‘ಭ್ರಷ್ಟಾಚಾರ ನಿಯಂತ್ರಿಸದಿದ್ದರೆ ಜನರೇ ರೊಚ್ಚಿಗೇಳುತ್ತಾರೆ’


Team Udayavani, Feb 9, 2018, 3:06 PM IST

9-Feb-15.jpg

ಪುತ್ತೂರು : ಕಂದಾಯ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆಯುತ್ತಿದೆ. ಇದಕ್ಕೆ ಕಡಿವಾಣ ಹಾಕದೇ ಇದ್ದರೆ, ಜನರು ರೊಚ್ಚಿಗೇಳುವ ಸಂಭವ ಇದೆ. ಇದಕ್ಕೆ ಅವಕಾಶ ನೀಡಬೇಡಿ ಎಂದು ಕಂದಾಯ ಇಲಾಖೆಗೆ ಪುತ್ತೂರು ತಾ.ಪಂ. ಮಾಸಿಕ ಕೆಡಿಪಿ ಸಭೆಯಲ್ಲಿ ಎಚ್ಚರಿಕೆ ನೀಡಲಾಯಿತು. ಪುತ್ತೂರು ತಾ.ಪಂ. ಸಭಾಂಗಣದಲ್ಲಿ ಗುರುವಾರ ತಾ.ಪಂ. ಅಧ್ಯಕ್ಷೆ ಭವಾನಿ ಚಿದಾನಂದ್‌ ಅಧ್ಯಕ್ಷತೆಯಲ್ಲಿ ಮಾಸಿಕ ಕೆಡಿಪಿ ಸಭೆ ನಡೆಯಿತು.

ಸ್ಥಾಯೀ ಸಮಿತಿ ಅಧ್ಯಕ್ಷ ಮುಕುಂದ ಮಾತನಾಡಿ, ಕಂದಾಯ ಇಲಾಖೆಯ ಭ್ರಷ್ಟಾಚಾರ ತಾಲೂಕಿಗೆ ಕಪ್ಪುಚುಕ್ಕೆ ಆಗಿದೆ. ಇದಕ್ಕೆ ಕಡಿವಾಣ ಹಾಕಲೇ ಬೇಕಾಗಿದೆ. ಲಂಚ ನೀಡದೇ ಇದ್ದರೆ, ಕಡತಗಳು ಮುಂದೆ ಹೋಗುವುದೇ ಇಲ್ಲ. ಈ ಬಗ್ಗೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಚರ್ಚೆ ನಡೆಯುತ್ತಿದೆ. ಕೆಳ ಹಂತದ ಅಧಿಕಾರಿಯಿಂದಲೇ ಭ್ರಷ್ಟಾಚಾರ ತಾಂಡವವಾಡುತ್ತಿದೆ ಎಂದರು.

ಸಾರ್ವಜನಿಕರ ದೂರು
94ಸಿ, 94ಸಿಸಿ ಹಕ್ಕುಪತ್ರ ನೀಡಬೇಕಾದರೆ ಇಂತಿಷ್ಟು ಹಣ ನೀಡಬೇಕು ಎಂಬ ಬೇಡಿಕೆ ಇಡಲಾಗುತ್ತಿದೆ ಎಂಬ ದೂರು ಸಾರ್ವಜನಿಕರಿಂದ ಕೇಳಿಬರುತ್ತಿದೆ. ಅಧಿಕಾರಿಗಳು ಗೌಪ್ಯವಾಗಿ ಹಣ ವಸೂಲು ಮಾಡುವುದನ್ನು ಸಾರ್ವಜನಿಕರು ನಮ್ಮ ಬಳಿ ಹೇಳಿಕೊಳ್ಳುತ್ತಿದ್ದಾರೆ. ಬಡ ವರ್ಗದವರು ಸಾಲ ಮಾಡಿ ಮನೆ ಕಟ್ಟುವ ಕನಸು ಕಂಡಿದ್ದರೆ, ಅದಕ್ಕೂ ಕಲ್ಲು ಹಾಕುವ ಪ್ರಯತ್ನ ಅಧಿಕಾರಿಗಳಿಂದ ನಡೆಯುತ್ತಿದೆ. ಹೀಗಾದರೆ ಬಡಪಾಯಿಗಳು ಜೀವನ ನಿರ್ವಹಣೆ ಮಾಡುವುದು ಹೇಗೆ ಎಂದು ಪ್ರಶ್ನಿಸಿದರು.

