ಸಾಧಕರಿಗೆ ಗೌರವ ಸಮಾಜದ ಕರ್ತವ್ಯ

Team Udayavani, Jan 14, 2018, 1:09 PM IST

1301mlr37-Sandesha.jpg

ಮಂಗಳೂರು: ಅನನ್ಯ ಸಾಧಕರನ್ನು ಗುರುತಿಸಿ ಗೌರವಿಸುವುದು ಸಮಾಜದ ಕರ್ತವ್ಯ. ಇದು ಒಂದೆಡೆ ಸಾಧಕರಿಗೆ ಸಂತೃಪ್ತಿಯ ಭಾವ ನೀಡಿದರೆ, ಇನ್ನೊಂದೆಡೆ ಇನ್ನಷ್ಟು ಸಾಧಕರು ಮೂಡಿಬರಲು ಪ್ರೇರಣೆಯಾಗುತ್ತದೆ ಎಂದು ರಾಜ್ಯ ಹೈಕೋರ್ಟ್‌ ನ್ಯಾಯಾಧೀಶ ನ್ಯಾ| ಜಾನ್‌ ಮೈಕಲ್‌ ಡಿ’ಕುನ್ಹಾ ಹೇಳಿದರು. 

ಸಂದೇಶ ಸಂಸ್ಕೃತಿ ಮತ್ತು ಶಿಕ್ಷಣ ಪ್ರತಿಷ್ಠಾನದ ವತಿಯಿಂದ ನೀಡಲಾಗುವ ಈ ಬಾರಿಯ ಸಂದೇಶ ಪ್ರಶಸ್ತಿಗಳ ಪ್ರದಾನ ಸಮಾರಂಭದಲ್ಲಿ ಅವರು ಮುಖ್ಯ ಅತಿಥಿಯಾಗಿದ್ದರು.ಬಳ್ಳಾರಿ ಧರ್ಮಪ್ರಾಂತದ ಬಿಷಪ್‌ ರೈ| ರೆ| ಹೆನ್ರಿ ಡಿ’ಸೋಜಾ ಅಧ್ಯಕ್ಷತೆ ವಹಿಸಿದ್ದರು. 

