ರಿಕ್ಷಾ ನಿಲ್ದಾಣ ಸುವ್ಯವಸ್ಥಿತವಾದರೆ ಪಾರ್ಕಿಂಗ್‌  ಸಮಸ್ಯೆಗೂ ಪರಿಹಾರ


Team Udayavani, Aug 3, 2017, 7:10 AM IST

0208bteph1B.jpg

ಬಂಟ್ವಾಳ : ಪುರಸಭಾ ವ್ಯಾಪ್ತಿಯ ಬಡ್ಡಕಟ್ಟೆ ರಿಕ್ಷಾ ನಿಲ್ದಾಣ ದುರಸ್ತಿಯಾಗಿ ಅಭಿವೃದ್ಧಿಗೊಂಡರೆ ಇಲ್ಲಿನ ವಾಹನ ಪಾರ್ಕಿಂಗ್‌ ಸಮಸ್ಯೆಗೂ ಒಂದಷ್ಟು ಪರಿಹಾರ ದೊರೆಯಲಿದೆ. ಆದರೆ  ಹಲವು ವರ್ಷಗಳಿಂದ ಯಾವುದೇ ಅಭಿವೃದ್ಧಿ ಇಲ್ಲದೆ ರಿಕ್ಷಾ ನಿಲ್ದಾಣ ನಾದುರಸ್ತಿಯಲ್ಲಿದೆ.

ಇಲ್ಲಿ ಡಾಮರು ಕಾಮಗಾರಿ ನಡೆಯಬೇಕಿದೆ. ಕೆಲವೊಂದು ಮೂಲ ಸೌಕರ್ಯ ಇದೆಯಾದರೂ ಅವುಗಳು ಉಪಯೋಗಕ್ಕೆ ಸಿಗುತ್ತಿಲ್ಲ. ಶೌಚಾಲಯವಿದ್ದರೂ ಅದು ಸುಸ್ಥಿತಿಯಲ್ಲಿಲ್ಲ. ಸುತ್ತಲೂ ಹುಲ್ಲು ಬೆಳೆದು  ಶೌಚಾಲಯಕ್ಕೆ ಹೋಗುವವ
ರಿಗೆ ಭಯ ಹುಟ್ಟಿಸುವಂತಿದೆ. ನೀರು ಮತ್ತು ನೈರ್ಮಲ್ಯದ ಕೊರತೆ ಎದ್ದು ಕಾಣುತ್ತಿದೆ. ಇರುವ ಸೌಕರ್ಯಗಳ ಬಳಕೆ ಸಾಧ್ಯವಾಗುತ್ತಿಲ್ಲ.

ಮಹತ್ವದ ಸ್ಥಳ 
ಈ ರಿಕ್ಷಾ ನಿಲ್ದಾಣದ ಮುಂಭಾಗದಲ್ಲಿ ಪುರಸಭೆಯ ವಾಣಿಜ್ಯ ಸಂಕೀರ್ಣ ನಿರ್ಮಾಣವಾಗಿದೆ. ಹಾಗಾಗಿ ಇದು ಪ್ರಮುಖ ನಿಲ್ದಾಣ, ಪಾರ್ಕಿಂಗ್‌ ಸ್ಥಳವಾಗಿಯೂ ಮಾರ್ಪಟ್ಟಿದೆ. ಬಡ್ಡಕಟ್ಟೆ ಸಂಪರ್ಕ ರಸ್ತೆಯ ಉದ್ದಕ್ಕೆ ತರಕಾರಿಯಿಂದ ಅಂಗಡಿಯಿಂದ ಹಿಡಿದು ಬಟ್ಟೆ, ಕಿರಾಣಿ ಅಂಗಡಿ, ಹೊಟೇಲ್‌, ಹೋಲ್‌ಸೇಲ್‌ ವ್ಯಾಪಾರಗಳು, ಸ್ವರ್ಣಾಭರಣ ಮಳಿಗೆಗಳು ಇವೆ. ಆದರೆ ಈ ಸ್ಥಳವನ್ನು ಸಂಪೂರ್ಣವಾಗಿ ನಿರ್ಲಕ್ಷಿಸಲಾಗಿದೆ. ರಿಕ್ಷಾ ನಿಲ್ದಾಣದ ಸನಿಹದಲ್ಲಿ ತೋಡಿನ ಬದಿಯೂ ಕುಸಿತಕ್ಕೆ ಒಳಗಾಗಿದೆ.  

ಕ್ರಮ ಕೈಗೊಂಡಿಲ್ಲ 
ಬಡ್ಡಕಟ್ಟೆ ರಿಕ್ಷಾ ನಿಲ್ದಾಣ ಅಭಿವೃದ್ಧಿ ಪಡಿಸುವಂತೆ ಪುರಸಭೆ, ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್‌ ಅಧೀಕ್ಷಕರು, ಜಿಲ್ಲಾ ಉಸ್ತುವಾರಿ ಸಚಿವರು, ಸಂಬಂಧಪಟ್ಟ ಎಲ್ಲರಿಗೂ ಮನವಿ ಮಾಡಲಾಗಿದೆ. ಆದರೆ ಯಾವುದೇ ಕ್ರಮ ಆಗಿಲ್ಲ. 
– ವಿಶ್ವನಾಥ ಬಂಟ್ವಾಳ
ಸಂಘಟಕರು,  ರಿಕ್ಷಾ ಚಾಲಕ ಮಾಲಕರ ಯೂನಿಯನ್‌, ಬಂಟ್ವಾಳ