ಕಂದಾಯ ಇಲಾಖೆಯಲ್ಲಿ ಕಡತಗಳು ಯಾಕೆ ವಿಲೇವಾರಿ ಆಗುತ್ತಿಲ್ಲ. ಒಂದು ಕಡತವನ್ನು ತುಂಬಾ ದಿನ ಇಟ್ಟುಕೊಳ್ಳು ವುದು ಯಾಕೆ, ಇನ್ನು ಕೆಲ ಅರ್ಜಿಗಳು ತಿರಸ್ಕೃತಗೊಳ್ಳುವುದು ಯಾಕೆ ಎಂದು ಪ್ರಶ್ನಿಸಲಾಯಿತು. ಉತ್ತರಿಸಿದ ಉಪತಹಶೀಲ್ದಾರ್‌ ಶ್ರೀಧರ್‌, ಈ ಬಗ್ಗೆ ಮಾಹಿತಿ ಪಡೆದು ಬಳಿಕ ಉತ್ತರಿಸುತ್ತೇನೆ ಎಂದರು.

ಮಾತೃಪೂರ್ಣ ನಿರ್ಣಯ
ಸಿಡಿಪಿಒ ಶಾಂತಿ ಹೆಗ್ಡೆ ಮಾತನಾಡಿ, ಗರ್ಭಿಣಿಯರು, ಬಾಣಂತಿಯರು ಪೌಷ್ಟಿಕ ಆಹಾರ ಸೇವನೆಗೆ ಅಂಗನವಾಡಿ ಕೇಂದ್ರಗಳಿಗೆ ಬರುತ್ತಿಲ್ಲ ಎನ್ನುವುದನ್ನು ಸಭೆ ಗಮನಕ್ಕೆ ತರಲಾಗಿದೆ. ಈ ಬಗ್ಗೆ ಶಾಸಕಿ ಅಧ್ಯಕ್ಷತೆಯ ಸಭೆ ನಿರ್ಣಯ ಕೈಗೊಂಡು ಸರಕಾರಕ್ಕೆ ಕಳುಹಿಸಿಕೊಟ್ಟಿದೆ. ಈ ನಡುವೆ ಯೋಜನೆಯ ಸಮರ್ಪಕ ಜಾರಿಗೆ ಇಲಾಖೆಯಿಂದಲೂ ಮೇಲಿನಿಂದ ಮೇಲೆ ಸಭೆ ನಡೆಸಲಾಗುತ್ತಿದೆ. ಯಾವುದೇ ಕಾರಣಕ್ಕೆ ಮನೆಗೊಯ್ದು ಕೊಡಬಾರದು ಎಂದು ತಿಳಿಸಲಾಗಿದೆ ಎಂದರು.ಪ್ರಧಾನಮಂತ್ರಿ ಮಾತೃವಂದನ ಯೋಜನೆ ಜಿಲ್ಲೆಯಲ್ಲಿ ಡಿಸೆಂಬರ್‌ ಕೊನೆ ವಾರದಿಂದ ಜಾರಿಗೆ ಬಂದಿದೆ. ಮೊದಲ ಬಾರಿಯ ಗರ್ಭಿಣಿ, ಬಾಣಂತಿ ಇದರ ಫಲಾನುಭವಿಗಳು. ಗರ್ಭಿಣಿಗೆ 1,000 ರೂ., ಬಾಣಂತಿಗೆ 2,000 ರೂ. ನೀಡಲಾಗುವುದು. ಈ ಬಗ್ಗೆ ಅಧಿಕಾರಿಗಳಿಗೆ ತರಬೇತಿ ನೀಡಲಾಗಿದೆ. 200 ಮಾತೃವಂದನ ಅರ್ಜಿಗಳು ಆನ್‌ಲೈನ್‌ನಲ್ಲಿ ಫೀಡ್ ಆಗಿದ್ದು, 33 ಫಲಾನುಭವಿಗಳ ಖಾತೆಗೆ ಹಣ ಜಮೆಯಾಗಿದೆ ಎಂದು ಮಾಹಿತಿ ನೀಡಿದರು.

