ಹೊಸಮಠ ಸೇತುವೆ: ಈ ಮಳೆಗಾಲಕ್ಕೂ ಅನುಮಾನ 

Team Udayavani, May 23, 2018, 4:00 PM IST

23-may-19.jpg

ಕಡಬ: ತಾ| ಕೇಂದ್ರ ವಾಗಿರುವ ಕಡಬವನ್ನು ಮಳೆಗಾಲದಲ್ಲಿ ಸಂಪರ್ಕಿಸಲು ಪ್ರಮುಖ ತೊಡಕಾ ಗಿರುವುದು ಹೊಸಮಠದ ಮುಳುಗು ಸೇತುವೆ. ಹೊಸಮಠ ಮುಳುಗು ಸೇತುವೆ ಯ ಪಕ್ಕ ಹೊಸ ಸೇತುವೆ ನಿರ್ಮಾಣ ಕಾಮ ಗಾರಿ ಕಳೆದ ವರ್ಷವೇ ಮುಗಿದಿತ್ತು. ಆದರೆ ಸಂಪರ್ಕ ರಸ್ತೆ ನಿರ್ಮಾಣ ಕಾಮಗಾರಿ ಮಾತ್ರ ಆಮೆಗತಿಯಲ್ಲಿ ಸಾಗುತ್ತಿದೆ.

ಎಲ್ಲವೂ ಅಂದುಕೊಂಡಂತೆಯೇ ನಡೆದಿದ್ದರೆ ಸೇತುವೆಯ ಇಕ್ಕೆಲಗಳ ಸಂಪರ್ಕ ರಸ್ತೆಯ ಕಾಮಗಾರಿಯೂ ಪೂರ್ತಿಯಾಗಿ ಎರಡು ವರ್ಷಗಳ ಹಿಂದೆಯೇ ಮಳೆಗಾಲದಲ್ಲಿ ಮುಳುಗಡೆಯ ಭೀತಿ ಇಲ್ಲದೆ ಹೊಸ ಸೇತುವೆಯ ಮೇಲೆ ವಾಹನಗಳು ಸಂಚರಿಸಬಹುದಾಗಿತ್ತು. ಆದರೆ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ಇಚ್ಛಾಶಕ್ತಿಯ ಕೊರತೆ, ಜನರ ಅಸಹಕಾರ ಪ್ರವೃತ್ತಿಯ ಕಾರಣದಿಂದಾಗಿ ಸೇತುವೆಯ ಉಪಯೋಗಕ್ಕೆ ಇನ್ನೂ ಕಾಲ ಕೂಡಿ ಬಂದಿಲ್ಲ.

ಜಾಗದ ಸಮಸ್ಯೆ
ಈ ಮಳೆಗಾಲದಲ್ಲಿಯೂ ಹೊಸಮಠ ಮುಳುಗು ಸೇತುವೆಯ ಭೀತಿ ತಪ್ಪಿಲ್ಲ. ಸಂಪರ್ಕ ರಸ್ತೆಗೆ ಸಂಬಂಧಿಸಿದ ಭೂ ಸ್ವಾಧೀನ ಪ್ರಕ್ರಿಯೆಯಲ್ಲಿ ತೊಡಕುಂಟಾದ ಕಾರಣದಿಂದಾಗಿ ಕಾಮಗಾರಿ ವಿಳಂಬವಾಗಿದೆ. ಸೇತುವೆಯ ಎರಡೂ ಕಡೆಗಳಲ್ಲಿ ಸಂಪರ್ಕ ರಸ್ತೆ ನಿರ್ಮಾಣಕ್ಕಾಗಿ ಒಟ್ಟು 45 ಸೆಂಟ್ಸ್‌ ಖಾಸಗಿ ಭೂಮಿಯನ್ನು ಸ್ವಾಧೀನ ಪಡಿಸಿಕೊಳ್ಳಲು ಈ ಹಿಂದೆ ಗುರುತಿಸಲಾಗಿತ್ತು. ಇದೀಗ ಅದನ್ನು ಕಡಿತಗೊಳಿಸಿ ಕಡಬ ದಿಕ್ಕಿನಲ್ಲಿ ಸುಕೇಶ್‌ ಹೆಬ್ಟಾರ್‌ (2 ಸೆಂಟ್ಸ್‌) ಹಾಗೂ ಗಿರಿಯಪ್ಪ ಗೌಡ (16 ಸೆಂಟ್ಸ್‌ ) ಅವರಿಗೆ ಸೇರಿದ ಒಟ್ಟು 18 ಸೆಂಟ್ಸ್‌ ಭೂಮಿಯನ್ನು ಮಾತ್ರ ಸ್ವಾಧೀನಪಡಿಸಿಕೊಂಡು ಕಾಮಗಾರಿ ನಡೆಸಲಾಗುತ್ತಿದೆ. ಉಪ್ಪಿನಂಗಡಿ ಭಾಗದಲ್ಲಿ ಸಂಪರ್ಕ ರಸ್ತೆಯ ಕಾಮಗಾರಿಗೆ ತೊಡಕಾಗಿರುವ ಎಚ್‌ಟಿ ಲೈನ್‌ನ ವಿದ್ಯುತ್‌ ಕಂಬವನ್ನು ಮೆಸ್ಕಾಂನವರು ತೆರವುಗೊಳಿಸಿಕೊಡಬೇಕಿದೆ. ಕಡಬ ಭಾಗದಲ್ಲಿ ಸಂಪರ್ಕ ರಸ್ತೆ ನಿರ್ಮಿಸಬೇಕಾದ ಜಾಗದ ಪಕ್ಕದಲ್ಲಿರುವ ನೀರು ಹರಿಯುವ ತೋಡಿಗೆ ತಡೆಗೋಡೆ ನಿರ್ಮಿಸುವ ಕೆಲಸ ನಡೆಯುತ್ತಿದೆ.