ಸಂದೇಶ ಪ್ರಶಸ್ತಿ ಪ್ರದಾನ: ಖ್ಯಾತ ವಿಮರ್ಶಕ, ಸಾಹಿತಿ ಡಾ| ಗಿರಡ್ಡಿ ಗೋವಿಂದರಾಜ ಅವರಿಗೆ ಸಂದೇಶ ಕನ್ನಡ ಸಾಹಿತ್ಯ ಪ್ರಶಸ್ತಿ, ಖ್ಯಾತ ಕೊಂಕಣಿ ಸಾಹಿತಿ ಎಡಿ ನೆಟ್ಟೋ ಅವರಿಗೆ ಸಂದೇಶ ಕೊಂಕಣಿ ಸಾಹಿತ್ಯ ಪ್ರಶಸ್ತಿ, ಶಿಲ್ಪಿ ಅಶೋಕ್‌ ಗುಡಿಗಾರ್‌ ಅವರಿಗೆ ಸಂದೇಶ ಕಲಾ ಪ್ರಶಸ್ತಿ, ಉದಯವಾಣಿ ನಿವೃತ್ತ ಸಂಪಾದಕ ಎನ್‌. ಗುರುರಾಜ್‌ ಅವರಿಗೆ ಸಂದೇಶ ಮಾಧ್ಯಮ ಪ್ರಶಸ್ತಿ, ಶಿಕ್ಷಣದ ಜತೆ ಸಮಾಜ ಸೇವೆಯಲ್ಲೂ ತೊಡಗಿಸಿಕೊಂಡಿರುವ ಕೆ. ಗಾದಿಲಿಂಗಪ್ಪ ಅವರಿಗೆ ಸಂದೇಶ ಶಿಕ್ಷಣ ಪ್ರಶಸ್ತಿ, ಖ್ಯಾತ ಕೊಂಕಣಿ ಗಾಯಕ ವಿಲ್ಸನ್‌ ಒಲಿವೆರಾ ಅವರಿಗೆ ಸಂದೇಶ ಕೊಂಕಣಿ ಸಂಗೀತ ಪ್ರಶಸ್ತಿ ಹಾಗೂ ಭಿಕ್ಷುಕರ, ಮಾನಸಿಕ ರೋಗಿಗಳ, ಅಂಗವಿಕಲರ ಸೇವೆಯಲ್ಲಿ ತೊಡಗಿಸಿಕೊಂಡಿರುವ ಟಿ. ರಾಜ ಅವರಿಗೆ ಸಂದೇಶ ವಿಶೇಷ ಪ್ರಶಸ್ತಿ ಪ್ರದಾನ ಮಾಡಲಾಯಿತು. ಪ್ರಶಸ್ತಿಯು ಅಭಿನಂದನ ಪತ್ರ, ಪ್ರಶಸ್ತಿ ಫಲಕ ಹಾಗೂ 25,000 ರೂ. ನಗದು ಪುರಸ್ಕಾರವನ್ನು ಹೊಂದಿದೆ. ಮಂಗಳೂರು ಕೆಥೋಲಿಕ್‌ ಧರ್ಮಪ್ರಾಂತದ ಪ್ರಧಾನ ಗುರುಗಳಾದ ಮೊ| ಡೆನ್ನಿಸ್‌ ಮೊರಾಸ್‌ ಪ್ರಭು, ಶಾಸಕ ಜೆ.ಆರ್‌. ಲೋಬೋ ಅತಿಥಿಯಾಗಿದ್ದರು. ಸಹ ನಿರ್ದೇಶಕ ಬ್ರ| ವಿಕ್ಟರ್‌ ಕ್ರಾಸ್ತಾ ಉಪಸ್ಥಿತರಿದ್ದರು. 

ಪ್ರತಿಷ್ಠಾನದ ನಿರ್ದೇಶಕ ಫಾ| ವಿಕ್ಟರ್‌ ವಿಜಯ್‌ ಲೋಬೋ ಸ್ವಾಗತಿಸಿದರು. ಪ್ರಶಸ್ತಿ ಆಯ್ಕೆ ಸಮಿತಿ ಅಧ್ಯಕ್ಷ ನಾ. ಡಿ’ಸೋಜಾ ಪ್ರಸ್ತಾವನೆಗೈದರು. ಚಂದ್ರಕಲಾ ನಂದಾವರ, ಐರಿನ್‌ ರೆಬೆಲ್ಲೊ, ಉಷಾ ಫೆರ್ನಾಂಡಿಸ್‌, ಕಾನ್ಸೆಪಾr ಆಳ್ವ, ಆréನಿ ಅಲ್ವಾರಿಸ್‌, ಟೈಟಸ್‌ ನೊರೊನ್ನಾ, ಸಿ| ಅನಿತಾ ಸಾಧಕ ರನ್ನು ಪರಿಚಯಿಸಿದರು. ಪ್ರತಿಷ್ಠಾನದ ವಿಶ್ವಸ್ತರಾದ ರೋಯ್‌ ಕ್ಯಾಸ್ಟಲಿನೋ ವಂದಿಸಿ, ಅರುಣ್‌ ಉಳ್ಳಾಲ ನಿರೂಪಿಸಿದರು. 