ಕೆಎಸ್‌ಆರ್‌ಟಿಸಿ ಘಟಕ ವ್ಯವಸ್ಥಾಪಕ ಚೆನ್ನಬಸಪ್ಪ ಮಾತನಾಡಿ, 40 ಹಳೆ ಬಸ್‌ಗಳ ಓಡಾಟ ನಿಲ್ಲಿಸಿದ್ದೇವೆ. 74 ಹೊಸ ಬಸ್‌ಗಳು ಓಡಾಟ ಆರಂಭಿಸಿವೆ. ಬಸ್‌ಗಳನ್ನು ಸಮಯಕ್ಕೆ ಸರಿಯಾಗಿ ಸಂಚರಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಸಭೆಗೆ ತಿಳಿಸಿದರು. ತಾ.ಪಂ. ಉಪಾಧ್ಯಕ್ಷೆ ರಾಜೇಶ್ವರಿ ಕನ್ಯಾಮಂಗಲ, ಕಾರ್ಯನಿರ್ವಹಣ ಅಧಿಕಾರಿ ಜಗದೀಶ್‌ ಉಪಸ್ಥಿತರಿದ್ದರು.

ವಿದ್ಯಾರ್ಥಿಗಳಿಗೆ ತರಬೇತಿ
ಕ್ಷೇತ್ರ ಶಿಕ್ಷಣಾಧಿಕಾರಿ ಸುಕನ್ಯಾ ಡಿ.ಎನ್‌. ಮಾತನಾಡಿ, ಈ ವರ್ಷ 5,110 ವಿದ್ಯಾರ್ಥಿಗಳು ಎಸೆಸೆಲ್ಸಿ ಪರೀಕ್ಷೆ ಬರೆಯುತ್ತಿದ್ದಾರೆ. ಕಲಿಕೆಯಲ್ಲಿ ಹಿಂದುಳಿದಿರುವ ಮಕ್ಕಳ ಹೆತ್ತವರ ಜತೆ ಸಭೆ ನಡೆಸಲಾಗಿದೆ. ಇದರಲ್ಲಿ ಮುಸ್ಲಿಂ
ಸಮುದಾಯದ ವಿದ್ಯಾರ್ಥಿಗಳು ಹಿಂದುಳಿದಿದ್ದಾರೆ. ಇವರ ಹೆತ್ತವರ ಜತೆ ಮಾತನಾಡಿದಾಗ, ಉತ್ತಮ ಸ್ಪಂದನೆ ಸಿಕ್ಕಿದೆ. ಇದೀಗ ವಲಯ ಮಟ್ಟದಲ್ಲಿ ಹಲವು ಕಾರ್ಯಕ್ರಮ ಹಮ್ಮಿಕೊಳ್ಳುತ್ತಿದ್ದೇವೆ. 30 ಅಂಕಕ್ಕಿಂತ ಕಡಿಮೆ ಇರುವ ವಿದ್ಯಾರ್ಥಿಗಳಿಗೆ ವಿಶೇಷ ಉಪನ್ಯಾಸ ಹಮ್ಮಿಕೊಳ್ಳಲಾಗುವುದು. ಈ ನಿಟ್ಟಿನಲ್ಲಿ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಅವರಿಗೆ ವಿಶೇಷ ತರಬೇತಿ ನೀಡಿ, ಪರೀಕ್ಷೆಗೆ ತಯಾರಿ ನಡೆಸಲಾಗುವುದು ಎಂದು ವಿವರಿಸಿದರು.

