ಹೈಬ್ರಿಡ್‌ ಕಾರು: ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಬಂಕ್‌ ಸಿಬಂದಿ

Team Udayavani, Mar 28, 2017, 3:50 AM IST

28-SPORTS-10.gif

ಮಂಗಳೂರು: ಶಾಸಕ ಬಿ.ಎ. ಮೊದಿನ್‌ ಬಾವಾ ಅವರ ಹೊಚ್ಚ ಹೊಸ ವೋಲ್ವೋ ಎಕ್ಸ್‌ಸಿ 90 ಟಿ8 ಎಕ್ಸಲೆನ್ಸ್‌ ಕಾರಿಗೆ ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಘಟನೆ ನಗರದ ಕದ್ರಿಯ ಪೆಟ್ರೋಲ್‌ ಬಂಕ್‌ನಲ್ಲಿ ಸೋಮವಾರ ಸಂಜೆ ನಡೆದಿದೆ. 

ಇದರಿಂದ ಕಾರು ಚಲಾಯಿಸಲಾಗದೆ ಪೆಟ್ರೋಲ್‌ ಬಂಕ್‌ನಲ್ಲಿ ಇರಿಸಲಾಗಿದೆ. ಕಾರಿನ ಇಂಧನ ಟ್ಯಾಂಕ್‌ನಲ್ಲಿ ತುಂಬಿಸಿರುವ ಡೀಸೆಲ್‌ ಹೊರ ತೆಗೆಯಲು ಅದನ್ನು ಲಾರಿಯಲ್ಲಿ ಹಾಕಿ ಬೆಂಗಳೂರಿಗೆ ಕೊಂಡೊಯ್ಯಬೇಕಾದ ಪ್ರಮೇಯ ಒದಗಿ ಬಂದಿದೆ.

ಶಾಸಕ ಮೊದಿನ್‌ ಬಾವಾ ಅವರು ಶನಿವಾರ ಈ ದುಬಾರಿ ಕಾರನ್ನು (ಬೆಲೆ 1.65 ಕೋಟಿ ರೂ.) ದೇಶದ ಮೊದಲ ಗ್ರಾಹಕರಾಗಿ ಖರೀದಿಸಿದ್ದರು. ಶಾಸಕರು ಸೋಮವಾರ ಕಾರನ್ನು ಮಂಗಳೂರಿನಲ್ಲಿ ಬಿಟ್ಟು ಬೆಂಗಳೂರಿಗೆ ತೆರಳಿದ್ದರು. ಅವರ ಪುತ್ರ ಈ ಹೊಸ ಕಾರನ್ನು ನಗರದಲ್ಲಿ ಚಲಾಯಿಸಿ ಅದರ ಅನುಭವ ಪಡೆಯುತ್ತಿದ್ದರು. ಹಾಗೆ ಸಂಜೆ ಹೊತ್ತು ಪೆಟ್ರೋಲ್‌ ಖಾಲಿಯಾದ ಪ್ರಯುಕ್ತ ಕದ್ರಿಯ ಪೆಟ್ರೋಲ್‌ ಪಂಪ್‌ಗೆ ತೆರಳಿದ್ದರು.

ಬಂಕ್‌ನಲ್ಲಿ ಕಾರು ನಿಲ್ಲಿಸಿದಾಗ ಅಲ್ಲಿನ ಸಿಬಂದಿ ಬ್ಯುಸಿಯಾಗಿದ್ದರು. ಓರ್ವ ಸಿಬಂದಿ ಪಕ್ಕಕ್ಕೆ ಬಂದಾಗ ಶಾಸಕರ ಪುತ್ರನು ಈ ಕಾರಿಗೆ ಪೆಟ್ರೋಲ್‌ ಎಂದು ಹೇಳಿದ್ದಾರೆ. ಆದರೆ ಅಷ್ಟರಲ್ಲಿ ದೂರದಲ್ಲಿದ್ದ ಇನ್ನೋರ್ವ ಸಿಬಂದಿ ಓಡಿ ಬಂದು ಡೀಸೆಲ್‌ ಹಾಕಿದ್ದಾನೆ. ಆತ ಡೀಸೆಲ್‌ ಹಾಕುತ್ತಿದ್ದಾನೆ ಎಂಬ ಸಂಗತಿ ಶಾಸಕರ ಪುತ್ರನಿಗೆ ತಿಳಿಯುವಷ್ಟರಲ್ಲಿ 6 ಲೀಟರ್‌ಗಳಷ್ಟು ಡೀಸೆಲ್‌ ಇಂಧನ ಟ್ಯಾಂಕ್‌ಗೆ ಪೂರೈಕೆಯಾಗಿದೆ. 