10 ಲ.ರೂ. ಪ್ರಸ್ತಾವನೆ 
ಪಿಯೂಸ್‌ ಎಲ್‌. ರೋಡ್ರಿಗಸ್‌ “ಬುಡಾ’ ಅಧ್ಯಕ್ಷರಾಗಿದ್ದ ಸಂದರ್ಭದಲ್ಲಿ ಬಡ್ಡಕಟ್ಟೆ ಅಟೋ ನಿಲ್ದಾಣದ ಅಭಿವೃದ್ಧಿಗಾಗಿ 10 ಲಕ್ಷ ರೂ.ಯೋಜನೆ ರೂಪಿಸಿದ್ದರು. ಸದ್ರಿ ಅನುದಾನವನ್ನು  ಪ್ರಸ್ತುತ ಅಲ್ಲಿ ಬಸ್‌ ಶೆಲ್ಟರ್‌ ನಿರ್ಮಾಣಕ್ಕೆ ಮಾತ್ರ ಉಪಯೋಗಿಸಲು ಸಾಧ್ಯ ಎಂದು ಹಾಲಿ ಬುಡಾ ಅಧ್ಯಕ್ಷರಾದ ಸದಾಶಿವ ಬಂಗೇರ ತಿಳಿಸಿದ್ದಾರೆ. ನಿಲ್ದಾಣಕ್ಕೆ ಡಾಮರು ಹಾಕುವುದು ಮತ್ತು ಅಭಿವೃದ್ಧಿಗಾಗಿ 10 ಲಕ್ಷ ರೂ. ಮೊತ್ತದ ಇನ್ನೊಂದು ಪ್ರಸ್ತಾವನೆ ಮಾಡಿ ರಾಜ್ಯ ಸರಕಾರದ ಅನುಮೋದನೆಗೆ ಸಲ್ಲಿಸಲಾಗಿದೆ.
– ಪಿ. ರಾಮಕೃಷ್ಣ ಆಳ್ವ
ಅಧ್ಯಕ್ಷರು, ಬಂಟ್ವಾಳ ಪುರಸಭೆ

ಟಾಪ್ ನ್ಯೂಸ್

1-IFFI

IFFI 2024; ಟಾಕ್ಸಿಕ್‌ ಗೆ ಅತ್ಯುತ್ತಮ ಪ್ರಶಸ್ತಿ, ವಿಕ್ರಾಂತ್‌ ಮಸ್ಸೆಗೆ ವಾರ್ಷಿಕ ಪುರಸ್ಕಾರ

bidar

Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ

1-s-v

Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ

congress

Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್

Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್

Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್

Vijayapura: ಬಿಚ್ಚಿಟ್ಟರೆ ಬಣ್ಣ ಬಯಲು, ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು: ಯತ್ನಾಳ್

ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು, ಇಲ್ಲದಿದ್ದರೆ.. ಸ್ವಪಕ್ಷೀಯರ ವಿರುದ್ಧವೇ ಯತ್ನಾಳ್ ಕಿಡಿ

fir

Karnataka ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿರುದ್ಧ ಲೈಂಗಿ*ಕ ದೌರ್ಜನ್ಯ ಪ್ರಕರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ACT

Mangaluru: ಗಾಂಜಾ ಸೇವನೆ; ಪ್ರತ್ಯೇಕ ಪ್ರಕರಣ; ಇಬ್ಬರು ವಶಕ್ಕೆ

4

Punjalkatte: ರಾಯಿ; ಯುವಕ ನೇಣು ಬಿಗಿದು ಆತ್ಮಹತ್ಯೆ

Untitled-5

Puttur: ಮಾದಕ ಪದಾರ್ಥ ಸಹಿತ ಆರೋಪಿ ಸೆರೆ

7-vitla

Vitla: ಅನಾರೋಗ್ಯದಿಂದ ಬಳಲುತ್ತಿದ್ದ ಯುವತಿ ಸಾವು

7

Mangaluru: ವೆನ್ಲಾಕ್ ಆಸ್ಪತ್ರೆ ಹೊರರೋಗಿ ವಿಭಾಗ ವಿಸ್ತರಣೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ACT

Mangaluru: ಗಾಂಜಾ ಸೇವನೆ; ಪ್ರತ್ಯೇಕ ಪ್ರಕರಣ; ಇಬ್ಬರು ವಶಕ್ಕೆ

1-IFFI

IFFI 2024; ಟಾಕ್ಸಿಕ್‌ ಗೆ ಅತ್ಯುತ್ತಮ ಪ್ರಶಸ್ತಿ, ವಿಕ್ರಾಂತ್‌ ಮಸ್ಸೆಗೆ ವಾರ್ಷಿಕ ಪುರಸ್ಕಾರ

4

Kasaragod: ಕಾರು ಢಿಕ್ಕಿ ಹೊಡೆಸಿ ವ್ಯಾಪಾರಿಯ 2 ಕೆಜಿ ಚಿನ್ನ ದರೋಡೆ

Untitled-5

Kasaragod: ನಗ-ನಗದು ಕಳವು; ಆರೋಪಿ ಬಂಧನ

4

Punjalkatte: ರಾಯಿ; ಯುವಕ ನೇಣು ಬಿಗಿದು ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.