ಸಮಯಕ್ಕೆ ಸರಿಯಾಗಿ ಬಸ್‌ ಸಂಚರಿಸಲಿ
ತಾ.ಪಂ. ಅಧ್ಯಕ್ಷೆ ಭವಾನಿ ಚಿದಾನಂದ್‌ ಮಾತನಾಡಿ, ಪರೀಕ್ಷೆಗಳು ಹತ್ತಿರ ಬರುತ್ತಿವೆ. ಇಲಾಖೆಯಿಂದ ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆ ಆಗದಂತೆ ಕೆಎಸ್‌ಆರ್‌ಟಿಸಿ ಅಧಿಕಾರಿಗಳು ಗಮನ ಹರಿಸಬೇಕು. ಸಮಯಕ್ಕೆ ಸರಿಯಾಗಿ ಬಸ್‌ ಸಂಚರಿಸಬೇಕು. ವಿದ್ಯಾರ್ಥಿಗಳನ್ನು ತಿರಸ್ಕಾರದ ಭಾವನೆಯಿಂದ ನೋಡಬೇಡಿ. ಮಾನವೀಯ ನೆಲೆಯಲ್ಲಿ ಕೆಲಸ ನಿರ್ವಹಿಸಿ ಎಂದು ಕಿವಿಮಾತು ಹೇಳಿದರು. ಇದಕ್ಕೆ ಸ್ಥಾಯಿ ಸಮಿತಿ ಅಧ್ಯಕ್ಷ ಮುಕುಂದ ಗೌಡ ಧ್ವನಿಗೂಡಿಸಿದರು.

ಟಾಪ್ ನ್ಯೂಸ್

Birthday Party: ಬರ್ತ್‌ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ಮೂವರನ್ನು ಗುಂಡಿಕ್ಕಿ ಹತ್ಯೆ…

Birthday Party: ಬರ್ತ್‌ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ಮೂವರನ್ನು ಗುಂಡಿಕ್ಕಿ ಹ*ತ್ಯೆ…

Belagavi; It hurts a lot, I won’t be afraid even if a hundred CT Ravi comes: Lakshmi Hebbalkar

Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ

champions trophy

Cricket: ಚಾಂಪಿಯನ್ಸ್‌ ಟ್ರೋಫಿ ವೇಳಾಪಟ್ಟಿ ಅಂತಿಮ; ಭಾರತದ ಪಂದ್ಯಗಳಿಗೆ ಯುಎಇ ಆತಿಥ್ಯ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ: ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ; ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Car-Palti

Sulya: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

Accident-logo

Putturu: ಬೈಕ್‌-ಪಿಕಪ್‌ ಢಿಕ್ಕಿ: ಇಬ್ಬರು ಸವಾರರಿಗೆ ಗಂಭೀರ ಗಾಯ

Arrest

Bantwala: ನಾವೂರು: ಅತ್ಯಾಚಾರ; ಆರೋಪಿಗೆ ನ್ಯಾಯಾಂಗ ಬಂಧನ

Perla-fire

Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ

death

Puttur: ಎಲೆಕ್ಟ್ರಿಕ್‌ ಆಟೋ ರಿಕ್ಷಾ ಪಲ್ಟಿ; ಚಾಲಕ ಮೃತ್ಯು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

FIR 6 to 6 Kannada movie

FIR 6to6 movie: ಆ್ಯಕ್ಷನ್‌ ಚಿತ್ರದಲ್ಲಿ ವಿಜಯ ರಾಘವೇಂದ್ರ

Birthday Party: ಬರ್ತ್‌ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ಮೂವರನ್ನು ಗುಂಡಿಕ್ಕಿ ಹತ್ಯೆ…

Birthday Party: ಬರ್ತ್‌ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ಮೂವರನ್ನು ಗುಂಡಿಕ್ಕಿ ಹ*ತ್ಯೆ…

Belagavi; It hurts a lot, I won’t be afraid even if a hundred CT Ravi comes: Lakshmi Hebbalkar

Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ

champions trophy

Cricket: ಚಾಂಪಿಯನ್ಸ್‌ ಟ್ರೋಫಿ ವೇಳಾಪಟ್ಟಿ ಅಂತಿಮ; ಭಾರತದ ಪಂದ್ಯಗಳಿಗೆ ಯುಎಇ ಆತಿಥ್ಯ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ: ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ; ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.