ರಾಜ್ಯ ರಾಜಕೀಯಕ್ಕೆ ಬರಲ್ಲ : ಸದಾನಂದ ಗೌಡ
Team Udayavani, May 16, 2017, 4:52 PM IST
ಪುತ್ತೂರು: ವಾಪಸ್ ರಾಜ್ಯ ರಾಜಕೀಯಕ್ಕೆ ಬರುವ ಬಯಕೆಯನ್ನು ಹೊಂದಿಲ್ಲ ಎಂದು ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ ತಿಳಿಸಿದ್ದಾರೆ. ಬಿಜೆಪಿಯಲ್ಲಿ ವರಿಷ್ಠರು ಸೂಚಿಸಿದಂತೆ ನಾಯಕರು ನಡೆದುಕೊಳ್ಳುತ್ತಾರೆ. ಪಕ್ಷದ ರಾ.0 ಅಧ್ಯಕ್ಷ ಅಮಿತ್ ಶಾ ಅವರು ತೆಗೆದುಕೊಳ್ಳುವ ನಿರ್ಧಾರಗಳು ಸಹಮತದಿಂದ ಕೂಡಿರು ತ್ತದೆ ಎಂದು ಅವರು ಸ್ಪಷ್ಪಪಡಿಸಿದರು.
ಪುತ್ತೂರು ಬಿಜೆಪಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ದೇಶದ ಅಭಿವೃದ್ಧಿಯ ನಿಟ್ಟಿನಲ್ಲಿ ತೆಗೆದುಕೊಳ್ಳುತ್ತಿರುವ ದಿಟ್ಟ ನಿರ್ಧಾರಗಳು ಸಾರ್ವತ್ರಿಕ ಪ್ರಶಂಸೆಗೆ ಪಾತ್ರವಾಗಿವೆ ಎಂದರು.
ಜಿಡಿಪಿಯಲ್ಲಿ ಮುಂಚೂಣಿ
ಕೇಂದ್ರ ಸರಕಾರ ದೇಶದ ಹಿತಾ ಸಕ್ತಿಯಲ್ಲಿ ಹೆಜ್ಜೆಯಿಡುತ್ತಿದೆ. ದೇಶ ದಲ್ಲಿನ ಆರ್ಥಿಕ ಶಿಸ್ತನ್ನು ಜಗತ್ತೇ ಕೊಂಡಾಡುತ್ತಿದೆ. ಈ ಶಿಸ್ತಿನ ಕಾರಣ ದಿಂದ ಭಾರತದ ಜಿಡಿಪಿ ಜಗತ್ತಿನಲ್ಲೇ ಮುಂಚೂಣಿಯಲ್ಲಿದೆ ಎಂದರು.
ಪಕ್ಷದಲ್ಲಿನ ಭಿನ್ನಮತದ ಕುರಿತ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, ವಿರೋಧಿಗಳ ನಿರೀಕ್ಷೆಯನ್ನು ಹುಸಿ ಮಾಡಿ ಸಂಘಟಿತ ಪಕ್ಷ ಹೇಗೆ ಕಾರ್ಯಕಾರಿಣಿ ಮಾಡಬಹುದು ಎಂಬುದನ್ನು ಮೈಸೂರಿನಲ್ಲಿ ನಡೆದ ಪಕ್ಷದ ಕಾರ್ಯಕಾರಿಣಿ ತೋರಿಸಿಕೊಟ್ಟಿದೆ. ವಿರೋಧ ಪಕ್ಷದ ನಾಯಕರು ಪ್ರತ್ಯೇಕ ಬರ ಸಮೀಕ್ಷೆಗೆ ಹೋಗುವುದು ಸಹಜ. ಅಭಿವೃದ್ಧಿಯ ವಿಚಾರ ಬಂದಾಗ ಎಲ್ಲಾ ನಾಯಕರು ಒಗ್ಗಟ್ಟಿನಿಂದ ಕೆಲಸ ಮಾಡುತ್ತಾರೆ ಎಂದರು.
ನಿದ್ರೆಯಲ್ಲಿ 4 ವರ್ಷ
ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಅವಧಿಯ 4 ವರ್ಷವನ್ನು ನಿದ್ರೆಯಲ್ಲೇ ಕಳೆದಿದ್ದಾರೆ ಎಂದು ವ್ಯಂಗ್ಯ ವಾಡಿದ ಡಿ.ವಿ., ರಾಜ್ಯದ ಹಿತಾಸಕ್ತಿಯ ಕೆಲಸ ಕಾಂಗ್ರೆಸ್ ಸರಕಾರದಲ್ಲಿ ನಡೆದಿಲ್ಲ. ಡಿಕೆಶಿ, ಖರ್ಗೆ, ಪರಮೇಶ್ವರ್, ಸಿದ್ದರಾಮಯ್ಯ ಅವರ ತಂಡಗಳ ಪೈಪೋಟಿಯಷ್ಟೇ ಕಾಣಿಸುತ್ತಿದೆ. ಭವಿಷ್ಯವನ್ನು ತಿಳಿದೇ ಮುಂದಿನ ಮುಖ್ಯಮಂತ್ರಿಯನ್ನು ಮೇಲಿನವರು ನಿರ್ಧರಿಸುತ್ತಾರೆ ಎಂದು ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ ಎಂದು ವಿಶ್ಲೇಷಿಸಿದರು.
ಬಿಜೆಪಿ ಜಿಲ್ಲಾಧ್ಯಕ್ಷ ಸಂಜೀವ ಮಠಂದೂರು, ಜಿ.ಪಂ. ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ತಾ.ಪಂ. ಅಧ್ಯಕ್ಷೆ ಭವಾನಿ ಚಿದಾನಂದ, ಬಿಜೆಪಿ ಪುತ್ತೂರು ಮಂಡಲ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ, ನಗರ ಮಂಡಲ ಅಧ್ಯಕ್ಷ ಜೀವಂಧರ್ ಜೈನ್, ಅಪ್ಪಯ್ಯ ಮಣಿಯಾಣಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Yakshagana;ಕನ್ನಡ ಭಾಷೆಯ ಮೌಲ್ಯವನ್ನು ಉಳಿಸುವಲ್ಲಿ ಸಾರ್ವಕಾಲಿಕ ಕೊಡುಗೆ
Mollywood: ಸೂಪರ್ ಸ್ಟಾರ್ ಮೋಹನ್ ಲಾಲ್‌ಗೆ ‘ಆವೇಶಮ್ʼ ನಿರ್ದೇಶಕ ಆ್ಯಕ್ಷನ್ ಕಟ್
ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ
BGT 24: ಆತುರದ ನಿರ್ಧಾರ ಮಾಡಿದ್ರಾ ಅಶ್ವಿನ್ : ಟೀಂ ಇಂಡಿಯಾದಲ್ಲಿ ಕೊಹ್ಲಿ ಬೆಲೆ ಇಷ್ಟೇನಾ?
Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.