ಐಸಿಯು, ವೆಂಟಿಲೇಟರ್‌ ಚಿಕಿತ್ಸೆಗೆ ಮಾತ್ರ ಆಯುಷ್ಮಾನ್‌ ಅನ್ವಯ!


Team Udayavani, May 2, 2021, 4:00 AM IST

ICU, Ayushmann applicable only for ventilator treatment!

ಮಹಾನಗರ: ಕಳೆದ ಬಾರಿಯ ಕೊರೊನಾ ಸಂದರ್ಭ ಖಾಸಗಿ ಆಸ್ಪತ್ರೆಯ ಸಾಮಾನ್ಯ ಬೆಡ್‌ನ‌ಲ್ಲಿ ರೋಗ ಲಕ್ಷಣ ಇದ್ದರೂ/ಇಲ್ಲದಿದ್ದರೂ ಚಿಕಿತ್ಸೆ ಪಡೆಯುತ್ತಿದ್ದ ಎಪಿಎಲ್‌-ಬಿಪಿಎಲ್‌ ರೋಗಿಗಳಿಗೂ ಆಯುಷ್ಮಾನ್‌ ಭಾರತ್‌ ಯೋಜನೆಯಲ್ಲಿ ಚಿಕಿತ್ಸೆ ದೊರೆಯುತ್ತಿತ್ತು. ಆದರೆ ಈ ವರ್ಷ ಈ ನಿಯಮ ಬದಲಾಗಿದೆ. ಅಂದರೆ, ಐಸಿಯು ಅಥವಾ ವೆಂಟಿಲೇಟರ್‌ನಲ್ಲಿರುವ ಚಿಕಿತ್ಸೆ ಪಡೆಯುವ ಕೊರೊನಾ ಸೋಂಕಿತರಿಗೆ ಮಾತ್ರವೇ ಆಯುಷ್ಮಾನ್‌ ಭಾರತ್‌- ಯೋಜನೆಯಡಿ ಚಿಕಿತ್ಸೆ ದೊರೆಯಲಿದೆ!

ಹೀಗಾಗಿ, “ಕೊರೊನಾ ಚಿಕಿತ್ಸೆ ಎಲ್ಲರಿಗೂ ಉಚಿತ’ ಎಂಬ ನಿಯಮ ಈ ಬಾರಿ ಅನ್ವಯವಾಗುವುದಿಲ್ಲ. ಕೊರೊನಾ ಪಾಸಿಟಿವ್‌ ಬಂದು ರೋಗ ಲಕ್ಷಣ ಇರುವ/ಇಲ್ಲದಿರುವವರು ಖಾಸಗಿ ಆಸ್ಪತ್ರೆಯ ಸಾಮಾನ್ಯ ಬೆಡ್‌ನ‌ಲ್ಲಿ ದಾಖಲಾಗುವ ಬಿಪಿಎಲ್‌-ಎಪಿಎಲ್‌ ಕಾರ್ಡ್‌ದಾರರಿಗೆ ಉಚಿತ ಚಿಕಿತ್ಸೆ ನಿಯಮ ಈ ಬಾರಿ ಇರುವುದಿಲ್ಲ.

ಪ್ರಸಕ್ತ ಐಸಿಯು, ವೆಂಟಿಲೇಟರ್‌ನಲ್ಲಿರುವ ಕೋವಿಡ್‌ ರೋಗಿಗಳಿಗೆ 20 ಪ್ರಮುಖ ಆಸ್ಪತ್ರೆಗಳನ್ನು ಒಳಗೊಂಡು ಜಿಲ್ಲೆಯ ಒಟ್ಟು 80 ಖಾಸಗಿ ಆಸ್ಪತ್ರೆಗಳಲ್ಲಿ (ಒಳರೋಗಿಗಳಾಗಿ ದಾಖಲಿಸಿಕೊಂಡು ಚಿಕಿತ್ಸೆ ನೀಡುವ ಆಸ್ಪತ್ರೆಗಳು) ಐಸಿಯು, ವೆಂಟಿಲೇಟರ್‌ ಅಗತ್ಯವಿರುವ ಕೋವಿಡ್‌ ರೋಗಿಗಳಿಗೆ ಮಾತ್ರ ಆಯುಷ್ಮಾನ್‌ ಅಡಿಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