ಮಾನವೀಯತೆಯ ಅನಾವರಣ ಸಂದೇಶ ವಿಶೇಷ ಪ್ರಶಸ್ತಿ ಪಡೆದ ಆಟೋರಾಜ ಅವರ ಸಾಧನೆಗಳ ಸಾಕ್ಷ್ಯಚಿತ್ರ ಮಾನವೀಯ ಸೇವೆಯ ಸಾಧ್ಯತೆಗಳ ಚಿತ್ರಣಗಳನ್ನು ಅನಾವರಣಗೊಳಿಸಿತು. ಮೂರನೇ ತರಗತಿ ಕಲಿತು ಮನೆಬಿಟ್ಟು ಓಡಿಹೋದ ಅಲೆಮಾರಿ ಹುಡುಗ ಆಟೋರಾಜ ಜೀವನದಲ್ಲಿ ಸಾಕಷ್ಟು ನೋವುಗಳು ಉಂಡ ಬಳಿಕ  ಸಮಾಜಸೇವಕನಾಗಿ ಪರಿವರ್ತನೆಗೊಂಡು ಕಳೆದ 20 ವರ್ಷಗಳಲ್ಲಿ ಬೆಂಗಳೂರಿನ ಬೀದಿಗಳಲ್ಲಿದ್ದ ಸುಮಾರು ಹತ್ತು ಸಾವಿರ ಭಿಕ್ಷುಕರನ್ನು, ಮಾನಸಿಕ ರೋಗಿಗಳನ್ನು, ಅಂಗವಿಕಲರನ್ನು, ಅನಾಥರನ್ನು ರಕ್ಷಿಸಿದ್ದಾರೆ.   

ಟಾಪ್ ನ್ಯೂಸ್

Rahul Gandhi: ದಲಿತನೆಂಬ ಕಾರಣಕ್ಕೆ ಪೊಲೀಸ್‌ ವಶದಲ್ಲಿ ವ್ಯಕ್ತಿ ಕೊ*ಲೆ

Rahul Gandhi: ದಲಿತನೆಂಬ ಕಾರಣಕ್ಕೆ ಪೊಲೀಸ್‌ ವಶದಲ್ಲಿ ವ್ಯಕ್ತಿ ಕೊ*ಲೆ

Congress MP: ವಾರಕ್ಕೆ 70 ಗಂಟೆ ಬೇಡ, 4 ದಿನ ಕೆಲಸ ಸಾಕು: ತ.ನಾಡು ಸಂಸದ ಕಾರ್ತಿ

Congress MP: ವಾರಕ್ಕೆ 70 ಗಂಟೆ ಬೇಡ, 4 ದಿನ ಕೆಲಸ ಸಾಕು: ತ.ನಾಡು ಸಂಸದ ಕಾರ್ತಿ

ಕರಾವಳಿಯಲ್ಲಿ “ಕರ್ನಾಟಕ ಕೂಟ’: ಜ. 17-23ರ ವರೆಗೆ ಮಂಗಳೂರು, ಉಡುಪಿಯಲ್ಲಿ

ಕರಾವಳಿಯಲ್ಲಿ “ಕರ್ನಾಟಕ ಕೂಟ’: ಜ. 17-23ರ ವರೆಗೆ ಮಂಗಳೂರು, ಉಡುಪಿಯಲ್ಲಿ

Vijay Hazare Trophy: ಕರ್ನಾಟಕಕ್ಕೆ ಸತತ 2ನೇ ಗೆಲುವಿನ ಸಿಹಿVijay Hazare Trophy: ಕರ್ನಾಟಕಕ್ಕೆ ಸತತ 2ನೇ ಗೆಲುವಿನ ಸಿಹಿ

Vijay Hazare Trophy: ಕರ್ನಾಟಕಕ್ಕೆ ಸತತ 2ನೇ ಗೆಲುವಿನ ಸಿಹಿ

1-traa

Udupi- Mangaluru; ವರ್ಷಾಂತ್ಯಕ್ಕೆ ಹೆಚ್ಚಿದ ಪ್ರವಾಸಿಗರು: ಟ್ರಾಫಿಕ್‌ ಜಾಮ್‌

Pro Kabaddi League: ಗುಜರಾತ್‌ ಜೈಂಟ್ಸ್‌ ವಿರುದ್ಧದಬಾಂಗ್‌ ಡೆಲ್ಲಿಗೆ ಗೆಲುವುPro Kabaddi League: ಗುಜರಾತ್‌ ಜೈಂಟ್ಸ್‌ ವಿರುದ್ಧದಬಾಂಗ್‌ ಡೆಲ್ಲಿಗೆ ಗೆಲುವು