ಈ ಅಚಾತುರ್ಯದ ಬಗ್ಗೆ ಶಾಸಕರ ಪುತ್ರ ಮತ್ತು ಬಂಕ್‌ ಸಿಬಂದಿ ಮಧ್ಯೆ ವಾಗ್ವಾದ ನಡೆದಿದ್ದು, ಆಗ ಜನ ಸೇರಿದ್ದಾರೆ. ಪೆಟ್ರೋಲ್‌ ಚಾಲಿತ ಕಾರಿಗೆ ಡೀಸೆಲ್‌ ತುಂಬಿಸಿ ಚಲಾಯಿಸಿದರೆ ಎಂಜಿನ್‌ಗೆ ಹಾನಿಯಾಗುವ ಸಾಧ್ಯತೆ ಇರುವುದರಿಂದ ಕಾರನ್ನು ಪೆಟ್ರೋಲ್‌ ಬಂಕ್‌ನಲ್ಲಿಯೇ ಇರಿಸಲಾಗಿದೆ. ಅದಕ್ಕೆ ಹಾಕಿದ ಡೀಸೆಲ್‌ ಖಾಲಿ ಮಾಡಿಸಲು ಮಂಗಳೂರಿನಲ್ಲಿ ತಾಂತ್ರಿಕ ವ್ಯವಸ್ಥೆ ಇಲ್ಲದಿರುವುದರಿಂದ ಬೆಂಗಳೂರಿಗೆ ಕೊಂಡೊಯ್ಯಬೇಕಾಗಿ ಬಂದಿದೆ.

ಟಾಪ್ ನ್ಯೂಸ್

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ

Jharkhand; ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ

Protest: ಕಾಶ್ಮೀರ ಚರ್ಚೆ: ಆಕ್ಸ್‌ಫ‌ರ್ಡ್‌ನಲ್ಲಿ ಭಾರತೀಯರ ಪ್ರತಿಭಟನೆ

Protest: ಕಾಶ್ಮೀರ ಚರ್ಚೆ: ಆಕ್ಸ್‌ಫ‌ರ್ಡ್‌ನಲ್ಲಿ ಭಾರತೀಯರ ಪ್ರತಿಭಟನೆ

Chennai: ಲಾಟರಿ ಕಿಂಗ್‌ ಮಾರ್ಟಿನ್‌ನ 8.8 ಕೋಟಿ ರೂ. ಇ.ಡಿ. ವಶಕ್ಕೆ

Chennai: ಲಾಟರಿ ಕಿಂಗ್‌ ಮಾರ್ಟಿನ್‌ನ 8.8 ಕೋಟಿ ರೂ. ಇ.ಡಿ. ವಶಕ್ಕೆ

Thiruvananthapuram: ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ, ಮಂಡಲ ಪೂಜೆ ಶುರು

Thiruvananthapuram: ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ, ಮಂಡಲ ಪೂಜೆ ಶುರು

Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್‌ ಠಾಕ್ರೆ

Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್‌ ಠಾಕ್ರೆ

ರಾಹುಲ್‌ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ

Congress: ರಾಹುಲ್‌ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqwe

ವಿಡಿಯೋ | Mangaluru; ಕದ್ರಿ ಪೊಲೀಸ್ ಠಾಣೆ ಬಳಿ ಇದ್ದಕ್ಕಿದ್ದಂತೆ ಹೊತ್ತಿ ಉರಿದ ಕಾರು

6

Hampanakatte: ಗುಟ್ಕಾ ಉಗುಳುವವರು, ಧೂಮಪಾನಿಗಳ ಹಾವಳಿ

5

Mangaluru: ತೆರೆದ ತೋಡಿನಲ್ಲಿ ಕೊಳಚೆ ನೀರು ಹರಿಯುವುದು ನಿಂತಿಲ್ಲ

4(1

Mangaluru: ಪಂಪ್‌ವೆಲ್‌-ಪಡೀಲ್‌ ನಡುವಿನ ಚತುಷ್ಪಥ ಕಾಮಗಾರಿ 3 ವರ್ಷ ಕಳೆದರೂ ಅಪೂರ್ಣ

2

Ullal: ತೊಕ್ಕೊಟ್ಟು-ಮುಡಿಪು ರಸ್ತೆಗೆ ತೇಪೆ ಕಾಮಗಾರಿ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ

Jharkhand; ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ

ದೇಗುಲದ ಮೇಲೆ ದಾಳಿ: ಕೆನಡಾ ಪೊಲೀಸ್‌ಗೆ ಕ್ಲೀನ್‌ಚಿಟ್‌

Canada: ದೇಗುಲದ ಮೇಲೆ ದಾಳಿ: ಕೆನಡಾ ಪೊಲೀಸ್‌ಗೆ ಕ್ಲೀನ್‌ಚಿಟ್‌

Protest: ಕಾಶ್ಮೀರ ಚರ್ಚೆ: ಆಕ್ಸ್‌ಫ‌ರ್ಡ್‌ನಲ್ಲಿ ಭಾರತೀಯರ ಪ್ರತಿಭಟನೆ

Protest: ಕಾಶ್ಮೀರ ಚರ್ಚೆ: ಆಕ್ಸ್‌ಫ‌ರ್ಡ್‌ನಲ್ಲಿ ಭಾರತೀಯರ ಪ್ರತಿಭಟನೆ

Chennai: ಲಾಟರಿ ಕಿಂಗ್‌ ಮಾರ್ಟಿನ್‌ನ 8.8 ಕೋಟಿ ರೂ. ಇ.ಡಿ. ವಶಕ್ಕೆ

Chennai: ಲಾಟರಿ ಕಿಂಗ್‌ ಮಾರ್ಟಿನ್‌ನ 8.8 ಕೋಟಿ ರೂ. ಇ.ಡಿ. ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.