60 ಆಸ್ಪತ್ರೆ ಸೇರ್ಪಡೆ
ಆಯುಷ್ಮಾನ್‌ ಭಾರತ್‌ ಯೋಜನೆಯಡಿ ನಗರದ 20 ಪ್ರಮುಖ ಖಾಸಗಿ ಆಸ್ಪತ್ರೆಗಳಲ್ಲಿ ಬಿಪಿಎಲ್‌ನವರಿಗೆ ಕೋವಿಡೇತರ ವಿಶೇಷ ಚಿಕಿತ್ಸೆಯನ್ನು ಒದಗಿಸಲಾಗುತ್ತಿದೆ. ಅಲ್ಲಿ ಈ ಯೋಜನೆಯಡಿ ಕಳೆದ ವರ್ಷ ಕೊರೊನಾ ಚಿಕಿತ್ಸೆಯನ್ನು ಆರಂಭಿಸಲಾಗಿತ್ತು. ಇದೀಗ “ಆಟೋ ಎಂಪಾನೆಲ್ಡ್‌’ ವ್ಯವಸ್ಥೆಯಡಿ ಜಿಲ್ಲೆಯ ಇತರ 60 ಖಾಸಗಿ ಆಸ್ಪತ್ರೆಗಳನ್ನೂ ಕೋವಿಡ್‌ ಚಿಕಿತ್ಸೆಗೆ ಈ ಯೋಜನೆಯಡಿ ಒಳಪಡಿಸಲಾಗಿದೆ ಎಂದು ಆಯುಷ್ಮಾನ್‌ ಇಲಾಖೆ ಮೂಲಗಳು ತಿಳಿಸಿವೆ.

ಯಾರಾದರೂ ಕೊರೊನಾ ಸೋಂಕಿತರಾಗಿದ್ದು, ಅವರಿಗೆ ಐಸಿಯು ಅಥವಾ ವೆಂಟಿಲೇಟರ್‌ ಅಗತ್ಯವಿದ್ದಲ್ಲಿ ವ್ಯಕ್ತಿ ದಾಖಲಾಗಿರುವ ಆಸ್ಪತ್ರೆಯವರು ಜಿಲ್ಲಾ ಆಯುಷ್ಮಾನ್‌ ನೋಡಲ್‌ ಅಧಿ ಕಾರಿಗೆ ರೆಫರಲ್‌ ನೀಡುವಂತೆ ನಿವೇದನಾ ಪತ್ರವನ್ನು ಕಳುಹಿಸುತ್ತಾರೆ. ಅದನ್ನು ಪರಿಶೀಲಿಸಿ ರೆಫರಲ್‌ ಪತ್ರವನ್ನು ನೀಡಲಾಗುತ್ತದೆ. ಬಳಿಕ ಅವರಿಗೆ ಅಗತ್ಯವಿರುವಷ್ಟು ದಿನ ವೆಂಟಿಲೇಟರ್‌ ಅಥವಾ ಐಸಿಯುನಲ್ಲಿ ಈ ಯೋಜನೆಯಡಿ ಚಿಕಿತ್ಸೆ ಒದಗಿಸಲಾಗುತ್ತದೆ. ಈ ಯೋಜನೆಯಡಿ ರೋಗಿ ಚಿಕಿತ್ಸೆಗೆ ದಾಖಲಾಗಿ ನೋಡಲ್‌ ಅಧಿ ಕಾರಿಯಿಂದ ಆಸ್ಪತ್ರೆಗೆ ರೆಫರಲ್‌ ಪತ್ರ ಬರುವವರೆಗಿನ ಚಿಕಿತ್ಸಾ ವೆಚ್ಚವನ್ನು ರೋಗಿ ಅಥವಾ ಆತನ ಮನೆಯವರೇ ಭರಿಸಬೇಕಾಗುತ್ತದೆ. ಚಿಕಿತ್ಸೆಗೆ ಕರ್ನಾಟಕದವರೇ ಆಗಿದ್ದು, ಆಧಾರ್‌ ಕಾರ್ಡ್‌ ಇದ್ದರೆ ಸಾಕಾಗುತ್ತದೆ.

ಐಸಿಯು ವೆಂಟಿಲೇಟರ್‌ನಲ್ಲಿರುವವರಿಗೆ ಯೋಜನೆ

ದ.ಕ. ಜಿಲ್ಲೆಯ 80 ಆಸ್ಪತ್ರೆಗಳಲ್ಲಿ ಬಿಪಿಎಲ್‌-ಎಪಿಎಲ್‌ ಸಂಬಂಧಿತ ಕೊರೊನಾ ರೋಗಿಯು ಐಸಿಯು ಅಥವಾ ವೆಂಟಿಲೇಟರ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೆ ಮಾತ್ರ ಅವರಿಗೆ ಆಯುಷ್ಮಾನ್‌ ಯೋಜನೆಯಡಿಯಲ್ಲಿ ಉಚಿತ ಚಿಕಿತ್ಸೆ ನೀಡಲಾಗುತ್ತದೆ. ಕೊರೊನಾ ಪಾಸಿಟಿವ್‌ ಆದರೂ ರೋಗ ಲಕ್ಷಣವಿಲ್ಲದೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವವರಿಗೆ ಈ ಯೋಜನೆ ಅನ್ವಯವಾಗುವುದಿಲ್ಲ. ಕಳೆದ ಬಾರಿ ಮಾತ್ರ ಎಲ್ಲರಿಗೂ ಉಚಿತ ಚಿಕಿತ್ಸೆ ಯೋಜನೆಯಿತ್ತು. ಖಾಸಗಿ ಆಸ್ಪತ್ರೆಗಳಲ್ಲಿರುವ ಆರೋಗ್ಯ ಮಿತ್ರರಿಂದ ಆಯುಷ್ಮಾನ್‌ ಭಾರತ್‌ ಯೋಜನೆಗೆ ಸಂಬಂ ಧಿಸಿ ಮಾಹಿತಿಯನ್ನು ಪಡೆಯಬಹುದು.

