ಮಳೆ ಕಡಿಮೆಯಾದರೂ, ಮ್ಯಾನ್‌ಹೋಲ್ ಅವಾಂತರ ಮುಗಿದಿಲ್ಲ !
Team Udayavani, Oct 22, 2018, 12:23 PM IST
ಮಹಾನಗರ: ನಗರದಲ್ಲಿ ಮಳೆ ಕಡಿಮೆಯಾದರೂ, ರಸ್ತೆಗಳಲ್ಲಿ ವಾಹನ ಸಂಚಾರ ಕಷ್ಟವಾಗುತ್ತಿದೆ. ಒಂದೆಡೆ ರಸ್ತೆಗಳಲ್ಲಿ ಗುಂಡಿ ಬಿದ್ದಿದ್ದು, ಮತ್ತೊಂದೆಡೆ ನಗರದ ಅನೇಕ ಪ್ರದೇ ಶಗಳಲ್ಲಿನ ರಸ್ತೆ ಮಧ್ಯೆಯೇ ಮ್ಯಾನ್ ಹೋಲ್ ಕಾಮಗಾರಿ ನಡೆಯುತ್ತಿದೆ. ಇದರಿಂದಾಗಿ ಸಾರ್ವಜನಿಕರು ಸಂಕಷ್ಟ ಅನುಭವಿಸುತ್ತಿದ್ದಾರೆ.
ಮಳೆಗಾಲದ ಪ್ರಾರಂಭದಿಂದಲೇ ನಗರದ ಅನೇಕ ಕಡೆಗಳಲ್ಲಿ ರಸ್ತೆ ಮಧ್ಯೆ ಮ್ಯಾನ್‌ಹೋಲ್ ಕಾಮಗಾರಿ ಪ್ರಾರಂಭಿಸಲಾಗಿತ್ತು. ಕಳೆದ ಆರು ತಿಂಗಳಿನಿಂದ ಒಂದೊಂದು ಪ್ರದೇಶಗಳಲ್ಲಿ ನಿರಂತರವಾಗಿ ಮ್ಯಾನ್‌ಹೋಲ್ ಕಾಮಗಾರಿ ನಡೆಯುತ್ತಿದೆ. ಮಳೆಯಿಂದ ವಿವಿಧ ಕಡೆಗಳಲ್ಲಿ ಮಾನ್‌ಹೋಲ್‌ಗಳು ಬ್ಲಾಕ್ ಆಗಿದ್ದು, ಅವುಗಳನ್ನು ದುರಸ್ತಿಗೊಳಿಸಿ ಒಳಚರಂಡಿ ವ್ಯವಸ್ಥೆಯನ್ನು ಸಹಜ ಸ್ಥಿತಿಗೆ ತರುವುದು ಕೂಡ ಈಗ ಮಹಾನಗರ ಪಾಲಿಕೆಗೆ ಸವಾಲಾಗಿ ಪರಿಣಮಿಸಿದೆ.
ಅರೆಬರೆ ಕಾಮಗಾರಿ
ನಗರದ ಹಲವು ಕಡೆಗಳಲ್ಲಿ ಮಹಾ ಮಳೆಗೆ ಚರಂಡಿಗಳಲ್ಲಿ ಹರಿಯಬೇಕಾಗಿದ್ದ ಮಳೆನೀರು ಒಳಚರಂಡಿ ಮಾರ್ಗಕ್ಕೆ ಸಂಪರ್ಕ ಪಡೆದುಕೊಂಡು ಮ್ಯಾನ್ ಹೋಲ್‌ಗಳ ಮೂಲಕ ಹೊರಬರುತ್ತಿತ್ತು. ಅರೆಬರೆ ಕಾಮಗಾರಿಯಿಂದಾಗಿ ಮ್ಯಾನ್ ಹೋಲ್‌ಗಳು ಬಾಯಿ ತೆರೆದುಕೊಂಡು ಅಪಾಯದ ಸ್ಥಿತಿಯಲ್ಲಿದೆ. ಇಂತಹ ಮ್ಯಾನ್‌ಹೋಲ್‌ಗಳಿಂದ ಜನರ ಜೀವಕ್ಕೆ ಕುತ್ತು ಬಂದರೆ ಯಾರು ಹೊಣೆ? ಎಂಬ ಮಾತು ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿದೆ.
ನಗರದ ಬಿಜೈ ಮಾರುಕಟ್ಟೆ, ಕೆ.ಎಸ್. ರಾವ್ ರಸ್ತೆ, ಜೈಲು ರಸ್ತೆ, ಕದ್ರಿಯಿಂದ ಬಂಟ್ಸ್ ಹಾಸ್ಟೆಲ್‌ಗೆ ಬರುವ ರಸ್ತೆ ಸೇರಿದಂತೆ ನಗರದ ಇನ್ನಿತರ ರಸ್ತೆಗಳಲ್ಲಿ ಅರೆಬರೆ ಕಾಮಗಾರಿ ನಡೆಸಲಾಗಿದೆ. ನಗರದ ಜೈಲ್‌ರಸ್ತೆಯಿಂದ ಬಿಜೈ ಮಾರುಕಟ್ಟೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ಕೆಲವು ದಿನಗಳಿಂದ ಒಳಚರಂಡಿ ಮ್ಯಾನ್‌ಹೋಲ್ ತೆರೆದಿಟ್ಟು ಕಾಮಗಾರಿ ನಡೆಸು ತ್ತಿದ್ದು, ಸಾರ್ವಜನಿಕರು ಮತ್ತು ವಾಹನ ಸವಾರರು ತೊಂದರೆ ಅನುಭವಿಸುತ್ತಿದ್ದಾರೆ. ಇದೀಗ ಅದೇ ಪ್ರದೇಶದ ಪಿಂಟೋ ಬೇಕರಿ ಪಕ್ಕದಲ್ಲಿ ಇರುವಂತಹ ಮ್ಯಾನ್‌ಹೋಲ್ ಒಂದರಲ್ಲಿ ಒಂದು ತಿಂಗಳು ಹಿಂದೆ ಕಲ್ಲು ಸೇರಿಕೊಂಡಿತ್ತು ಎಂಬ ಕಾರಣಕ್ಕಾಗಿ ರಸ್ತೆ ಮಧ್ಯೆ ಅಗೆಯಲಾಗಿದ್ದು, ಕಾಮಗಾರಿ ಪ್ರಾರಂಭಿಸಲಾಗಿದೆ.
ನಗರದ ವಾಹನ ಸವಾರ ಕುಮಾರ್ ಅವರು ‘ಸುದಿನ’ಕ್ಕೆ ಪ್ರತಿಕ್ರೀಯಿಸಿ ‘ನಗರದ ಅನೇಕ ಕಡೆಗಳಲ್ಲಿ ರಸ್ತೆಯ ಮಧ್ಯದಲ್ಲೇ ಮ್ಯಾನ್‌ಹೋಲ್ ಕಾಮಗಾರಿ ನಡೆಯುತ್ತಿದೆ. ಇದರಿಂದಾಗಿ ಸಾರ್ವಜನಿಕರು ಮತ್ತು ವಾಹನಗಳು ಸಂಚರಿಸಲು ಕಷ್ಟವಾಗುತ್ತದೆ. ಪಾಲಿಕೆಯು ಮಳೆ ಬರುವ ಮುಂಚೆಯೇ ಕಾಮಗಾರಿ ಮಾಡಬೇಕಿತ್ತು’ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.