Pro Kabaddi League: ಗುಜರಾತ್‌ ಜೈಂಟ್ಸ್‌ ವಿರುದ್ಧದಬಾಂಗ್‌ ಡೆಲ್ಲಿಗೆ ಗೆಲುವು

ಸರಣಿ ಕ್ಲೀನ್‌ ಸ್ವೀಪ್‌ ಗೈದ ಪಾಕಿಸ್ಥಾನ

PAK Vs SA: ಸರಣಿ ಕ್ಲೀನ್‌ ಸ್ವೀಪ್‌ ಗೈದ ಪಾಕಿಸ್ಥಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-KDP

Dakshina Kannada; ಜಿಲ್ಲಾ ಕೆಡಿಪಿ ಸಭೆ: ಕರಾವಳಿ ನಿರ್ಲಕ್ಷ್ಯ ಆರೋಪಿಸಿ ಬಿಜೆಪಿ ಸಭಾತ್ಯಾಗ

police

Bajpe; ದನಗಳನ್ನು ಕಳವು ಮಾಡಿ ವ*ಧೆ: ಇಬ್ಬರ ಬಂಧನ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

Mandya_SAHITYA

Priority: ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಅವಕಾಶ ವಂಚಿತ ಯಕ್ಷಗಾನ

Mulki-kambla

Mulki: ಕಂಬಳದಿಂದ ಕೃಷಿ, ಧಾರ್ಮಿಕ ನಂಬಿಕೆ ವೃದ್ಧಿ: ನ್ಯಾ. ಎನ್‌. ಸಂತೋಷ್‌ ಹೆಗ್ಡೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Rahul Gandhi: ದಲಿತನೆಂಬ ಕಾರಣಕ್ಕೆ ಪೊಲೀಸ್‌ ವಶದಲ್ಲಿ ವ್ಯಕ್ತಿ ಕೊ*ಲೆ

Rahul Gandhi: ದಲಿತನೆಂಬ ಕಾರಣಕ್ಕೆ ಪೊಲೀಸ್‌ ವಶದಲ್ಲಿ ವ್ಯಕ್ತಿ ಕೊ*ಲೆ

Congress MP: ವಾರಕ್ಕೆ 70 ಗಂಟೆ ಬೇಡ, 4 ದಿನ ಕೆಲಸ ಸಾಕು: ತ.ನಾಡು ಸಂಸದ ಕಾರ್ತಿ

Congress MP: ವಾರಕ್ಕೆ 70 ಗಂಟೆ ಬೇಡ, 4 ದಿನ ಕೆಲಸ ಸಾಕು: ತ.ನಾಡು ಸಂಸದ ಕಾರ್ತಿ

ಕರಾವಳಿಯಲ್ಲಿ “ಕರ್ನಾಟಕ ಕೂಟ’: ಜ. 17-23ರ ವರೆಗೆ ಮಂಗಳೂರು, ಉಡುಪಿಯಲ್ಲಿ

ಕರಾವಳಿಯಲ್ಲಿ “ಕರ್ನಾಟಕ ಕೂಟ’: ಜ. 17-23ರ ವರೆಗೆ ಮಂಗಳೂರು, ಉಡುಪಿಯಲ್ಲಿ

aane

Uppinangady; ಕಾಡಾನೆ ಸಂಚಾರದಿಂದ ಹಿರೇಬಂಡಾಡಿ ಗ್ರಾಮಸ್ಥರು ಭಯಭೀತ

Vijay Hazare Trophy: ಕರ್ನಾಟಕಕ್ಕೆ ಸತತ 2ನೇ ಗೆಲುವಿನ ಸಿಹಿVijay Hazare Trophy: ಕರ್ನಾಟಕಕ್ಕೆ ಸತತ 2ನೇ ಗೆಲುವಿನ ಸಿಹಿ

Vijay Hazare Trophy: ಕರ್ನಾಟಕಕ್ಕೆ ಸತತ 2ನೇ ಗೆಲುವಿನ ಸಿಹಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.