿಗಳನ್ನು ಪತ್ತೆ ಮಾಡಬೇಕೆಂದು ಕುಟುಂಬಸ್ಥರು ಮನವಿ ನೀಡಿದರು. ಈ ಬಗ್ಗೆ ಪೊಲೀಸ್ ಆಯುಕ್ತರಿಗೆ ಸೂಚನೆ ನೀಡಲಾಗಿದೆ ಎಂದು ಸಚಿವರು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Flight; ಮಂಗಳೂರು – ಸಿಂಗಾಪುರ ನೇರ ವಿಮಾನ ಕೆಲ ಕಾಲ ಮುಂದಕ್ಕೆ?
Hassan-Mangaluru ಹಳಿ ದ್ವಿಗುಣ: ಅಂತಿಮ ಸ್ಥಳ ಸರ್ವೇಗೆ ಟೆಂಡರ್
ಕ್ಯುಆರ್ ಕೋಡ್ ಬದಲಿಸಿ ಬಂಕ್‌ಗೆ ಲಕ್ಷಾಂತರ ರೂ. ವಂಚನೆ
Tannirbhavi: ಜ. 11, 12ರ ಬೀಚ್ ಉತ್ಸವ, ಸ್ವಚ್ಛತೆ ಸುರಕ್ಷತೆಗೆ ಗರಿಷ್ಠ ಆದ್ಯತೆ: ಡಿಸಿ
Mangaluru ಎಚ್‌ಎಂಪಿ ವೈರಸ್; ಆತಂಕದ ಅಗತ್ಯವಿಲ್ಲ, ಚಳಿಗಾಲದಲ್ಲಿ ಶೀತ, ಜ್ವರ ಸಾಮಾನ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belagavi: ತಹಶೀಲ್ದಾರ್ ಮನೆ ಮೇಲೆ ಲೋಕಾಯುಕ್ತ ದಾಳಿ
ISRO: ಇಸ್ರೋ ನೂತನ ಅಧ್ಯಕ್ಷರಾಗಿ ವಿ.ನಾರಾಯಣನ್ ನೇಮಕ: ಚಿನ್ನದ ಪದಕ ವಿಜೇತ VN ಪರಿಚಯ…
Sandalwood: ಸ್ಪಾನ್ಸರ್ಸ್ ಇದಿದ್ರೆ ನಾನ್ಯಾಕೆ 12 ವರ್ಷ ಕಷ್ಟಪಡಬೇಕಿತ್ತು: ರಚಿತಾ ರಾಮ್
Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ
Atul Subhash Case: ಮೊಮ್ಮಗನನ್ನು ಟೆಕಿ ಅತುಲ್ ತಾಯಿಯ ಸುಪರ್ದಿಗೆ ವಹಿಸಲು ಸುಪ್ರೀಂ ನಕಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.