ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟ ಆರಂಭ: ವಿದ್ಯಾರ್ಥಿಗಳ ಸಂಭ್ರಮ
Team Udayavani, Oct 22, 2021, 3:20 AM IST
ಮಹಾನಗರ: ದಸರಾ ರಜೆ ಪೂರ್ಣಗೊಂಡು ಶೈಕ್ಷಣಿಕ ಚಟುವಟಿಕೆ ಗುರುವಾರದಿಂದ ಪುನರಾರಂಭವಾಗಿದೆ. ಒಂದೂವರೆ ವರ್ಷದಿಂದ ಸ್ಥಗಿತಗೊಂಡಿದ್ದ ಮಧ್ಯಾಹ್ನದ ಬಿಸಿಯೂಟ ಯೋಜನೆ ಮೊದಲ ದಿನ ಮಂಗಳೂರು ನಗರ ವ್ಯಾಪ್ತಿಯಲ್ಲಿ ಸಾಂಗವಾಗಿ ನಡೆಯಿತು.
ಬಹುದಿನಗಳ ಬಳಿಕ ವಿದ್ಯಾರ್ಥಿಗಳು ಶಾಲೆಗಲ್ಲಿ ಒಟ್ಟಿಗೆ ಕುಳಿತು ಬಿಸಿಯೂಟ ಸವಿದು ಸಂಭ್ರಮಿಸಿದರು.
ಬಹುತೇಕ ಶಾಲೆಗಳಲ್ಲಿ ಮೊದಲ ದಿನ ಅನ್ನ ಸಾಂಬಾರು, ಪಲ್ಯ ಇದ್ದರೆ, ಉಳಿದ ಶಾಲೆಗಳಲ್ಲಿ ಇದರ ಜತೆಗೆ ಪಾಯಸವೂ ಇತ್ತು. ಜತೆಗೆ ಕೆಲವು ಶಾಲೆಯಲ್ಲಿ ಸಿಹಿತಿಂಡಿಯನ್ನೂ ನೀಡಿದ್ದಾರೆ. ಇನ್ನೂ ಕೆಲವು ಶಾಲೆಯಲ್ಲಿ ಮೊದಲ ದಿನ ಮಕ್ಕಳಿಗೆ ದಾನಿಗಳ ಸಹಕಾರದಿಂದ ಐಸ್‌ಕ್ರೀಮ್ ನೀಡಿದ್ದಾರೆ. ಈ ಮೂಲಕ ದಸರಾ ರಜೆ ಮುಗಿಸಿದ 6ರಿಂದ 10ನೇ ತರಗತಿಯ ಸರಕಾರಿ ಹಾಗೂ ಅನುದಾನಿತ ಶಾಲೆಯ ಮಕ್ಕಳು ಬಿಸಿಯೂಟ ಪಡೆದಿದ್ದಾರೆ.
ಮಂಗಳೂರು ದಕ್ಷಿಣ, ಉತ್ತರ ಹಾಗೂ ಮೂಡುಬಿದಿರೆ ವ್ಯಾಪ್ತಿಯನ್ನು ಒಳಗೊಂಡಂತೆ ಒಟ್ಟು 23,179 ವಿದ್ಯಾರ್ಥಿಗಳು ಬಿಸಿಯೂಟದ ಲಾಭ ಪಡೆದಿದ್ದಾರೆ. ಮಂಗಳೂರು ದಕ್ಷಿಣದ 187 ಹಾಗೂ ಮಂಗಳೂರು ಉತ್ತರದ 172 ಸರಕಾರಿ, ಅನುದಾನಿತ ಶಾಲೆಯಲ್ಲಿ ಬಿಸಿಯೂಟ ಯೋಜನೆ ಆರಂಭವಾಗಿದೆ. ಈ ಪೈಕಿ ಮಂಗಳೂರು ದಕ್ಷಿಣ (44) ಮಂಗಳೂರು ಉತ್ತರ (76) ಹಾಗೂ ಬಂಟ್ವಾಳ (13)ವ್ಯಾಪ್ತಿಯ ಒಟ್ಟು 133 ಶಾಲೆಗಳಲ್ಲಿ ಇಸ್ಕಾನ್ ವತಿಯಿಂದ ಬಿಸಿಯೂಟ ವಿತರಿಸಲಾಗಿದೆ. ಇಸ್ಕಾನ್ ವತಿಯಿಂದಲೇ ಇಲ್ಲಿಗೆ ಊಟೋಪಚಾರ ವ್ಯವಸ್ಥೆ ಮಾಡಲಾಗುತ್ತದೆ. ಇದರ ವೆಚ್ಚವನ್ನು ಸರಕಾರ ಇಸ್ಕಾನ್‌ಗೆ ನೀಡುತ್ತದೆ.
ಎಲ್ಲಾ ಸರಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ ಬಿಸಿಯೂಟ ಯೋಜನೆ ಪ್ರಾರಂಭವಾಗಿದೆ. ಹಲವು ಶಾಲೆಗಳಲ್ಲಿ ಪಾಯಸದೂಟ ಕೂಡ ಇತ್ತು. ಸುದೀರ್ಘ ಸಮಯದ ಬಳಿಕ ಮಕ್ಕಳು ಬಿಸಿಯೂಟ ಪಡೆದು ಸಂತೋಷಪಟ್ಟಿದ್ದಾರೆ. –ಉಷಾ ಎಂ., ಕಾರ್ಯನಿರ್ವಾಹಕ ಅಧಿಕಾರಿ, ಅಕ್ಷರದಾಸೋಹ ಯೋಜನೆ-ದ.ಕ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Police System: ಕರ್ನಾಟಕ ಪೊಲೀಸರ ಘನತೆ ಕಾಂಗ್ರೆಸ್‌ನಿಂದ ಸರ್ವನಾಶ: ಎಚ್.ಡಿ.ಕುಮಾರಸ್ವಾಮಿ
Koteshwara: ಟಯರ್‌ಗೆ ಗಾಳಿ ತುಂಬುತ್ತಿದ್ದ ವೇಳೆ ಸ್ಫೋ*ಟಗೊಂಡು ಯುವಕ ಗಂಭೀರ; ಕಾರಣಗಳೇನು?
2nd ODI: ವನಿತಾ ಏಕದಿನ ಸರಣಿ: ಇಂದು ಭಾರತ-ವಿಂಡೀಸ್ 2ನೇ ಪಂದ್ಯ
Enforcement Directorate: ಕ್ರಿಮಿನಲ್ ಪಿತೂರಿಯಡಿ ಮಾತ್ರವೇ ಅಕ್ರಮ ಹಣ ವರ್ಗ ಕೇಸು ಬೇಡ
Pilikula: 2 ಮರಿಗಳಿಗೆ ಜನ್ಮ ನೀಡಿದ ಹುಲಿ ರಾಣಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.