-ಡಾ| ರತ್ನಾಕರ್‌, ನೋಡಲ್‌ ಅಧಿಕಾರಿ, ಆಯುಷ್ಮಾನ್‌ ಭಾರತ-ಆರೋಗ್ಯ ಕರ್ನಾಟಕ ಯೋಜನೆ, ದ.ಕ.

ಟಾಪ್ ನ್ಯೂಸ್

1-havy

Havyaka Sammelana; ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಕೇಂದ್ರ ಬದ್ಧ: ಸಚಿವ ಜೋಶಿ

Kharge (2)

Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ

1-weqeqw

Traffic; ಉಡುಪಿ ನಗರದಲ್ಲಿ 5 ದಿನ ರಸ್ತೆ ಮಾರ್ಗಗಳಲ್ಲಿ ಮಾರ್ಪಾಡು

Madikeri: ದ್ವಿಚಕ್ರ ವಾಹನ – ಟಿಟಿ ನಡುವೆ ಅಪಘಾತ; ಯುವಕ ದುರ್ಮರಣ

Madikeri: ದ್ವಿಚಕ್ರ ವಾಹನ – ಟಿಟಿ ನಡುವೆ ಅಪಘಾತ; ಯುವಕ ದುರ್ಮರಣ

Boxing: ವಿಶ್ವ ಬಾಕ್ಸಿಂಗ್‌ ಸಂಸ್ಥೆಯಿಂದ ಮಧ್ಯಂತರ ಏಷ್ಯನ್‌ ಮಂಡಳಿ

Boxing: ವಿಶ್ವ ಬಾಕ್ಸಿಂಗ್‌ ಸಂಸ್ಥೆಯಿಂದ ಮಧ್ಯಂತರ ಏಷ್ಯನ್‌ ಮಂಡಳಿ

Aranthodu: ಅಪ್ತಾಪ್ತ ವಯಸ್ಸಿನ ಯುವತಿಯ ಮೇಲೆ ಅತ್ಯಾಚಾರ; ಆರೋಪಿಯ ಸೆರೆ

Aranthodu: ಅಪ್ತಾಪ್ತ ವಯಸ್ಸಿನ ಯುವತಿಯ ಮೇಲೆ ಅತ್ಯಾಚಾರ; ಆರೋಪಿಯ ಸೆರೆ

Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ

Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7

Mangaluru: ಮಹಾಕಾಳಿಪಡ್ಪು ರೈಲ್ವೇ ಅಂಡರ್‌ಪಾಸ್‌; ಕುಂಟುತ್ತಿರುವ ಕಾಮಗಾರಿಗೆ ಬೇಕಿದೆ ವೇಗ

4-ut-khader

Manmohan Singh: ನವಭಾರತದ ಚಾಣಕ್ಯ ಅಸ್ತಂಗತ: ದೇಶಕ್ಕೆ ತುಂಬಲಾರದ ನಷ್ಟ: ಯು.ಟಿ. ಖಾದರ್

6

Mangaluru: ಅಪಾರ್ಟ್‌ಮೆಂಟ್‌, ಮಾಲ್‌ಗ‌ಳಲ್ಲಿ ತ್ಯಾಜ್ಯ ಸಂಸ್ಕರಣೆ ಕಡ್ಡಾಯ

5

Mangaluru: ನಗರದಲ್ಲಿ ತೆರೆದುಕೊಂಡ ಗ್ರಾಮೀಣ ಬದುಕು

4

Kulur: ಗೈಲ್‌ ಪೈಪ್‌ಲೈನ್‌ ಕಾಮಗಾರಿ; ಹೆದ್ದಾರಿ ಕುಸಿತ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-havy

Havyaka Sammelana; ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಕೇಂದ್ರ ಬದ್ಧ: ಸಚಿವ ಜೋಶಿ

puttige-4

Udupi; ಗೀತಾರ್ಥ ಚಿಂತನೆ 138 : ಅಭಿಮಾನತ್ಯಾಗವೇ ಮೋಕ್ಷದ ಮೊದಲ ಮೆಟ್ಟಿಲು

Kharge (2)

Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ

1

Kasaragod Crime News: ಅವಳಿ ಪಾಸ್‌ಪೋರ್ಟ್‌; ಕೇಸು ದಾಖಲು

1-weqeqw

Traffic; ಉಡುಪಿ ನಗರದಲ್ಲಿ 5 ದಿನ ರಸ್ತೆ ಮಾರ್ಗಗಳಲ್ಲಿ ಮಾರ್ಪಾಡು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.