7.50 ಕೋಟಿ ರೂ. ಅನುದಾನ 
ಹೊಸಮಠದಲ್ಲಿ ನೂತನ ಸೇತುವೆ ನಿರ್ಮಾಣಕ್ಕಾಗಿ 7.50 ಕೋಟಿ ರೂ. ಬಿಡುಗಡೆಯಾಗಿದೆ. ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮ (ಕೆಆರ್‌ಡಿಸಿಎಲ್‌) ಅಡಿಯಲ್ಲಿ ಅನುದಾನ ಮಂಜೂರಾಗಿದ್ದು, ಕಾಮಗಾರಿ ನಡೆಯುತ್ತಿದೆ. ಈಗ ಇರುವ ಸೇತುವೆಗಿಂತ ಎತ್ತರದಲ್ಲಿ ಹೊಸ ಸೇತುವೆ ನಿರ್ಮಾಣವಾಗಿದೆ. 125 ಮೀ. ಉದ್ದ ಹಾಗೂ 12 ಮೀ. ಅಗಲದಲ್ಲಿ ತಡೆಬೇಲಿಯನ್ನು ಒಳಗೊಂಡ 6 ಪಿಲ್ಲರ್‌ಗಳ ಸುಂದರ ಸೇತುವೆ ನಿರ್ಮಾಣಗೊಂಡು ಸಾರ್ವಜನಿಕರ ಉಪಯೋಗಕ್ಕೆ ತೆರೆದುಕೊಳ್ಳಲಿದೆ. ಪ್ರಸ್ತುತ ಇರುವ ಸೇತುವೆಯನ್ನು ಹಾಗೆಯೇ ಉಳಿಸಿಕೊಂಡು ಸಂಚಾರಕ್ಕೆ ತೊಂದರೆಯಾಗದ ರೀತಿಯಲ್ಲಿ ಸೇತುವೆ ನಿರ್ಮಾಣ ಕಾಮಗಾರಿ ನಡೆಸಲಾಗಿದೆ.

ಮಳೆಗಾಲಕ್ಕೆ ಮೊದಲು ಪೂರ್ಣ
ಸಂಪರ್ಕ ರಸ್ತೆಗೆ ಬೇಕಾದ ಭೂಮಿಯ ಸ್ವಾಧೀನ ಪ್ರಕ್ರಿಯೆ ತಡವಾದುದರಿಂದ ಕಾಮಗಾರಿಗೆ ತಡೆಯುಂಟಾಗಿತ್ತು. ಇದೀಗ ಸಮಸ್ಯೆ ಬಗೆಹರಿದಿದೆ. ಸರಕಾರವು ಸದ್ರಿ ಭೂಮಿಯನ್ನು ಭೂ ಮಾಲಕರಿಗೆ ಭೂಮಿಯ ಮೌಲ್ಯ ನೀಡಿ ಖರೀದಿ ಮಾಡಿದೆ. ಮಳೆಗಾಲ ಆರಂಭವಾಗುವ ಮೊದಲು ಸಂಪರ್ಕ ರಸ್ತೆಯ ಕಾಮಗಾರಿ ಪೂರ್ತಿಗೊಳಿಸಿ ಸಾರ್ವಜನಿಕರ ಉಪಯೋಗಕ್ಕೆ ನೀಡುವ ಪ್ರಯತ್ನದಲ್ಲಿದ್ದೇವೆ.
– ಪುಟ್ಟಸ್ವಾಮಿ ಎಇಇ, ಕೆಆರ್‌ಡಿಸಿಎಲ್‌, ಹಾಸನ

 ನಾಗರಾಜ್‌ ಎನ್‌.ಕೆ.

ಟಾಪ್ ನ್ಯೂಸ್

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

11-elephant

Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Sandalwood: ಮಾಸ್‌ ಸಿನಿಮಾಗಳಿಗ ಜೈ ಎಂದ ಪ್ರೇಕ್ಷಕ

Sandalwood: ಮಾಸ್‌ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Waqf Protest: People will overthrow the state government: Protest in Davangere

Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

kop

Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ

ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ಮಿಕ್ಸಿಂಗ್ ವಾಹನ ಪಲ್ಟಿ… ತಪ್ಪಿದ ಅನಾಹುತ

ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.